ಹೋಂಡಾ ಆಕ್ಟಿವಾ ಇ vs ಟಿವಿಎಸ್ ಐಕ್ಯೂಬ್: ಯಾವುದು ಬೆಸ್ಟ್.. ನೀವೇ ಹೇಳಿ?
ಭಾರತದ ಮಾರುಕಟ್ಟೆಯಲ್ಲಿ ಹೋಂಡಾ ಆಕ್ಟಿವಾ (Honda Activa) ಜನಪ್ರಿಯ ಸ್ಕೂಟರ್ ಆಗಿದ್ದು, ಭಾರೀ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ. ಇತ್ತೀಚೆಗೆ 'ಆಕ್ಟಿವಾ ಇ' ಹೆಸರಿನ ಎಲೆಕ್ಟ್ರಿಕ್ ಸ್ಕೂಟರ್‌ನ್ನು ಅನಾವರಣಗೊಳಿಸಲಾಗಿದೆ. ಈ ಸ್ಕೂಟರ್‌ಗಾಗಿ ಜ.1, 2025 ರಿಂದ ಬುಕ್ಕಿಂಗ್ ಆರಂಭವಾಗಲಿದ್ದು, ಫೆಬ್ರವರಿಯಿಂದ ವಿತರಣೆಗಳು ಶುರುವಾಗಲಿದೆ. ಈ ಸ್ಕೂಟರ್ ಬಿಡುಗಡೆಗೆ ಗ್ರಾಹಕರು ಕೂಡ ತುದಿಗಾಲಿನಲ್ಲಿ ಕಾಯುತ್ತಿದ್ದಾರೆ. ನೂತನ ಆಕ್ಟಿವಾ ಎಲೆಕ್ಟ್ರಿಕ್ ಸ್ಕೂಟರ್‌ಗೆ 3.4 ಕೆಡಬ್ಲ್ಯೂಹೆಚ್ ಬ್ಯಾಟರಿ ಪ್ಯಾಕ್ ಹೊಂದಿರುವ ಟಿವಿಎಸ್ ಐಕ್ಯೂಬ್ (TVS iQube) ಪ್ರಬಲವಾದ ಎದುರಾಳಿಯಾಗಲಿದೆ. ನಾವಿಲ್ಲಿ ಇವೆರೆಡು ಇ-ಸ್ಕೂಟರ್‌ಗಳ ವಿಶೇಷತೆ ಕುರಿತಂತೆ ಹೋಲಿಕೆ ಮಾಡಿದ್ದೇವೆ.
ಬ್ಯಾಟರಿ ಪ್ಯಾಕ್ (Battery Packs): 'ಹೋಂಡಾ ಆಕ್ಟಿವಾ ಇ' ಎಲೆಕ್ಟ್ರಿಕ್ ಸ್ಕೂಟರ್ 1.5 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಎರಡು ಬದಲಾಯಿಸಬಹುದಾದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಒಳಗೊಂಡಿದೆ. ಇದನ್ನು ಮನೆಯಲ್ಲಿ ಚಾರ್ಜ್ ಮಾಡಲು ಸಾಧ್ಯವಿಲ್ಲ. ಚಾರ್ಜಿಂಗ್ ಸ್ಟೇಷನ್‌ಗೆ ಹೋಗಿ ಬ್ಯಾಟರಿಯನ್ನು ಬದಲಾವಣೆ ಮಾಡಿಕೊಂಡ ಬರಬೇಕು. ಇದರಿಂದ ಈ ಎಲೆಕ್ಟ್ರಿಕ್ ಸ್ಕೂಟರ್‌ನ್ನು ಬೆಂಗಳೂರು, ನವದೆಹಲಿ ಮತ್ತು ಮುಂಬೈನಲ್ಲಿ ಮಾತ್ರ ಮಾರಾಟ ಮಾಡಲಾಗುತ್ತದೆ.

ಟಿವಿಎಸ್ ಐಕ್ಯೂಬ್ ಶಕ್ತಿಯುತವಾದ 3.4 ಕೆಡಬ್ಲ್ಯೂಹೆಚ್ ಸಾಮರ್ಥ್ಯದ ಸ್ಥಿರ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಒಳಗೊಂಡಿದೆ. ಇದನ್ನು ಮನೆಯ ವಿದ್ಯುತ್ ಬಳಕೆಯಲ್ಲಿ ಸುಲಭವಾಗಿ ಚಾರ್ಜ್ ಮಾಡಬಹುದು. ಜೊತೆಗೆ ಹಳ್ಳಿಯಿಂದ ರಾಷ್ಟ್ರ ರಾಜಧಾನಿ ನವದೆಹಲಿವರೆಗೆ ಎಲ್ಲಿ ಬೇಕಾದರೂ ಓಡಿಸಬಹುದು. ಈ ವಿಚಾರದಲ್ಲಿ ಹೋಂಡಾ ಆಕ್ಟಿವಾ ಎಲೆಕ್ಟ್ರಿಕ್ ಸ್ಕೂಟರ್‌ಗಿಂತ ಐಕ್ಯೂಬ್ ಹೆಚ್ಚು ಸೂಕ್ತವೆಂದು ಹೇಳಬಹುದು.
ರೇಂಜ್ & ಟಾಪ್ ಸ್ಪೀಡ್ (Range & Top Speed): ಹೊಸ 'ಹೋಂಡಾ ಆಕ್ಟಿವಾ ಇ' ಎಲೆಕ್ಟ್ರಿಕ್ ಸ್ಕೂಟರ್ ಭರ್ತಿ ಚಾರ್ಜ್‌ನಲ್ಲಿ 102 ಕಿಲೋಮೀಟರ್ ರೇಂಜ್ (ಮೈಲೇಜ್) ಕೊಡುತ್ತದೆ. 80 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. 7.3 ಸೆಕೆಂಡುಗಲ್ಲಿ 0 ರಿಂದ 40 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.
ಅದೇ ಟಿವಿಎಸ್ ಐಕ್ಯೂಬ್ ಇ-ಸ್ಕೂಟರ್ ಸಂಪೂರ್ಣ ಚಾರ್ಜ್‌ನಲ್ಲಿ 100 ಕಿಲೋಮೀಟರ್ ಓಡುತ್ತದೆ. 78 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ. ಕೇವಲ 4.2 ಸೆಕೆಂಡುಗಳಲ್ಲಿ 0 ರಿಂದ 40 ಕೆಎಂಪಿಹೆಚ್ ವೇಗವನ್ನು ಹೊಂದಿಯಲಿದೆ. ಇವೆರೆಡು ಎಲೆಕ್ಟ್ರಿಕ್ ಸ್ಕೂಟರ್‌ಗಳು ಬಹುತೇಕ ಒಂದೇ ರೀತಿಯ ರೇಂಜ್ ಹಾಗೂ ಟಾಪ್ ಸ್ಪೀಡ್‌ನ್ನು ಒಳಗೊಂಡಿವೆ.
ವೈಶಿಷ್ಟ್ಯಗಳು (Features): ನೂತನ ಹೋಂಡಾ ಆಕ್ಟಿವಾ ಎಲೆಕ್ಟ್ರಿಕ್ ಸ್ಕೂಟರ್ ಟಿಎಫ್‌ಟಿ - ಇನ್ಸ್ಟ್ರುಮೆಂಟ್ ಕ್ಲಸ್ಟರ್ (7.0-ಇಂಚು) ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಇದರೊಟ್ಟಿಗೆ ಸ್ಮಾರ್ಟ್ ಫೈಂಡ್, ಸ್ಮಾರ್ಟ್ ಸೇಫ್, ಸ್ಮಾರ್ಟ್ ಅನ್‌ಲಾಕ್ & ಸ್ಮಾರ್ಟ್ ಸ್ಟಾರ್ಟ್ ಎಂಬ ವೈಶಿಷ್ಟ್ಯಗಳಿರುವ 'ಹೆಚ್ ಸ್ಮಾರ್ಟ್' ಕೀಯನ್ನು ತನ್ನದಾಗಿಸಿಕೊಂಡಿದೆ.
