Hyundai: ಹೊಸ ಹ್ಯುಂಡೈ ಫ್ಯಾಮಿಲಿ ಕಾರಿನ ಬುಕ್ಕಿಂಗ್ ಶುರು.. 7 ಸೀಟರ್.. ಬೆಲೆ ಎಷ್ಟಿರಲಿದೆ?
ಹ್ಯುಂಡೈ ಮೋಟಾರ್ ಇಂಡಿಯಾ (Hyundai Motor India) ಜನಪ್ರಿಯ ವಾಹನ ತಯಾರಕ ಕಂಪನಿಯಾಗಿ ಗುರುತಿಸಿಕೊಂಡಿದೆ. ದೇಶೀಯ ಮಾರುಕಟ್ಟೆಯಲ್ಲಿ ಎಕ್ಸ್‌ಟರ್, ಕ್ರೆಟಾ, ವೆನ್ಯೂ ಹಾಗೂ ಗ್ರಾಂಡ್ ಐ10 ನಿಯೋಸ್ ಸೇರಿದಂತೆ ವಿವಿಧ ಕಾರುಗಳನ್ನು ಮಾರಾಟ ಮಾಡುತ್ತಿದೆ. ಇವುಗಳು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯವನ್ನು ಪಡೆದುಕೊಂಡಿದ್ದು, ಖರೀದಿದಾರರು ಕೂಡ ಮುಗಿಬಿದ್ದು ಮನೆಗೆ ತರುತ್ತಿದ್ದಾರೆ. ಕಂಪನಿಯು ಸೆಪ್ಟೆಂಬರ್ 9ರಂದು ಹೊಚ್ಚ ಹೊಸ ನವೀಕರಿಸಿದ ಅಲ್ಕಾಜರ್ (Facelift Alcazar) ಫ್ಯಾಮಿಲಿ ಎಸ್‌ಯುವಿ ಬಿಡುಗಡೆಗೆ ದಿನಾಂಕ ನಿಗದಿಪಡಿಸಿದೆ.
ಸದ್ಯ ನೂತನ ಹ್ಯುಂಡೈ ಅಲ್ಕಾಜರ್ ಫೇಸ್‌ಲಿಫ್ಟ್ (Hyundai Alcazar Facelift) ಎಸ್‌ಯುವಿ ಬುಕ್ಕಿಂಗ್ ಶುರುವಾಗಿದೆ. ಆಸಕ್ತ ಗ್ರಾಹಕರು, ಕಂಪನಿಯ ಅಧಿಕೃತ ವೆಬ್‌ಸೈಟ್ ಅಥವಾ ಸಮೀಪದ ಶೋರೂಂಗೆ ಭೇಟಿ ನೀಡಿ, ರೂ.25,000 ಮುಂಗಡ ಹಣವನ್ನು ಪಾವತಿಸುವ ಮೂಲಕ ಕಾಯ್ದಿರಿಸಬಹುದು. ಈ ಹೊಸ ಕಾರು ಸಹ ಈಗಿರುವ ಅಲ್ಕಾಜರ್‌ನಂತೆ 6 - 7 ಆಸನ ಆಯ್ಕೆಯಲ್ಲಿ ದೊರೆಯಲಿದೆ.

ಹ್ಯುಂಡೈ ಅಲ್ಕಾಜರ್ ಫೇಸ್‌ಲಿಫ್ಟ್ (2024) ಹೊರಭಾಗದಲ್ಲಿ ಅತ್ಯಾಧುನಿಕವಾದ ವಿನ್ಯಾಸ (ಡಿಸೈನ್) ಹೊಂದಿದೆ. ಮುಂಭಾಗ (ಫ್ರಂಟ್) ಹೊಸದಾದ ಕ್ವಾಡ್-ಬೀಮ್ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಡಾರ್ಕ್ ಕ್ರೋಮ್ ಗ್ರಿಲ್, ಹೆಚ್-ಆಕಾರಕ್ಕೆ ಹೋಲುವ ಎಲ್ಇಡಿ ಡಿಆರ್‌ಎಲ್ ಪಡೆದಿದೆ. ಹಿಂಭಾಗದ (ರೇರ್) ವಿಸ್ಯಾಸವು ಉತ್ತಮವಾಗಿದ್ದು, ನವೀನವಾಗಿರುವ ಕನೆಕ್ಟೆಡ್ ಎಲ್‌ಇಡಿ ಟೈಲ್‌ಲ್ಯಾಂಪ್‌ಗಳು, ಸ್ಪಾಯ್ಲರ್‌ನೊಂದಿಗೆ ಇಂಟಿಗ್ರೇಟೆಡ್ ಸ್ಟಾಪ್ ಲ್ಯಾಂಪ್‌ನ್ನು ಒಳಗೊಂಡಿದೆ.
ಇದರೊಟ್ಟಿಗೆ ನೂತನವಾಗಿರುವ ಫ್ರಂಟ್ - ರೇರ್ ಬಂಪರ್‌ಗಳು ಮತ್ತು ಸ್ಕಿಡ್ ಪ್ಲೇಟ್‌ಗಳನ್ನು ಪಡೆದಿದೆ. 18-ಇಂಚಿನ ಡೈಮಂಡ್-ಕಟ್ ಅಲಾಯ್ ವೀಲ್‌ಗಳನ್ನು ಒಳಗೊಂಡಿದೆ. ಈ ಕಾರು ಎಕ್ಸಿಕ್ಯುಟಿವ್, ಪ್ರೆಸ್ಟೀಜ್, ಪ್ಲಾಟಿನಂ ಹಾಗೂ ಸಿಗ್ನೇಚರ್ ಎಂಬ 4 ರೂಪಾಂತರದ ಆಯ್ಕೆಯಲ್ಲಿಯೂ ಲಭ್ಯವಿದೆ. ರೋಬಸ್ಟ್ ಎಮರಾಲ್ಡ್ ಮ್ಯಾಟ್ ಸೇರಿದಂತೆ 9 ಆಕರ್ಷಕ ಬಣ್ಣಗಳನ್ನು ಪಡೆದಿದೆ.

