ಈ ಹೋಂಡಾ ಕಾರನ್ನು ಯಾವುದೇ ತೆರಿಗೆ ಇಲ್ಲದೆ ಕಡಿಮೆ ಬೆಲೆಗೆ ಖರೀದಿಸಬಹುದು: ಹೇಗೆ ಗೊತ್ತಾ?

ಜನಪ್ರಿಯ ಕಾರು ತಯಾರಕ ಕಂಪನಿಯಾದ ಹೋಂಡಾ ಕಾರ್ಸ್ ಇಂಡಿಯಾ ತನ್ನ ಹೊಸ ಹೋಂಡಾ ಎಲಿವೇಟ್ ಎಸ್‍ಯುವಿಯನ್ನು ಭಾರತಿಯ ಮಾರುಕಟ್ಟೆಯಲ್ಲಿ ತಿಂಗಳುಗಳ ಹಿಂದೆ ಬಿಡುಗಡೆಗೊಳಿಸಿತು. ಈ ಹೊಂಡಾ ಎಲಿವೇಟ್ (Honda Elevate) ಎಸ್‍ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಹ್ಯುಂಡೈ ಕ್ರೆಟಾ, ಕಿಯಾ ಸೆಲ್ಟೋಸ್, ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ ಮತ್ತು ಇತರ ಜನಪ್ರಿಯ ಎಸ್‍ಯುವಿಗಳಿಗೆ ಭಾರೀ ಪೈಪೋಟಿ ನೀಡುತ್ತಿದೆ.

ಹೋಂಡಾ ಕಾರ್ಸ್ ಇಂಡಿಯಾ ಲಿಮಿಟೆಡ್ (HCIL) ಎಲಿವೇಟ್ ಅನ್ನು ಈಗ ಕ್ಯಾಂಟೀನ್ ಸ್ಟೋರ್ಸ್ ಡಿಪಾರ್ಟ್ಮೆಂಟ್ (CSD) ಮೂಲಕ ಮಾರಾಟ ಮಾಡಲಾಗುವುದು ಎಂದು ಘೋಷಿಸಿದೆ . ಇದನ್ನು ಸಶಸ್ತ್ರ ಪಡೆಗಳ ಸಿಬ್ಬಂದಿ, ಮಾಜಿ ಸೈನಿಕರು ಮತ್ತು ಅವರ ಕುಟುಂಬಗಳಿಗೆ ವಿಶೇಷ ಬೆಲೆಯಲ್ಲಿ ನೀಡಲಾಗುವುದು. ಇಲ್ಲಿಯವರೆಗೆ, ಸಿಎಸ್‌ಡಿಯಲ್ಲಿ ಅಮೇಜ್ ಮತ್ತು ಸಿಟಿ ಮಾತ್ರ ನೀಡಲಾಗುತ್ತಿತ್ತು. ಈಗ, ಎಲಿವೇಟ್ ಎಸ್‌ಯುವಿ ಲಭ್ಯತೆಯೊಂದಿಗೆ, ಹೋಂಡಾದ ಪೋರ್ಟ್‌ಫೋಲಿಯೊದ ಕಾರುಗಳನ್ನು ಸಿಎಸ್‌ಡಿ ಔಟ್‌ಲೆಟ್‌ಗಳ ಮೂಲಕ ಮಾರಾಟ ಮಾಡಲಾಗುತ್ತದೆ.

Honda Elevate

ಎಚ್‌ಸಿಐಎಲ್‌ನ ಮಾರ್ಕೆಟಿಂಗ್ ಮತ್ತು ಸೇಲ್ಸ್‌ನ ಉಪಾಧ್ಯಕ್ಷ ಕುನಾಲ್ ಬೆಹ್ಲ್ ಮಾತನಾಡಿ, ನಮ್ಮ ಸಮವಸ್ತ್ರಧಾರಿ ಹೀರೋಗಳಿಗೆ ಹೋಂಡಾ ಎಲಿವೇಟ್ ಲಭ್ಯತೆಯನ್ನು ವಿಸ್ತರಿಸುತ್ತದೆ.ಈ ಉಪಕ್ರಮವು ನಮ್ಮ ರಾಷ್ಟ್ರಕ್ಕೆ ಸೇವೆ ಸಲ್ಲಿಸುವವರಿಗೆ ಉನ್ನತ ಗುಣಮಟ್ಟದ ಹೋಂಡಾ ಉತ್ಪನ್ನಗಳಿಗೆ ಪ್ರವೇಶವನ್ನು ನೀಡುವ ಮೂಲಕ ಅವರನ್ನು ಬೆಂಬಲಿಸುವ ನಮ್ಮ ಬದ್ಧತೆಯನ್ನು ಒತ್ತಿಹೇಳುತ್ತದೆ ಎಂದು ಹೇಳಿದರು.

