ಅತ್ಯುತ್ತಮ ಫ್ಯಾಮಿಲಿ ಕಾರುಗಳಿವು.. ರೂ.6 ಲಕ್ಷ ಬೆಲೆ, 7 ಜನ ಹೋಗಬಹುದು.. 26 ಕಿ.ಮೀ ಮೈಲೇಜ್

ಪ್ರತಿಯೊಬ್ಬರಿಗೂ ತಮ್ಮ ಕುಟುಂಬಕ್ಕಾಗಿ ಹೊಸ ಕಾರು ಖರೀದಿಸಬೇಕೆಂಬ ಆಸೆಯಿರುತ್ತದೆ. ಆದಾಗ್ಯೂ ಯಾವ ಕಾರು ಬಜೆಟ್ ಬೆಲೆಯಲ್ಲಿ ಸಿಗುತ್ತದೆ.. ಏನೇನು ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದಿರುತ್ತದೆ ಎಂಬ ಪ್ರಶ್ನೆಗಳು ಹಲವರಲ್ಲಿ ಇರುತ್ತದೆ. ನಿಮ್ಮ ಕುಟುಂಬ ಸದಸ್ಯರಿಗಾಗಿ ಹೊಸ ಕಾರನ್ನು ತೆಗೆದುಕೊಳ್ಳಲು ಆಯೋಚಿಸಿದ್ದೀರಾ.. ಹಾಗಾದರೆ ಕೈಗೆಟುಕುವ ದರದಲ್ಲಿ ಸಿಗುವ ರೆನಾಲ್ಟ್ ಟ್ರೈಬರ್, ಮಹೀಂದ್ರಾ ಬೊಲೆರೊ ನಿಯೋ ಹಾಗೂ ಮಾರುತಿ ಸುಜುಕಿ ಎರ್ಟಿಗಾಗಳು ಉತ್ತಮ ಆಯ್ಕೆಯಾಗಲಿವೆ. ಇಲ್ಲಿ ನೂತನ ಕಾರುಗಳ ಬೆಲೆ (Price), ಕಾರ್ಯಕ್ಷಮತೆ (Performance) ಮತ್ತು ವೈಶಿಷ್ಟ್ಯ (Features)ಗಳ ಕುರಿತಂತೆ ಸಂಪೂರ್ಣವಾಗಿ ತಿಳಿಸಿಕೊಟ್ಟದ್ದೇವೆ.

ರೆನಾಲ್ಟ್ ಟ್ರೈಬರ್ (Renault Triber): ಈ ಕಾರು ಅತ್ಯಂತ ಕೈಗೆಟುಕುವ ಬೆಲೆಯನ್ನು ಸಿಗುತ್ತದೆ. ರೂ.6 ಲಕ್ಷದಿಂದ ರೂ.8.97 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಪಡೆದಿದೆ. 1-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್‌ನ್ನು ಹೊಂದಿದ್ದು, 18.2 ರಿಂದ 20 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಇದರಲ್ಲಿ 7 ಮಂದಿ ಆರಾಮದಾಯಕವಾಗಿ ಕುರಿತುಕೊಂಡು ಪ್ರಯಾಣಿಸಬಹುದು.

Good Family Cars Low Price Renault Triber Mahindra Bolero Neo Maruti Suzuki Ertiga

ಹೊಸ ರೆನಾಲ್ಟ್ ಟ್ರೈಬರ್ 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, 7-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ವೈರ್‌ಲೆಸ್ ಚಾರ್ಜರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸಲು 4 ಏರ್‌ಬ್ಯಾಗ್‌, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಟಿಸಿಎಸ್ (ಟ್ರಾಕ್ಷನ್ ಕಂಟ್ರೋಲ್ ಸಿಸ್ಟಮ್) ಮತ್ತು ರೇರ್ ವ್ಯೂ ಕ್ಯಾಮೆರಾವನ್ನು ಹೊಂದಿದೆ.

ಮಹೀಂದ್ರಾ ಬೊಲೆರೊ ನಿಯೋ (Mahindra Bolero Neo): ಇದು ಗ್ರಾಮೀಣ ಜನರ ನೆಚ್ಚಿನ ಎಸ್‌ಯುವಿಯಾಗಿದೆ. ರೂ.9.95 ಲಕ್ಷದಿಂದ ರೂ.12.15 ಲಕ್ಷ ಎಕ್ಸ್ ಶೋರೂಂ ದರದಲ್ಲಿ ಖರೀದಿಗೆ ಸಿಗುತ್ತದೆ. 1.5-ಲೀಟರ್ ಡೀಸೆಲ್ ಎಂಜಿನ್‌ ಪಡೆದಿದ್ದು, 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 17.29 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಜೊತೆಗೆ 7 ಆಸನ ಆಯ್ಕೆ ವ್ಯವಸ್ಥೆಯನ್ನು ಒಳಗೊಂಡಿದೆ.

Good Family Cars Low Price Renault Triber Mahindra Bolero Neo Maruti Suzuki Ertiga

ಈ ಬೊಲೆರೊ ನಿಯೋ 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಹೈಟ್ ಅಡ್ಜಸ್ಟ್ಏಬಲ್ ಡ್ರೈವರ್ ಸೀಟ್, ಕ್ರೂಸ್ ಕಂಟ್ರೋಲ್ ಮತ್ತು ಕೀಲೆಸ್ ಎಂಟ್ರಿನಂತಹ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ ಡುಯಲ್ ಫ್ರಂಟ್ ಏರ್‌ಬ್ಯಾಗ್‌, ರಿವರ್ಸ್ ಅಸಿಸ್ಟ್ ಹಾಗೂ ರೇರ್ ಪಾರ್ಕಿಂಗ್ ಸೆನ್ಸರ್ಸ್ ಅನ್ನು ಪಡೆದಿದೆ.

ಮಾರುತಿ ಸುಜುಕಿ ಎರ್ಟಿಗಾ (Maruti Suzuki Ertiga): ಈ ಜನಪ್ರಿಯ ಎಂಪಿವಿ ರೂ.8.69 ರಿಂದ ರೂ.13.03 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. 1.5-ಲೀಟರ್ ಪೆಟ್ರೋಲ್ ಮತ್ತು ಸಿಎನ್‌ಜಿ ಆಯ್ಕೆಯನ್ನು ಪಡೆದಿದೆ. ರೂಪಾಂತರಗಳಿಗೆ ಅನುಗುಣವಾಗಿ 20.3 ರಿಂದ 26.11 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 7 ಆಸನ ಆಯ್ಕೆ ವ್ಯವಸ್ಥೆಯನ್ನು ಒಳಗೊಂಡಿದೆ.

Good Family Cars Low Price Renault Triber Mahindra Bolero Neo Maruti Suzuki Ertiga

ನೂತನ ಎರ್ಟಿಗಾ 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ವೈರ್‌ಲೆಸ್ ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ ಪ್ಲೇ, ಪ್ಯಾಡಲ್ ಶಿಫ್ಟರ್‌ ಮತ್ತು ಕ್ರೂಸ್ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ ಏರ್‌ಬ್ಯಾಗ್‌, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್) ಹಾಗೂ ಚೈಲ್ಡ್-ಸೀಟ್ ಮೌಂಟ್‌ಗಳನ್ನು ಪಡೆದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Saturday, August 3, 2024, 8:30 [IST]
English summary
Good family cars low price renault triber mahindra bolero neo maruti suzuki ertiga
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+