ಏರ್‌ಬ್ಯಾಗ್ ಸೇರಿ ಅತಿಹೆಚ್ಚು ಸೇಫ್ಟಿ ಫೀಚರ್‌ಗಳನ್ನು ಹೊಂದಿರುವ ಕಾರುಗಳಿವು.. ಕೈಗೆಟುಕುವ ಬೆಲೆ!
ಹೊಸ ಕಾರು ತೆಗೆದುಕೊಳ್ಳುವವರೂ ಅದರ ಬೆಲೆಗಿಂತ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ. ಆದರೆ, ಬಹುತೇಕರಿಗೆ ಯಾವ ಕಾರು ಗರಿಷ್ಠ ರಕ್ಷಣಾತ್ಮಕ ವೈಶಿಷ್ಟ್ಯಗಳನ್ನು ಹೊಂದಿರುತ್ತದೆ.. ತಮ್ಮ ಕುಟುಂಬಕ್ಕೆ ಅಗತ್ಯವಾದ ಭದ್ರೆತೆ ಒದಗಿಸುತ್ತದೆಯೇ ಎಂಬ ಬಗ್ಗೆ ಗೊಂದಲವಿರುತ್ತಾರೆ. ನೀವು ಅತ್ಯಧಿಕ ಸುರಕ್ಷತಾ ವೈಶಿಷ್ಟ್ಯಗಳನ್ನು (Safety Features) ಹೊಂದಿರುವ ಕಾರುಗಳನ್ನು ಖರೀದಿಸಲು ಆಲೋಚಿಸಿದ್ದೀರಾ.. ಹಾಗಾದರೆ, ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ, ಕಿಯಾ ಸೋನೆಟ್, ಹೋಂಡಾ ಎಲಿವೇಟ್, ಮಹೀಂದ್ರಾ ಥಾರ್ ರಾಕ್ಸ್ ಹಾಗೂ ಟಾಟಾ ಕರ್ವ್ ಕಾರುಗಳು ಉತ್ತಮ ಆಯ್ಕೆಯಾಗಲಿವೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ಮೊದಲಿಗೆ ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ (Mahindra XUV 3XO) ಬಗ್ಗೆ ಮಾತನಾಡೋಣ. ಈ ಕಾರು ಅತಿಹೆಚ್ಚು ಸುರಕ್ಷತಾ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.

ನೂತನ ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ ಎಸ್‌ಯುವಿ ರೂ.7.79 ರಿಂದ ರೂ.15.49 ಲಕ್ಷ ಎಕ್ಸ್ ಶೋರೂಂ ದರವನ್ನು ಪಡೆದಿದೆ. 1.2-ಲೀಟರ್ ಪೆಟ್ರೋಲ್ & 1.5-ಲೀಟರ್ ಡೀಸೆಲ್ ಎಂಜಿನ್‌ನ್ನು ಒಳಗೊಂಡಿದೆ. 20.6 ರಿಂದ 21.2 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಇನ್ಫೋಟೈನ್‌ಮೆಂಟ್ ಸಿಸ್ಟಮ್, ಇನ್ಸ್ಟ್ರುಮೆಂಟ್ ಕ್ಲಸ್ಟರ್ ವೈರ್‌ಲೆಸ್ ಫೋನ್ ಚಾರ್ಜರ್ ಹಾಗೂ ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.
ಕಿಯಾ ಸೋನೆಟ್ (Kia Sonet) ಎಸ್‌ಯುವಿ ಗರಿಷ್ಠ ರಕ್ಷಣಾತ್ಮಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ವಿಶೇಷವಾಗಿ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್ ಫೋರ್ಸ್ ಡಿಸ್ಟ್ರಿಬ್ಯೂಷನ್) ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) , ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಹಾಗೂ ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.

ಈ ಕಿಯಾ ಸೋನೆಟ್ ರೂ.8 ರಿಂದ ರೂ.15.77 ಲಕ್ಷ ಎಕ್ಸ್ ಶೋರೂಂ ದರದಲ್ಲಿ ಖರೀದಿಗೆ ದೊರೆಯುತ್ತದೆ. 1.2-ಲೀಟರ್ ಪೆಟ್ರೋಲ್, 1-ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. 18.6 ರಿಂದ 22.3 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. 10.25-ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.
ಹೋಂಡಾ ಎಲಿವೇಟ್ (Honda Elevate) ಕೂಡ ಜನಪ್ರಿಯ ಎಸ್‌ಯುವಿಯಾಗಿದೆ. ಈ ಕಾರು 6-ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಹಾಗೂ ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಅನ್ನು ಪಡೆದಿದೆ. ಈ ಕಾರು, ರೂ.11.69 ರಿಂದ ರೂ.16.71 (ಎಕ್ಸ್ ಶೋರೂಂ) ಬೆಲೆಯನ್ನು ಒಳಗೊಂಡಿದೆ.

ಹೊಸ ಮಹೀಂದ್ರಾ ಥಾರ್ ರಾಕ್ಸ್ (Mahindra Thar ROXX) 5-ಡೋರ್ ಎಸ್‌ಯುವಿಯೂ ಸುರಕ್ಷತೆಗೆ ಹೆಸರುವಾಸಿಯಾಗಿದೆ. ಇದು 6-ಏರ್‌ಬ್ಯಾಗ್, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್) ಹಾಗೂ 4 ಡಿಸ್ಕ್ ಬ್ರೇಕ್‌ಗಳನ್ನು ಹೊಂದಿದೆ. ರೂ.12.99 ರಿಂದ ರೂ.22.49 ಲಕ್ಷ ಎಕ್ಸ್ ಶೋರೂಂ ದರವನ್ನು ಪಡೆದಿದೆ.
ಟಾಟಾ ಕರ್ವ್ (Tata Curvv) ಕೂಪೆ ಎಸ್‌ಯುವಿ ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳು, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್ ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ. ಈ ಕಾರು ರೂ.10 ರಿಂದ ರೂ.19 ಲಕ್ಷ (ಎಕ್ಸ್ ಶೋರೂಂ) ಬೆಲೆಯನ್ನು ಒಳಗೊಂಡಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications