Hyundai: ಹೊಚ್ಚ ಹೊಸ ಹ್ಯುಂಡೈ ಕಾರು ಬಿಡುಗಡೆಗೆ ಮುಹೂರ್ತ ನಿಗದಿ, 7 ಸೀಟರ್.. ಬೆಲೆ ಎಷ್ಟು?
ಹ್ಯುಂಡೈ ಮೋಟಾರ್ ಇಂಡಿಯಾ (Hyundai Motor India) ಪ್ರಮುಖ ವಾಹನ ತಯಾರಕ ಸಂಸ್ಥೆಯಾಗಿ ಗುರುತಿಸಿಕೊಂಡಿದೆ. ದೇಶೀಯ ಮಾರುಕಟ್ಟೆಯಲ್ಲಿ ನವೀನ ಶೈಲಿಯ ವಿನ್ಯಾಸ ಹಾಗೂ ಆಕರ್ಷಕ ವೈಶಿಷ್ಟ್ಯಗಳನ್ನು ಪಡೆದುಕೊಂಡಿರುವ ವಿವಿಧ ಕಾರುಗಳನ್ನು ಮಾರಾಟ ಮಾಡುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ಸದ್ಯ ಕಂಪನಿಯು ನವೀಕರಿಸಿದ ಅಲ್ಕಾಜರ್ (Facelift Alcazar) ಎಸ್‌ಯುವಿಯನ್ನು ಬಿಡುಗಡೆಗೊಳಿಸಲು ದಿನಾಂಕ ನಿಗದಿಪಡಿಸಿದೆ. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ಭಾರತದ ಮಾರುಕಟ್ಟೆಯಲ್ಲಿ ನೂತನ ಹ್ಯುಂಡೈ ಅಲ್ಕಾಜರ್ ಫೇಸ್‌ಲಿಫ್ಟ್ (Hyundai Alcazar Facelift) ಸೆಪ್ಟೆಂಬರ್ 9ರಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಈ ಹೊಸ ಕಾರಿನ ವಿನ್ಯಾಸದಲ್ಲಿ (ಡಿಸೈನ್) ಒಂದಷ್ಟು ಬದಲಾವಣೆಗಳು ಇರಲಿದ್ದು, ಜನಪ್ರಿಯ 'ಕ್ರೆಟಾ' ಎಸ್‌ಯುವಿಗೆ ಹೋಲಿಕೆಯಾಗಲಿದೆ ಎನ್ನಲಾಗಿದೆ. ಹೊರಭಾಗದಲ್ಲಿ ನವೀಕೃತ ಗ್ರಿಲ್, ಸ್ಪ್ಲಿಟ್ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಮರುವಿನ್ಯಾಸಗೊಳಿಸಲಾದ ಎಲ್ಇಡಿ ಟೈಲ್‌ಲೈಟ್‌ಗಳು ಮತ್ತು ಅಲಾಯ್ ವೀಲ್‌ಗಳನ್ನು ಪಡೆದುಕೊಂಡಿರಲಿದೆ ಎಂದು ತಿಳಿದುಬಂದಿದೆ.

ಈಗಿರುವ ಅಲ್ಕಾಜರ್ ಕಾರಿನಂತೆಯೇ ಹೊಸ ಫೇಸ್‌ಲಿಫ್ಟ್ ಮಾದರಿಯು (ಮಾಡೆಲ್), ಎರಡು ಪವರ್‌ಟ್ರೇನ್ ಆಯ್ಕೆಯಲ್ಲಿ ಲಭ್ಯವಾಗಬಹುದು. 1.5-ಲೀಟರ್ ಟರ್ಬೊ ಪೆಟ್ರೋಲ್ ಹಾಗೂ 1.5-ಲೀಟರ್ ಡೀಸೆಲ್ ಎಂಜಿನ್‌ನ್ನು ಹೊಂದಿರಬಹುದು. ಜೊತೆಗೆ 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮೆಟಿಕ್ ಹಾಗೂ 7-ಸ್ಪೀಡ್ ಡಿಸಿಟಿ (ಡುಯಲ್ ಕ್ಲಚ್ ಆಟೋಮೆಟಿಕ್) ಗೇರ್‌ಬಾಕ್ಸ್‌ನ್ನು ಪಡೆದುಕೊಂಡಿರಬಹುದು ಎಂದು ಹೇಳಲಾಗಿದೆ.
