Honda: ಹೋಂಡಾ ಎಲಿವೇಟ್ ಎಸ್‌ಯುವಿ ಎಲ್ಲರಿಗೂ ಇಷ್ಟ.. ಕೈಗೆಟುಕುವ ಬೆಲೆ, 6 ಏರ್‌ಬ್ಯಾಗ್
ಜಪಾನ್ ಮೂಲದ ಹೋಂಡಾ (Honda) ಪ್ರಮುಖ ಕಾರು ತಯಾರಕ ಸಂಸ್ಥೆಯಾಗಿದ್ದು, ದೇಶೀಯ ಮಾರುಕಟ್ಟೆಯಲ್ಲಿ ತನ್ನದೇಯಾದ ಛಾಪನ್ನು ಮೂಡಿಸಿದೆ. ಕಂಪನಿಯ ಜನಪ್ರಿಯ ಮಿಡ್-ಸೈಜ್ (ಮಧ್ಯಮ-ಗಾತ್ರ) ಎಸ್‌ಯುವಿ ಎಲಿವೇಟ್ (Elevate)ಗೆ ಹೆಚ್ಚಿನ ಬೇಡಿಕೆಯಿದ್ದು, ಗ್ರಾಹಕರು ಕೂಡ ಮುಗಿಬಿದ್ದು ಕೊಂಡುಕೊಳ್ಳುತ್ತಿದ್ದಾರೆ. ಸೆಪ್ಟೆಂಬರ್ 4, 2023ರಂದು ಬಿಡುಗಡೆಯಾಗಿದ್ದ ಈ ಕಾರು ಸಾವಿರಾರು ಸಂಖ್ಯೆಯಲ್ಲಿ ಮಾರಾಟವಾಗಿದೆ. ನೀವು ಹೊಸ ಕಾರನ್ನು ತೆಗೆದುಕೊಳ್ಳಲು ಯೋಚಿಸಿದ್ದರೆ 'ಹೋಂಡಾ ಎಲಿವೇಟ್' ಉತ್ತಮ ಆಯ್ಕೆಯಾಗಲಿದೆ. ಇಲ್ಲಿ ನೂತನ ಕಾರಿನ ಬೆಲೆ, ಕಾರ್ಯಕ್ಷಮತೆ ಹಾಗೂ ವಿಶೇಷತೆಗಳ ಬಗ್ಗೆ ತಿಳಿಸಿಕೊಟ್ಟಿದ್ದೇವೆ.
ಬೆಲೆ & ರೂಪಾಂತರಗಳು: ಹೊಚ್ಚ ಹೊಸ ಹೋಂಡಾ ಎಲಿವೇಟ್ ಎಸ್‌ಯುವಿ ಕೈಗೆಟುಕುವ ಬೆಲೆಯಲ್ಲಿ ಗ್ರಾಹಕರಿಗೆ ಸಿಗುತ್ತದೆ. ಈ ಕಾರು ರೂ.11.91 ಲಕ್ಷದಿಂದ ರೂ.16.51 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಎಸ್‌ವಿ, ವಿ, ವಿಎಕ್ಸ್ ಮತ್ತು ಝಡ್ಎಕ್ಸ್ ರೂಪಾಂತರ (ವೇರಿಯೆಂಟ್)ಗಳ ಆಯ್ಕೆಯಲ್ಲಿ ಕೂಡ ದೊರೆಯುತ್ತದೆ.

ಬಣ್ಣಗಳು & ಆಸನ ಆಯ್ಕೆ: ಈ ಕಾರು ಅಬ್ಸಿಡಿಯನ್ ಬ್ಲೂ ಪರ್ಲ್, ಫೀನಿಕ್ಸ್ ಆರೆಂಜ್ ಪರ್ಲ್, ರೇಡಿಯಂಟ್ ರೆಡ್ ಮೆಟಾಲಿಕ್, ಪ್ಲಾಟಿನಂ ವೈಟ್ ಪರ್ಲ್, ಲೂನಾರ್ ಸಿಲ್ವರ್ ಮೆಟಾಲಿಕ್ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ಲಭ್ಯವಿದೆ. ಇದರಲ್ಲಿ 5 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ದೂರದ ಉರುಗಳಿಗೆ ಪ್ರಯಾಣಿಸಬಹುದು. ಪ್ರವಾಸದ ವೇಳೆಯಲ್ಲಿ ಹೆಚ್ಚಿನ ಲಗೇಜ್ ಸಾಗಿಲು 458 ಲೀಟರ್ ಸಾಮರ್ಥ್ಯದ ಫ್ಯುಯೆಲ್ (ಇಂಧನ) ಟ್ಯಾಂಕ್‌ನ್ನು ಒಳಗೊಂಡಿದೆ.
