Honda: ಗುಡ್‌ನ್ಯೂಸ್... ಹೋಂಡಾ ಕಾರುಗಳಿಗೆ 1 ಲಕ್ಷಕ್ಕಿಂತ ಹೆಚ್ಚು ರಿಯಾಯಿತಿ, ರೂ.7 ಲಕ್ಷ ಆರಂಭಿಕ ಬೆಲೆ
ಹೋಂಡಾ (Honda) ಕಂಪನಿ ಹೊಸ ಕಾರು ಖರೀದಿದಾರರಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ. ಈ ಮಾರ್ಚ್ ತಿಂಗಳು ವಿವಿಧ ಮಾದರಿಗಳ ಮೇಲೆ ರೂ.1,19,500 ವರೆಗೆ ರಿಯಾಯಿತಿ ಸೌಲಭ್ಯವನ್ನು ಘೋಷಣೆ ಮಾಡಿದೆ. ಸಿಟಿ, ಎಲಿವೇಟ್ ಹಾಗೂ ಅಮೇಜ್ ಕಾರುಗಳು ಭಾರೀ ಡಿಸ್ಕೌಂಟ್ ಆಫರ್ ಪಡೆದಿವೆ.
ಹೋಂಡಾ ಸಿಟಿ (Honda City) ಸೆಡಾನ್ ದೊಡ್ಡಮಟ್ಟದಲ್ಲಿ ರಿಯಾಯಿತಿ ಪ್ರಯೋಜನವನ್ನು ಹೊಂದಿದ್ದು, ರೂ.1,19,500 ಡಿಸ್ಕೌಂಟ್ ಆಫರ್ ಹೊಂದಿದೆ. ಅದರಲ್ಲಿ ರೂ.30,000 ವರೆಗೆ ನಗದು ರಿಯಾಯಿತಿ, ರೂ.15,000 ವರೆಗೆ ವಿನಿಮಯ ಬೋನಸ್, ರೂ.4,000 ಲಾಯಲ್ಟಿ ಬೋನಸ್, ರೂ.20,000 ವಿಶೇಷ ಕಾರ್ಪೊರೇಟ್ ರಿಯಾಯಿತಿ, ರೂ.36,500 ವಿಶೇಷ ಆವೃತ್ತಿ ಕೊಡುಗೆ (Special Edition Benefit) ಸೇರಿದಂತೆ ವಿವಿಧ ರಿಯಾಯಿತಿ ಸೌಲಭ್ಯವನ್ನು ಪಡೆದಿದೆ.

ಹೋಂಡಾ ಅಮೇಜ್ (Honda Amaze) ಸೆಡಾನ್ ರೂ.90,000 ರಿಯಾಯಿತಿ ಪ್ರಯೋಜನವನ್ನು ಹೊಂದಿದ್ದು, ರೂ.35,000 ನಗದು ರಿಯಾಯಿತಿ, ರೂ.20,000 ವಿಶೇಷ ಕಾರ್ಪೊರೇಟ್ ರಿಯಾಯಿತಿ ರೂ.10,000 ವಿನಿಮಯ ಬೋನಸ್, ರೂ.6,000 ಕಾರ್ಪೊರೇಟ್ ರಿಯಾಯಿತಿ, ರೂ.4,000 ಲಾಯಲ್ಟಿ ಬೋನಸ್, ರೂ.30,000 ವಿಶೇಷ ಆವೃತ್ತಿ ಕೊಡುಗೆಯನ್ನು ಒಳಗೊಂಡಿದೆ. ಜೊತೆಗೆ ಎಲಿವೇಟ್ ಎಸ್‌ಯುವಿ ರೂ.50,000 ನಗದು ರಿಯಾಯಿತಿಯನ್ನು ಹೊಂದಿದೆ.
ಈ ರಿಯಾಯಿತಿ ಪ್ರಯೋಜನಗಳು ಮಾರ್ಚ್ 31, 2024 ರವರೆಗೆ ಮಾನ್ಯವಾಗಿರಲಿದೆ. ಆದರೆ, ರಾಜ್ಯದಿಂದ ರಾಜ್ಯಕ್ಕೆ ಡೀಲರ್‌ಶಿಪ್, ರೂಪಾಂತರ ಹಾಗೂ ಬಣ್ಣಗಳನ್ನು ಆಧರಿಸಿ ಬೇರೆಯಿರಲಿದ್ದು, ಹೆಚ್ಚಿನ ಮಾಹಿತಿಗೆ ನಿಮ್ಮ ಸಮೀಪದ ಶೋರೂಂ ಸಂಪರ್ಕಿಸಿರಿ. ಸದ್ಯ, ಗರಿಷ್ಠ ಡಿಸ್ಕೌಂಟ್ ಆಫರ್ ಹೊಂದಿರುವ ಹೋಂಡಾ ಸಿಟಿ ಸೆಡಾನ್ ರೂ.11.71 ಲಕ್ಷದಿಂದ ರೂ.16.19 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ.

