ದಿನಬಳಕೆಗೆ ಬೆಸ್ಟ್ ಎಲೆಕ್ಟ್ರಿಕ್ ಕಾರುಗಳಿವು.. ಕೈಗೆಟುಕುವ ಬೆಲೆ, ಜಾಸ್ತಿ ದೂರ ಓಡುತ್ತವೆ!
ಬೆಂಗಳೂರು, ಮುಂಬೈ ಮತ್ತು ನವದೆಹಲಿಯಂತಹ ಮಹಾನಗರಗಳಲ್ಲಿ ದಿನನಿತ್ಯ ಕೆಲಸಕ್ಕೆ ಹೋಗಲು ಕಾರುಗಳು ತೀರಾ ಅನಿವಾರ್ಯವಾಗಿವೆ. ಇವು ಬೇಸಿಗೆಗಾಲ, ಮಳೆಗಾಲ ಮತ್ತು ಚಳಿಗಾಲದಲ್ಲಿ ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸುತ್ತವೆ. ನೀವು ಪರಿಸರ ಸ್ನೇಹಿಯಾದ ಹೊಸ ಎಲೆಕ್ಟ್ರಿಕ್ ಕಾರನ್ನು ಖರೀದಿಸಲು ಯೋಚಿಸಿದರೆ.. ಟಾಟಾ ಟಿಯಾಗೊ ಇವಿ, ಎಂಜಿ ಕಾಮೆಟ್ ಇವಿ ಹಾಗೂ ಸಿಟ್ರನ್ ಇಸಿ3 ಮಾದರಿಗಳು ಉತ್ತಮ ಆಯ್ಕೆಯಾಗಲಿವೆ. ನಾವಿಲ್ಲಿ ನೂತನ ಕಾರುಗಳ ಬೆಲೆ (Price), ಕಾರ್ಯಕ್ಷಮತೆ (Performance) ಮತ್ತು ವೈಶಿಷ್ಟ್ಯ (Feature)ಗಳ ಕುರಿತಂತೆ ಸಂಪೂರ್ಣವಾಗಿ ತಿಳಿಸಿಕೊಟ್ಟಿದ್ದೇವೆ.
ಮೊದಲಿಗೆ ಟಾಟಾ ಟಿಯಾಗೊ ಇವಿ (Tata Tiago EV) ಬಗ್ಗೆ ಮಾತನಾಡೋಣ. ಈ ಕಾರು ರೂ.7.99 ಲಕ್ಷದಿಂದ ರೂ.11.89 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ಸಿಗುತ್ತದೆ. 19.2 ಮತ್ತು 24 ಕೆಡಬ್ಲ್ಯೂಹೆಚ್ ಬ್ಯಾಟರಿಯನ್ನು ಪಡೆದಿದ್ದು, ಭರ್ತಿ ಚಾರ್ಜ್‌ನಲ್ಲಿ 250 ರಿಂದ 315 ಕಿಲೋಮೀಟರ್ ಓಡುತ್ತದೆ. ಈ ಕಾರಿನಲ್ಲಿ 5 ಮಂದಿ ಆರಾಮದಾಯಕವಾಗಿ ಪ್ರಯಾಣಿಸಬಹುದು.