ಕಾರ್ಯಕ್ಷಮತೆ: ಹೋಂಡಾ ಎಲಿವೇಟ್ ಎಸ್‌ಯುವಿ ಶಕ್ತಿಯುತ ಪವರ್‌ಟ್ರೇನ್ ಪಡೆದಿದೆ. 1.5-ಲೀಟರ್ ಪೆಟ್ರೋಲ್ ಎಂಜಿನ್ 121 ಪಿಎಸ್ ಗರಿಷ್ಠ ಶಕ್ತಿ (ಪವರ್) ಹಾಗೂ 145 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಒಳಗೊಂಡಿದೆ. ರೂಪಾಂತರಗಳಿಗೆ ಅನುಗುಣವಾಗಿ 6-ಸ್ಪೀಡ್ ಮ್ಯಾನುವಲ್/ ಸಿವಿಟಿ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ.

ಮೈಲೇಜ್: ಈ ಕಾರು ಉತ್ತಮ ರೀತಿಯಲ್ಲಿ ಇಂಧನ ದಕ್ಷತೆ (Fuel Efficiency)ಯನ್ನು ಒಳಗೊಂಡಿದ್ದು, 15.31 ರಿಂದ 16.92 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಜೊತೆಗೆ ಎಫ್‌ಡಬ್ಲ್ಯೂಡಿ (ಫ್ರಂಟ್ ವೀಲ್ ಡ್ರೈವ್) ತಂತ್ರಜ್ಞಾನವನ್ನು ಹೊಂದಿದೆ. ಗ್ರೌಂಡ್ ಕೆ ಕ್ಲಿಯರೆನ್ಸ್ 220 ಎಂಎಂ ಇದ್ದು, 160 ಕೆಎಂಪಿಹೆಚ್ ಟಾಪ್ ಸ್ಪೀಡ್ ಹೊಂದಿದೆ.
ವೈಶಿಷ್ಟ್ಯಗಳು: ಹೋಂಡಾ ಎಲಿವೇಟ್ ಕಾರು ಯುವ ಗ್ರಾಹಕರನ್ನು ಸೆಳೆಯುವ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7-ಇಂಚಿನ ಸೆಮಿ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ವೈರ್‌ಲೆಸ್ ಫೋನ್ ಚಾರ್ಜರ್ ಮತ್ತು ಸನ್‌ರೂಫ್‌ನ್ನು ಪಡೆದಿದೆ.
ಸುರಕ್ಷತಾ ವೈಶಿಷ್ಟ್ಯಗಳು: ಈ ಕಾರು ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸುತ್ತದೆ. 6 ಏರ್‌ಬ್ಯಾಗ್, ವೆಹಿಕಲ್ ಸ್ಟೆಬಿಲಿಟಿ ಅಸಿಸ್ಟ್, ಹಿಲ್ ಸ್ಟಾರ್ಟ್ ಅಸಿಸ್ಟ್, ಲೇನ್ ವಾಚ್ ಅಸಿಸ್ಟ್, ರೇರ್ ಪಾರ್ಕಿಂಗ್ ಕ್ಯಾಮೆರಾದಂತಹ ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ವೈಶಿಷ್ಟ್ಯಗಳನ್ನು ಪಡೆದಿದೆ. ಎಲಿವೇಟ್ ಎಸ್‌ಯುವಿಗೆ ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ, ಟೊಯೊಟಾ ಫಾರ್ಚುನರ್, ಕಿಯಾ ಸೆಲ್ಟೋಸ್ ಕಾರುಗಳು ಪ್ರಬಲ ಪ್ರತಿಸ್ಪರ್ಧಿಯಾಗಿವೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








