12 ಲಕ್ಷದ ಬೆಸ್ಟ್ ಹೋಂಡಾ ಎಸ್‌ಯುವಿ: ಸನ್‌ರೂಫ್, 6 ಏರ್‌ಬ್ಯಾಗ್, 16 ಕಿ.ಮೀ ಮೈಲೇಜ್
ಹೊಸ ಹೋಂಡಾ ಎಲಿವೇಟ್ (Honda Elevate) ಎಸ್‍ಯುವಿ ಭಾರತಿಯ ಮಾರುಕಟ್ಟೆಯಲ್ಲಿ ರೂ.11.91 (ಎಕ್ಸ್ ಶೋರೂಂ ದೆಹಲಿ) ಲಕ್ಷ ಆರಂಭಿಕ ಬೆಲೆಯಲ್ಲಿ ಖರೀದಿಗೆ ಲಭ್ಯವಿದೆ. ಇದರ ಟಾಪ್ ಎಂಡ್ ವೆರಿಯಂಟ್ ಬೆಲೆಯು (ಎಕ್ಸ್ ಶೋರೂಂ ದೆಹಲಿ) ರೂ. 16.51 ಲಕ್ಷವಿದೆ. ಭಾರತದಲ್ಲಿ ಬಿಡುಗಡೆಯಾಗಿ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿರುವ ಈ ಎಸ್‌ಯುವಿಯನ್ನು ಜಪಾನ್‌ನಲ್ಲೂ ಮಾರ್ಚ್ 2024ರಲ್ಲಿ ಡಬ್ಲ್ಯುಆರ್-ವಿ ಎಂಬ ಹೆಸರಿನಲ್ಲಿ ಬಿಡುಗಡೆಗೊಳಿಸಿದೆ. ಭಾರತದಲ್ಲಿ ಈ ಕಾರು ನಿರ್ಮಾಣವಾಗಿ ಜಪಾನ್‌ಗೆ ರಫ್ತು ಮಾಡಲಾಗುತ್ತಿದ್ದು, ಉತ್ತಮ ಬೇಡಿಕೆ ಪಡೆದುಕೊಂಡು ಬಿಡುಗಡೆಯಾದ ಕೇವಲ ಒಂದು ತಿಂಗಳಲ್ಲಿ 13,000 ಬುಕಿಂಗ್‌ಗಳನ್ನು ಗಳಿಸಿ ದಾಖಲೆ ನಿರ್ಮಿಸಿತ್ತು.
ಭಾರತದಲ್ಲಿ ಹೋಂಡಾ ಎಲಿವೇಟ್ ಎಸ್‍ಯುವಿ SV, V, VX ಮತ್ತು ZX ಎಂಬ ನಾಲ್ಕು ಟ್ರಿಮ್ ಹಂತಗಳಲ್ಲಿ ಖರೀದಿಗೆ ಲಭ್ಯವಿದೆ. ಇದು ಕಿಯಾ ಸೆಲ್ಟೋಸ್, ಮಾರುತಿ ಗ್ರ್ಯಾಂಡ್ ವಿಟಾರಾ, ಟೊಯೊಟಾ ಹೈರೈಡರ್, ಫೋಕ್ಸ್‌ವ್ಯಾಗನ್ ಟೈಗುನ್ ಮತ್ತು ಸ್ಕೋಡಾ ಕುಶಾಕ್ ಎಸ್‍ಯುವಿಗಳಿಗೆ ಪೈಪೋಟಿ ನೀಡುತ್ತದೆ.

ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ಲಭ್ಯವಿರುವ ಹೊಚ್ಚ ಹೊಸ ಹೋಂಡಾ ಎಲಿವೇಟ್ ಕಾರು, ಅತ್ಯಾಧುನಿಕ ವಿನ್ಯಾಸವನ್ನು ಹೊಂದಿದ್ದು, ಫೀನಿಕ್ಸ್ ಆರೆಂಜ್ ಪರ್ಲ್, ಅಬ್ಸಿಡಿಯನ್ ಬ್ಲೂ ಪರ್ಲ್, ರೇಡಿಯಂಟ್ ರೆಡ್ ಮೆಟಾಲಿಕ್, ಪ್ಲಾಟಿನಂ ವೈಟ್ ಸೇರಿದಂತೆ ವಿವಿಧ ಬಣ್ಣಗಳೊಂದಿಗೆ ಸಿಗುತ್ತದೆ. ಈ ಎಸ್‌ಯುವಿಯಲ್ಲಿ 5 ಮಂದಿ ಸುಲಭವಾಗಿ ಪ್ರಯಾಣಿಸಬಹುದು.
ಹೊಸ ಎಲಿವೇಟ್ ಎಸ್‌ಯುವಿಯು 1.5-ಲೀಟರ್ ಪೆಟ್ರೋಲ್ ಎಂಜಿನ್ ಆಯ್ಕೆಯಲ್ಲಿ ಮಾತ್ರ ಸಿಗಲಿದ್ದು, 121 ಪಿಎಸ್ ಗರಿಷ್ಠ ಪವರ್ (ಶಕ್ತಿ), 145 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ. ರೂಪಾಂತರಗಳಿಗೆ ಅನುಗುಣವಾಗಿ 6-ಸ್ಪೀಡ್ ಮ್ಯಾನುವಲ್ ಅಥವಾ ಸಿವಿಟಿ ಆಟೋಮೆಟಿಕ್ ಗೇರ್ ಬಾಕ್ಸ್ ಅನ್ನು ಹೊಂದಿದೆ. FWD (ಫ್ರಂಟ್ ವೀಲ್ ಡ್ರೈವ್) ತಂತ್ರಜ್ಞಾನವನ್ನು ಒಳಗೊಂಡಿದ್ದು, 15.31 ರಿಂದ 16.92 ಕೆಎಂಪಿಎಲ್ ಮೈಲೇಜ್ ನೀಡುತ್ತದೆ.

