Honda: 90,000ಕ್ಕೂ ಹೆಚ್ಚು ಕಾರುಗಳನ್ನು ಹಿಂಪಡೆಯಲು ಮುಂದಾದ ಹೋಂಡಾ.. ಕಾರಣವೇನು?

ಹೋಂಡಾ ಕಾರ್ಸ್ ಇಂಡಿಯಾ (Honda Cars India - HCIL), ಪ್ರಮುಖ ವಾಹನ ತಯಾರಕ ಕಂಪನಿಯಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಹೊಂದಿರುವ ವಿವಿಧ ಕಾರುಗಳನ್ನು ಮಾರಾಟ ಮಾಡುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ಸದ್ಯ ಕಂಪನಿಯ ಹಲವು ಕಾರುಗಳಲ್ಲಿ ಸಂಭಾವ್ಯ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಆ ಸಮಸ್ಯೆ ಬಗೆಹರಿಸಲು ದೊಡ್ಡ ಪ್ರಮಾಣದಲ್ಲಿ ಕಾರುಗಳನ್ನು ಹಿಂಪಡೆಯಲು ನಿರ್ಧಾರ ಮಾಡಿದೆ. ಇಲ್ಲಿದೆ ಹೆಚ್ಚಿನ ಮಾಹಿತಿ.

ಹೋಂಡಾ ಕಂಪನಿಯು ಆಗಸ್ಟ್ 8, 2017 ಹಾಗೂ ಜೂನ್ 30, 2018ರ ನಡುವೆ ತಯಾರಿಸಿದ ಅಮೇಜ್ (Amaze), ಬ್ರಿಯೋ (Brio), ಬಿಆರ್-ವಿ (BR-V), ಡಬ್ಲ್ಯೂಆರ್-ವಿ (WR-V), ಸಿಟಿ (City) ಹಾಗೂ ಜಾಝ್ (Jazz) ಕಾರುಗಳ 90,000ಕ್ಕೂ ಯುನಿಟ್‌ಗಳನ್ನು ವಾಪಾಸ್ ಪಡೆಯಲಿದೆ. ಈ ಕಾರುಗಳ ಫ್ಯುಯೆಲ್ (ಇಂಧನ) ಪಂಪ್‌ನಲ್ಲಿ ಸ್ವಲ್ಪ ತೊಂದರೆಯಾಗಿದೆ. ಇದು ಹೀಗೆ ಮುಂದುವರಿದರೆ, ಎಂಜಿನ್‌ ಚಾಲು ಆಗುವುದರಲ್ಲಿ ಸಮಸ್ಯೆಯಾಗಬಹುದು ಎಂದು ತಿಳಿದುಬಂದಿದೆ.

Honda Recall More Than 90000 Cars In India Check Details

ದೇಶಾದ್ಯಂತ ನವೆಂಬರ್ 5, 2024 ರಿಂದ ಕಂಪನಿಯ ಸಿಬ್ಬಂದಿಯೇ ಗ್ರಾಹಕರನ್ನು ಸಂಪರ್ಕಿಸಲಿದ್ದು, ಯಾವುದೇ ಶುಲ್ಕ ವಿಧಿಸದೆ ದೋಷಪೂರಿತ ಭಾಗವನ್ನು ಉಚಿತವಾಗಿ ಬದಲಾವಣೆ ಮಾಡಿಕೊಡಲಿದೆ. ನಿಮ್ಮ ಕಾರು ಸಮಸ್ಯೆಗೆ ಒಳಗಾಗಿದೆಯೇ ಎಂದು ತಿಳಿಯಲು ಹೋಂಡಾದ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ, ಕಾರಿನ ವಿಐಎನ್ ಸಂಖ್ಯೆಯನ್ನು ನಮೂದಿಸಿ ಪರಿಶೀಲನೆ ಮಾಡಬಹುದು.

ಪ್ರಸ್ತುತ ದೇಶೀಯ ಮಾರುಕಟ್ಟೆಯಲ್ಲಿ ಹೋಂಡಾ ಕಂಪನಿಯು ವಿವಿಧ ಕಾರುಗಳನ್ನು ಮಾರಾಟ ಮಾಡುತ್ತಿದೆ. ಅವುಗಳಲ್ಲಿ 'ಸಿಟಿ' ಸೆಡಾನ್ ಹೆಚ್ಚು ಜನಪ್ರಿಯವಾಗಿದ್ದು, ರೂ.11.82 ರಿಂದ ರೂ.16.35 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. 1.5-ಲೀಟರ್ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದ್ದು, 17.8 ರಿಂದ 18.4 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

Honda Recall More Than 90000 Cars In India Check Details

ಈ ಹೋಂಡಾ ಸಿಟಿ ಕಾರಿನಲ್ಲಿ 5 ಮಂದಿ ಪ್ರಯಾಣ ನಡೆಸಬಹುದು. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (8-ಇಂಚು), ವೈರ್‌ಲೆಸ್ ಫೋನ್ ಚಾರ್ಜಿಂಗ್, ಸಿಂಗಲ್-ಪೇನ್ ಸನ್‌ರೂಫ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಅನ್ನು ಹೊಂದಿದೆ.

ಹೋಂಡಾ ಅಮೇಜ್ (Honda Amaze) ಬಗ್ಗೆ ಹೇಳುವುದಾದರೆ, ಈ ಸೆಡಾನ್ ರೂ.7.20 ರಿಂದ ರೂ.9.96 ಲಕ್ಷ ಎಕ್ಸ್ ಶೋರೂಂ ದರವನ್ನು ಪಡೆದಿದೆ. 2-ಲೀಟರ್ ಸಾಮರ್ಥ್ಯದ ಪೆಟ್ರೋಲ್ ಎಂಜಿನ್ ಮತ್ತು ಸಿವಿಟಿ ಗೇರ್‌ಬಾಕ್ಸ್‌ನ್ನು ಹೊಂದಿದೆ. 18.3 ರಿಂದ 18.6 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

ಈ ಕಾರಿನಲ್ಲಿ 5 ಜನರು ಓಡಾಟ ನಡೆಸಬಹುದು. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (7-ಇಂಚು), ಆಟೋ ಎಲ್ಇಡಿ ಪ್ರೊಜೆಕ್ಟರ್ ಹೆಡ್‌ಲೈಟ್‌ಗಳು, ಕ್ರೂಸ್ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ ಡುಯಲ್ ಏರ್‌ಬ್ಯಾಗ್‌, ಎಬಿಎಸ್ (ಆಂಟಿ ಲಾಕ್ ಬ್ರೇಕಿಂಗ್ ಸಿಸ್ಟಮ್) ಮತ್ತು ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಅನ್ನು ಹೊಂದಿದೆ.

ಹೋಂಡಾ ಎಲಿವೇಟ್ (Honda Elevate) ಕುರಿತಂತೆ ಹೇಳುವುದಾದರೆ, ಇದೊಂದು ಎಸ್‌ಯುವಿಯಾಗಿದೆ. ರೂ.11.69 ರಿಂದ ರೂ.16.71 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 1.5-ಲೀಟರ್ ಪೆಟ್ರೋಲ್ ಎಂಜಿನ್ ಹಾಗೂ ಸಿವಿಟಿ ಗೇರ್‌ಬಾಕ್ಸ್‌ನ್ನು ಪಡೆದಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ಸೆಮಿ-ಡಿಜಿಟಲ್ ಡ್ರೈವರ್‌ ಡಿಸ್‌ಪ್ಲೇ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Monday, October 28, 2024, 8:53 [IST]
English summary
Honda recall 90000 above cars india check details
Read more on honda india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+