ಅಪ್ಪಂದಿರ ದಿನ: ನಿಮ್ಮ ತಂದೆಗೆ ಉಡುಗೊರೆ ನೀಡಲು ಈ ಕಾರು ಬೆಸ್ಟ್.. ರೂ.4.70 ಲಕ್ಷ ಬೆಲೆ, 22 ಕಿ.ಮೀ ಮೈಲೇಜ್
ಅಮ್ಮನ ಮಡಿಲು.. ಅಪ್ಪನ ಹೆಗಲು..! ಸ್ವರ್ಗಕ್ಕೂ ಮಿಗಿಲು. ಅಮ್ಮನ ತುತ್ತು.. ಅಪ್ಪನ ಮುತ್ತು..! ಅಮೃತಕ್ಕೂ ಮಿಗಿಲು. ಯಾವುದೇ ನಿರೀಕ್ಷೆಯು ಇಲ್ಲದೆ ನಮ್ಮೆಲ್ಲ ಆಸೆಗಳನ್ನು ನಿರಾಸೆ ಮಾಡದೆ ನೆರವೇರಿಸೋ ಒಂದು ಜೀವ 'ಅಪ್ಪ'.. ಜಗತ್ತಿಗೆ ನಮ್ಮನ್ನು ಪರಿಚಯಿಸುವವಳು ತಾಯಿ. ಜಗತ್ತನೇ ನಮಗೆ ಪರಿಚಯಿಸುವವನು ತಂದೆ.. ಅಂತಹ ಮೇರು ವ್ಯಕ್ತಿಗೆ ಗೌರವ ಸಲ್ಲಿಸಲು ಪ್ರತಿವರ್ಷ ಜೂನ್ ತಿಂಗಳ 3ನೇ ಭಾನುವಾರ ಅಪ್ಪಂದಿರ ದಿನವನ್ನು ಆಚರಿಸಲಾಗುತ್ತದೆ. ಈ ಬಾರಿ ಜೂನ್ 16ಕ್ಕೆ ಬಂದಿದ್ದು, ನಿಮ್ಮ ತಂದೆಗೆ ಅಂದು ಸರ್ಪ್ರೈಸ್ ಗಿಫ್ಟ್ ಆಗಿ ಕಾರು ನೀಡಲು ಬಯಸಿದರೆ, ರೆನಾಲ್ಟ್ ಕ್ವಿಡ್ ಅತ್ಯುತ್ತಮ ಆಯ್ಕೆಯಾಗಿದೆ. ಇಲ್ಲಿ ನೂತನ ಹ್ಯಾಚ್‌ಬ್ಯಾಕ್‌ನ ವಿಶೇಷತೆಗಳ ಬಗ್ಗೆ ತಿಳಿಸಿಕೊಟ್ಟಿದ್ದೇವೆ.
ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ ಹೊಚ್ಚ ಹೊಸ ರೆನಾಲ್ಟ್ ಕ್ವಿಡ್ (Renault KWID) ರೂ.4.70 ಲಕ್ಷದಿಂದ ರೂ.6.45 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಈ ಕಾರು ಅತ್ಯಾಧುನಿಕ ವಿನ್ಯಾಸವನ್ನು ಕೂಡ ಪಡೆದಿದೆ. ಆರ್‌ಎಕ್ಸ್ಇ ಹಾಗೂ ಆರ್‌ಎಕ್ಸ್ಎಲ್ (ಒ) ಸೇರಿದಂತೆ ವಿವಿಧ ರೂಪಾಂತರ (ವೇರಿಯೆಂಟ್)ಗಳ ಆಯ್ಕೆಯಲ್ಲಿಯೂ ಸಿಗುತ್ತದೆ. ಇದರಲ್ಲಿ 5 ಮಂದಿ ಆರಾಮದಾಯಕವಾಗಿ ಪ್ರಯಾಣಿಸಬಹುದು.

