ಮುಂಗಾರು ಮಳೆ: ನೆಂದು ಒದ್ದೆಯಾಗುವುದಕ್ಕಿಂತ ಸೇಫ್ಟಿಯಾಗಿ ಓಡಾಡಲು ಈ ಕಾರುಗಳು ಬೆಸ್ಟ್.. 3.99 ಲಕ್ಷ ಬೆಲೆ!

ಬೆಂಗಳೂರು, ಮುಂಬೈ ಹಾಗೂ ದೆಹಲಿಯಂತಹ ಮಹಾನಗರಗಳಲ್ಲಿ ಬದುಕಿನ ಬಂಡಿ ಎಳೆಯಲು ದಿನನಿತ್ಯ ಕೆಲಸಕ್ಕೆ ಹೋಗಬೇಕು. ಆದರೆ, ಮಳೆಗಾಲದ ಸಂದರ್ಭದಲ್ಲಿ ದ್ವಿಚಕ್ರ ವಾಹನದಲ್ಲಿ ಕಚೇರಿಗೆ ತೆರಳುವುದು ತುಂಬಾ ಕಷ್ಟವಾಗುತ್ತದೆ. ಯಾವುದೇ ರೀತಿಯ ರಕ್ಷಣೆ ಇಲ್ಲದಿರುವುದರಿಂದ ನೆನೆದು ಒದ್ದೆಯಾಗಬೇಕಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಕಾರುಗಳು ಉತ್ತಮ ಆಯ್ಕೆಯಾಗಲಿವೆ. ಮಳೆಗಾಲದಲ್ಲಿ ಮಾತ್ರವಲ್ಲದೆ, ಚಳಿಗಾಲ ಮತ್ತು ಬೇಸಿಗೆಗಾಲದಲ್ಲಿ ಕೂಡ ಪ್ರಯಾಣಿಕರಿಗೆ ಹೆಚ್ಚಿನ ಸುರಕ್ಷತೆ ಒದಗಿಸುತ್ತವೆ. ನೀವು ಹೊಸ ಕಾರನ್ನು ಖರೀದಿಸಲು ಆಲೋಚಿಸಿದ್ದರೆ.. ಮಾರುತಿ ಸುಜುಕಿ ಆಲ್ಟೊ ಕೆ10, ರೆನಾಲ್ಟ್ ಕ್ವಿಡ್ ಹಾಗೂ ಸೆಲರಿಯೊ ಹ್ಯಾಚ್‌ಬ್ಯಾಕ್‌ಗಳು ಸೂಕ್ತವಾಗುತ್ತವೆ. ಬನ್ನಿ.. ಈ ಕಾರುಗಳ ಬೆಲೆ ಹಾಗೂ ವಿಶೇಷತೆ ಬಗ್ಗೆ ಸಂಪೂರ್ಣವಾದ ಮಾಹಿತಿ ತಿಳಿಯೋಣ.

ಮೊದಲಿಗೆ ಮಾರುತಿ ಸುಜುಕಿ ಆಲ್ಟೊ ಕೆ10 (Maruti Suzuki Alto K10) ಕಾರಿನ ಕುರಿತಂತೆ ಮಾತನಾಡೋಣ. ಇದು ರೂ.3.99 ಲಕ್ಷದಿಂದ ರೂ.5.96 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 1-ಲೀಟರ್ ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಪಡೆದಿದೆ. ಪೆಟ್ರೋಲ್ ಮಾದರಿಗಳು 24.39 - 24.90 ಕೆಎಂಪಿಎಲ್, ಸಿಎನ್‌ಜಿ ರೂಪಾಂತರಗಳು 33.40 - 33.85 ಕೆಎಂ/ಕೆಜಿವರೆಗೆ ಮೈಲೇಜ್ ನೀಡುತ್ತವೆ.