ಟಿವಿಎಸ್ ಐಕ್ಯೂಬ್ ಎಲೆಕ್ಟ್ರಿಕ್ ಸ್ಕೂಟರ್ 5-ಇಂಚಿನ ಫುಲ್ ಕಲರ್ ಟಿಎಫ್‌ಟಿ - ಇನ್ಸ್ಟ್ರುಮೆಂಟ್ ಕ್ಲಸ್ಟರ್, ಮೊಬೈಲ್ ಚಾರ್ಜ್ ಮಾಡಲು ಯುಎಸ್‌ಬಿ ಸಾಕೆಟ್ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಐಕ್ಯೂಬ್ ಇ-ಸ್ಕೂಟರ್‌ಗೆ ಹೋಲಿಕೆ ಮಾಡಿದರೆ, ಹೋಂಡಾ ಆಕ್ಟಿವಾ ಕೊಂಚ ದೊಡ್ಡದಾದ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಅನ್ನು ಒಳಗೊಂಡಿದೆ.
ಸಸ್ಪೆನ್ಷನ್ ಸೆಟಪ್ & ಬ್ರೇಕಿಂಗ್ ಸಿಸ್ಟಮ್ (Suspension Setup And Braking System): 'ಹೋಂಡಾ ಆಕ್ಟಿವಾ ಇ' ಎಲೆಕ್ಟ್ರಿಕ್ ಸ್ಕೂಟರ್ ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ಸ್ ಹಾಗೂ ಹಿಂಭಾಗ (ರೇರ್) ಮೊನೊಶಾಕ್ ಸಸ್ಪೆನ್ಷನ್ ಸೆಟಪ್ ಹೊಂದಿದೆ. ಜೊತೆಗೆ 160 ಎಂಎಂ ಡಿಸ್ಕ್/ 130 ಎಂಎಂ ಡ್ರಮ್ ಬ್ರೇಕ್‌ಗಳ ಆಯ್ಕೆಯನ್ನು ಪಡೆದಿದೆ.
ಟಿವಿಎಸ್ ಐಕ್ಯೂಬ್ ಎಲೆಕ್ಟ್ರಿಕ್ ಸ್ಕೂಟರ್ ಮುಂಭಾಗ (ಫ್ರಂಟ್) ಮತ್ತು ಟೆಲಿಸ್ಕೋಪಿಕ್ ಫೋರ್ಕ್ಸ್ ಮತ್ತು ಹಿಂಭಾಗ (ರೇರ್) ಡುಯಲ್ ಶಾಕ್ ಸಸ್ಪೆನ್ಷನ್ ಸೆಟಪ್ ಒಳಗೊಂಡಿದೆ. 220 ಎಂಎಂ ಡಿಸ್ಕ್, 130 ಎಂಎಂ ಡ್ರಮ್ ಬ್ರೇಕ್‌ಗಳನ್ನು ಹೊಂದಿದೆ. ಇವೆರೆಡು ಸ್ಕೂಟರ್‌ಗಳು ಸವಾರರಿಗೆ ಗರಿಷ್ಠ ರಕ್ಷಣೆಯನ್ನು ಒದಗಿಸುತ್ತದೆ ಎಂದು ಹೇಳಬಹುದು.
ಬೆಲೆ (Price): ನೂತನ ಟಿವಿಎಸ್ ಐಕ್ಯೂಬ್ ಎಲೆಕ್ಟ್ರಿಕ್ ಸ್ಕೂಟರ್ ರೂ.1.37 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಆದರೆ, 'ಹೋಂಡಾ ಆಕ್ಟಿವಾ ಇ' ಎಲೆಕ್ಟ್ರಿಕ್ ಸ್ಕೂಟರ್ ದರವನ್ನು ಘೋಷಣೆ ಮಾಡಲಾಗಿಲ್ಲ. ಇದು ರೂ.1 ಲಕ್ಷ ಬೆಲೆಯಲ್ಲಿ ಬಿಡುಗಡೆಯಾಗಬಹುದು ಎಂದು ಅಂದಾಜಿಸಲಾಗಿದೆ. ಕೆಲವೇ ದಿನಗಳಲ್ಲಿ ಈ ಸ್ಕೂಟರ್‌ನ ದರವೆಷ್ಟು ಎಂಬ ಪ್ರಶ್ನೆಗೂ ಉತ್ತರ ಸಿಗಲಿದೆ.


Click it and Unblock the Notifications