ಈ ಜನಪ್ರಿಯ ಕಾರುಗಳು 8 ಲಕ್ಷದೊಳಗೆ ಸಿಗುತ್ತವೆ.. ಸಖತ್ ಮೈಲೇಜ್!

ಪ್ರತಿಯೊಬ್ಬರಿಗೂ ಜೀವನದಲ್ಲಿ ತಮ್ಮ ಪುಟ್ಟ ಕುಟುಂಬಕ್ಕಾಗಿ ಹೊಸ ಕಾರು ಖರೀದಿಸಬೇಕೆಂಬ ಆಸೆಯಿರುತ್ತದೆ. ಆದರೆ ಯಾವುದನ್ನು ತೆಗೆದುಕೊಂಡರೆ ಒಳಿತು ಎಂಬ ಗೊಂದಲವಿರುತ್ತದೆ. ನೀವು ನೂತನ ಕಾರನ್ನು ಕೊಂಡುಕೊಳ್ಳಬೇಕು ಎಂದು ಆಲೋಚಿಸಿದ್ದರೆ.. ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ, ಮಾರುತಿ ಸುಜುಕಿ ಫ್ರಾಂಕ್ಸ್, ಟಾಟಾ ಆಲ್ಟ್ರೋಜ್ ಹಾಗೂ ಹ್ಯುಂಡೈ ಐ20 ಮಾದರಿಗಳು ಉತ್ತಮ ಆಯ್ಕೆಯಾಗಲಿವೆ. ಇಲ್ಲಿ ನೂತನ ಕಾರುಗಳ ಬೆಲೆ (Price), ಕಾರ್ಯಕ್ಷಮತೆ (Performance) ಹಾಗೂ ವೈಶಿಷ್ಟ್ಯ (Features)ಗಳ ಬಗ್ಗೆ ಸಂಪೂರ್ಣವಾಗಿ ವಿವರಿಸಿದ್ದೇವೆ.

ಮೊದಲಿಗೆ ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ (Mahindra XUV 3XO) ಎಸ್‌ಯುವಿ ಕುರಿತಂತೆ ಮಾತನಾಡೋಣ. ಇದು ರೂ.7.49 ಲಕ್ಷದಿಂದ ರೂ.15.49 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 1.2-ಲೀಟರ್ ಟರ್ಬೊ ಪೆಟ್ರೋಲ್ ಹಾಗೂ 1.5-ಲೀಟರ್ ಡೀಸೆಲ್ ಎಂಜಿನ್‌ನ್ನು ಪಡೆದಿದೆ. ರೂಪಾಂತರಗಳಿಗೆ ಅನುಗುಣವಾಗಿ 6-ಸ್ಪೀಡ್ ಮ್ಯಾನುವಲ್/ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 17.96 ರಿಂದ 21.2 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

Good Cars Under 8 Lakh Mahindra XUV 3XO Maruti Suzuki Fronx Tata Altroz Hyundai i20

ಈ ಎಸ್‌ಯುವಿಯಲ್ಲಿ 5 ಜನರು ಸುಲಭವಾಗಿ ಓಡಾಟ ನಡೆಸಬಹುದು. ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಇನ್ಸ್ಟ್ರುಮೆಂಟ್ ಕ್ಲಸ್ಟರ್‌ಗಾಗಿ 10.25-ಇಂಚಿನ ಡುಯಲ್ ಡಿಸ್ಪ್ಲೇಗಳು, ಡುಯಲ್-ಝೋನ್ ಎಸಿ, ವೈರ್‌ಲೆಸ್ ಫೋನ್ ಚಾರ್ಜರ್, ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌, ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.

ಮಾರುತಿ ಸುಜುಕಿ ಫ್ರಾಂಕ್ಸ್ (Maruti Suzuki FRONX) ಕಾರಿನ ಬಗ್ಗೆ ಹೇಳುವುದಾದರೆ, ಇದು ರೂ.7.51 ಲಕ್ಷದಿಂದ ರೂ.13.04 ಲಕ್ಷ ಎಕ್ಸ್ ಶೋರೂಂ ದರದಲ್ಲಿ ಖರೀದಿಗೆ ಸಿಗುತ್ತದೆ. ಪೆಟ್ರೋಲ್ ಮತ್ತು ಸಿಎನ್‌ಜಿ ಆಯ್ಕೆಯನ್ನು ಹೊಂದಿದ್ದು, 5-ಸ್ಪೀಡ್ ಮ್ಯಾನುವಲ್/ಆಟೋಮೆಟಿಕ್, 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 20.1 ರಿಂದ 28.51 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

Good Cars Under 8 Lakh Mahindra XUV 3XO Maruti Suzuki Fronx Tata Altroz Hyundai i20

ನೂತನ ಫ್ರಾಂಕ್ಸ್ ಎಸ್‌ಯುವಿ 9-ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ ಪ್ಲೇ, ಕ್ರೂಸ್ ಕಂಟ್ರೋಲ್, ಆಟೋ ಕ್ಲೇಮೇಟ್ ಕಂಟ್ರೋಲ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.

ಟಾಟಾ ಆಲ್ಟ್ರೋಜ್ (Tata Altroz) ಪ್ರೀಮಿಯಂ ಹ್ಯಾಚ್‌ಬ್ಯಾಕ್ ಆಗಿದ್ದು, ರೂ.6.65 ಲಕ್ಷದಿಂದ ರೂ.11.35 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಪಡೆದಿದೆ. ಪೆಟ್ರೋಲ್, ಡೀಸೆಲ್ ಹಾಗೂ ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. 19.33 ರಿಂದ 26.20 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಇದರಲ್ಲಿ 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳಿವೆ.

Good Cars Under 8 Lakh Mahindra XUV 3XO Maruti Suzuki Fronx Tata Altroz Hyundai i20

ಕಡೆಯದಾಗಿ ಹ್ಯುಂಡೈ ಐ20 (Hyundai i20) ಹ್ಯಾಚ್‌ಬ್ಯಾಕ್ ಬಗ್ಗೆ ಮಾತನಾಡುವುದಾದರೆ, ಈ ಕಾರು ರೂ.7.04 ಲಕ್ಷದಿಂದ ರೂ.11.21 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಪೆಟ್ರೋಲ್ ಎಂಜಿನ್ ಒಳಗೊಂಡಿದ್ದು, 16 ರಿಂದ 20 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Friday, July 26, 2024, 15:56 [IST]
English summary
Good cars under 8 lakh mahindra xuv 3xo maruti suzuki fronx tata altroz hyundai i20
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+