ಮೊದಲ ಬಾರಿಗೆ ಕಾರು ಖರೀದಿಸುತ್ತಿದ್ದೀರಾ.. ನಿಮ್ಮ ಹಣಕ್ಕೆ ಈ ಜನಪ್ರಿಯ ಹ್ಯಾಚ್‌ಬ್ಯಾಕ್, ಎಸ್‌ಯುವಿಗಳು ಲಭ್ಯ!
ದೇಶದಲ್ಲಿ ಕಾರುಗಳನ್ನು ಶ್ರೀಮಂತರು ಮಾತ್ರವಲ್ಲ.. ಮಧ್ಯಮ ವರ್ಗದ ಜನರು ಕೂಡ ಖರೀದಿಸುತ್ತಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಹೊಸ ಕಾರು ತೆಗೆದುಕೊಳ್ಳುವ ಗ್ರಾಹಕರ ಸಂಖ್ಯೆ ಹೆಚ್ಚಾಗುತ್ತಿದ್ದು, ಬಹುತೇಕರು ಯುವ ಜನರಾಗಿದ್ದಾರೆ. ನೂತನ ಕಾರನ್ನು ಕೊಂಡುಕೊಳ್ಳುವ ಹಲವರಲ್ಲಿ ಇವು ನಮ್ಮ ಬಜೆಟ್‌ನಲ್ಲಿ ಸಿಗುತ್ತದೆಯೇ.. ಪುನಃ ಮಾರಾಟ ಮಾಡಿದಾಗ ಉತ್ತಮವಾದ ಬೆಲೆಗೆ ಬಿಕರಿಯಾಗುತ್ತದೆಯೇ ಎಂಬ ಗೊಂದಲವನ್ನು ಹೊಂದಿರುತ್ತಾರೆ. ನಾವಿಲ್ಲಿ ವಿವರಿಸಲಾದ ಹ್ಯಾಚ್‌ಬ್ಯಾಕ್, ಎಸ್‌ಯುವಿಗಳು ಆಕರ್ಷಕ ವೈಶಿಷ್ಟ್ಯದೊಂದಿಗೆ ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ಲಭ್ಯವಿವೆ.
ಮೊದಲಿಗೆ ಮಾರುತಿ ಸುಜುಕಿ ಸ್ವಿಫ್ಟ್ (Maruti Suzuki Swift) ಹ್ಯಾಚ್‌ಬ್ಯಾಕ್ ಬಗ್ಗೆ ಮಾತನಾಡೋಣ. ಇದು ರೂ.6.49 ಲಕ್ಷದಿಂದ ರೂ.9.60 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. 1.2-ಲೀಟರ್ 3-ಸಿಲಿಂಡರ್ ಝಡ್ ಸೀರಿಯಸ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 24.8 ರಿಂದ 25.72 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಇದರಲ್ಲಿ 5 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ಪ್ರಯಾಣಿಬಹುದು.

ಈ ಸ್ವಿಫ್ಟ್ ಕಾರು 9-ಇಂಚಿನ ಇನ್ಫೋಟೈನ್‌ಮೆಂಟ್ ಸ್ಕ್ರೀನ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಯುಎಸ್‌ಬಿ ಟೈಪ್-ಎ & ಟೈಪ್-ಸಿ ಪೋರ್ಟ್, ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ವೈರ್‌ಲೆಸ್ ಚಾರ್ಜರ್, ಆಟೋ ಕ್ಲೇಮೇಟ್ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್, 3-ಪಾಯಿಂಟ್ ಸೀಟ್‌ಬೆಲ್ಟ್‌ಗಳನ್ನು ಹೊಂದಿದೆ.
ಮಾರುತಿ ಸುಜುಕಿ ಆಲ್ಟೊ ಕೆ10 (Maruti Suzuki Alto K10) ಹ್ಯಾಚ್‌ಬ್ಯಾಕ್ ಕುರಿತಂತೆ ಹೇಳುವುದಾದರೆ, ಈ ಕಾರು ರೂ.3.99 ಲಕ್ಷದಿಂದ ರೂ.5.96 ಲಕ್ಷ (ಎಕ್ಸ್ ಶೋರೂಂ) ದರವನ್ನು ಪಡೆದಿದೆ. 1-ಲೀಟರ್ ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್ ಹೊಂದಿದ್ದು, 24.39 ರಿಂದ 33.85 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಟಾಟಾ ಟಿಯಾಗೊ (Tata Tiago) ಹ್ಯಾಚ್‌ಬ್ಯಾಕ್ ಕುರಿತಂತೆ ಮಾತನಾಡುವುದಾದರೆ, ಇದು ರೂ.5.65 ಲಕ್ಷದಿಂದ ರೂ.8.90 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 1.2-ಲೀಟರ್ ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್ ಒಳಗೊಂಡಿದ್ದು, 20.01 ರಿಂದ 28.06 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇನಂತಹ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ.
ಹ್ಯುಂಡೈ ಎಕ್ಸ್‌ಟರ್ (Hyundai Exter) ಜನಪ್ರಿಯ ಎಸ್‌ಯುವಿಯಾಗಿದೆ. ಈ ಕಾರು ರೂ.6.13 ಲಕ್ಷದಿಂದ ರೂ.10.43 ಲಕ್ಷ ಎಕ್ಸ್ ಶೋರೂಂ ದರದಲ್ಲಿ ಸಿಗುತ್ತದೆ. 1.2-ಲೀಟರ್ ಪೆಟ್ರೋಲ್ ಹಾಗೂ ಸಿಎನ್‌ಜಿ ಒಳಗೊಂಡಿದ್ದು, 19.4 ರಿಂದ 27.1 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸೆಮಿ-ಡಿಜಿಟಲ್ ಡ್ರೈವರ್ಸ್ ಡಿಸ್ಪ್ಲೇ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ನಿಸ್ಸಾನ್ ಮ್ಯಾಗ್ನೈಟ್ (Nissan Magnite) ಎಸ್‌ಯುವಿ ಕುರಿತಂತೆ ಹೇಳುವುದಾದರೆ, ಇದು ರೂ.6 ಲಕ್ಷದಿಂದ ರೂ.11.27 ಲಕ್ಷ (ಎಕ್ಸ್ ಶೋರೂಂ) ಬೆಲೆಯನ್ನು ಹೊಂದಿದೆ. ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದ್ದು, 17.40 ರಿಂದ 20 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್‌ನಂತಹ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications