Kia Carens: ಗ್ಲೋಬಲ್ ಎನ್‌ಸಿಎಪಿ ಸುರಕ್ಷತಾ ಪರೀಕ್ಷೆ.. 3-ಸ್ಟಾರ್ ಪಡೆದ ಕಿಯಾ ಕ್ಯಾರೆನ್ಸ್

ಯುಕೆ ಮೂಲದ ಗ್ಲೋಬಲ್ ಎನ್‌ಸಿಎಪಿ (ಗ್ಲೋಬಲ್ ನ್ಯೂ ಕಾರ್ ಅಸೆಸ್‌ಮೆಂಟ್ ಪ್ರೋಗ್ರಾಂ), ವಿವಿಧ ದೇಶಗಳಲ್ಲಿ ಮಾರಾಟಗೊಳ್ಳುವ ವಾಹನಗಳಿಗೆ ಸುರಕ್ಷತಾ ಪರೀಕ್ಷೆಯನ್ನು ನಡೆಸುತ್ತದೆ. ಇದೀಗ ಭಾರತದಲ್ಲಿ ಖರೀದಿಗೆ ದೊರೆಯುವ ಕಿಯಾ ಕ್ಯಾರೆನ್ಸ್ (Kia Carens) ಎಂಪಿವಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಈ ಕಾರು ಉತ್ತಮವಾದ ರೇಟಿಂಗ್ ಪಡೆದಿದೆ.

ಗ್ಲೋಬಲ್ ಎನ್‌ಸಿಎಪಿ (Global NCAP), ಕಿಯಾ ಕ್ಯಾರೆನ್ಸ್ ಎಂಪಿವಿಯನ್ನು ಮೊದಲ ಬಾರಿಗೆ ಪರೀಕ್ಷಿಸಿದಾಗ ಅದು ಶೂನ್ಯ ಅಂಕವನ್ನು ಗಳಿಸಿತ್ತು. ಆ ಬಳಿಕ, ಕಂಪನಿಯು ಸುರಕ್ಷತಾ ವೈಶಿಷ್ಟ್ಯಗಳಲ್ಲಿ ಒಂದಷ್ಟು ಬದಲಾವಣೆಯನ್ನು ತಂದು ಮತ್ತೊಮ್ಮೆ ಪರೀಕ್ಷೆಗೆ ಒಳಪಡಿಸಿದಾಗ ವಯಸ್ಕ ರಕ್ಷಣೆ (Adult Occupation Protection) ವಿಭಾಗದಲ್ಲಿ 34ಕ್ಕೆ 22.07 ಅಂಕಗಳನ್ನು ಗಳಿಸಿ, 3-ಸ್ಟಾರ್ ರೇಟಿಂಗ್ ಪಡೆದಿದೆ.

Global NCAP Kia Carens Car Get 3 Star Safety Rating

ಅದೇ ರೀತಿಯಲ್ಲಿ ಮಕ್ಕಳ ರಕ್ಷಣೆ (Child Occupation Protection)ಯಲ್ಲಿ 49ಕ್ಕೆ 41 ಅಂಕಗಳನ್ನು ಪಡೆದು, 5-ಸ್ಟಾರ್ ರೇಟಿಂಗ್ ಗಳಿಸಿದೆ. ನೂತನ ಕಿಯಾ ಕ್ಯಾರೆನ್ಸ್ ಎಂಪಿವಿ ಹತ್ತಾರು ರಕ್ಷಣಾತ್ಮಕ ವೈಶಿಷ್ಟ್ಯಗಳನ್ನು ಹೊಂದಿದ್ದು, 6 ಏರ್‌ಬ್ಯಾಗ್‌, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಲೋಡ್ ಲಿಮಿಟರ್ಸ್, ಸೀಟ್ ಬೆಲ್ಟ್ ರಿಮೈಂಡರ್ ಸಿಸ್ಟಮ್ ಅನ್ನು ಒಳಗೊಂಡಿದೆ.

