Hyundai i20: ಹ್ಯುಂಡೈ ಐ20 ಕಾರು ಖರೀದಿಸಬೇಕೇ.. ಇಲ್ಲಿದೆ ಸಿಹಿಸುದ್ದಿ, 7 ಲಕ್ಷ ಬೆಲೆ.. 20 ಕಿ.ಮೀ ಮೈಲೇಜ್
ಹ್ಯುಂಡೈ (Hyundai) ಜನಪ್ರಿಯ ಕಾರು ತಯಾರಕ ಕಂಪನಿಯಾಗಿದ್ದು, ವಿವಿಧ ಹ್ಯಾಚ್‌ಬ್ಯಾಕ್ ಹಾಗೂ ಎಸ್‌ಯುವಿಗಳನ್ನು ಮಾರಾಟಗೊಳಿಸುತ್ತಿದೆ. ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿಸುತ್ತಾರೆ. ಈ ಮಾರ್ಚ್‌ನಲ್ಲಿ ಕಂಪನಿಯ ಬಹುಬೇಡಿಕೆಯ ಐ20 (i20) ಕಾರಿನ ಕಾಯುವಿಕೆ ಅವಧಿ ಒಂದಷ್ಟು ಮಟ್ಟಿಗೆ ಕಡಿಮೆಯಾಗಿದೆ ಎಂಬ ವಿವರಗಳು ದೊರೆತಿವೆ.
ಹ್ಯುಂಡೈ ಐ20 (Hyundai i20) ಕಾರಿನ ಸಿವಿಟಿ ಮಾದರಿಗಳಿಗಾಗಿ ನೀವು ಇವತ್ತು ಬುಕ್ಕಿಂಗ್ ಮಾಡಿದರೂ ಕೇವಲ 10 ವಾರಗಳಲ್ಲಿ ವಿತರಣೆಯಾಗುತ್ತವೆ. ಉಳಿದೆಲ್ಲ ಆವೃತ್ತಿಗಳು 6 ವಾರಗಳಲ್ಲಿ ಗ್ರಾಹಕರ ಮನೆ ಸೇರುತ್ತವೆ. ಸದ್ಯ, ಭಾರತದ ಮಾರುಕಟ್ಟೆಯಲ್ಲಿ ಈ ಕಾರು ರೂ.7.04 ಲಕ್ಷದಿಂದ ರೂ.11.21 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ.

ನೂತನ ಹ್ಯುಂಡೈ ಐ20 ಎರಾ, ಮ್ಯಾಗ್ನಾ, ಸ್ಪೋರ್ಟ್ಜ್, ಸ್ಪೋರ್ಟ್ಜ್ (ಒ) ಸೇರಿದಂತೆ ಹಲವು ರೂಪಾಂತರಗಳ ಆಯ್ಕೆಯಲ್ಲಿಯೂ ಲಭ್ಯವಿದೆ. ಈ ಕಾರಿನ ಹೊರ ಭಾಗದ ವಿನ್ಯಾಸ ನೋಡುಗರನ್ನು ಸೆಳೆಯಲಿದ್ದು, ಅಮೆಜಾನ್ ಗ್ರೇ, ಫಿಯರಿ ರೆಡ್, ಅಟ್ಲಾಸ್ ವೈಟ್, ಟೈಫೂನ್ ಸಿಲ್ವರ್ ಒಳಗೊಂಡಂತೆ 2 - ಡುಯಲ್ ಟೋನ್ ಹಾಗೂ 6 - ಮೊನೊ ಟೋನ್ ಬಣ್ಣಗಳೊಂದಿಗೂ ಸಿಗುತ್ತದೆ. ಈ ಕಾರಿನಲ್ಲಿ 5 ಮಂದಿ ಪ್ರಯಾಣಿಸಬಹುದು.
ಈ ಕಾರು ಕೇವಲ 1.2 - ಲೀಟರ್ ಪೆಟ್ರೋಲ್ ಎಂಜಿನ್ ಆಯ್ಕೆಯಲ್ಲಿ ಮಾತ್ರ ದೊರೆಯಲಿದ್ದು, 83 ಪಿಎಸ್ ಗರಿಷ್ಠ ಪವರ್ (ಶಕ್ತಿ) ಹಾಗೂ 115 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. 5 - ಸ್ಪೀಡ್ ಮ್ಯಾನುವಲ್ ಅಥವಾ ಸಿವಿಟಿ ಗೇರ್ ಬಾಕ್ಸ್ ನೋಂದಿಗೆ ಖರೀದಿಗೆ ಲಭ್ಯವಿದ್ದು, ರೂಪಾಂತರಗಳಿಗೆ ಅನುಗುಣವಾಗಿ 16 - 20 ಕೆಎಂಪಿಎಲ್ ಮೈಲೇಜ್ ನೀಡುತ್ತದೆ.

ಹ್ಯುಂಡೈ ಐ20 (Hyundai i20) ಗ್ರಾಹಕರನ್ನು ಆಕರ್ಷಿಸುವ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಮುಖವಾಗಿ 10.25 - ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಪಲ್ ಕಾರ್ ಪ್ಲೇ, ಆಂಡ್ರಾಯ್ಡ್ ಆಟೋ, ಏರ್ ಪ್ಯೂರಿಫೈಯರ್, ಆಟೋ ಎಲ್ಇಡಿ ಹೆಡ್‌ಲೈಟ್ಸ್ ಸೆಮಿ ಡಿಜಿಟಲ್ ಡ್ರೈವರ್ಸ್ ಡಿಸ್ಪ್ಲೇ ಮತ್ತು ಸನ್‌ರೂಫ್ ಅನ್ನು ಹೊಂದಿದೆ.
ಸುರಕ್ಷತೆಗೂ ಈ ಕಾರು ಹೆಸರುವಾಸಿಯಾಗಿದ್ದು, 6 ಏರ್‌ಬ್ಯಾಗ್, ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಹಿಲ್ ಅಸಿಸ್ಟ್ ಕಂಟ್ರೋಲ್, VSM (ವೆಹಿಕಲ್ ಸ್ಟೆಬಿಲಿಟಿ ಮ್ಯಾನೇಜ್‌ಮೆಂಟ್) ಮತ್ತು ಎಲ್ಲ ಪ್ರಯಾಣಿಕರಿಗಾಗಿ 3 - ಪಾಯಿಂಟ್ ಸೀಟ್‌ಬೆಲ್ಟ್‌ನ್ನು ಪಡೆದಿದೆ. ಈ ಕಾರಿಗೆ ಮಾರುತಿ ಸುಜುಕಿ ಬಲೆನೊ, ಟೊಯೊಟಾ ಗ್ಲಾನ್ಜಾ ಮತ್ತು ಟಾಟಾ ಆಲ್ಟ್ರೋಜ್ ಪ್ರಬಲ ಎದುರಾಳಿಯಾಗಿವೆ.
ನಿಮ್ಮ ಗಮನಕ್ಕೆ.. ಈ ಕಾಯುವಿಕೆ ಅವಧಿ ರಾಜ್ಯದಿಂದ ರಾಜ್ಯಕ್ಕೆ ರೂಪಾಂತರ ಹಾಗೂ ಬಣ್ಣಗಳನ್ನು ಆಧರಿಸಿ ಬೇರೆಯಿರಲಿದ್ದು, ಹೆಚ್ಚಿನ ಮಾಹಿತಿಗೆ ನಿಮ್ಮ ಸಮೀಪದ ಶೋರೂಂಗೆ ಭೇಟಿ ನೀಡಿರಿ. ಹ್ಯುಂಡೈ ಐ20 ಕೈಗೆಟುಕುವ ಬೆಲೆಗೆ ಆಕರ್ಷಕ ವೈಶಿಷ್ಟ್ಯದೊಂದಿಗೆ ಖರೀದಿಗೆ ದೊರೆಯುವುದರಿಂದ ಬಹುತೇಕರ ಆಯ್ಕೆಯ ವಾಹನವಾಗಿದೆ ಎಂದು ಹೇಳಬಹುದು.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications