ಕೈಗೆಟುಕುವ ಬೆಲೆಗೆ ಲಕ್ಷುರಿ ಫೀಚರ್ಸ್‌ನ ಹೋಂಡಾ ಕಾರು ಗ್ರಾಹಕರಿಂದ ನಿರೀಕ್ಷಿಸದ ಟ್ವಿಸ್ಟ್!

ಜಪಾನ್ ಕಾರು ತಯಾರಕ ಕಂಪನಿಯಾದ ಹೋಂಡಾ ತನ್ನ ಸರಣಿಯಲ್ಲಿ ಜನಪ್ರಿಯ ಸೆಡಾನ್ ಕಾರುಗಳನ್ನು ಮಾರಾಟ ಮಾಡುತ್ತಿದೆ. ಇದರಲ್ಲಿ ಅಮೇಜ್ ಕೂಡ ಒಂದಾಗಿದೆ. ಕಳೆದ ತಿಂಗಳಿನ ಹೋಂಡಾ ಅಮೇಜ್ ಮಾದರಿಯ ಮಾರಾಟ ವರದಿ ಬಹಿರಂಗಪಡಿಸಿದೆ. ಕಳೆದ ತಿಂಗಳಿನಲ್ಲಿ ಹೋಂಡಾ ಅಮೇಜ್ ಮಾದರಿಯ 2,393 ಯುನಿಟ್ ಗಳು ಮಾರಾಟವಾಗಿವೆ. ಇನ್ನು ಕಳೆದ ವರ್ಷದ ಅಕ್ಟೋಬರ್ ತಿಂಗಳಿನಲ್ಲಿ 2,890 ಯುನಿಟ್ ಗಳು ಮಾರಾಟವಾಗಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.35 ರಷ್ಟು ಕುಸಿತವನ್ನು ಕಂಡಿದೆ.

ಈ ಹೋಂಡಾ ಅಮೇಜ್ (Honda Amaze) ಮಾದರಿಯು ಮಾರುತಿ ಡಿಜೈರ್ ಮತ್ತು ಹ್ಯುಂಡೈ ಔರಾಗೆ ಭಾರತೀಯ ಮಾರುಕಟ್ಟೆಯಲ್ಲಿ ಪೈಪೋಟಿ ನೀಡುತ್ತಿದೆ. ಈ ಹೋಂಡಾ ಅಮೇಜ್ ಕಾರು ಮೆಟಿರಾಯ್ಡ್ ಗ್ರೇ, ಪ್ಲಾಟಿನಂ ಪರ್ಲ್ ವೈಟ್, ಲೂನಾರ್ ಸಿಲ್ವರ್, ಗೋಲ್ಡನ್ ಬ್ರೌನ್ ಮತ್ತು ರೇಡಿಯಂಟ್ ರೆಡ್ ಎಂಬ ಬಣ್ಣಗಳ ಆಯ್ಕೆಯಲ್ಲಿ ಲಭ್ಯವಿದೆ. ಹೋಂಡಾ ಅಮೇಜ್ ಫೇಸ್‌ಲಿಫ್ಟ್‌ ಕಾರು 3,995 ಮಿಮೀ ಉದ್ದ, 1,695 ಮಿಮೀ ಅಗಲ ಮತ್ತು 1,498 ಮಿಮೀ ಎತ್ತರವನ್ನು ಹೊಂದಿದೆ.

Honda Amaze

ಈ ಹೋಂಡಾ ಅಮೇಜ್ ಕಾರಿನಲ್ಲಿ ಸುರಕ್ಷತೆಗಾಗಿ ಹಲವಾರು ಫೀಚರ್ಸ್ ಗಳನ್ನು ನೀಡಿದ್ದಾರೆ. ಸುರಕ್ಷತೆಗಾಗಿ ಇಬಿಡಿ, ISOFIX ಚೈಲ್ಡ್ ಸೀಟ್ ಆಂಕರ್‌ಗಳೊಂದಿಗೆ ಡ್ಯುಯಲ್ ಫ್ರಂಟ್ ಏರ್‌ಬ್ಯಾಗ್, ಎಬಿಎಸ್, ಹಿಂಭಾಗದ ಪಾರ್ಕಿಂಗ್ ಸೆನ್ಸರ್‌ಗಳು, ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್, ಕ್ರೂಸ್ ಕಂಟ್ರೋಲ್, ಸೀಟ್-ಬೆಲ್ಟ್ ರಿಮೈಂಡರ್ ಗಳನ್ನು ಹೊಂದಿದೆ.

ಈ ಹೋಂಡಾ ಅಮೇಜ್ ಕಾರಿನಲ್ಲಿ ನೀಡಲಾದ 1.2-ಲೀಟರ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಪೆಟ್ರೋಲ್ ಎಂಜಿನ್ 89 ಬಿಹೆಚ್‍ಪಿ ಪವರ್ ಮತ್ತು 110 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಹೋಂಡಾ ಕಾಂಪ್ಯಾಕ್ಟ್-ಸೆಡಾನ್ ಹಳೆಯ ಮಾದರಿಯ ಮೇಲೆ ಅಮೇಜ್ ಫೇಸ್‌ಲಿಫ್ಟ್‌ ವಿನ್ಯಾಸದಲ್ಲಿ ಸ್ವಲ್ಪ ಬದಲಾವಣೆಗಳನ್ನು ಪಡೆದುಕೊಂಡಿದೆ.

