ನಿಮ್ಮ ಪುಟ್ಟ ಕುಟುಂಬಕ್ಕೆ ಈ ಕಾರುಗಳು ಬೆಸ್ಟ್.. ಅತಿಕಡಿಮೆ ಬೆಲೆ.. ಭಾರಿ ಮೈಲೇಜ್, 5-ಆಸನಗಳು!

ಪ್ರತಿಯೊಬ್ಬರಿಗೂ ಜೀವನದಲ್ಲಿ ಹೊಸ ಕಾರು ಖರೀದಿಸಬೇಕೆಂಬ ಬಹುದೊಡ್ಡ ಆಸೆಯಿರುತ್ತದೆ. ಆದರೆ, ತಮ್ಮ ಕುಟುಂಬಕ್ಕಾಗಿ ಹ್ಯಾಚ್‌ಬ್ಯಾಕ್, ಎಸ್‌ಯುವಿ ಹಾಗೂ ಎಂಪಿವಿಗಳಲ್ಲಿ ಯಾವುದನ್ನು ಖರೀದಿಸಬೇಕೆಂಬ ಗೊಂದಲದಲ್ಲಿರುತ್ತಾರೆ. ಇಲ್ಲಿ ಕೈಗೆಟುಕುವ ಬೆಲೆ ಹಾಗೂ ಆಕರ್ಷಕ ವೈಶಿಷ್ಟ್ಯದೊಂದಿಗೆ ಖರೀದಿಗೆ ದೊರೆಯುವ ಟಾಟಾ ಪಂಚ್, ಮಾರುತಿ ಸುಜುಕಿ ಇಗ್ನಿಸ್, ಹ್ಯುಂಡೈ ಗ್ರ್ಯಾಂಡ್ ಐ10 ನಿಯೋಸ್, ಟಾಟಾ ಟಿಯಾಗೊ, ಮಾರುತಿ ಸುಜುಕಿ ವ್ಯಾಗನ್ಆರ್, ಮಾರುತಿ ಸುಜುಕಿ ಸೆಲೆರಿಯೊ, ರೆನಾಲ್ಟ್ ಕ್ವಿಡ್ ಹಾಗೂ ಮಾರುತಿ ಸುಜುಕಿ ಆಲ್ಟೊ ಕೆ10 ಕಾರುಗಳ ಕುರಿತಂತೆ ಸಂಕ್ಷಿಪ್ತವಾಗಿ ವಿವರಿಸಿದ್ದೇವೆ.

ಮೊದಲಿಗೆ ಟಾಟಾ ಪಂಚ್ (Tata Punch) ಬಗ್ಗೆ ಮಾತನಾಡೋಣ. ಇದೊಂದು ಜನಪ್ರಿಯ ಮೈಕ್ರೋ ಎಸ್‌ಯುವಿಯಾಗಿದೆ. ಕನಿಷ್ಠ ರೂ.6.13 ಲಕ್ಷ ಮತ್ತು ಗರಿಷ್ಠ ರೂ.10.15 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಒಳಗೊಂಡಿದೆ. 1.2-ಲೀಟರ್ 3-ಸಿಲಿಂಡರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಹೊಂದಿದ್ದು, 19 ರಿಂದ 26.99 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ (10.25-ಇಂಚು) ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

Good Cars Under Rs10 Lakh Tata Punch Maruti Suzuki WagonR Hyundai Grand i10 Nios To Renault KWID

ಮಾರುತಿ ಸುಜುಕಿ ಇಗ್ನಿಸ್ (Maruti Suzuki Ignis) ಕುರಿತಂತೆ ಹೇಳುವುದಾದರೆ, ಈ ಕಾರು ರೂ.5.49 ರಿಂದ ರೂ.8.06 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 1.2-ಲೀಟರ್ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. 20.89 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (7-ಇಂಚು), ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.

ಹ್ಯುಂಡೈ ಗ್ರ್ಯಾಂಡ್ ಐ10 ನಿಯೋಸ್ (Hyundai Grand i10 Nios) ಕೂಡ ಜನಪ್ರಿಯ ಹ್ಯಾಚ್‌ಬ್ಯಾಕ್ ಆಗಿದೆ. ಇದು ರೂ.5.92 ರಿಂದ ರೂ.8.56 ಲಕ್ಷ ಎಕ್ಸ್ ಶೋರೂಂ ದರವನ್ನು ಹೊಂದಿದೆ. 1.2-ಲೀಟರ್ ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 16 ರಿಂದ 27 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (8-ಇಂಚು), ವೈರ್‌ಲೆಸ್ ಫೋನ್ ಚಾರ್ಜರ್, ಆಟೋಮೆಟಿಕ್ ಎಸಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

