ಆಕರ್ಷಕ ಬೆಲೆಯ ಹೊಂಡಾ ಎಲಿವೇಟ್ ಮಾರಾಟದಲ್ಲಿ ದಿಢೀರ್ ಕುಸಿತ: ಕಾರಣವೇನು?

ಹೊಂಡಾ ಎಲಿವೇಟ್ (Honda Elevate) ಬಹುಬೇಡಿಕೆಯ ಎಸ್‍ಯುವಿಗಳಲ್ಲಿ ಒಂದಾಗಿದೆ. ಈ ಹೊಂಡಾ ಎಲಿವೇಟ್ ಎಸ್‍ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಹ್ಯುಂಡೈ ಕ್ರೆಟಾ, ಕಿಯಾ ಸೆಲ್ಟೋಸ್, ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ ಮತ್ತು ಇತರ ಜನಪ್ರಿಯ ಎಸ್‍ಯುವಿಗಳಿಗೆ ಭಾರೀ ಪೈಪೋಟಿ ನೀಡುತ್ತಿದೆ. ಅದರಲ್ಲಿ ಎದುರಾಳಿಗಳಿಗೆ ಪೈಪೋಟಿ ನೀಡುವುದರಲ್ಲಿ ದೊಡ್ಡ ಮಟ್ಟದ ಯಶಸ್ಸು ಗಳಿಸಲು ಸಾಧ್ಯವಾಗಿಲ್ಲ. ಕಳೆದ ತಿಂಗಳು ಹೊಂಡಾ ಎಲಿವೇಟ್ ಮಾದರಿಯ 1,723 ಯುನಿಟ್‌ಗಳು ಮಾರಾಟವಾಗಿವೆ. ಇನ್ನು ಕಳೆದ ವರ್ಷದ ಆಗಸ್ಟ್ ತಿಂಗಳಿನಲ್ಲಿ ಎಲಿವೇಟ್ ಮಾದರಿಯ 2,822 ಯುನಿಟ್‌ಗಳನ್ನು ಮಾರಾಟವಾಗಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.39 ರಷ್ಟು ಕುಸಿತವನ್ನು ಕಂಡಿದೆ.

ಹೋಂಡಾ ತನ್ನ ಜನಪ್ರಿಯ ಕಾರುಗಳ ಮೇಲೆ ಭರ್ಜರಿ ರಿಯಾಯಿತಿಗಳನ್ನು ನೀಡುತ್ತಿದೆ. ಇದರಲ್ಲಿ ನಗದು ರಿಯಾಯಿತಿಗಳು, ಲಾಯಲ್ಟಿ ಮತ್ತು ವಿನಿಮಯ ಬೋನಸ್‌ಗಳು ಮತ್ತು ಕಾರ್ಪೊರೇಟ್ ರಿಯಾಯಿತಿಗಳು ಸೇರಿವೆ. ಈ ರಿಯಾಯಿತಿಗಳು ಹೋಂಡಾದ ಎಲಿವೇಟ್ ಎಸ್‍ಯುವಿ ಮೇಲೆಯು ಲಭ್ಯವಿದೆ. ಹೊಂಡಾ ಎಲಿವೇಟ್ ಎಸ್‍ಯುವಿಯ ರೂಪಾಂತರವನ್ನು ಅವಲಂಬಿಸಿ 75,000 ರೂ.ವರೆಗಿನ ರಿಯಾಯಿತಿಗಳನ್ನು ನೀಡುತ್ತಿದೆ.

Honda Elevate

ಹೊಂಡಾ ಎಲಿವೇಟ್ ಆರು ಏರ್‌ಬ್ಯಾಗ್‌ಗಳು, ಮೂರು-ಪಾಯಿಂಟ್ ELR ಸೀಟ್ ಬೆಲ್ಟ್‌ಗಳು ಮತ್ತು ಸೀಟ್ ಬೆಲ್ಟ್ ರಿಮೈಂಡರ್‌ಗಳು ಸೇರಿದಂತೆ ಎಲ್ಲಾ ಸ್ಟ್ಯಾಂಡರ್ಡ್ ಆಗಿ ಹೆಚ್ಚುವರಿ ಸುರಕ್ಷತಾ ತಂತ್ರಜ್ಞಾನದೊಂದಿಗೆ ಎಸ್‍ಯುವಿಯನ್ನು ಏಪ್ರಿಲ್‌ನಲ್ಲಿ ನವೀಕರಿಸಲಾಗಿದೆ ಎಂಬುದನ್ನು ಗಮನಿಸಿ. ಈ ಅಪ್‌ಡೇಟ್‌ಗೆ ಮೊದಲು ತಯಾರಿಸಲಾದ ಮಾದರಿಗಳಿಗೆ ಮಾತ್ರ ಈ ರಿಯಾಯಿತಿಗಳು ಅನ್ವಯಿಸುತ್ತವೆ.

ನವೀಕರಿಸಿದ ರೂಪಾಂತರಗಳ ಮೇಲೆ ರೂ.65,000 ವರೆಗೆ ರಿಯಾಯಿತಿಗಳನ್ನು ಪಡೆಯುತ್ತವೆ. ರಿಯಾಯಿತಿಗಳು ನಗರದಿಂದ ನಗರಕ್ಕೆ ಬದಲಾಗುತ್ತವೆ ಮತ್ತು ಸ್ಟಾಕ್‌ನ ಲಭ್ಯತೆಗೆ ಒಳಪಟ್ಟಿರುತ್ತವೆ. ನಿಖರವಾದ ಮಾಹಿತಿಗಾಗಿ ನಿಮ್ಮ ಹತ್ತಿರದ ಹೋಂಡಾ ಡೀಲರ್‌ಶಿಪ್‌ಗೆ ಬೇಟಿ ನೀಡಿ. ಈ ಹೊಂಡಾ ಎಲಿವೇಟ್ ಎಸ್‍ಯುವಿಯ ಆರಂಭಿಕ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.11.91 ಲಕ್ಷವಾಗಿದೆ.

Honda Elevate

ಹೊಂಡಾ ಎಲಿವೇಟ್ ಎಸ್‍ಯುವಿಯು ಅದರ LED DRL ನೊಂದಿಗೆ ಹೊಸ ಬೋಲ್ಡ್ LED ಹೆಡ್‌ಲೈಟ್‌ಗಳು ಹೈಲೈಟ್ ಆಗಿದೆ. ಈ ಎಸ್‍ಯುವಿಯ ಒಳಭಾಗದಲ್ಲಿ ಡ್ಯುಯಲ್-ಡಿಸ್ ಪ್ಲೇ ಡ್ಯಾಶ್ ಅನ್ನು ಹೊಂದಿದೆ. ಇದರ 10.25 ಇಂಚಿನ HD ಇನ್ಫೋಟೈನ್‌ಮೆಂಟ್ ಡಿಸ್ ಪ್ಲೇ ಹೊಂದಿದೆ. ಇದು ವೈರ್‌ಲೆಸ್ ಆಂಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್ಪ್ಲೇ ಕನೆಕ್ಟಿವಿಟಿಯನ್ನು ಹೊಂದಿದೆ ಮತ್ತು 8-ಸ್ಪೀಕರ್ ಸರೌಂಡ್ ಸೌಂಡ್ ಸಿಸ್ಟಮ್‌ಗೆ ಕನೆಕ್ಟ್ ಹೊಂದಿದೆ.

