ದಿನನಿತ್ಯ ಕಚೇರಿಗೆ ಹೋಗಲು ಉತ್ತಮ ಕಾರುಗಳಿವು.. ಅತ್ಯಂತ ಕಡಿಮೆ ಬೆಲೆ, ಭಾರೀ ಮೈಲೇಜ್!

ಬೆಂಗಳೂರು, ಮುಂಬೈ ಹಾಗೂ ದೆಹಲಿಯಂತಹ ಮಹಾನಗರಗಳಲ್ಲಿ ಕಚೇರಿಗೆ ಹೋಗಲು ಕಾರುಗಳು ತೀರಾ ಅನಿವಾರ್ಯವಾಗಿವೆ. ಇವು ಎಲ್ಲ ಕಾಲದಲ್ಲೂ ಪ್ರಯಾಣಿಕರಿಗೆ ಹೆಚ್ಚಿನ ರಕ್ಷಣೆಯನ್ನು ಒದಗಿಸುತ್ತವೆ. ಆದರೆ, ದೊಡ್ಡ ಕಾರುಗಳನ್ನು ಕಿಕ್ಕಿರಿದ ರಸ್ತೆಯಲ್ಲಿ ಓಡಿಸುವುದು ಸ್ವಲ್ಪ ಕಷ್ಟ.. ಜೊತೆಗೆ ಪಾರ್ಕಿಂಗ್ ಮಾಡಬೇಕಾದರೂ ಬಹಳಷ್ಟು ಸಮಸ್ಯೆ ಎದುರಿಸಬೇಕಾಗುತ್ತದೆ. ನೀವು ಕೂಡ ಕಚೇರಿಗೆ ತೆರಳಲು ಹೊಸ ಕಾರನ್ನು ಖರೀದಿಸಲು ಯೋಚಿಸಿದ್ದರೆ, ಮಾರುತಿ ಸುಜುಕಿ ಸೆಲೆರಿಯೊ, ರೆನಾಲ್ಟ್ ಕ್ವಿಡ್ ಹಾಗೂ ಎಂಜಿ ಕಾಮೆಟ್ ಇವಿ ಸೂಕ್ತ ಆಯ್ಕೆಯಾಗಬಲ್ಲವು. ನಾವಿಲ್ಲಿ ಈ ಪುಟ್ಟ ಹ್ಯಾಚ್‌ಬ್ಯಾಕ್‌ಗಳ ಬೆಲೆ ಮತ್ತು ವಿಶೇಷತೆ ಬಗ್ಗೆ ಸಂಪೂರ್ಣವಾಗಿ ತಿಳಿಸಿಕೊಟ್ಟಿದ್ದೇವೆ.

ಮೊದಲಿಗೆ ಮಾರುತಿ ಸುಜುಕಿ ಸೆಲೆರಿಯೊ (Maruti Suzuki Celerio) ಕಾರಿನ ಬಗ್ಗೆ ಮಾತನಾಡೋಣ. ಈ ಹ್ಯಾಚ್‌ಬ್ಯಾಕ್‌ ರೂ.4.99 ಲಕ್ಷದಿಂದ ರೂ.7.04 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 1-ಲೀಟರ್ ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಪಡೆದಿದ್ದು, 5-ಸ್ಪೀಡ್ ಮ್ಯಾನುವಲ್ ಅಥವಾ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 25.24 ರಿಂದ 34.43 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

Good Cars For Office Going Employees Maruti Celerio Renault Kwid Mg Comet Ev

ಈ ಸೆಲೆರಿಯೊದಲ್ಲಿ 5 ಮಂದಿ ಆರಾಮದಾಯಕವಾಗಿ ಓಡಾಟವನ್ನು ನಡೆಸಬಹುದು. 7-ಇಂಚಿನ ಟಚ್‌ಸ್ಕ್ರೀನ್, ಪುಶ್ ಬಟನ್ ಸ್ಟಾರ್ಟ್/ಸ್ಟಾಪ್, ಕೀಲೆಸ್ ಎಂಟ್ರಿ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಯ ದೃಷ್ಟಿಯಿಂದ ಡುಯಲ್ ಫ್ರಂಟ್ ಏರ್‌ಬ್ಯಾಗ್‌, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಮತ್ತು ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್)ಯನ್ನು ಒಳಗೊಂಡಿದೆ.