Good Cars For Rainy Season In India Maruti Suzuki Alto K10 Renault Kwid Celerio

ಈ ಆಲ್ಟೊ ಕೆ10 ಹ್ಯಾಚ್‌ಬ್ಯಾಕ್‌ನಲ್ಲಿ 4 ಮಂದಿ ಆರಾಮದಾಯಕವಾಗಿ ಪ್ರಯಾಣಿಸಬಹುದು. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಕೀಲೆಸ್ ಎಂಟ್ರಿ ಹಾಗೂ ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸಲು ಡುಯಲ್ ಫ್ರಂಟ್ ಏರ್‌ಬ್ಯಾಗ್‌ನ್ನು ಒಳಗೊಂಡಿದೆ.

ರೆನಾಲ್ಟ್ ಕ್ವಿಡ್ (Renault KWID) ಸಹ ಕೈಗೆಟುಕುವ ಬೆಲೆಯಲ್ಲಿ ಸಿಗುತ್ತದೆ. ಇದು ರೂ.4.70 ಲಕ್ಷದಿಂದ ರೂ.6.45 ಲಕ್ಷ ಎಕ್ಸ್ ಶೋರೂಂ ದರವನ್ನು ಪಡೆದಿದೆ. 1-ಲೀಟರ್ ಪೆಟ್ರೋಲ್ ಎಂಜಿನ್ ಹಾಗೂ 5-ಸ್ಪೀಡ್ ಮ್ಯಾನುವಲ್/ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 21.46 - 22.3 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಇದರಲ್ಲಿ 5 ಜನರು ಓಡಾಟ ನಡೆಸಬಹುದು.

Good Cars For Rainy Season In India Maruti Suzuki Alto K10 Renault Kwid Celerio

ನೂತನ ಕ್ವಿಡ್ ಹ್ಯಾಚ್‌ಬ್ಯಾಕ್‌ 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಕೀ ಲೆಸ್ ಎಂಟ್ರಿ, ಮ್ಯಾನುವಲ್ ಎಸಿ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ ಡುಯಲ್ ಫ್ರಂಟ್ ಏರ್‌ಬ್ಯಾಗ್‌, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಅನ್ನು ಪಡೆದಿದೆ.

ಮಾರುತಿ ಸುಜುಕಿ ಸೆಲೆರಿಯೊ (Maruti Suzuki Celerio) ಜನಪ್ರಿಯ ಹ್ಯಾಚ್‌ಬ್ಯಾಕ್ ಆಗಿದ್ದು, ರೂ.4.99 ಲಕ್ಷದಿಂದ ರೂ.7.04 ಲಕ್ಷ ಎಕ್ಸ್ ಶೋರೂಂ ದರವನ್ನು ಪಡೆದಿದೆ. 1-ಲೀಟರ್ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್ ಹೊಂದಿದೆ. 5-ಸ್ಪೀಡ್ ಮ್ಯಾನುವಲ್/ 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. ಈ ಕಾರು 25.24 ರಿಂದ 34.43 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ.

Good Cars For Rainy Season In India Maruti Suzuki Alto K10 Renault Kwid Celerio

ಈ ಸೆಲೆರಿಯೊ ಕಾರಿನಲ್ಲಿ 5 ಮಂದಿ ಸುಲಭವಾಗಿ ಓಡಾಟ ನಡೆಸಬಹುದು. 7-ಇಂಚಿನ ಟಚ್‌ಸ್ಕ್ರೀನ್, ಪುಶ್ ಬಟನ್ ಸ್ಟಾರ್ಟ್/ ಸ್ಟಾಪ್, ಕೀಲೆಸ್ ಎಂಟ್ರಿ ಮತ್ತು ಮ್ಯಾನುವಲ್ ಎಸಿ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ ಡುಯಲ್ ಫ್ರಂಟ್ ಏರ್‌ಬ್ಯಾಗ್‌, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಹಿಲ್ ಹೋಲ್ಡ್ ಅಸಿಸ್ಟ್ ಅನ್ನು ಪಡೆದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Thursday, August 1, 2024, 17:25 [IST]
English summary
Good cars for rainy season india maruti suzuki alto k10 renault kwid celerio
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+