ಹೊಸ ಹ್ಯುಂಡೈ ಅಲ್ಕಾಜರ್ ಫೇಸ್‌ಲಿಫ್ಟ್ ಸಹ 6, 7 ಆಸನದೊಂದಿಗೆ ಲಭ್ಯವಾಗಲಿದ್ದು, ಕ್ರೆಟಾದಂತೆಯೇ ವೈಶಿಷ್ಟ್ಯಗಳನ್ನು ಹೊಂದಿರುವ ಸಾಧ್ಯತೆಯೂ ಹೆಚ್ಚಿದೆ. ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್‌ಗಾಗಿ ಡುಯಲ್ 10.25-ಇಂಚಿನ ಸ್ಕ್ರೀನ್, ಡುಯಲ್-ಝೋನ್ ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಮತ್ತು ಪನೋರಮಿಕ್ ಸನ್‌ರೂಫ್‌ನ್ನು ಒಳಗೊಂಡಿರಬಹುದು ಎನ್ನಲಾಗಿದೆ.

ಈ ನೂತನ ಕಾರು ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸಲಿದೆ. ಅದಕ್ಕಾಗಿ 6-ಏರ್‌ಬ್ಯಾಗ್, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ವಿಎಸ್ಎಂ (ವೆಹಿಕಲ್ ಸ್ಟೆಬಿಲಿಟಿ ಮ್ಯಾನೇಜ್‍ಮೆಂಟ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಹಿಲ್-ಸ್ಟಾರ್ಟ್ ಅಸಿಸ್ಟ್ ಕಂಟ್ರೋಲ್, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್) ಮತ್ತು ಆಲ್-ವೀಲ್ ಡಿಸ್ಕ್ ಬ್ರೇಕ್‌ಗಳನ್ನು ಹೊಂದಿರುವ ನಿರೀಕ್ಷೆಯಿದೆ.
ಹೊಸ ಹ್ಯುಂಡೈ ಅಲ್ಕಾಜರ್ ಫೇಸ್‌ಲಿಫ್ಟ್ ಫ್ಯಾಮಿಲಿ ಕಾರಾಗಿರುವುದರಿಂದ ಕೊಂಚ ಹೆಚ್ಚಿನ ದರವನ್ನು ಹೊಂದಿರಬಹುದು ಎಂದು ಅಂದಾಜಿಸಲಾಗಿದೆ. ಸರಿ ಸುಮಾರು 17 ಲಕ್ಷ (ಎಕ್ಸ್ ಶೋರೂಂ) ಆರಂಭಿಕ ದರವನ್ನು ಒಳಗೊಂಡಿರಬಹುದು ಎಂದು ಹೇಳಲಾಗಿದೆ. ಪ್ರಸ್ತುತ ಖರೀದಿಗೆ ಲಭ್ಯವಿರುವ ಅಲ್ಕಾಜರ್ ಕಾರು ರೂ.16.77 ಲಕ್ಷದಿಂದ ರೂ.21.28 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ.
ಮುಂಬರಲಿರುವ ಅಲ್ಕಾಜರ್ ಫೇಸ್‌ಲಿಫ್ಟ್ ಎಸ್‌ಯುವಿಗೆ ಟಾಟಾ ಸಫಾರಿ ಹಾಗೂ ಎಂಜಿ ಹೆಕ್ಟರ್ ಪ್ಲಸ್ ಕಾರುಗಳು ಪ್ರಬಲವಾದ ಪ್ರತಿಸ್ಪರ್ಧಿಯಾಗಲಿವೆ ಎನ್ನಲಾಗಿದೆ. ನೂತನ ಅಲ್ಕಾಜರ್ ಫೇಸ್‌ಲಿಫ್ಟ್ ಕಾರಿನ ಬಗ್ಗೆ ಗ್ರಾಹಕರು ಕೂಡ ಬಹಳಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಇದು ಹೆಚ್ಚಿನ ಆಸನದೊಂದಿಗೆ ದೊರೆಯುವುದರಿಂದ ಬಹುತೇಕರು ತಮ್ಮ ಕುಟುಂಬದ ಕಾರಾಗಿ ಆಯ್ಕೆ ಮಾಡಿಕೊಳ್ಳಬಹುದು ಎಂದು ತಜ್ಞರು ವಿಶ್ಲೇಷಿಸಿದ್ದಾರೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications