Honda: ದಸರಾ - ದೀಪಾವಳಿಗೆ ಹೋಂಡಾದಿಂದ ಬಿಗ್ ಆಫರ್ ಘೋಷಣೆ.. ಏನದು?, ಕಡಿಮೆ ಬೆಲೆಗೆ ಹೊಸ ಕಾರಂತೆ!

ದಸರಾ ಹಾಗೂ ದೀಪಾವಳಿ ಹಬ್ಬಕ್ಕೆ ಹೊಸ ಕಾರನ್ನು ಖರೀದಿಸಬೇಕೆಂದು ಆಲೋಚಿಸುತ್ತಿರುವ ಗ್ರಾಹಕರಿಗೆ ಸಿಹಿಸುದ್ದಿಯೊಂದು ಲಭ್ಯವಾಗಿದೆ. ಪ್ರಮುಖ ಕಾರು ತಯಾರಕ ಕಂಪನಿ ಹೋಂಡಾ ಕಾರ್ಸ್ ಇಂಡಿಯಾ (Honda Cars India), ಈ ಅಕ್ಟೋಬರ್‌ನಲ್ಲಿ ದೊಡ್ಡಮಟ್ಟದ ರಿಯಾಯಿತಿ ಪ್ರಯೋಜನಗಳನ್ನು ಘೋಷಣೆ ಮಾಡಿದೆ. ಇದರಿಂದ ಕಂಪನಿಯ ಜನಪ್ರಿಯ ಕಾರುಗಳಾದ ಅಮೇಜ್ (Amaze), ಎಲಿವೇಟ್ (Elevate) ಮತ್ತು ಸಿಟಿ (City) ಕಾರುಗಳು ಕೈಗೆಟುಕುವ ಬೆಲೆಯಲ್ಲಿ ಖರೀದಿದಾರರಿಗೆ ಸಿಗಲಿವೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

ಹೋಂಡಾ ಕಾರ್ಸ್ ಇಂಡಿಯಾ, ತನ್ನ 'ಎಕ್ಸ್' ಖಾತೆಯಲ್ಲಿ ಪೋಸ್ಟ್ ಮಾಡುವುದರೊಂದಿಗೆ ವಿವಿಧ ಹಣಕಾಸು ಪ್ರಯೋಜನದ ಕುರಿತಂತೆ ಸವಿಸ್ತಾರವಾದ ಮಾಹಿತಿಯನ್ನು ಹಂಚಿಕೊಂಡಿದೆ. ಸದ್ಯ ಗ್ರೇಟ್ ಹೋಂಡಾ ಫೆಸ್ಟ್' ಕಾರು ಮಾರಾಟ ಮೇಳ ನಡೆಯುತ್ತಿದ್ದು, ನೂತನ ಹೋಂಡಾ ಕಾರು ಖರೀದಿಸುವ ಅದೃಷ್ಟಶಾಲಿ ಗ್ರಾಹಕರಿಗೆ ರೂ.5 ಲಕ್ಷ ಮೌಲ್ಯದ ಚಿನ್ನ ಗೆಲ್ಲುವ ಅವಕಾಶ ದೊರೆಯಲಿದೆ.

Honda Cars India Announced Big Offer In October 2024 For Elevate Amaze And City Cars Details

ಇದರೊಟ್ಟಿಗೆ 3-ವರ್ಷಗಳವರೆಗೆ ಉಚಿತ ನಿರ್ವಹಣಾ ಸೌಲಭ್ಯ (3-Year Free Maintenance Facility) ಕೂಡ ಲಭ್ಯವಾಗಲಿದೆ. ಹೆಚ್ಚುವರಿಯಾಗಿ ಪ್ರಖ್ಯಾತ ಎಲಿವೇಟ್ ಎಸ್‌ಯುವಿ ರೂ.75,000, ಅಮೇಜ್ ಸೆಡಾನ್ ರೂ.1,12,000 ಮತ್ತು ಸಿಟಿ ಸೆಡಾನ್ ರೂ.90,000 ದಿಂದ ರೂ.1,14,000 ವರೆಗೆ ಹಣಕಾಸು ಪ್ರಯೋಜನಗಳನ್ನು ಸಹ ಪಡೆದಿವೆ.