ಹೊಸ ಹ್ಯುಂಡೈ ಅಲ್ಕಾಜರ್ ಫೇಸ್‌ಲಿಫ್ಟ್ ಕಾರು ಪ್ರಸ್ತುತವಿರುವ ಮಾದರಿಯಂತೆಯೇ (ಮಾಡೆಲ್) ಪವರ್‌ಟ್ರೇನ್ ಆಯ್ಕೆಯನ್ನು ಹೊಂದಿದೆ. ನೂತನ ಎಸ್‌ಯುವಿ ಕೂಡ 1.5-ಲೀಟರ್ ಟರ್ಬೊ ಜಿಡಿಐ ಪೆಟ್ರೋಲ್ ಮತ್ತು 1.5-ಲೀಟರ್ ಸಿಆರ್‌ಡಿಐ ಡೀಸೆಲ್ ಎಂಜಿನ್‌ನ್ನು ಪಡೆದಿದ್ದು, ರೂಪಾಂತರಗಳಿಗೆ ಅನುಗುಣವಾಗಿ 6-ಸ್ಪೀಡ್ ಮ್ಯಾನುವಲ್/ 6-ಸ್ಪೀಡ್ ಆಟೋಮೆಟಿಕ್ ಹಾಗೂ 7-ಸ್ಪೀಡ್ ಡಿಸಿಟಿ (ಡುಯಲ್ ಕ್ಲಚ್ ಆಟೋಮೆಟಿಕ್) ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ ಎಂದು ವರದಿಯಾಗಿದೆ.
ಹ್ಯುಂಡೈ ಅಲ್ಕಾಜರ್ ಫೇಸ್‌ಲಿಫ್ಟ್ (Hyundai Alcazar Facelift) ಎಸ್‌ಯುವಿಯ ಒಳಭಾಗದ ವಿನ್ಯಾಸ ಹಾಗೂ ವೈಶಿಷ್ಟ್ಯಗಳ ಬಗ್ಗೆ ಕಂಪನಿಯು ಯಾವುದೇ ಮಾಹಿತಿ ಬಹಿರಂಗಪಡಿಸಿಲ್ಲ. ಆದಾಗ್ಯೂ 70ಕ್ಕೂ ಹೆಚ್ಚು ಕನೆಕ್ಟೆಡ್ ಕಾರ್ ಟೆಕ್ ಮತ್ತು ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಅನ್ನು ಹೊಂದಿರಲಿದೆ ಎಂಬ ವಿವರಗಳು ಲಭ್ಯವಾಗಿವೆ.

ನೂತನ ಹ್ಯುಂಡೈ ಅಲ್ಕಾಜರ್ ಫೇಸ್‌ಲಿಫ್ಟ್ ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ಸಿಗಲಿದೆ ಎಂದು ಅಂದಾಜಿಸಲಾಗಿದ್ದು, ರೂ.17 ಲಕ್ಷದಿಂದ ರೂ 23 ಲಕ್ಷ ಎಕ್ಸ್ ಶೋರೂಂ ದರವನ್ನು ಹೊಂದಿರಬಹುದು ಎನ್ನಲಾಗಿದೆ. ಈ ಕಾರಿಗೆ ಮಹೀಂದ್ರಾ ಸ್ಕಾರ್ಪಿಯೋ-ಎನ್, ಟಾಟಾ ಸಫಾರಿ ಹಾಗೂ ಎಂಜಿ ಹೆಕ್ಟರ್ ಪ್ಲಸ್‌ಗಳು ಪ್ರಬಲ ಪ್ರತಿಸ್ಪರ್ಧಿಯಾಗಿವೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications