ಸಿನಿಮಾ ನಟ ಅಲ್ಲ.. ಅಪ್ಪ, ಅಮ್ಮನಿಗೆ ಹೊಸ ಟೊಯೊಟಾ ಫಾರ್ಚುನರ್ ಕಾರು ಗಿಫ್ಟ್ ಕೊಟ್ಟ ಯೂಟ್ಯೂಬರ್!

ಪ್ರತಿಯೊಬ್ಬರ ಜೀವನದಲ್ಲಿಯೂ ತಂದೆ, ತಾಯಿ ಆದರ್ಶಪ್ರಾಯ ವ್ಯಕ್ತಿಗಳಾಗಿರುತ್ತಾರೆ. ತಮ್ಮ ಮಕ್ಕಳಿಗಾಗಿ ಇಡೀ ಬದುಕನ್ನೇ ಮುಡುಪಾಗಿಟ್ಟಿರುತ್ತಾರೆ. ಹೆತ್ತವರಿಗೆ ಮಕ್ಕಳು ಚಿಕ್ಕ ಉಡುಗೊರೆಯನ್ನು ನೀಡಿದರೂ ಅವರ ಸಂತೋಷಕ್ಕೆ ಪಾರವೇ ಇರುವುದಿಲ್ಲ. ಇಲ್ಲೊಬ್ಬ ಯೂಟ್ಯೂಬರ್ ತಮ್ಮ ಪೋಷಕರಿಗೆ ದುಬಾರಿ ಬೆಲೆಯ ಹೊಚ್ಚ ಹೊಸ ಐಷಾರಾಮಿ ಟೊಯೊಟಾ ಫಾರ್ಚುನರ್ ಲೆಜೆಂಡರ್ (Toyota Fortuner Legender) ಎಸ್‌ಯುವಿಯನ್ನು ಗಿಫ್ಟ್ ನೀಡಿದ್ದಾರೆ. ಸದ್ಯ ಆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.

ಈ ವಿಡಿಯೋವನ್ನು 'ದಿ ಯುಕೆ07 ರೈಡರ್' ಎಂಬ ಯುಟ್ಯೂಬ್ ಚಾನೆಲ್‌ನಲ್ಲಿ ಹಂಚಿಕೊಳ್ಳಲಾಗಿದೆ. ಬಾಬು ಭಯ್ಯಾ ಎಂಬ ಹೆಸರಿನಿಂದ ಖ್ಯಾತಿಗಳಿಸಿರುವ ಯೂಟ್ಯೂಬರ್, ನೂತನ ಟೊಯೊಟಾ ಫಾರ್ಚುನರ್ ಎಸ್‌ಯುವಿಯನ್ನು ಉಡುಗೊರೆ ಕೊಟ್ಟಿದ್ದಾರೆ. ವಿಡಿಯೋದಲ್ಲಿ ಯೂಟ್ಯೂಬರ್ ಹೊಸ ಕಾರನ್ನು ಶೋರೂಂನಿಂದ ವಿತರಣೆಯನ್ನು ಪಡೆದು ಮನೆಗೆ ತೆಗೆದುಕೊಂಡು ಹೋಗುತ್ತಾರೆ. ಅಲ್ಲಿ ಪೋಷಕರು, ಎಸ್‌ಯುವಿಗೆ ಸಂಪ್ರದಾಯ ಬದ್ಧವಾಗಿ ಪೂಜೆ ಮಾಡಿ, ಸಂಭ್ರಮಿಸುವುದನ್ನು ನೋಡಬಹುದು.

Famous Youtuber Gifts his Parents New Toyota Fortuner Legender Car

ಪ್ರಸ್ತುತ ದೇಶೀಯ ಲಭ್ಯವಿರುವ ಹೊಚ್ಚ ಹೊಸ ಟೊಯೊಟಾ ಫಾರ್ಚುನರ್ ಲೆಜೆಂಡರ್ ಎಸ್‌ಯುವಿಯು ರೂ.43.66 ಲಕ್ಷದಿಂದ ರೂ.47.64 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಇದು 2.8 - ಲೀಟರ್ ಡಿಸೇಲ್ ಎಂಜಿನ್ ಪಡೆದಿದ್ದು, 204 ಪಿಎಸ್ ಗರಿಷ್ಠ ಪವರ್ (ಶಕ್ತಿ) ಹಾಗೂ 500 ಎನ್ಎಂ ಪೀಕ್ ಹೊರಹಾಕುತ್ತದೆ.