ಇದರೊಂದಿಗೆ ಅನಲಾಗ್ ಸ್ಪೀಡೋದ ಪಕ್ಕದಲ್ಲಿ 7-ಇಂಚಿನ ಡಿಜಿಟಲ್ ಡಿಸ್ಪ್ಲೇ, ಸಿಂಗಲ್ ಪೇನ್ ಸನ್‌ರೂಫ್, ಪ್ಲಶ್ ಸೀಟಿಂಗ್ ಮತ್ತು ವೈರ್‌ಲೆಸ್ ಫೋನ್ ಚಾರ್ಜರ್ ಹೊಂದಿದೆ. ಈ ಹೋಂಡಾ ಎಲಿವೇಟ್ ಎಸ್‍ಯುವಿಯನ್ನು ಹೋಂಡಾ ಆರ್&ಡಿ ಏಷ್ಯಾ ಪೆಸಿಫಿಕ್, ಥೈಲ್ಯಾಂಡ್ ಅಭಿವೃದ್ಧಿಪಡಿಸಿದೆ. ಈ ಎಸ್‍ಯುವಿಯು ಅತ್ಯಾಧುನಿಕ ಸೌಕರ್ಯ ಮತ್ತು ತಂತ್ರಜ್ಞಾನದ ಜೊತೆಗೆ ಸ್ಥಿತಿ ಮತ್ತು ಹೆಚ್ಚು ವಿಶೇಷವಾದ ಖರೀದಿದಾರರನ್ನು ಆಕರ್ಷಿಸಿಸುವಂತೆ ವಿನ್ಯಾಸಗೊಳಿಸಿದೆ.

Honda Elevate

ಹೊಸ ಹೋಂಡಾ ಎಸ್‍ಯುವಿ ಮಾದರಿಯ ವಿನ್ಯಾಸವು ನ್ಯೂ ಜನರೇಷನ್ CR-V ಮತ್ತು WR-V ಎಸ್‍ಯುವಿಗಳಿಂದ ಸ್ಫೂರ್ತಿ ಪಡೆದಿದೆ.ಈ ಹೋಂಡಾ ಎಲಿವೇಟ್ ಎಸ್‍ಯುವಿಯು ಬಾಕ್ಸಿ ವಿನ್ಯಾಸವನ್ನು ಹೊಂದಿದೆ. ಇನ್ನು ಈ ಎಸ್‍ಯುವಿಯಲ್ಲಿ ಮುಂಭಾಗವು ದೊಡ್ಡ ಗ್ರಿಲ್ ಅನ್ನು ಹೊಂದಿದೆ. ಈ ಎಸ್‍ಯುವಿಯು ಎಲ್ಇಡಿ ಹೆಡ್‌ಲೈಟ್‌ಗಳು ಗ್ರಿಲ್‌ನ ಎರಡೂ ಬದಿಯಲ್ಲಿವೆ ಮತ್ತು ದಪ್ಪ ಕ್ರೋಮ್ ಸ್ಟ್ರಿಪ್‌ನಿಂದ ಸಂಪರ್ಕ ಹೊಂದಿವೆ.

ಈ ಎಸ್‌ಯುವಿಯಲ್ಲಿ ಈ 1.5-ಲೀಟರ್ ಎಂಜಿನ್ ಹೊಂದಿರುವ ಟ್ರಾನ್ಸ್‌ಮಿಷನ್ ಆಯ್ಕೆಗಳು 6-ಸ್ಪೀಡ್ ಮ್ಯಾನುವಲ್ ಟ್ರಾನ್ಸ್‌ಮಿಷನ್ ಮತ್ತು ಸಿವಿಟಿ ಗೇರ್‌ಬಾಕ್ಸ್ ಅನ್ನು ಒಳಗೊಂಡಿವೆ. ಹೋಂಡಾ ಪ್ರಕಾರ, ಹೋಂಡಾ ಎಲಿವೇಟ್ ಎಸ್‍ಯುವಿ ಮ್ಯಾನುವಲ್ ರೂಪಾಂತರವು 15.31 ಕಿ.ಮೀ ಮೈಲೇಜ್ ನೀಡಿದರೆ, CVT ರೂಪಾಂತರವು 16.92 ಕಿ.ಮೀ ಮೈಲೇಜ್ ಅನ್ನು ನೀಡುತ್ತದೆ.

More from DriveSpark

Article Published On: Tuesday, September 10, 2024, 18:51 [IST]
English summary
Honda elevate sales in august 2024 details
Read more on honda india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+