ದೇಶೀಯವಾಗಿ ಖರೀದಿಗೆ ಲಭ್ಯವಿರುವ ಹೋಂಡಾ ಎಲಿವೇಟ್ (Honda Elevate), ಜನಪ್ರಿಯ ಎಸ್‌ಯುವಿಯಾಗಿ ಹೊರಹೊಮ್ಮಿದೆ. ಈ ಕಾರು ರೂ.11.69 ಲಕ್ಷದಿಂದ ರೂ.16.71 ಲಕ್ಷ ಎಕ್ಸ್ ಶೋರೂಂ ದರದಲ್ಲಿ ಖರೀದಿಗೆ ದೊರೆಯುತ್ತದೆ. 1.5-ಲೀಟರ್ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಹೊಂದಿದ್ದು, 15.31 ರಿಂದ 16.92 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

Honda Cars India Announced Big Offer In October 2024 For Elevate Amaze And City Cars Details

ಈ ಹೋಂಡಾ ಹೋಂಡಾ ಎಲಿವೇಟ್ ಕಾರಿನಲ್ಲಿ 5 ಮಂದಿ ಸುಲಭವಾಗಿ ಸಂಚರಿಸಬಹುದು. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (10.25 ಇಂಚು), ಸೆಮಿ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ (7-ಇಂಚು), ಮತ್ತು ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್ ಮತ್ತು ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಅನ್ನು ಪಡೆದಿದೆ.

ಹೋಂಡಾ ಅಮೇಜ್ (Honda Amaze) ಪ್ರಖ್ಯಾತ ಸೆಡಾನ್ ಆಗಿದ್ದು, ರೂ.7.20 ಲಕ್ಷದಿಂದ ರೂ.9.96 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 1.2-ಲೀಟರ್ ಪೆಟ್ರೋಲ್ ಎಂಜಿನ್ ಪಡೆದಿದ್ದು, 5-ಸ್ಪೀಡ್ ಮ್ಯಾನುವಲ್/ ಸಿವಿಟಿ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 18.3 ರಿಂದ 18.6 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (7-ಇಂಚು) ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.

ಹೋಂಡಾ ಸಿಟಿ (Honda City) ಬಗ್ಗೆ ಹೇಳುವುದಾದರೆ, ಇದು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗುವ ಸೆಡಾನ್ ಆಗಿದೆ. ರೂ.11.82 ಲಕ್ಷದಿಂದ ರೂ.16.35 ಲಕ್ಷ (ಎಕ್ಸ್ ಶೋರೂಂ) ದರವನ್ನು ಪಡೆದಿದೆ. 1.5-ಲೀಟರ್ ಪೆಟ್ರೋಲ್ ಎಂಜಿನ್ ಎಂಜಿನ್ ಹೊಂದಿದ್ದು, 17.8 ರಿಂದ 18.4 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (8-ಇಂಚು) ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.

ಇನ್ನು, ಈ ಅಕ್ಟೋಬರ್‌ನಲ್ಲಿ ಹೋಂಡಾ ಕಾರುಗಳು ಭರ್ಜರಿ ರಿಯಾಯಿತಿ ಪಡೆದುಕೊಂಡಿರುವುರಿಂದ ಗ್ರಾಹಕರಿಗೆ ಹೆಚ್ಚಿನ ಅನುಕೂಲವಾಲಿದೆ. ಇದರಿಂದ ಒಂದಷ್ಟು ಹಣವನ್ನು ಉಳಿಸಲು ಸಾಧ್ಯವಾಗಲಿದೆ. ನಿಮ್ಮ ಗಮನಕ್ಕೆ.. ಈ ಹಣಕಾಸಿನ ಪ್ರಯೋಜನದ ಬಗ್ಗೆ ಯಾವುದೇ ಗೊಂದಲವಿದ್ದರೂ ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂಗೆ ಭೇಟಿ ನೀಡಿರಿ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Monday, October 7, 2024, 11:40 [IST]
English summary
Honda cars india announced big offer in october 2024 for elevate amaze and city cars details
Read more on honda india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+