ಈ ಕ್ವಿಡ್ ಹ್ಯಾಚ್‌ಬ್ಯಾಕ್ 1-ಲೀಟರ್ ಪೆಟ್ರೋಲ್ ಎಂಜಿನ್ ಒಳಗೊಂಡಿದ್ದು, 68 ಪಿಎಸ್ ಗರಿಷ್ಠ ಪವರ್ (ಶಕ್ತಿ) ಹಾಗೂ 91 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್/ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್ ಆಯ್ಕೆಯನ್ನು ಒಳಗೊಂಡಿದ್ದು, 21.46 ರಿಂದ 22.3 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.
ರೆನಾಲ್ಟ್ ಕ್ವಿಡ್ ಕಾರು ಐಸ್ ಕೂಲ್ ವೈಟ್, ಔಟ್‌ಬ್ಯಾಕ್ ಬ್ರೊನ್, ಮೂನ್‌ಲೈಟ್ ಸಿಲ್ವರ್ ಮತ್ತು ಝನ್ಸ್‌ಕಾರ್ ಬ್ಲೂ ಒಳಗೊಂಡಂತೆ ಹಲವು ಬಣ್ಣಗಳೊಂದಿಗೂ ಲಭ್ಯವಿದೆ. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಕೀ ಲೆಸ್ ಎಂಟ್ರಿ, ಮ್ಯಾನುವಲ್ ಎಸಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರವಾಸದ ವೇಳೆ ಹೆಚ್ಚಿನ ಲಗೇಜ್ ಸಾಗಿಸಲು ಈ ಕಾರು, 279 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್ ಅನ್ನು ಹೊಂದಿದೆ.

ಸುರಕ್ಷತೆಗೂ ಕ್ವಿಡ್ ಹ್ಯಾಚ್‌ಬ್ಯಾಕ್ ಹೆಸರುವಾಸಿಯಾಗಿದೆ. ಡುಯಲ್ ಫ್ರಂಟ್ ಏರ್‌ಬ್ಯಾಗ್, EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ESP (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ) ಹಿಲ್ ಸ್ಟಾರ್ಟ್ ಅಸಿಸ್ಟ್, TCS (ಟ್ರಾಕ್ಷನ್ ಕಂಟ್ರೋಲ್ ಸಿಸ್ಟಮ್) TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ರೇರ್ ಪಾರ್ಕಿಂಗ್ ಸೇನಾರ್ಸ್ ಅನ್ನು ಹೊಂದಿದೆ.
ಈ ಕಾರಿಗೆ ಮಾರುತಿ ಸುಜುಕಿ ಆಲ್ಟೊ ಕೆ10 ಮತ್ತು ಎಸ್-ಪ್ರೆಸ್ಸೊ ಹ್ಯಾಚ್‌ಬ್ಯಾಕ್‌ಗಳು ಪ್ರಬಲ ಪ್ರತಿಸ್ಪರ್ಧಿಯಾಗಿವೆ. ಸದ್ಯ ದೇಶೀಯವಾಗಿ ಸಿಗುವ ಆಲ್ಟೊ ಕೆ10 ರೂ.3.99 ಲಕ್ಷದಿಂದ ರೂ.5.96 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಪಡೆದಿದೆ. ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್ ಒಳಗೊಂಡಿದ್ದು, 24.39 ರಿಂದ 33.85 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

ಮಾರುತಿ ಸುಜುಕಿ ಎಸ್-ಪ್ರೆಸ್ಸೊ ಕಾರು ರೂ.4.26 ಲಕ್ಷದಿಂದ ರೂ.6.12 ಲಕ್ಷ (ಎಕ್ಸ್ ಶೋರೂಂ) ದರವನ್ನು ಹೊಂದಿದೆ. ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್ ಆಯ್ಕೆಯಲ್ಲಿ ಸಿಗುವ ಈ ಕಾರು, 24.12 ರಿಂದ 32.73 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋ ಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