ಸದ್ಯ ದೇಶೀಯ ಮಾರುಕಟ್ಟೆಯಲ್ಲಿ ಕಿಯಾ ಕ್ಯಾರೆನ್ಸ್ ಎಂಪಿವಿ, ರೂ.10.52 ಲಕ್ಷದಿಂದ ರೂ.19.67 ಲಕ್ಷ ಎಕ್ಷ್ ಶೋರೂಂ ಬೆಲೆಯನ್ನು ಹೊಂದಿದೆ. ಪ್ರೀಮಿಯಂ, ಪ್ರೀಮಿಯಂ (ಒ), ಪ್ರೆಸ್ಟೀಜ್, ಪ್ರೆಸ್ಟೀಜ್ (ಒ), ಪ್ರೆಸ್ಟೀಜ್ ಪ್ಲಸ್, ಪ್ರೆಸ್ಟೀಜ್ ಪ್ಲಸ್ (ಒ), ಲಕ್ಸುರಿ, ಲಕ್ಸುರಿ ಪ್ಲಸ್ ಸೇರಿದಂತೆ ವಿವಿಧ ರೂಪಾಂತರ (ವೇರಿಯೆಂಟ್)ಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

Global NCAP Kia Carens Car Get 3 Star Safety Rating

ವಿನ್ಯಾಸದ ದೃಷ್ಟಿಯಿಂದಲೂ ಈ ಕಾರು ಅತ್ಯುತ್ತಮವಾಗಿದೆ. ಎಕ್ಸ್‌ಕ್ಲೂಸಿವ್ ಮ್ಯಾಟ್ ಗ್ರ್ಯಾಫೈಟ್, ಸ್ಪಾರ್ಕ್ಲಿಂಗ್ ಸಿಲ್ವರ್ ಒಳಗೊಂಡಂತೆ ಹಲವು ಆಕರ್ಷಕ ಬಣ್ಣಗಳೊಂದಿಗೂ ಲಭ್ಯವಿದ್ದು, 6 ರಿಂದ 7 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ ಪ್ಲೇ, ಕ್ರೂಸ್ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನೂ ಪಡೆದಿದೆ.

ಕಿಯಾ ಕ್ಯಾರೆನ್ಸ್ ಪೆಟ್ರೋಲ್ ಹಾಗೂ ಡೀಸೆಲ್ ಎಂಜಿನ್ ಆಯ್ಕೆಯಲ್ಲಿ ದೊರೆಯುತ್ತದೆ. ಇದರ 1.5-ಲೀಟರ್ ಪೆಟ್ರೋಲ್ ಎಂಜಿನ್ 115 ಪಿಎಸ್ ಗರಿಷ್ಠ ಪವರ್ (ಶಕ್ತಿ) ಹಾಗೂ 144 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 1.5-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ 160 ಪಿಎಸ್ ಪವರ್ ಮತ್ತು 253 ಎನ್ಎಂ ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಹೊಂದಿದೆ.

Global NCAP Kia Carens Car Get 3 Star Safety Rating

ಮತ್ತೊಂದು 1.5-ಲೀಟರ್ ಡೀಸೆಲ್ ಎಂಜಿನ್ 116 ಪಿಎಸ್ ಗರಿಷ್ಠ ಪವರ್ ಹಾಗೂ 250 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಈ ಕಾರಿನ ರೂಪಾಂತರಗಳು 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮೆಟಿಕ್, 7-ಸ್ಪೀಡ್ ಡಿಸಿಟಿ (ಡುಯಲ್ ಕ್ಲಚ್ ಟ್ರಾನ್ಸ್ಮಿಷನ್) ಗೇರ್ ಬಾಕ್ಸ್ ಆಯ್ಕೆಯನ್ನೂ ಹೊಂದಿದ್ದು, 16 ರಿಂದ 21 ಕೆಎಂಪಿಎಲ್ ಮೈಲೇಜ್ ನೀಡುತ್ತವೆ.

ಡ್ರೈವ್‌ಸ್ಪಾರ್ಕ್ ಕನ್ನಡ ತಂಡ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ಒದಗಿಸುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ ಗಳನ್ನು ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Tuesday, April 23, 2024, 17:02 [IST]
English summary
Global ncap kia carens get 3 star safety rating
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+