ಅಪ್ಪಂದಿರ ದಿನ: ನಿಮ್ಮ ತಂದೆಗೆ ಗಿಫ್ಟ್ ನೀಡಲು ಇವು ಬೆಸ್ಟ್ ಕಾರುಗಳು.. ರೂ.4 ಲಕ್ಷ ಆರಂಭಿಕ ಬೆಲೆ

ತನಗೆ ಎಷ್ಟೇ ಕಷ್ಟ, ನೋವು ಬಂದರೂ ತನ್ನ ಮಕ್ಕಳು ಹಾಗೂ ಕುಟುಂಬ ಸಂತೋಷವಾಗಿ ಇರಬೇಕು ಎಂದು ಬಯಸುವ ಏಕೈಕ ಜೀವ ಅಪ್ಪ.. ಜಗತ್ತಿನ ಅತಿ ಎತ್ತರದ ಶಿಖರ ಅಪ್ಪನ ಹೆಗಲು. ಜಗತ್ತಿನ ಅತಿ ನೆಮ್ಮದಿಯ ತಾಣ ಅಮ್ಮನ ಮಡಿಲು.. ತಂದೆಯ ಪ್ರೀತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಅವರಿಲ್ಲದೆ ನಾವು ಏನೇನು ಅಲ್ಲ. ಅವರ ಬಗ್ಗೆ ಬಣ್ಣಿಸಲು ಪದಗಳೇ ಸಾಲಲ್ಲಾ.. ಅಂತಹ ಮಹಾನ್ ವ್ಯಕ್ತಿಗೆ ಗೌರವ ಸಲ್ಲಿಸಲು ಪ್ರತಿವರ್ಷ ಜೂನ್‌ ತಿಂಗಳ 3ನೇ ಭಾನುವಾರ ಅಪ್ಪಂದಿರ ದಿನವನ್ನು ಆಚರಿಸಲಾಗುತ್ತದೆ.

ಈ ಬಾರಿ ಜೂನ್ 16ಕ್ಕೆ ತಂದೆಯಂದಿರ ದಿನ ಬಂದಿದ್ದು, ಅಂದು ನಿಮ್ಮ ಅಪ್ಪನಿಗೆ ಕಾರು ಉಡೊಗೊರೆ ನೀಡಲು ಬಯಸಿದರೆ ಮಾರುತಿ ಸುಜುಕಿ ಆಲ್ಟೊ ಕೆ10, ವ್ಯಾಗನ್ ಆರ್ ಮತ್ತು ಟಾಟಾ ಟಿಯಾಗೊ ಹ್ಯಾಚ್‌ಬ್ಯಾಕ್‌ಗಳು ಉತ್ತಮ ಆಯ್ಕೆಯಾಗಬಲ್ಲವು. ಇವು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯವನ್ನು ಪಡೆದಿದ್ದು, ಕೈಗೆಟುಕುವ ಬೆಲೆಯಲ್ಲಿಯೂ ಖರೀದಿಗೆ ಲಭ್ಯವಿವೆ. ಬನ್ನಿ.. ಈ ಕಾರುಗಳ ವಿಶೇಷತೆಗಳ ಬಗ್ಗೆ ತಿಳಿಯೋಣ.

Father s Day Maruti Alto Wagon R Tata Tiago Best Gift To Your Dad Details

ಮೊದಲಿಗೆ ಮಾರುತಿ ಸುಜುಕಿ ಆಲ್ಟೊ ಕೆ10 (Maruti Suzuki Alto K10) ಹ್ಯಾಚ್‌ಬ್ಯಾಕ್‌ ಕುರಿತಂತೆ ಮಾತನಾಡೋಣ. ಈ ಕಾರು ರೂ.3.99 ಲಕ್ಷದಿಂದ ರೂ.5.96 ಲಕ್ಷ ಎಕ್ಸ್ ಶೋರೂಂ ದರದಲ್ಲಿ ಸಿಗುತ್ತದೆ. ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್ ಹೊಂದಿದ್ದು, 24.39 ರಿಂದ 33.85 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಇದರಲ್ಲಿ 5 ಮಂದಿ ಆರಾಮದಾಯಕವಾಗಿ ಪ್ರಯಾಣಿಸಬಹುದು.

ಈ ಹ್ಯಾಚ್‌ಬ್ಯಾಕ್‌ 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಕೀಲೆಸ್ ಎಂಟ್ರಿ, ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್‌, ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ ಡುಯಲ್ ಫ್ರಂಟ್ ಏರ್‌ಬ್ಯಾಗ್‌, EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ರಿವರ್ಸಿಂಗ್ ಕ್ಯಾಮೆರಾವನ್ನು ಹೊಂದಿದೆ.

Father s Day Maruti Alto Wagon R Tata Tiago Best Gift To Your Dad Details

ಟಾಟಾ ಟಿಯಾಗೊ (Tata Tiago) ಕಾರಿನ ಬಗ್ಗೆ ಹೇಳುವುದಾದರೆ, ಇದು ರೂ.5.65 ಲಕ್ಷದಿಂದ ರೂ.8.90 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಪಡೆದಿದೆ. 1.2-ಲೀಟರ್ ಪೆಟ್ರೋಲ್ ಮತ್ತು ಸಿಎನ್‌ಜಿ ಪವರ್‌ಟ್ರೇನ್‌ನ್ನು ಒಳಗೊಂಡಿದ್ದು, 5-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್‌ಬಾಕ್ಸ್‌ ಆಯ್ಕೆಯನ್ನು ಹೊಂದಿದೆ. 19.43 ರಿಂದ 28.06 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

ಈ ಟಿಯಾಗೊ ಹ್ಯಾಚ್‌ಬ್ಯಾಕ್‌ನಲ್ಲಿಯೂ 5 ಜನರು ಸುಲಭವಾಗಿ ಓಡಾಟವನ್ನು ನಡೆಸಬಹುದು. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, 8-ಸ್ಪೀಕರ್ ಸೌಂಡ್ ಸಿಸ್ಟಮ್, ಆಟೋಮೆಟಿಕ್ ಕ್ಲೇಮೇಟ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ ಡುಯಲ್ ಫ್ರಂಟ್ ಏರ್‌ಬ್ಯಾಗ್‌ನ್ನು ಹೊಂದಿದೆ.

Father s Day Maruti Alto Wagon R Tata Tiago Best Gift To Your Dad Details

ಮಾರುತಿ ಸುಜುಕಿ ವ್ಯಾಗನ್ ಆರ್ (Maruti Suzuki Wagon R) ಹ್ಯಾಚ್‌ಬ್ಯಾಕ್‌ ಕುರಿತಂತೆ ಮಾತನಾಡುವುದಾದರೆ, ಈ ಕಾರು ರೂ.5.54 ಲಕ್ಷದಿಂದ ರೂ.7.38 ಲಕ್ಷ ಎಕ್ಸ್ ಶೋರೂಂ ದರದಲ್ಲಿ ಖರೀದಿ ದೊರೆಯುತ್ತದೆ. 1-ಲೀಟರ್ ಪೆಟ್ರೋಲ್ ಮತ್ತು ಸಿಎನ್‌ಜಿ ಆಯ್ಕೆಯನ್ನು ಹೊಂದಿದ್ದು, 24.35 ರಿಂದ 33.47 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. 7-ಇಂಚಿನ ಟಚ್‌ಸ್ಕ್ರೀನ್ ಡಿಸ್ಪ್ಲೇ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋ ಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Friday, June 14, 2024, 17:58 [IST]
English summary
Fathers day maruti sujuki alto k10 wagon r tata tiago best gift to your dad details
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+