Honda: ಹೋಂಡಾದ ಹೊಸ ಕಾರನ್ನು ಮನೆಗೆ ತನ್ನಿ.. ಹೆಂಡತಿಯೊಂದಿಗೆ ವಿದೇಶಕ್ಕೆ ಹಾರಿ, ಭಾರೀ ಹಣ ಉಳಿತಾಯ!

ದೇಶದಲ್ಲಿ ಮಧ್ಯಮ ವರ್ಗದ ಜನರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿದ್ದಾರೆ. ಅವರಿಗೆ ಜೀವನದಲ್ಲಿ ಹೊಸ ಕಾರು ತೆಗೆದುಕೊಳ್ಳಬೇಕೆಂಬ ಕನಸಿರುತ್ತದೆ. ಆದರೆ ಕಾರುಗಳು ದುಬಾರಿ ಬೆಲೆಯನ್ನು ಹೊಂದಿರುವುದರಿಂದ ಹಲವರು ಖರೀದಿಸಲು ಹಿಂದೇಟು ಹಾಕುತ್ತಾರೆ. ಅಂತಹ ಗ್ರಾಹಕರಿಗಾಗಿ 'ಹೋಂಡಾ' ಕಂಪನಿಯು ಭರ್ಜರಿ ಹಣಕಾಸಿನ ಪ್ರಯೋಜನಗಳನ್ನು ಘೋಷಿಸಿದೆ. ನೂತನ ಎಲಿವೇಟ್ ಅಮೇಜ್ ಹಾಗೂ ಸಿಟಿ ಕಾರುಗಳನ್ನು ಕೊಂಡುಕೊಳ್ಳಲು ಬಯಸುವವರಿಗೆ ಈ ಕೊಡುಗೆಗಳು ದೊರೆಯಲಿವೆ. ಇದರಿಂದ ಖರೀದಿದಾರರು ಸಾವಿರಾರು ರೂಪಾಯಿ ಹಣ ಉಳಿಸಬಹುದು. ನೀವು ಹೋಂಡಾ ಕಾರನ್ನು ತೆಗೆದುಕೊಳ್ಳಲು ಯೋಚಿಸಿದ್ದೀರಾ.. ಹಾಗಾದರೆ ತಕ್ಷಣ ಶೋರೂಂಗೆ ಭೇಟಿ ನೀಡಿರಿ.

ಈ ಬಗ್ಗೆ ಹೋಂಡಾ ಕಾರ್ ಇಂಡಿಯಾ (Honda Car India) ತನ್ನ 'ಎಕ್ಸ್' ಖಾತೆಯಲ್ಲಿ ಪೋಸ್ಟ್ ಮಾಡಿದೆ. ಹೊಸ ಹೋಂಡಾ ಕಾರನ್ನು ಜುಲೈನಲ್ಲಿ ಮನೆಗೆ ತರುವ ಅದೃಷ್ಟಶಾಲಿ ವ್ಯಕ್ತಿಗೆ ದಂಪತಿ ಸಮೇತ ಸ್ವಿಟ್ಜರ್ಲೆಂಡ್‌ ಪ್ರವಾಸ ಅಥವಾ ರೂ.75,000 ಮೌಲ್ಯದ ಅತ್ಯಾಕರ್ಷಕ ಉಡುಗೊರೆ ಗೆಲ್ಲುವ ಅವಕಾಶ ದೊರೆಯಲಿದೆ. ಹಾಗೆಯೇ ಪ್ರತಿ ಟೆಸ್ಟ್ ಡ್ರೈವ್‌ಗೂ ಗಿಫ್ಟ್ ಕೂಡ ಪಡೆಯಬಹುದು.

