Hyundai: 2 ಪ್ರಖ್ಯಾತ ಕಾರುಗಳು ಮಾರಾಟಕ್ಕೆ ಬಂದಿವೆ: ನಿಮ್ಮ ಕುಟುಂಬಕ್ಕೆ ಸೂಕ್ತ, 7 ಲಕ್ಷ ಆರಂಭಿಕ ಬೆಲೆ!
ಭಾರತದಲ್ಲಿ ಹ್ಯುಂಡೈ ಮೋಟಾರ್ ಇಂಡಿಯಾ (Hyundai Motor India) ಪ್ರಮುಖ ವಾಹನ ತಯಾರಕ ಕಂಪನಿಯಾಗಿ ಗುರುತಿಸಿಕೊಂಡಿದೆ. ದೇಶೀಯ ಮಾರುಕಟ್ಟೆಯಲ್ಲಿ ಕ್ರೆಟಾ, ವೆನ್ಯೂ ಒಳಗೊಂಡಂತೆ ಹಲವು ಕಾರುಗಳನ್ನು ಮಾರಾಟಗೊಳಿಸುತ್ತದೆ. ಇವುಗಳು ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದಿದ್ದು, ದೊಡ್ಡ ಸಂಖ್ಯೆಯಲ್ಲಿ ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ಸದ್ಯ ಹ್ಯುಂಡೈ ಕಂಪನಿಯು ಕೆಲವೇ ದಿನಗಳ ಅಂತರದಲ್ಲಿ ಎರಡು ಹೊಸ ಕಾರುಗಳನ್ನು ಮಾರಾಟಕ್ಕೆ ತಂದಿದೆ. ನವೀಕರಿಸಿದ ಅಲ್ಕಾಜರ್ (Alcazar Facelift) ಎಸ್‌ಯುವಿಯನ್ನು ಬಿಡುಗಡೆಗೊಳಿಸಿದ್ದರೆ, ಎಕ್ಸ್‌ಟರ್ (Exter) ಕಾರಿಗೆ ಹೊಸ ರೂಪಾಂತರಗಳನ್ನು ಪರಿಚಯಿಸಿದೆ.
ಮೊದಲಿಗೆ ನವೀಕರಿಸಿದ ಹ್ಯುಂಡೈ ಅಲ್ಕಾಜರ್ (Hyundai Alcazar Facelift) ಬಗ್ಗೆ ಮಾತನಾಡೋಣ. ಇದು ಫ್ಯಾಮಿಲಿ ಎಸ್‌ಯುವಿಯಾಗಿದ್ದು, 6/7 ಆಸನ ಆಯ್ಕೆ ವ್ಯವಸ್ಥೆಯಲ್ಲಿ ಲಭ್ಯವಿದೆ. ರೂ.14.99 ಲಕ್ಷದಿಂದ ರೂ.21.40 ಲಕ್ಷ (ಎಕ್ಸ್ ಶೋರೂಂ) ದರವನ್ನು ಪಡೆದಿದೆ. ಪ್ಲಾಟಿನಂ, ಸಿಗ್ನೇಚರ್, ಪ್ರೆಸ್ಟೀಜ್ ಹಾಗೂ ಎಕ್ಸಿಕ್ಯೂಟಿವ್ ಎಂಬ ರೂಪಾಂತರಗಳನ್ನು (ವೇರಿಯೆಂಟ್) ಒಳಗೊಂಡಿದೆ.

ಈ ಹ್ಯುಂಡೈ ಅಲ್ಕಾಜರ್ 1.5-ಲೀಟರ್ ಜಿಡಿಟಿ ಟರ್ಬೊ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಹೊಂದಿದೆ. ರೂಪಾಂತರಗಳಿಗೆ ಅನುಗುಣವಾಗಿ 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮೆಟಿಕ್ ಮತ್ತು 7-ಸ್ಪೀಡ್ ಡಿಸಿಟಿ (ಡುಯಲ್ ಕ್ಲಚ್ ಟ್ರಾಸ್ಮಿಷನ್) ಗೇರ್‌ಬಾಕ್ಸ್‌ನ್ನು ಹೊಂದಿದೆ. 17.5 ರಿಂದ 20.4 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.