Good Cars Under Rs10 Lakh Tata Punch Maruti Suzuki WagonR Hyundai Grand i10 Nios To Renault KWID

ಟಾಟಾ ಟಿಯಾಗೊ (Tata Tiago) ಹ್ಯಾಚ್‌ಬ್ಯಾಕ್ ಕುರಿತಂತೆ ಮಾತನಾಡುವುದಾದರೆ, ಈ ಕಾರು ಕನಿಷ್ಠ ರೂ.4,99 ಲಕ್ಷ ಮತ್ತು ಗರಿಷ್ಠ ರೂ.8.75 ಲಕ್ಷ ಬೆಲೆಯನ್ನು ಒಳಗೊಂಡಿದೆ. 1.2-ಲೀಟರ್ ಪೆಟ್ರೋಲ್ & ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 19.43 ರಿಂದ 28.06 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (7-ಇಂಚು), ಡಿಜಿಟಲ್-ಡ್ರೈವರ್ ಡಿಸ್‌ಪ್ಲೇ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ.

ಮಾರುತಿ ಸುಜುಕಿ ವ್ಯಾಗನ್ಆರ್ (Maruti Suzuki WagonR) ಹ್ಯಾಚ್‌ಬ್ಯಾಕ್ ಬಗ್ಗೆ ಹೇಳುವುದಾದರೆ, ಇದು ರೂ.5.54 ಲಕ್ಷದಿಂದ ರೂ.7.33 ಲಕ್ಷ ಎಕ್ಸ್ ಶೋರೂಂ ದರವನ್ನು ಪಡೆದಿದೆ. ಪೆಟ್ರೋಲ್ ಮತ್ತು ಸಿಎನ್‌ಜಿ ಪವರ್‌ಟ್ರೇನ್‌ನ್ನು ಹೊಂದಿದೆ. 23.56 ರಿಂದ 34.05 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಡಿಸ್ಪ್ಲೇ (7-ಇಂಚು), 4-ಸ್ಪೀಕರ್ ಮ್ಯೂಸಿಕ್ ಸಿಸ್ಟಮ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

Good Cars Under Rs10 Lakh Tata Punch Maruti Suzuki WagonR Hyundai Grand i10 Nios To Renault KWID

ಮಾರುತಿ ಸುಜುಕಿ ಸೆಲೆರಿಯೊ (Maruti Suzuki Celerio) ಸಹ ಪ್ರಮುಖ ಹ್ಯಾಚ್‌ಬ್ಯಾಕ್ ಆಗಿದೆ. ಇದು ರೂ.4.99 ಲಕ್ಷದಿಂದ ರೂ.7.04 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಒಳಗೊಂಡಿದೆ. 1-ಲೀಟರ್ ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್‌ ಆಯ್ಕೆಯನ್ನು ಹೊಂದಿದೆ. 25.24 ರಿಂದ 34.43 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ (7-ಇಂಚು), ಪುಶ್ ಬಟನ್ ಸ್ಟಾರ್ಟ್/ ಸ್ಟಾಪ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

ರೆನಾಲ್ಟ್ ಕ್ವಿಡ್ (Renault KWID) ಹ್ಯಾಚ್‌ಬ್ಯಾಕ್ ಕುರಿತಂತೆ ಹೇಳುವುದಾದರೆ, ಈ ಕಾರು ರೂ.4.70 ರಿಂದ ರೂ.6.45 ಲಕ್ಷ ಎಕ್ಸ್ ಶೋರೂಂ ದರವನ್ನು ಪಡೆದಿದೆ. 1-ಲೀಟರ್ ಪೆಟ್ರೋಲ್ ಎಂಜಿನ್ ಮತ್ತು 5-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 21.46 ರಿಂದ 22.3 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (8-ಇಂಚು) ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ.

ಮಾರುತಿ ಸುಜುಕಿ ಆಲ್ಟೋ ಕೆ10 (Maruti Suzuki Alto K10) ಹ್ಯಾಚ್‌ಬ್ಯಾಕ್ ಬಗ್ಗೆ ಹೇಳುವುದಾದರೆ, ಈ ಕಾರು ರೂ.3.99 ಲಕ್ಷದಿಂದ ರೂ.5.96 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 1-ಲೀಟರ್ ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. 24.39 ರಿಂದ 33.85 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (7-ಇಂಚು), ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Saturday, October 26, 2024, 10:00 [IST]
English summary
Good cars under rs 10 lakh tata punch maruti wagonr hyundai grand i10 nios to renault kwid
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+