ಈ ಕಾರು 6 - ಸ್ಪೀಡ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದ್ದು, 2WD (ಟೂ ವೀಲ್ ಡ್ರೈವ್) ಅಥವಾ 4WD (ಫೋರ್ ವೀಲ್ ಡ್ರೈವ್) ತಂತ್ರಜ್ಞಾನದ ಆಯ್ಕೆಯಲ್ಲಿ ಸಿಗುತ್ತದೆ. ಜೊತೆಗೆ 14.2 ರಿಂದ 14.4 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಇದರಲ್ಲಿ 7 ಮಂದಿ ಆರಾಮದಾಯಕವಾಗಿ ದೂರದ ಊರುಗಳಿಗೆ ಪ್ರಯಾಣಿಸಬಹುದು.

Famous Youtuber Gifts his Parents New Toyota Fortuner Legender Car

ಟೊಯೊಟಾ ಫಾರ್ಚುನರ್ ಲೆಜೆಂಡರ್ ಎಸ್‌ಯುವಿಯು 8 - ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಕನೆಕ್ಟ್ದ್ ಕಾರ್ ಟೆಕ್, 6 - ಸ್ಪೀಕರ್ ಸೌಂಡ್ ಸಿಸ್ಟಮ್, ವೈರ್‌ಲೆಸ್ ಚಾರ್ಜರ್, ಆಂಬಿಯೆಂಟ್ ಲೈಟಿಂಗ್, ಕಿಕ್-ಟು-ಓಪನ್ ಪವರ್ಡ್ ಟೈಲ್‌ಗೇಟ್, ಡುಯಲ್ ಜೋನ್ ಎಸಿ, ಕ್ರೂಸ್ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.

ಫಾರ್ಚುನರ್ ಲೆಜೆಂಡರ್ ಸುರಕ್ಷತೆಗೂ ಹೆಸರುವಾಗಿಯಾಗಿದ್ದು, ಗ್ಲೋಬಲ್ ಎನ್‌ಸಿಎಪಿಯಿಂದ 5 ಸ್ಟಾರ್ ರೇಟಿಂಗ್ ಪಡೆದಿದೆ. 7 ಏರ್‌ಬ್ಯಾಗ್‌, VSC (ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್), ಟ್ರಾಕ್ಷನ್ ಕಂಟ್ರೋಲ್ ಮತ್ತು ಹಿಲ್ ಅಸಿಸ್ಟ್ ಅನ್ನು ಹೊಂದಿದೆ. ಈ ಕಾರಿಗೆ ಎಂಜಿ ಗ್ಲೋಸ್ಟರ್ (MG Gloster) ಹಾಗೂ ಜೀಪ್ ಮೆರಿಡಿಯನ್ (Jeep Meridian) ಎಸ್‌ಯುವಿಗಳು ಪ್ರಬಲ ಪ್ರತಿಸ್ಪರ್ಧಿಯಾಗಿವೆ.

Famous Youtuber Gifts his Parents New Toyota Fortuner Legender Car

ಟೊಯೊಟಾ ಮಾರಾಟಗೊಳಿಸುವ ವೆಲ್‌ಫೈರ್ (Vellfire) ಕೂಡ ಪ್ರೀಮಿಯಂ ಎಂಪಿವಿಯಾಗಿದ್ದು, ರೂ.1.20 ರಿಂದ ರೂ.1.30 ಕೋಟಿ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 2.5 - ಲೀಟರ್ ಪೆಟ್ರೋಲ್ ಹೈಬ್ರಿಡ್ ಪಡೆದಿದ್ದು, 193 ಪಿಎಸ್ ಪವರ್ ಮತ್ತು 240 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಇ-ಸಿವಿಟಿ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 14-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋ ಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Monday, June 17, 2024, 14:47 [IST]
English summary
Famous youtuber gifts his parents new toyota fortuner legender car
Read more on offbeat india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+