ನೂತನ ಹ್ಯುಂಡೈ ಅಲ್ಕಾಜರ್ ಕಾರು ಅಟ್ಲಾಸ್ ವೈಟ್, ಅಬಿಸ್ ಬ್ಲ್ಯಾಕ್ ಪರ್ಲ್, ರೇಂಜರ್ ಖಾಕಿ, ಫಿಯರಿ ರೆಡ್, ಸ್ಟಾರಿ ನೈಟ್, ಟೈಟಾನ್ ಗ್ರೇ ಮ್ಯಾಟ್ ಸೇರಿದಂತೆ 9 ಬಣ್ಣಗಳೊಂದಿಗೂ ಲಭ್ಯವಿದೆ. ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಇನ್ಸ್ಟ್ರುಮೆಂಟ್ ಕ್ಲಸ್ಟರ್‌ಗಾಗಿ 10.25-ಇಂಚಿನ ಡಿಸ್ಪ್ಲೇಗಳು, ಪನೊರೊಮಿಕ್ ಸನ್‌ರೂಫ್, ಡುಯಲ್-ಝೋನ್ ಕ್ಲೇಮೇಟ್ ಕಂಟ್ರೋಲ್, 360-ಡಿಗ್ರಿ ಕ್ಯಾಮೆರಾ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.

ಹ್ಯುಂಡೈ ಎಕ್ಸ್‌ಟರ್ (Hyundai Exter) ಕಾರಿನ ಬಗ್ಗೆ ಹೇಳುವುದಾದರೆ, ಇದರ ಎಸ್(ಒ) ಪ್ಲಸ್ ಎಂಟಿ ಹಾಗೂ ಎಸ್ ಪ್ಲಸ್ ಎಎಂಟಿ ಎಂಬ ಹೆಸರಿನ ಎರಡು ಹೊಸ ರೂಪಾಂತರಗಳನ್ನು ಬಿಡುಗಡೆಗೊಳಿಸಲಾಗಿದೆ. ವಿಶೇಷವಾಗಿ ಎಲೆಕ್ಟ್ರಿಕ್ ಸನ್‌ರೂಫ್ ಪಡೆದಿದ್ದು, ಕ್ರಮವಾಗಿ ರೂ.7.86 ಲಕ್ಷ ಮತ್ತು 8.43 ಲಕ್ಷ (ಎಕ್ಸ್ ಶೋರೂಂ) ಬೆಲೆಯಲ್ಲಿ ಖರೀದಿಗೆ ದೊರೆಯುತ್ತವೆ. ಜೊತೆಗೆ 5 ಆಸನಗಳನ್ನು ಒಳಗೊಂಡಿವೆ.
ಈ ಹ್ಯುಂಡೈ ಎಕ್ಸ್‌ಟರ್ ಎಸ್‌ಯುವಿಯ ನೂತನ ರೂಪಾಂತರಗಳು (ವೇರಿಯೆಂಟ್) 1.2 ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ 4-ಸಿಲಿಂಡರ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 82 ಬಿಹೆಚ್‌ಪಿ ಗರಿಷ್ಠ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 113.8 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತವೆ. 5-ಸ್ಪೀಡ್ ಮ್ಯಾನುವಲ್ ಟ್ರಾಸ್ಮಿಷನ್/ 5-ಸ್ಪೀಡ್ ಆಟೋಮೆಟಿಕ್ ಟ್ರಾಸ್ಮಿಷನ್ (ಗೇರ್‌ಬಾಕ್ಸ್) ಆಯ್ಕೆಯನ್ನು ಪಡೆದಿವೆ.
ಹ್ಯುಂಡೈ ಎಕ್ಸ್‌ಟರ್ ಹೊಚ್ಚ ಹೊಸ ರೂಪಾಂತರಗಳು 8.0-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ರೇರ್ ಎಸಿ ವೆಂಟ್‌ಗಳು ಮತ್ತು ಪವರ್ ವಿಂಡೋಗಳು ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿವೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು, ಮತ್ತು 3-ಪಾಯಿಂಟ್ ಸೀಟ್‌ಬೆಲ್ಟ್‌ಗಳನ್ನು ಹೊಂದಿವೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