Honda Elevate City Amaze Car Have Big Offer In July 2024 Upto Rs 96 000 Details

ಇದರೊಟ್ಟಿಗೆ ಹೋಂಡಾದ ಜನಪ್ರಿಯ ಕಾರುಗಳಾದ ಅಮೇಜ್ ರೂ.96,000, ಸಿಟಿ ರೂ.65,000 ದಿಂದ ರೂ.88,000 ಹಾಗೂ ಎಲಿವೇಟ್ ರೂ.65,000ವರೆಗೆ ಹಣಕಾಸು ಪ್ರಯೋಜನವನ್ನು ಪಡೆದಿವೆ. ಸದ್ಯ ಗರಿಷ್ಠ ಕೊಡುಗೆ ಲಭ್ಯವಿರುವ ಹೋಂಡಾ ಅಮೇಜ್ (Honda Amaze) ಸೆಡಾನ್ ರೂ.7.20 ದಿಂದ ರೂ.9.96 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಸಿಗುತ್ತದೆ.

ನೂತನ ಅಮೇಜ್ ಕಾರು 2-ಲೀಟರ್ ಪೆಟ್ರೋಲ್ ಎಂಜಿನ್ ಹೊಂದಿದ್ದು, ಸಿವಿಟಿ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. ರೂಪಾಂತರಗಳಿಗೆ ಅನುಗುಣವಾಗಿ 18.3 ರಿಂದ 18.6 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಟೋ ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲೈಟ್‌ಗಳು, ಕ್ರೂಸ್ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

Honda Elevate City Amaze Car Have Big Offer In July 2024 Upto Rs 96 000 Details

ಹೋಂಡಾ ಎಲಿವೇಟ್ (Honda Elevate) ಎಸ್‌ಯುವಿ ಬಗ್ಗೆ ಹೇಳುವುದಾದರೆ, ಇದು ರೂ.11.91 ಲಕ್ಷದಿಂದ ರೂ.16.51 ಲಕ್ಷ (ಎಕ್ಸ್ ಶೋರೂಂ) ದರವನ್ನು ಹೊಂದಿದೆ. 1.5-ಲೀಟರ್ ಪೆಟ್ರೋಲ್ ಎಂಜಿನ್ ಪಡೆದಿದ್ದು, 121 ಪಿಎಸ್ ಗರಿಷ್ಠ ಶಕ್ತಿ (ಪವರ್) ಹಾಗೂ 145 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 6-ಸ್ಪೀಡ್ ಮ್ಯಾನುವಲ್ ಅಥವಾ ಸಿವಿಟಿ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 15.31 ರಿಂದ 16.92 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

ಈ ಎಲಿವೇಟ್ ಕಾರು 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7-ಇಂಚಿನ ಸೆಮಿ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ವೈರ್‌ಲೆಸ್ ಫೋನ್ ಚಾರ್ಜರ್, ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌ ಹಾಗೂ ADAS (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಅನ್ನು ಪಡೆದಿದೆ.

ಹೋಂಡಾ ಸಿಟಿ (Honda City) ಸೆಡಾನ್ ಕುರಿತಂತೆ ಮಾತನಾಡುವುದಾದರೆ, ರೂ.12.08 ಲಕ್ಷದಿಂದ ರೂ.16.35 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಸಿಗುತ್ತದೆ. 1.5-ಲೀಟರ್ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದ್ದು, 6-ಸ್ಪೀಡ್ ಮ್ಯಾನುವಲ್/ ಸಿವಿಟಿ ಗೇರ್‌ಬಾಕ್ಸ್‌ನ್ನು ಸಿಗಲಿದ್ದು, 17.8 ರಿಂದ 18.4 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಇದರಲ್ಲಿ 5 ಮಂದಿ ಆರಾಮದಾಯಕ ಪ್ರಯಾಣಿಸಬಹುದು.

ಹೊಸ ಸಿಟಿ ಸೆಡಾನ್ 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ವೈರ್‌ಲೆಸ್ ಫೋನ್ ಚಾರ್ಜಿಂಗ್, ಆಂಬಿಯೆಂಟ್ ಲೈಟಿಂಗ್, ಕ್ರೂಸ್ ಕಂಟ್ರೋಲ್, ಸಿಂಗಲ್ ಪೇನ್ ಸನ್‌ರೂಫ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌, ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಅನ್ನು ಹೊಂದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Wednesday, July 3, 2024, 15:44 [IST]
English summary
Honda elevate city amaze car have big offer july 2024 upto rs 96000 details
Read more on honda india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+