ಈ ಹೋಂಡಾ ಎಸ್‍ಯುವಿಯು ಪವರ್‌ಟ್ರೇನ್ ವಿಶೇಷಣಗಳು, ಆಕರ್ಷಕ ಒಳಾಂಗಣ ವಿನ್ಯಾಸ ಮತ್ತು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಹೊಂದಿವೆ. ಹೋಂಡಾ ಎಲಿವೇಟ್ ಎಸ್‍ಯುವಿಯ SV, V, VX ಮತ್ತು ZX ಎಂಬಟ್ರಿಮ್ ಹಂತಗಳಲ್ಲಿ ಲಭ್ಯವಿದೆ. ಈ ಎಸ್‍ಯುವಿಯು ಅದರ LED DRL ನೊಂದಿಗೆ ಹೊಸ ಬೋಲ್ಡ್ LED ಹೆಡ್‌ಲೈಟ್‌ಗಳು ಹೈಲೈಟ್ ಆಗಿದೆ. ಈ ಎಸ್‍ಯುವಿಯ ಒಳಭಾಗದಲ್ಲಿ ಡ್ಯುಯಲ್-ಡಿಸ್ ಪ್ಲೇ ಡ್ಯಾಶ್ ಅನ್ನು ಹೊಂದಿದೆ.

Honda Elevate

ಅದು 10.25 ಇಂಚಿನ HD ಇನ್ಫೋಟೈನ್‌ಮೆಂಟ್ ಡಿಸ್ ಪ್ಲೇ ಹೊಂದಿದೆ. ಇದು ವೈರ್‌ಲೆಸ್ ಆಂಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್ಪ್ಲೇ ಕನೆಕ್ಟಿವಿಟಿಯನ್ನು ಹೊಂದಿದೆ ಮತ್ತು 8-ಸ್ಪೀಕರ್ ಸರೌಂಡ್ ಸೌಂಡ್ ಸಿಸ್ಟಮ್‌ಗೆ ಕನೆಕ್ಟ್ ಹೊಂದಿದೆ. ಇದರೊಂದಿಗೆ ಅನಲಾಗ್ ಸ್ಪೀಡೋದ ಪಕ್ಕದಲ್ಲಿ 7-ಇಂಚಿನ ಡಿಜಿಟಲ್ ಡಿಸ್ಪ್ಲೇ, ಸಿಂಗಲ್ ಪೇನ್ ಸನ್‌ರೂಫ್, ಪ್ಲಶ್ ಸೀಟಿಂಗ್ ಮತ್ತು ವೈರ್‌ಲೆಸ್ ಫೋನ್ ಚಾರ್ಜರ್ ಹೊಂದಿದೆ.

ಈ ಹೋಂಡಾ ಎಲಿವೇಟ್ ಎಸ್‍ಯುವಿಯನ್ನು ಹೋಂಡಾ ಆರ್&ಡಿ ಏಷ್ಯಾ ಪೆಸಿಫಿಕ್, ಥೈಲ್ಯಾಂಡ್ ಅಭಿವೃದ್ಧಿಪಡಿಸಿದೆ. ಈ ಎಸ್‍ಯುವಿಯು ಅತ್ಯಾಧುನಿಕ ಸೌಕರ್ಯ ಮತ್ತು ತಂತ್ರಜ್ಞಾನದ ಜೊತೆಗೆ ಸ್ಥಿತಿ ಮತ್ತು ಹೆಚ್ಚು ವಿಶೇಷವಾದ ಖರೀದಿದಾರರನ್ನು ಆಕರ್ಷಿಸಿಸುವಂತೆ ವಿನ್ಯಾಸಗೊಳಿಸಿದೆ. ಹೊಸ ಎಸ್‍ಯುವಿ ಮಾದರಿಯ ವಿನ್ಯಾಸವು ನ್ಯೂ ಜನರೇಷನ್ CR-V ಮತ್ತು WR-V ಎಸ್‍ಯುವಿಗಳಿಂದ ಸ್ಫೂರ್ತಿ ಪಡೆದಿದೆ.

Honda Elevate

ಈ ಹೋಂಡಾ ಎಲಿವೇಟ್ ಎಸ್‍ಯುವಿಯು ಬಾಕ್ಸಿ ವಿನ್ಯಾಸವನ್ನು ಹೊಂದಿದೆ. ಇನ್ನು ಈ ಎಸ್‍ಯುವಿಯಲ್ಲಿ ಮುಂಭಾಗವು ದೊಡ್ಡ ಗ್ರಿಲ್ ಅನ್ನು ಹೊಂದಿದೆ. ಈ ಎಸ್‍ಯುವಿಯು ಎಲ್ಇಡಿ ಹೆಡ್‌ಲೈಟ್‌ಗಳು ಗ್ರಿಲ್‌ನ ಎರಡೂ ಬದಿಯಲ್ಲಿವೆ ಮತ್ತು ದಪ್ಪ ಕ್ರೋಮ್ ಸ್ಟ್ರಿಪ್‌ನಿಂದ ಸಂಪರ್ಕ ಹೊಂದಿವೆ. ಇನ್ನು ಈ ಎಸ್‍ಯುವಿಯ ಫಾಂಗ್ ಲ್ಯಾಂಪ್ ಗಳನ್ನು ಬಂಪರ್‌ನಲ್ಲಿ ಕೆಳಕ್ಕೆ ಇರಿಸಲಾಗಿದೆ.

ಇನ್ನು ಈ ಎಲಿವೇಟ್ ಎಸ್‌ಯುವಿಯಲ್ಲಿ 1.5-ಲೀಟರ್, ಡಿಒಹೆಚ್‌ಸಿ, 4-ಸಿಲಿಂಡರ್, ನ್ಯಾಚುರಲ್ ಆಸ್ಪೈರ್ಡ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 5ನೇ ತಲೆಮಾರಿನ ಹೋಂಡಾ ಸಿಟಿಯಲ್ಲಿ ಲಭ್ಯವಿದೆ. ಹೋಂಡಾ ಎಲಿವೇಟ್ ಎಸ್‍ಯುವಿ ಈ ಎಂಜಿನ್ 6,600rpm ನಲ್ಲಿ 119.4 bhp ಪವರ್ ಮತ್ತು 4,300rpm ನಲ್ಲಿ 145 Nm ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.

Honda Elevate

ಹೋಂಡಾ ಎಲಿವೇಟ್ ಎಸ್‌ಯುವಿಯಲ್ಲಿ ಈ 1.5-ಲೀಟರ್ ಎಂಜಿನ್ ಹೊಂದಿರುವ ಟ್ರಾನ್ಸ್‌ಮಿಷನ್ ಆಯ್ಕೆಗಳು 6-ಸ್ಪೀಡ್ ಮ್ಯಾನುವಲ್ ಟ್ರಾನ್ಸ್‌ಮಿಷನ್ ಮತ್ತು ಸಿವಿಟಿ ಗೇರ್‌ಬಾಕ್ಸ್ ಅನ್ನು ಒಳಗೊಂಡಿವೆ. ಹೋಂಡಾ ಪ್ರಕಾರ, ಹೋಂಡಾ ಎಲಿವೇಟ್ ಎಸ್‍ಯುವಿ ಮ್ಯಾನುವಲ್ ರೂಪಾಂತರವು 15.31 ಕಿ.ಮೀ ಮೈಲೇಜ್ ನೀಡಿದರೆ, CVT ರೂಪಾಂತರವು 16.92 ಕಿ.ಮೀ ಮೈಲೇಜ್ ಅನ್ನು ನೀಡುತ್ತದೆ.

More from DriveSpark

Article Published On: Friday, March 1, 2024, 13:33 [IST]
English summary
Honda elevate suv can now buy from csd outlets details
Read more on ಹೋಂಡಾ honda
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+