ಈ ಟಿಯಾಗೊ ಇವಿ 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, 4-ಸ್ಪೀಕರ್ ಹರ್ಮನ್ ಸೌಂಡ್ ಸಿಸ್ಟಮ್, ಆಟೋ ಎಸಿ, ಪುಶ್-ಬಟನ್ ಸ್ಟಾರ್ಟ್/ಸ್ಟಾಪ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ ಡುಯಲ್ ಫ್ರಂಟ್ ಏರ್‌ಬ್ಯಾಗ್, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಹಾಗೂ ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಮತ್ತು ರೇರ್ ಕ್ಯಾಮೆರಾವನ್ನು ಪಡೆದಿದೆ.
ಎಂಜಿ ಕಾಮೆಟ್ ಇವಿ (MG Comet EV) ಕೂಡ ಜನಪ್ರಿಯ ಎಲೆಕ್ಟ್ರಿಕ್ ಹ್ಯಾಚ್‌ಬ್ಯಾಕ್ ಆಗಿದ್ದು, ರೂ.6.99 ಲಕ್ಷದಿಂದ ರೂ.9.53 ಲಕ್ಷ ಎಕ್ಸ್ ಶೋರೂಂ ದರವನ್ನು ಹೊಂದಿದೆ. 2-ಡೋರ್ (ಬಾಗಿಲು) ಆಯ್ಕೆಯಲ್ಲಿ ಲಭ್ಯವಿದ್ದು, 4 ಜನರು ಓಡಾಟ ನಡೆಸಬಹುದು. 17.3 ಕೆಡಬ್ಲ್ಯೂಹೆಚ್ ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಪಡೆದಿದ್ದು, ಸಂಪೂರ್ಣ ಚಾರ್ಜ್‌ನಲ್ಲಿ 230 ಕಿ.ಮೀ ರೇಂಜ್ (ಮೈಲೇಜ್) ನೀಡುತ್ತದೆ.

ನೂತನ ಕಾಮೆಟ್ ಇವಿ 10.25-ಇಂಚಿನ ಸ್ಕ್ರೀನ್ (ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಇನ್ಸ್ಟ್ರುಮೆಂಟ್ ಕ್ಲಸ್ಟರ್), ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ ಮತ್ತು ಕೀಲೆಸ್ ಎಂಟ್ರಿಯಂತಹ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸಲು ಡುಯಲ್ ಫ್ರಂಟ್ ಏರ್‌ಬ್ಯಾಗ್, ರಿವರ್ಸ್ ಪಾರ್ಕಿಂಗ್ ಕ್ಯಾಮೆರಾ, ರೇರ್ ಪಾರ್ಕಿಂಗ್ ಸೆನ್ಸರ್ಸ್, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್)ಯನ್ನು ಹೊಂದಿದೆ.
ಸಿಟ್ರನ್ ಇಸಿ3 (Citroen eC3) ಬಗ್ಗೆ ಹೇಳುವುದಾದರೆ, ಈ ಎಲೆಕ್ಟ್ರಿಕ್ ಕಾರು ರೂ.11.61 ಲಕ್ಷದಿಂದ ರೂ.13.41 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಪಡೆದಿದೆ. ಈ ಕಾರಿನಲ್ಲಿ 29.2 ಕೆಡಬ್ಲ್ಯೂಹೆಚ್ ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಬಳಕೆ ಮಾಡಲಾಗಿದೆ. ಪೂರ್ತಿ ಚಾರ್ಜ್‌ನಲ್ಲಿ 320 ಕಿಲೋಮೀಟರ್ ಓಡುತ್ತದೆ. ಇದರಲ್ಲಿಯೂ 5 ಮಂದಿ ಓಡಾಟ ನಡೆಸಬಹುದು.

ಈ ಸಿಟ್ರನ್ ಇಸಿ3 ಎಲೆಕ್ಟ್ರಿಕ್ ಕಾರಿನ ಬ್ಯಾಟರಿಯು ಡಿಸಿ ಪಾಸ್ಟ್ ಚಾರ್ಜರ್ ಆಯ್ಕೆಯಲ್ಲಿ ಶೇಕಡ 10-80% ಚಾರ್ಜ್ ಆಗಲು 57 ನಿಮಿಷ ಬೇಕಾಗುತ್ತದೆ. 10.2-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಮ್ಯಾನುವಲ್ ಎಸಿ, ಸೆಮಿ-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಕೀಲೆಸ್ ಎಂಟ್ರಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ ಡುಯಲ್ ಫ್ರಂಟ್ ಏರ್‌ಬ್ಯಾಗ್, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಅನ್ನು ಹೊಂದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications