ಈ ಜನಪ್ರಿಯ ಎಲೆಕ್ಟ್ರಿಕ್ ಕಾರನ್ನು ಮನೆಗೆ ತಂದ್ರು ಖ್ಯಾತ ಗಾಯಕಿ: 521 ಕಿ.ಮೀ ಓಡುತ್ತೆ.. ಚಲಿಸುವ ಅರಮನೆಯಂತಿದೆ!
ಜಸ್ಲೀನ್ ರಾಯಲ್ (Jasleen Royal) ಜನಪ್ರಿಯ ಗಾಯಕಿಯಾಗಿದ್ದು, ದೊಡ್ಡ ಸಂಖ್ಯೆಯಲ್ಲಿ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಪಂಜಾಬಿ, ಹಿಂದಿ, ಬೆಂಗಾಲಿ, ಗುಜರಾತಿ ಹಾಗೂ ಇಂಗ್ಲಿಷ್ ಭಾಷೆಯ ಹಲವು ಹಾಡುಗಳಿಗೂ ಧ್ವನಿಯಾಗಿದ್ದು, ಸಂಗೀತ ನಿರ್ದೇಶಕಿಯಾಗಿ ಕೂಡ ಗುರುತಿಸಿಕೊಂಡಿದ್ದಾರೆ. ವಿವಿಧ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿದ್ದಾರೆ. ಸೋಮವಾರ ಹೊಚ್ಚ ಹೊಸ ಬಿವೈಡಿ ಆಟ್ಟೋ 3 (BYD Atto 3) ಎಲೆಕ್ಟ್ರಿಕ್ ಎಸ್‌ಯುವಿಯನ್ನು ಖರೀದಿಸಿದ್ದಾರೆ. ಈ ಬಗ್ಗೆ ಸ್ವತಃ ಬಿವೈಡಿ ಇಂಡಿಯಾ ಕಂಪನಿಯೇ ಪತ್ರಿಕಾ ಪ್ರಕಟಣೆ ಹೊರಡಿಸಿ, ನೂತನ ಕಾರನ್ನು ಜಸ್ಲೀನ್ ರಾಯಲ್ಗೆ ವಿತರಿಸಲಾಗಿದೆ ಎಂದು ಅಧಿಕೃತವಾಗಿ ಘೋಷಣೆ ಮಾಡಿದೆ.
ಬಿವೈಡಿ ಆಟ್ಟೋ 3 ಎಸ್‌ಯುವಿಯ ಸುಪೀರಿಯರ್ (Superior) ರೂಪಾಂತರವನ್ನು (ವೇರಿಯೆಂಟ್) ಗಾಯಕಿ ಜಸ್ಲೀನ್ ರಾಯಲ್ ಕೊಂಡುಕೊಂಡಿದ್ದಾರೆ. ಅವರು ಹೊಸ ಕಾರಿನೊಂದಿಗೆ ತೆಗೆದುಕೊಂಡಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿವೆ. ಇನ್‌ಸ್ಟಾಗ್ರಾಮ್‌ನಲ್ಲಿ ಕೇವಲ 2 ಗಂಟೆಯಲ್ಲಿ 10 ಸಾವಿರಕ್ಕೂ ಅಧಿಕ ಲೈಕ್ ಪಡೆದುಕೊಂಡಿದ್ದು, ಸಿನಿರಂಗದ ಗಣ್ಯರು, ಸ್ನೇಹಿತರು ಹಾಗೂ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದುಬರುತ್ತಿದೆ.

ಬಿವೈಡಿ ಇಂಡಿಯಾ ಮಾರಾಟಗೊಳಿಸುವ ನೂತನ ಆಟ್ಟೋ 3 ಎಲೆಕ್ಟ್ರಿಕ್ ಕಾರು ಸುಪೀರಿಯರ್‌ನೊಂದಿಗೆ ಡೈನಾಮಿಕ್ ಹಾಗೂ ಪ್ರೀಮಿಯಂ ಎಂಬ ರೂಪಾಂತರಗಳ ಆಯ್ಕೆಯಲ್ಲಿಯೂ ಸಿಗುತ್ತದೆ. ರೂ.24.99 ದಿಂದ ರೂ.33.99 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಬೌಲ್ಡರ್ ಗ್ರೇ, ಸ್ಕೀ ವೈಟ್, ಸರ್ಫ್ ಬ್ಲೂ ಮತ್ತು ಕಾಸ್ಮೊಸ್ ಬ್ಲ್ಯಾಕ್ ಸೇರಿದಂತೆ ವಿವಿಧ ಬಣ್ಣಗಳನ್ನು ಪಡೆದಿದೆ. ಈ ಕಾರಿನಲ್ಲಿ 5 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ಪ್ರಯಾಣಿಸಬಹುದು.
ಈ ಎಲೆಕ್ಟ್ರಿಕ್ ಎಸ್‌ಯುವಿ 49.92 ಮತ್ತು 60.48 ಕೆಡಬ್ಲ್ಯೂಹೆಚ್ (kWh) ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಹೊಂದಿದೆ. ಸಂಪೂರ್ಣ ಚಾರ್ಜ್‌ನಲ್ಲಿ ಕ್ರಮವಾಗಿ 468 ರಿಂದ 521 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ನೀಡುತ್ತದೆ. ಜೊತೆಗೆ ಇವೆರೆಡು ಬ್ಯಾಟರಿ ಪ್ಯಾಕ್‌ಗಳು ಫ್ರಂಟ್ ಆಕ್ಸಲ್ ಮೌಂಟೆಡ್ ಎಲೆಕ್ಟ್ರಿಕ್ ಮೋಟಾರ್‌ನ್ನು ಹೊಂದಿವೆ.

ಇದರ 60.48 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್, 80 ಕೆಡಬ್ಲ್ಯೂ ಡಿಸಿ ಚಾರ್ಜರ್ ಬಳಕೆಯಲ್ಲಿ ಶೇಕಡ 0 ರಿಂದ 80% ಚಾರ್ಜ್ ಆಗಲು ಕೇವಲ 50 ನಿಮಿಷ ತೆಗೆದುಕೊಳ್ಳುತ್ತದೆ. ಅದೇ ರೀತಿಯಲ್ಲಿ 70 ಕೆಡಬ್ಲ್ಯೂ ಡಿಸಿ ಚಾರ್ಜರ್ ಉಪಯೋಗ ಮಾಡಿದಾಗ 49.92 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್, 0 ರಿಂದ 80% ಚಾರ್ಜ್ ಆಗುವುದಕ್ಕೆ 50 ನಿಮಿಷಗಳು ಬೇಕಾಗುತ್ತದೆ.
ಬಿವೈಡಿ ಆಟ್ಟೋ 3 ಎಲೆಕ್ಟ್ರಿಕ್ ಕಾರು 12.8-ಇಂಚಿನ ರೊಟೇಟ್ ಟಚ್‌ಸ್ಕ್ರೀನ್, 5-ಇಂಚಿನ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, 8-ಸ್ಪೀಕರ್ ಸೌಂಡ್ ಸಿಸ್ಟಮ್, ವೈರ್‌ಲೆಸ್ ಫೋನ್ ಚಾರ್ಜರ್, ಆಟೋ ಎಸಿ, ಸನ್‌ರೂಫ್ ಮತ್ತು ಕೀಲೆಸ್ ಎಂಟ್ರಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. 440 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಪಡೆದಿದೆ.

ನೂತನ ಬಿವೈಡಿ ಆಟ್ಟೋ 3 ಎಲೆಕ್ಟ್ರಿಕ್ ಎಸ್‌ಯುವಿ ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸುತ್ತದೆ. ಸುರಕ್ಷತೆಯ ಸಲುವಾಗಿ 7 ಏರ್‌ಬ್ಯಾಗ್, ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಹಿಲ್ ಡಿಸೆಂಟ್ ಕಂಟ್ರೋಲ್, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