ಈ ಕಾರು ಬೆಲೆಗೆ ತಕ್ಕಂತೆ ಸಾಕಷ್ಟು ಆಕರ್ಷಕ ವೈಶಿಷ್ಟ್ಯಗಳನ್ನು ಪಡೆದಿದೆ. ಇದು 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7-ಇಂಚಿನ ಸೆಮಿ-ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಆಂಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್ ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ವೈರ್‌ಲೆಸ್ ಫೋನ್ ಚಾರ್ಜರ್, ಸನ್‌ರೂಫ್ ಮತ್ತು 458 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್ ಅನ್ನು ಹೊಂದಿದೆ.
ಇವಿಷ್ಟೇ ಅಲ್ಲದೇ 6 ಸ್ಪೀಕರ್ ಆಡಿಯೊ ಸಿಸ್ಟಮ್, ಲೇನ್ ವಾಚ್ ಕ್ಯಾಮೆರಾ ಮತ್ತು ಒನ್ ಟಚ್ ಎಲೆಕ್ಟ್ರಿಕ್ ಸನ್‌ರೂಫ್, ಹೋಂಡಾ ಕನೆಕ್ಟ್ ಜೊತೆಗೆ 8 - ಸ್ಪೀಕರ್ ಆಡಿಯೊ ಸಿಸ್ಟಮ್, ಸ್ಟೀರಿಂಗ್ ಮೌಂಟೆಡ್ ಆಡಿಯೊ ಮತ್ತು HFT ಸ್ವಿಚ್‌ಗಳು, ಮಲ್ಟಿ - ಆಂಗಲ್ ರಿಯರ್ ವ್ಯೂ ಕ್ಯಾಮೆರಾ ಮತ್ತು ಇತರ ಫೀಚರ್ಸ್ ಗಳನ್ನು ಹೊಂದಿದೆ.
ಹೋಂಡಾ ಎಲಿವೇಟ್ ಎಸ್‌ಯುವಿ ಸುರಕ್ಷತೆಗೂ ಹೆಸರುವಾಸಿಯಾಗಿದೆ. 6 ಏರ್‌ಬ್ಯಾಗ್, ವೆಹಿಕಲ್ ಸ್ಟೆಬಿಲಿಟಿ ಅಸಿಸ್ಟ್, ರೇರ್ ಪಾರ್ಕಿಂಗ್ ಕ್ಯಾಮೆರಾ, ಅಡಾಪ್ಟಿವ್ ಕ್ರೂಸ್ ಕಂಟ್ರೋಲ್ ನಂತಹ ADAS (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಈ ಕಾರಿನ ಆನ್-ರೋಡ್ ಬೆಲೆ ರಾಜ್ಯದಿಂದ ರಾಜ್ಯಕ್ಕೆ ಬೇರೆಯಿರಲಿದ್ದು, ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂಗೆ ಭೇಟಿ ನೀಡಿರಿ.
ಹೊಸ ಹೋಂಡಾ ಎಲಿವೇಟ್ 1.5-ಲೀಟರ್, ಡಿಒಹೆಚ್‌ಸಿ, 4-ಸಿಲಿಂಡರ್, ನ್ಯಾಚುರಲ್ ಆಸ್ಪೈರ್ಡ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಮೇಲೆ ತಿಳಿಸಿದಂತೆ ಈ ಎಂಜಿನ್ 5ನೇ ತಲೆಮಾರಿನ ಹೋಂಡಾ ಸಿಟಿಯಲ್ಲೂ ಲಭ್ಯವಿದೆ. ಹೋಂಡಾ ಪ್ರಕಾರ, ಹೋಂಡಾ ಎಲಿವೇಟ್ ಎಸ್‍ಯುವಿ ಮ್ಯಾನುವಲ್ ರೂಪಾಂತರವು 15.31 ಕಿ.ಮೀ ಮೈಲೇಜ್ ನೀಡಿದರೆ, CVT ರೂಪಾಂತರವು 16.92 ಕಿ.ಮೀ ಮೈಲೇಜ್ ಅನ್ನು ನೀಡುತ್ತದೆ.


Click it and Unblock the Notifications








