ಇದ್ದಕ್ಕಿದ್ದಂತೆ ಹೋಂಡಾ ಕಾರುಗಳ ಮಾರಾಟದಲ್ಲಿ ಇಳಿಕೆ: ಕಾರಣವೇನು?

ಜನಪ್ರಿಯ ಕಾರು ತಯಾರಕ ಕಂಪನಿಯಾದ ಹೋಂಡಾ ಕಾರ್ಸ್ ಇಂಡಿಯಾ ಲಿಮಿಟೆಡ್ (HCIL) 2024ರ ಜೂನ್ ತಿಂಗಳ ಕಾರು ಮಾರಾಟದ ವರದಿಯನ್ನು ಬಹಿರಂಗಪಡಿಸಿದೆ. ವರದಿ ಪ್ರಕಾರ, ಕಳೆದ ತಿಂಗಳಿನಲ್ಲಿ ಹೋಂಡಾ (Honda) ಕಂಪನಿಯು 4,804 ಯುನಿಟ್‌ಗಳನು ಮಾರಾಟ ಮಾಡಿದೆ. ಇನ್ನು 2023ರ ಜೂನ್ ತಿಂಗಳಿನಲ್ಲಿ ಹೋಂಡಾ ಕಂಪನಿಯು 5,080 ಯೂನಿಟ್ ಗಳನ್ನ್ನು ಮಾರಾಟ ಮಾಡಲಾಗಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ವರ್ಷದಿಂದ ವರ್ಷಕ್ಕೆ ಶೇ.5 ರಷ್ಟು ಕುಸಿತವನ್ನು ಕಂಡಿದೆ. ಆದರೆ ಹೋಂಡಾ ಕಂಪನಿಯು ರಫ್ತಿನಲ್ಲಿ ಹೆಚ್ಚು ಬೆಳವಣಿಗೆಯನ್ನು ಸಾಧಿಸಿದೆ.

ಹೋಂಡಾ ಕಂಪನಿಯು 2024ರ ಜೂನ್ ತಿಂಗಳಿನಲ್ಲಿ 4,972 ಯುನಿಟ್‌ಗಳನ್ನು ರಫ್ತು ಮಾಡಿದೆ. ಆದರೆ ಒಂದು ವರ್ಷದ ಹಿಂದೆ ಇದೇ ತಿಂಗಳಲ್ಲಿ 2,112 ಯುನಿಟ್‌ಗಳನ್ನು ರಫ್ತು ಮಾಡಿತ್ತು. ಇದನ್ನು ಕಳೆದ ತಿಂಗಳ ರಫ್ತಿಗೆ ಹೋಲಿಸಿದರೆ ಎರಡು ಪಟ್ಟು ಹೆಚ್ಚಾಗಿದೆ. ಈ ವರ್ಷದ ಮೇ ತಿಂಗಳಲ್ಲಿ ಹೋಂಡಾ ಕಾರ್ಸ್ ಇಂಡಿಯಾ ನೋಂದಾಯಿಸಿದ ದೇಶೀಯ ಮಾರಾಟಕ್ಕೆ ಹೋಲಿಸಿದರೆ, ಅದರ ಜೂನ್ ಸಂಖ್ಯೆಗಳು ಸ್ವಲ್ಪ ಕಡಿಮೆಯಾಗಿದೆ.

Honda Cars India Sales

ಈ ವರ್ಷದ ಮೇ ತಿಂಗಳಲ್ಲಿ ವಾಹನ ತಯಾರಕರು ದೇಶೀಯ ಮಾರುಕಟ್ಟೆಯಲ್ಲಿ 4,822 ಯುನಿಟ್‌ಗಳನ್ನು ಮಾರಾಟ ಮಾಡಿದ್ದಾರೆ. ರಫ್ತು ವಿಭಾಗದಲ್ಲಿ, ತಿಂಗಳಿನಿಂದ ತಿಂಗಳಿಗೆ ಕುಸಿತವನ್ನು ಕಂಡಿದೆ. ಈ ವರ್ಷದ ಮೇ ತಿಂಗಳಲ್ಲಿ 6,521 ಯುನಿಟ್‌ಗಳನ್ನು ರಫ್ತು ಮಾಡಲಾಗಿದೆ. ಆದರೆ ಇದು ದೊಡ್ಡ ಕುಸಿತವೆಂದು ಹೇಳಲು ಕೂಡ ಆಗುವುದಿಲ್ಲ.

