ಮಾರುತಿ ಡಿಜೈರ್ ಎದುರಾಳಿ.. ನಾಳೆ ಹೊಸ ಹೋಂಡಾ ಅಮೇಜ್ ಕಾರು ಬಿಡುಗಡೆ, ಕಡಿಮೆ ಬೆಲೆ.. ಲಕ್ಸುರಿ ಫೀಚರ್‌ಗಳು?
ಹೋಂಡಾ ಕಾರ್ಸ್ ಇಂಡಿಯಾ (Honda Cars India), ಪ್ರಮುಖ ಕಾರು ತಯಾರಕ ಕಂಪನಿಯಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಹೊಸ ತಲೆಮಾರಿನ ಅಮೇಜ್ ಸೆಡಾನ್‌ನ್ನು ಬಿಡುಗಡೆಗೊಳಿಸಲು ತಯಾರಿಯನ್ನು ನಡೆಸುತ್ತಿದೆ. ನಾಳೆ ಈ ಕಾರನ್ನು ಅದ್ದೂರಿಯಾಗಿ ಮಾರಾಟಕ್ಕೆ ತರಲಿದೆ. ನೂತನ ಅಮೇಜ್ ಸೆಡಾನ್‌ಗೆ ಮಾರುತಿ ಸುಜುಕಿ ಡಿಜೈರ್ ನೇರ ಎದುರಾಳಿಯಾಗಿದೆ. ಈ ಅಮೇಜ್ ಕಾರು ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದಿರಲಿದೆ. ಜೊತೆಗೆ ಕೈಗೆಟುಕುವ ಬೆಲೆಯಲ್ಲಿಯೂ ಖರೀದಿಗೂ ಸಿಗುವ ನಿರೀಕ್ಷೆಯಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ವಿನ್ಯಾಸ (Design): ಹೊಚ್ಚ ಹೊಸ ಹೋಂಡಾ ಅಮೇಜ್ (Honda Amaze) ಸೆಡಾನ್ ಹೊರಭಾಗದಲ್ಲಿ ಅತ್ಯಾಧುನಿಕ ವಿನ್ಯಾಸವನ್ನು ಒಳಗೊಂಡಿದೆ. ಅದಕ್ಕೆ ಸಂಬಂಧಿಸಿದ ಹಲವು ಸ್ಪೈ ಫೋಟೋಗಳು ಆನ್‌ಲೈನ್‌ನಲ್ಲಿ ಸೋರಿಕೆಯಾಗಿವೆ. ಈ ಕಾರು, ಟ್ವಿನ್-ಪಾಡ್ ಎಲ್ಇಡಿ ಹೆಡ್‌ಲೈಟ್‌ಗಳು, ನವೀನವಾಗಿರುವ ಗ್ರಿಲ್, ಬಂಪರ್, ಮಲ್ಟಿ-ಸ್ಪೋಕ್ ಅಲಾಯ್ ವೀಲ್‌ಗಳು ಮತ್ತು ಟೈಲ್ ಲೈಟ್‌ಗಳನ್ನು ಒಳಗೊಂಡಿರಲಿದೆ ಎನ್ನಲಾಗಿದೆ.

ಕಾರ್ಯಕ್ಷಮತೆ (Performance): ಈ ನೂತನ ಅಮೇಜ್ ಸೆಡಾನ್ ಹಳೆಯ ಕಾರಿನಂತೆ ಪವರ್‌ಟ್ರೇನ್ ಆಯ್ಕೆಯನ್ನು ಪಡೆದುಕೊಂಡಿರಲಿದೆ ಎಂದು ತಿಳಿದುಬಂದಿದೆ. ಇದು 1.2-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಹೊಂದಿರಲಿದ್ದು, 90 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 110 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸಲಿದೆ. ಜೊತೆಗೆ 5-ಸ್ಪೀಡ್ ಮ್ಯಾನುವಲ್ ಮತ್ತು ಸಿವಿಟಿ ಗೇರ್‌ಬಾಕ್ಸ್‌ನ್ನು ಪಡೆದುಕೊಂಡಿರುವ ನಿರೀಕ್ಷೆಯಿದೆ.
ವೈಶಿಷ್ಟ್ಯಗಳು (Features): ಹೊಸ ಅಮೇಜ್ ಸೆಡಾನ್ ಹಲವು ಅತ್ಯುತ್ತಮ ವೈಶಿಷ್ಟ್ಯಗಳನ್ನು ಒಳಗೊಂಡಿರುವ ಸಾಧ್ಯತೆಯಿದೆ. ಪ್ರಮುಖವಾಗಿ 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ವೈರ್‌ಲೆಸ್ ಫೋನ್ ಚಾರ್ಜರ್, ಆಟೋ ಎಸಿ, 3-ಸ್ಪೋಕ್ ಸ್ಟೀರಿಂಗ್ ವೀಲ್, ರೇರ್ ಎಸಿ ವೆಂಟ್‌ಗಳು, ಎಲೆಕ್ಟ್ರಿಕಲಿ ಅಡ್ಜಸ್ಟಬಲ್ & ಫೋಲ್ಡಬಲ್ ಔಟ್ ರೇರ್‌ವ್ಯೂ ಮಿರರ್‌ಗಳನ್ನು ಹೊಂದಿರಲಿದೆ ಎಂದು ಹೇಳಲಾಗಿದೆ.

ಸುರಕ್ಷತಾ ವೈಶಿಷ್ಟ್ಯಗಳು (Safety Features): ಈ ಕಾರು ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆಯನ್ನು ಒದಗಿಸಲಿದೆ. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ-ಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು ರೇರ್‌ವ್ಯೂ ಕ್ಯಾಮೆರಾವನ್ನು ಪಡೆದುಕೊಂಡಿರಲಿದೆ ಎನ್ನಲಾಗಿದೆ.
ಬೆಲೆ (Price): ಹೊಚ್ಚ ಹೊಸ ಹೋಂಡಾ ಅಮೇಜ್ ಸೆಡಾನ್ ಅತಿ ಕಡಿಮೆ ಬೆಲೆಗೆ ಖರೀದಿಗೆ ದೊರೆಯುವ ನೀರಿಕ್ಷೆಯಿದೆ. ಈ ಕಾರು ರೂ.7.50 ಲಕ್ಷ ಎಕ್ಸ್ ಶೋರೂಂ ದರದಲ್ಲಿ ಮಾರಾಟಕ್ಕೆ ಬರಬಹುದು ಎಂದು ಅಂದಾಜಿಸಲಾಗಿದ್ದು, 5 ಆಸನ ಆಯ್ಕೆ ವ್ಯವಸ್ಥೆಯಲ್ಲಿಯೂ ದೊರೆಯಲಿದೆ. ನೂತನ ಅಮೇಜ್ ಸೆಡಾನ್‌ಗೆ ಮಾರುತಿ ಸುಜುಕಿ ಡಿಜೈರ್ ಕಾರು ನೇರವಾದ ಎದುರಾಳಿಯಾಗಿದೆ.

ಮಾರುತಿ ಡಿಜೈರ್ ವಿಶೇಷತೆಗಳೇನು: ಈ ಕಾರು ರೂ.6.79 ರಿಂದ ರೂ.10.14 ಲಕ್ಷ (ಎಕ್ಸ್ ಶೋರೂಂ) ದರವನ್ನು ಒಳಗೊಂಡಿದೆ. ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 24.79 ರಿಂದ 33.73 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಇದರಲ್ಲಿ 5 ಮಂದಿ ಓಡಾಟ ನಡೆಸಬಹುದು. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