ರೆನಾಲ್ಟ್ ಕ್ವಿಡ್ (Renault Kwid) ಕುರಿತಂತೆ ಹೇಳುವುದಾದರೆ, ಈ ಹ್ಯಾಚ್‌ಬ್ಯಾಕ್‌ ಸಹ ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ದೊರೆಯುತ್ತದೆ. 1-ಲೀಟರ್ ಪೆಟ್ರೋಲ್ ಎಂಜಿನ್ ಪಡೆದಿದ್ದು, 5-ಸ್ಪೀಡ್ ಮ್ಯಾನುವಲ್/ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 21.46 ರಿಂದ 22.3 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಈ ಕಾರಿನಲ್ಲಿಯೂ 5 ಜನರು ಸುಲಭವಾಗಿ ಪ್ರಯಾಣಿಸಬಹುದು.

Good Cars For Office Going Employees Maruti Celerio Renault Kwid Mg Comet Ev

ನೂತನ ಕ್ವಿಡ್ ಕಾರು ಐಸ್ ಕೂಲ್ ವೈಟ್, ಔಟ್‌ಬ್ಯಾಕ್ ಬ್ರೊನ್, ಮೂನ್‌ಲೈಟ್ ಸಿಲ್ವರ್ ಒಳಗೊಂಡಂತೆ ವಿವಿಧ ಬಣ್ಣಗಳೊಂದಿಗೆ ಸಿಗಲಿದ್ದು, 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಕೀ ಲೆಸ್ ಎಂಟ್ರಿ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸಲು ಡುಯಲ್ ಫ್ರಂಟ್ ಏರ್‌ಬ್ಯಾಗ್‌ ಮತ್ತು ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಅನ್ನು ಪಡೆದಿದೆ.

ಕಡೆಯದಾಗಿ ಎಂಜಿ ಕಾಮೆಟ್ ಇವಿ (MG Comet EV) ಬಗ್ಗೆ ಮಾತನಾಡುವುದಾದರೆ, ಇದೊಂದು ಎಲೆಕ್ಟ್ರಿಕ್ ಹ್ಯಾಚ್‌ಬ್ಯಾಕ್‌ ಆಗಿದೆ. ರೂ.6.99 ಲಕ್ಷದಿಂದ ರೂ.9.53 ಲಕ್ಷ (ಎಕ್ಸ್ ಶೋರೂಂ) ದರವನ್ನು ಹೊಂದಿದೆ. 2-ಡೋರ್ (ಬಾಗಿಲು) ಆಯ್ಕೆಯಲ್ಲಿ ದೊರೆಯುವ ಈ ಕಾರಿನಲ್ಲಿ 4 ಮಂದಿ ಆರಾಮದಾಯವಾಗಿ ಪ್ರಯಾಣಿಸಬಹುದು. 17.3 ಕೆಡಬ್ಲ್ಯೂಹೆಚ್ ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಪೂರ್ತಿ ಚಾರ್ಜ್‌ನಲ್ಲಿ 230 ಕಿ.ಮೀ ಓಡುತ್ತದೆ.

Good Cars For Office Going Employees Maruti Celerio Renault Kwid Mg Comet Ev

ಈ ಕಾಮೆಟ್ ಇವಿ ಬ್ಯಾಟರಿ ಪ್ಯಾಕ್, 3.3 ಕೆಡಬ್ಲ್ಯೂ ಚಾರ್ಜರ್ ಬಳಕೆಯಲ್ಲಿ 0 ಯಿಂದ 100% ಚಾರ್ಜ್ ಆಗುವುದಕ್ಕೆ 7 ಗಂಟೆ ಬೇಕಾಗುತ್ತದೆ. ಡುಯಲ್ 10.25-ಇಂಚಿನ ಸ್ಕ್ರೀನ್ (ಇನ್ಫೋಟೈನ್‌ಮೆಂಟ್ ಸಿಸ್ಟಮ್‌ & ಇನ್ಸ್ಟ್ರುಮೆಂಟ್ ಕ್ಲಸ್ಟರ್), ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ ಡುಯಲ್ ಫ್ರಂಟ್ ಏರ್‌ಬ್ಯಾಗ್‌, ರಿವರ್ಸ್ ಪಾರ್ಕಿಂಗ್ ಕ್ಯಾಮೆರಾವನ್ನು ಹೊಂದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Monday, July 15, 2024, 20:06 [IST]
English summary
Good cars for office going employees maruti celerio renault kwid mg comet ev
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+