ನೂತನ ಸಿಟಿ ಸೆಡಾನ್ 1.5-ಲೀಟರ್ ಪೆಟ್ರೋಲ್ ಎಂಜಿನ್ ಹೊಂದಿದ್ದು, ರೂಪಾಂತರಗಳಿಗೆ ಅನುಗುಣವಾಗಿ 17.8 ರಿಂದ 18.4 ಕೆಎಂಪಿಎಲ್ ಮೈಲೇಜ್ ನೀಡುತ್ತದೆ. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ವೈರ್‌ಲೆಸ್ ಫೋನ್ ಚಾರ್ಜಿಂಗ್, ಆಂಬಿಯೆಂಟ್ ಲೈಟಿಂಗ್, ಕ್ರೂಸ್ ಕಂಟ್ರೋಲ್, ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ 6 ಏರ್ ಬ್ಯಾಗ್ ಹೊಂದಿದೆ.
ಹೋಂಡಾ ಅಮೇಜ್ ರೂ.7.16 ಲಕ್ಷದಿಂದ ರೂ.9.92 ಲಕ್ಷ ಎಕ್ಸ್ ಶೋ ಬೆಲೆಯಲ್ಲಿ ಗ್ರಾಹಕರಿಗೆ ಸಿಗುತ್ತದೆ. ಈ ಕಾರು 1.2-ಲೀಟರ್ ಪೆಟ್ರೋಲ್ ಎಂಜಿನ್ ಪಡೆದಿದ್ದು, 18.3 ರಿಂದ 18.6 ಕೆಎಂಪಿಎಲ್ ಮೈಲೇಜ್ ನೀಡುತ್ತದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಕ್ರೂಸ್ ಕಂಟ್ರೋಲ್, ಪೆಡಲ್ ಶಿಫ್ಟರ್ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ ಡುಯಲ್ ಫ್ರಂಟ್ ಏರ್ ಬ್ಯಾಗ್, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಅನ್ನು ಒಳಗೊಂಡಿದೆ.

ಹೋಂಡಾ ಎಲಿವೇಟ್ (Honda Elevate) ಎಸ್‌ಯುವಿ, ರೂ.11.58 ಲಕ್ಷದಿಂದ ರೂ.16.20 ಲಕ್ಷ ಎಕ್ಸ್ ಶೋರೂಂ ದರವನ್ನು ಪಡೆದಿದೆ. 1.5 - ಲೀಟರ್ ಪೆಟ್ರೋಲ್ ಎಂಜಿನ್ ಮತ್ತು 6-ಸ್ವೀಡ್ ಮ್ಯಾನುವಲ್/ ಸಿವಿಟಿ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಲಭ್ಯವಿದೆ. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7-ಇಂಚಿನ ಸೆಮಿ-ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








