Honda: ಹೋಂಡಾ ಅಮೇಜ್ ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?

ಭಾರತದಲ್ಲಿ ಹೋಂಡಾ (Honda) ಕೂಡ ಪ್ರಮುಖ ವಾಹನ ತಯಾರಕ ಸಂಸ್ಥೆಯಾಗಿ ಗುರುತಿಸಿಕೊಂಡಿದೆ. ಕಂಪನಿಯು ಮಾರಾಟಗೊಳಿಸುವ ಅಮೇಜ್ (Amaze) ಆಕರ್ಷಕ ವೈಶಿಷ್ಟ್ಯದೊಂದಿಗೆ ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ಲಭ್ಯವಿರುವುದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ಇಲ್ಲಿ ಈ ಕಾರಿನ ಆನ್-ರೋಡ್ ಬೆಲೆ ಹಾಗೂ ಇಎಂಐ ಆಯ್ಕೆಯ ಕುರಿತು ವಿವರಿಸಿದ್ದೇವೆ.

ನೂತನ ಹೋಂಡಾ ಅಮೇಜ್ (Honda Amaze) ಸೆಡಾನ್ ಪೆಟ್ರೋಲ್ ಪವರ್‌ಟ್ರೇನ್‌ನೊಂದಿಗೆ ಮಾತ್ರ ಲಭ್ಯವಿದೆ. ಬೆಂಗಳೂರಿನಲ್ಲಿ ಈ ಕಾರಿನ 'ಇ' ರೂಪಾಂತರ (ವೇರಿಯೆಂಟ್) ರೂ.8.71 ಲಕ್ಷ, 'ಎಸ್' ರೂ.9.58 ಲಕ್ಷ, 'ಎಸ್ ಸಿವಿಟಿ' ರೂ.10.65 ಲಕ್ಷ, 'ವಿಎಕ್ಸ್' ರೂ.10.91 ಲಕ್ಷ, 'ವಿಎಕ್ಸ್ ಎಲೈಟ್' ಮಾದರಿಯು ರೂ.11.02 ಲಕ್ಷ ಆನ್-ರೋಡ್ ದರವನ್ನು ಪಡೆದಿದೆ.

Honda Amaze Sedan On Road Price And Emi Details

ಹಾಗೆಯೇ 'ವಿಎಕ್ಸ್ ಸಿವಿಟಿ' ಆವೃತ್ತಿ ರೂ.11.88 ಲಕ್ಷ ಹಾಗೂ 'ವಿಎಕ್ಸ್ ಎಲೈಟ್ ಸಿವಿಟಿ' ರೂಪಾಂತರವು ರೂ.12 ಲಕ್ಷ ಆನ್-ರೋಡ್ ಬೆಲೆಯನ್ನು ಹೊಂದಿದೆ. ನೀವು ಈ ಅಮೇಜ್ ಸೆಡಾನ್‌ನ ಆರಂಭಿಕ ಮಾದರಿಯನ್ನು ರೂ.2 ಲಕ್ಷ ಡೌನ್ ಪೇಮೆಂಟ್ ಪಾವತಿಸಿ ಕೊಂಡುಕೊಂಡಿದರೆ, ಶೇಕಡ 9.8% ಬಡ್ಡಿ ದರದಲ್ಲಿ 5 ವರ್ಷದ ಅವಧಿಗೆ ಮಾಸಿಕ ರೂ.14,181 ಇಎಂಐ (EMI) ಕಟ್ಟಬೇಕು.

ನೂತನ ಹೋಂಡಾ ಅಮೇಜ್ ಸೆಡಾನ್ ಆಕರ್ಷಕವಾಗಿ ವಿನ್ಯಾಸ (ಡಿಸೈನ್) ಹೊಂದಿದ್ದು, ರೇಡಿಯಂಟ್ ರೆಡ್ ಮೆಟಾಲಿಕ್, ಪ್ಲಾಟಿನಂ ವೈಟ್ ಪರ್ಲ್, ಗೋಲ್ಡನ್ ಬ್ರೌನ್ ಮೆಟಾಲಿಕ್, ಮೆಟಿರೊಯ್ಡ್ ಗ್ರೇ ಮೆಟಾಲಿಕ್ ಸೇರಿದಂತೆ ವಿವಿಧ ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿ ಖರೀದಿಗೆ ಲಭ್ಯವಿದೆ. ಇದರಲ್ಲಿ 5 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ದೂರದ ಊರುಗಳಿಗೆ ಪ್ರಯಾಣಿಸಬಹುದು.

Honda Amaze Sedan On Road Price And Emi Details

ಈ ಕಾರು 2 - ಲೀಟರ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 90 ಪಿಎಸ್ ಗರಿಷ್ಠ ಪವರ್ (ಶಕ್ತಿ) ಮತ್ತು 110 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಪಡೆದಿದೆ. ಜೊತೆಗೆ ಸಿವಿಟಿ ಗೇರ್ ಬಾಕ್ಸ್‌ನ್ನು ಒಳಗೊಂಡಿದ್ದು, ರೂಪಾಂತರಗಳಿಗೆ ಅನುಗುಣವಾಗಿ 18.3 ರಿಂದ 18.6 ಕೆಎಂಪಿಎಲ್ ಮೈಲೇಜ್ ನೀಡುತ್ತದೆ.

ಹೋಂಡಾ ಅಮೇಜ್ ಸೆಡಾನ್ 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಟೋ ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲೈಟ್‌ಗಳು, ಕ್ರೂಸ್ ಕಂಟ್ರೋಲ್, ಪ್ಯಾಡಲ್ ಶಿಫ್ಟರ್ಸ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ ಡುಯಲ್ ಏರ್‌ಬ್ಯಾಗ್‌, ABS (ಆಂಟಿ ಲಾಕ್ ಬ್ರೇಕಿಂಗ್ ಸಿಸ್ಟಮ್), EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಸೀಟ್‌ಬೆಲ್ಟ್ ರಿಮೈಂಡರ್ಸ್, ರೇರ್ ಪಾರ್ಕಿಂಗ್ ಸೆನ್ಸರ್ಸ್ ಹಾಗೂ ರೇರ್ ವ್ಯೂ ಕ್ಯಾಮೆರಾವನ್ನು ಪಡೆದಿದೆ.

ಈ ಕಾರಿಗೆ ಟಾಟಾ ಟಿಗೂರ್, ಹ್ಯುಂಡೈ ಔರಾ ಮತ್ತು ಮಾರುತಿ ಸುಜುಕಿ ಡಿಜೈರ್ ಸೆಡಾನ್‌ಗಳು ಪ್ರಬಲ ಪ್ರತಿಸ್ಪರ್ಧಿಯಾಗಿವೆ. ನಿಮ್ಮ ಗಮನಕ್ಕೆ.. ಇಲ್ಲಿ ವಿವರಿಸಲಾಗಿರುವ 'ಹೋಂಡಾ ಅಮೇಜ್'ನ ಆನ್-ರೋಡ್ ಬೆಲೆಗಳು ಹಾಗೂ ಸಾಲದ ಆಯ್ಕೆಗಳು ರಾಜ್ಯದಿಂದ ರಾಜ್ಯಕ್ಕೆ ಬೇರೆಯಿರಲಿದ್ದು, ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂಗೆ ಭೇಟಿ ನೀಡಿರಿ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋ ಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Monday, May 27, 2024, 18:30 [IST]
English summary
Honda amaze sedan on road price and emi details
Read more on honda india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+