Honda Amaze

ಹೋಂಡಾ ಅಮೇಜ್ ಕಾರಿನಲ್ಲಿ ಮುಂಭಾಗದ ಬಂಪರ್, ಹೊಸ ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌ಗಳು, ಸಿ-ಆಕಾರದ ಎಲ್‌ಇಡಿ ಟೈಲ್‌ಲ್ಯಾಂಪ್‌ಗಳು, ಎಲ್‌ಇಡಿ ಡಿಆರ್‌ಎಲ್‌ಗಳು ಮತ್ತು ಫಾಗ್ ಲ್ಯಾಂಪ್‌ಗಳನ್ನು ಹೊಂದಿವೆ. ಹೋಂಡಾ ಕಾಂಪ್ಯಾಕ್ಟ್-ಸೆಡಾನ್ ಹಳೆಯ ಮಾದರಿಯ ಮೇಲೆ ಅಮೇಜ್ ಫೇಸ್‌ಲಿಫ್ಟ್‌ ವಿನ್ಯಾಸದಲ್ಲಿ ಸ್ವಲ್ಪ ಬದಲಾವಣೆಗಳನ್ನು ಪಡೆದುಕೊಂಡಿತು. ಈ ಕಾರಿನ ಮುಂಭಾಗದ ಬಂಪರ್, ಹೊಸ ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌ಗಳು, ಸಿ-ಆಕಾರದ ಎಲ್‌ಇಡಿ ಟೈಲ್‌ಲ್ಯಾಂಪ್‌ಗಳು, ಎಲ್‌ಇಡಿ ಡಿಆರ್‌ಎಲ್‌ಗಳು ಮತ್ತು ಫಾಗ್ ಲ್ಯಾಂಪ್‌ಗಳನ್ನು ಹೊಂದಿವೆ.

ಇದರ ಒಳಭಾಗದಲ್ಲಿ ಶುದ್ಧ ಗಾಳಿಗಾಗಿ ಅಪ್‌ಗ್ರೇಡ್ ಕ್ಯಾಬಿನ್ ಫಿಲ್ಟರ್ ಅನ್ನು ಸೇರಿಸಿದೆ. ಡ್ಯಾಶ್‌ಬೋರ್ಡ್‌ನಲ್ಲಿ ಸ್ಯಾಟಿನ್ ಸಿಲ್ವರ್ ಅಸ್ಸೆಂಟ್, ಕ್ಲೈಮೇಂಟ್ ಕಂಟ್ರೋಲ್, ಹೋಂಡಾ ಸ್ಮಾರ್ಟ್ ಕೀ ಮತ್ತು ಪುಶ್-ಬಟನ್ ಸ್ಟಾರ್ಟ್ ಅನ್ನು ಹೊಂದಿದೆ. ಇದರೊಂದಿಗೆ 7 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಮತ್ತು ಸೆಮಿ-ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್, ವಾಯ್ಸ್ ಕಮಾಂಡ್‌ಗಳು ಸೇರಿದಂತೆ ಇತರ ಫೀಚರ್ಸ್ ಗಳನ್ನು ಕೂಡ ಹೊಂದಿದೆ.

Honda Amaze

ಹೋಂಡಾ ಕಾರ್ಸ್ ಇಂಡಿಯಾ ತನ್ನ ಮುಂಬರುವ ಮೂರನೇ ತಲೆಮಾರಿನ ಅಮೇಜ್ ಕಾರನ್ನು ಬಿಡುಗಡೆಗೊಳಿಸಲು ಸಜ್ಜಾಗಿದೆ. ಎದುರಾಳಿ ಮಾರುತಿ ಸುಜುಕಿ ಡಿಜೈರ್ ಮಾದರಿ ಕೂಡ ಹೊಸ ನವೀಕರಣಗಳೊಂದಿಗೆ ಈ ಹೋಂಡಾ ಅಮೇಜ್ ಕಾರಿಗೆ ಪ್ರಬಲ ಪ್ರತಿಸ್ಪಧಿಯಾಗಲಿದ್ದು, ಈ ಹೊಸ ಡಿಜೈರ್ ನವೆಂಬರ್ 11ಕ್ಕೆ ಬಿಡುಗಡೆಯಾಗಲಿದೆ. ಇದೀಗ ಹೋಂಡಾ ಅಮೇಜ್ ಕಾರಿನ ಬಿಡುಗಡೆ ದಿನಾಂಕ ಕೂಡ ಬಹಿರಂಗವಾಗಿದೆ. ಈ ಹೊಸ ಹೋಂಡಾ ಅಮೇಜ್ ಕಾರು ಡಿಸೆಂಬರ್ 4 ರಂದು ಬಿಡುಗಡೆಯಾಗಲಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಇನ್ನು ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಹಂಚಿಕೊಳ್ಳುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ. ಜೊತೆಗೆ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ.

More from DriveSpark

Article Published On: Friday, November 22, 2024, 8:30 [IST]
English summary
Honda amaze sales in october 2024 details
Read more on honda india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+