ಹೋಂಡಾ ಕಾರ್ಸ್ ಇಂಡಿಯಾದ ಮಾರ್ಕೆಟಿಂಗ್ ಮತ್ತು ಸೇಲ್ಸ್ ಉಪಾಧ್ಯಕ್ಷ ಕುನಾಲ್ ಬೆಹ್ಲ್ ಜೂನ್ ತಿಂಗಳ ಕಾರು ಮಾರಾಟದ ಬಗ್ಗೆ ಮಾತನಾಡಿ, ಭಾರತೀಯ ಪ್ರಯಾಣಿಕ ವಾಹನದ ಜಾಗದಲ್ಲಿನ ಮಾರುಕಟ್ಟೆ ಪರಿಸ್ಥಿತಿಗಳು ತಾಜಾ ಬೇಡಿಕೆಯನ್ನು ಸೃಷ್ಟಿಸಲು ಸವಾಲಾಗಿದೆ ಎಂದು ಹೇಳಿದರು. ವಾಹನ ತಯಾರಕರ ರಫ್ತು ಕಾರ್ಯಕ್ಷಮತೆಯ ಕುರಿತು ಹೇಳಿ, ಬೆಳವಣಿಗೆಯನ್ನು ಮುಂದುವರೆಸಿದ್ದು, ಇದು ಬ್ರ್ಯಾಂಡ್‌ಗೆ ಗಮನಾರ್ಹವಾದ ಬೆಳವಣಿಯಾಗಿದೆ ಎಂದು ಹೇಳಿದರು.

Honda Cars India Sales

ಹೋಂಡಾ ಕಾರ್ಸ್ ಇಂಡಿಯಾ ಪ್ರಸ್ತುತ ದೇಶೀಯ ಮಾರುಕಟ್ಟೆಯಲ್ಲಿ ಕೇವಲ ಮೂರು ವಿಭಿನ್ನ ಮಾದರಿಗಳನ್ನು ಮಾರಾಟ ಮಾಡುತ್ತಿದೆ. ಇದು ಭಾರತದಲ್ಲಿ ಮಾರಾಟವಾಗುವ ಅತ್ಯಂತ ಕೈಗೆಟುಕುವ ಕಾರು ಹೋಂಡಾ ಅಮೇಜ್ ಕಾಂಪ್ಯಾಕ್ಟ್ ಸೆಡಾನ್ ಆಗಿದೆ. ಇನ್ನು ಎಲಿವೇಟ್ ಎಸ್‍ಯುವಿ ಮತ್ತು ಸಿಟಿ ಮಧ್ಯಮ ಗಾತ್ರದ ಸೆಡಾನ್ ಕೂಡ ಮಾರಾಟ ಮಾಡುತ್ತಿದೆ.

2024ರ ಜೂನ್ ತಿಂಗಳಿನಲ್ಲಿ ಭಾರತದಲ್ಲಿ ಒಟ್ಟಾರೆ ಪ್ರಯಾಣಿಕ ವಾಹನಗಳ ಮಾರಾಟವು ನಿಧಾನಗತಿಯ ಹಾದಿಯನ್ನು ತಲುಪಿದ ಸಮಯದಲ್ಲಿ ಹೋಂಡಾ ಕಾರ್ಸ್ ಇಂಡಿಯಾದ ದೇಶೀಯ ಮಾರುಕಟ್ಟೆಯಲ್ಲಿ ಮಾರಾಟ ಕುಸಿತವಾಗಿದೆ. ವಿವಿಧ ಕಾರಣಗಳಿಂದಾಗಿ ಪ್ರಯಾಣಿಕ ವಾಹನಗಳ ಮಾರಾಟದ ನಿಧಾನಗತಿಯು ಕಾರಣವಾಗಿದೆ. ತಿಂಗಳ ಅವಧಿಯ ಸಂಸತ್ತಿನ ಚುನಾವಣೆಗಳು ಮತ್ತು ಭಾರತದಾದ್ಯಂತ ವಿವಿಧ ಪ್ರದೇಶಗಳಲ್ಲಿಮಾರಾಟದ ಮೇಲೆ ಪ್ರಭಾವ ಬೀರುವಲ್ಲಿ ಪ್ರಮುಖ ಪಾತ್ರ ವಹಿಸಿವೆ.

Honda Cars India Sales

ಹೊಸ ಹೋಂಡಾ ಎಲಿವೇಟ್ (Honda Elevate) ಎಸ್‍ಯುವಿ ಭಾರತದಲ್ಲಿ ಬಿಡುಗಡೆಯಾಗಿ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿದೆ. ಈ ಎಸ್‌ಯುವಿಯನ್ನು ಜಪಾನ್‌ನಲ್ಲೂ ಮಾರ್ಚ್ 2024ರಲ್ಲಿ ಡಬ್ಲ್ಯುಆರ್-ವಿ ಎಂಬ ಹೆಸರಿನಲ್ಲಿ ಬಿಡುಗಡೆಗೊಳಿಸಿದೆ. ಭಾರತದಲ್ಲಿ ಈ ಕಾರು ನಿರ್ಮಾಣವಾಗಿ ಜಪಾನ್‌ಗೆ ರಫ್ತು ಮಾಡಲಾಗುತ್ತಿದ್ದು, ಉತ್ತಮ ಬೇಡಿಕೆ ಪಡೆದುಕೊಂಡಿದೆ. ಭಾರತದಲ್ಲಿ ಹೋಂಡಾ ಎಲಿವೇಟ್ ಎಸ್‍ಯುವಿ SV, V, VX ಮತ್ತು ZX ಎಂಬ ನಾಲ್ಕು ಟ್ರಿಮ್ ಹಂತಗಳಲ್ಲಿ ಖರೀದಿಗೆ ಲಭ್ಯವಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Tuesday, July 2, 2024, 19:24 [IST]
English summary
Honda cars india sales report in june 2024 details
Read more on honda india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+