2024ರ ಹ್ಯುಂಡೈ ಅಲ್ಕಾಜರ್ Vs ಮಹೀಂದ್ರಾ XUV700: ನಿಮ್ಮ ಫ್ಯಾಮಿಲಿಗೆ ಯಾವುದು ಬೆಸ್ಟ್?
ಜನಪ್ರಿಯ ಕಾರು ತಯಾರಕ ಕಂಪನಿಯಾದ ಹ್ಯುಂಡೈ ಮೋಟಾರ್ ಇಂಡಿಯಾ (Hyundai Motor India) ತನ್ನ ಬಹುನಿರೀಕ್ಷಿತ 2024ರ ಹ್ಯುಂಡೈ ಅಲ್ಕಾಜರ್ ಫೇಸ್‌ಲಿಫ್ಟ್ (Hyundai Alcazar Facelift ) ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ. ಇದು 6 ಮತ್ತು 7-ಸೀಟರ್ ಕಾನ್ಫಿಗರೇಶನ್‌ಗಳಲ್ಲಿ ಲಭ್ಯವಿರುವ ಪ್ರೀಮಿಯಂ ಎಸ್‍ಯುವಿಯಾಗಿದೆ. ಇದಕ್ಕೆ ಮಹೀಂದ್ರಾದ XUV700 ಎಸ್‍ಯುವಿ ಭಾರತೀಯ ಮಾರುಕಟ್ಟೆಯಲ್ಲಿ ಪ್ರಾಥಮಿಕ ಪ್ರತಿಸ್ಪರ್ಧಿಯಾಗಿದೆ. ಇಲ್ಲಿ ನಾವು ಹ್ಯುಂಡೈ ಅಲ್ಕಾಜರ್ ಫೇಸ್‌ಲಿಫ್ಟ್ ಮತ್ತು ಮಹೀಂದ್ರಾ XUV700 (Mahindra XUV700) ಎಸ್‍ಯುವಿಗಳಲ್ಲಿ ಯಾವುದು ಉತ್ತಮ ಆಯ್ಕೆ ಎಂಬುವುದನ್ನು ನಿರ್ಧರಿಸಲು ಎರಡೂ ವಾಹನಗಳ ನಡುವಿನ ಹೋಲಿಕೆ ಇಲ್ಲಿದೆ.
ಬೆಲೆಗಳು: 2024ರ ಹ್ಯುಂಡೈ ಅಲ್ಕಾಜರ್ ಫೇಸ್‌ಲಿಫ್ಟ್ ಎಸ್‍ಯುವಿಯ ಆರಂಭಿಕ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.14.99 ಲಕ್ಷವಾಗಿದ್ದು, ಇದರ ಟಾಪ್ ಎಂಡ್ ಮಾದರಿ ಬೆಲೆ ರೂ.21.55 ಲಕ್ಷವಾಗಿದೆ. ಇನ್ನು ಈ ಎಸ್‍ಯುವಿಯ ಪ್ರತಿಸ್ಪರ್ಧಿಯಾದ ಮಹೀಂದ್ರಾ XUV700 ಎಸ್‍ಯುವಿಯ ಆರಂಭಿಕೆ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.13.98 ಲಕ್ಷವಾಗಿದ್ದು, ಇದರ ಟಾಪ್ ಎಂಡ್ ಮಾದರಿಯ ಬೆಲೆಯು ರೂ.26.04 ಲಕ್ಷವಾಗಿದೆ.

ಆಯಾಮಗಳು: ಹ್ಯುಂಡೈ ಅಲ್ಕಾಜರ್ ಫೇಸ್‌ಲಿಫ್ಟ್ ಎಸ್‍ಯುವಿಯು 4560 ಎಂಎಂ ಉದ್ದ, 1800 ಎಂಎಂ ಅಗಲ ಮತ್ತು 1710 ಎಂಎಂ ಎತ್ತರವನ್ನು ಹೊಂದಿದೆ. ಇನ್ನು ಈ ಎಸ್‍ಯುವಿಯು 2760 ಎಂಎಂ ವ್ಹೀಲ್ ಬೇಸ್ ಅನ್ನು ಹೊಂದಿದೆ. ಇನ್ನು ಮಹೀಂದ್ರಾ XUV700 ಎಸ್‍ಯುವಿಯು 4695 mm ಉದ್ದ, 1890 mm ಅಗಲ ಮತ್ತು 1755 mm ಎತ್ತರವನ್ನು ಹೊಂದಿದೆ. ಇನ್ನು ಈ ಎಸ್‍ಯುವಿಯು 2750 mm ವ್ಹೀಲ್‌ಬೇಸ್ ಹೊಂದಿದೆ.
ಫೀಚರ್ಸ್: ಎರಡೂ ಎಸ್‍ಯುವಿಗಳು ಎಲ್‌ಇಡಿ ಹೆಡ್‌ಲ್ಯಾಂಪ್‌ಗಳು ಮತ್ತು ಎಲ್‌ಇಡಿ ಡಿಆರ್‌ಎಲ್‌ಗಳು, ಆಟೋ ಒಆರ್‌ವಿಎಂಗಳು, 18-ಇಂಚಿನ ಅಲಾಯ್ ವ್ಹೀಲ್ ಗಳು, 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.25-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಚಾಲಿತ ಡ್ರೈವರ್ ಸೀಟ್‌ಗಳು, ಆಟೋಮ್ಯಾಟಿಕ್ ಡ್ಯುಯಲ್-ಝೋನ್ ಕ್ಲೈಮೇಟ್ ಕಂಟ್ರೋಲ್, ಕನೆಕ್ಟೆಡ್ ಕಾರ್ ತಂತ್ರಜ್ಞಾ ಮತ್ತು ಪನರೊಮಿಕ್ ಸನ್‌ರೂಫ್ ಅನ್ನು ಹೊಂದಿದೆ.

ಅಲ್ಕಾಜರ್ ಎಸ್‍ಯುವಿಯು ಹಿಂದಿನ ಪ್ರಯಾಣಿಕರಿಗೆ ವೆಂಟಿಲೆಟಡ್ ಸೀಟುಗಳು, ಹಿಂದಿನ ಪ್ರಯಾಣಿಕರಿಗೆ ವೈರ್‌ಲೆಸ್ ಫೋನ್ ಚಾರ್ಜಿಂಗ್ ಮತ್ತು ಎಲೆಕ್ಟ್ರಿಕ್ ಪೋಸ್ ಮೋಡ್‌ನಂತಹ ಹೆಚ್ಚುವರಿ ವೈಶಿಷ್ಟ್ಯಗಳನ್ನು ನೀಡುತ್ತದೆ. ಇದು ವೈರ್ಡ್ Apple CarPlay ಮತ್ತು Android Auto ಕನೆಕ್ಟಿವಿಟಿಯನ್ನು ಮಾತ್ರ ಸಂಪೂರ್ಟ್ ಮಾಡುತ್ತದೆ. ಮಹೀಂದ್ರಾ XUV700 ಎಸ್‍ಯುವಿಯಲ್ಲಿ ಈ ಫೀಚರ್ಸ್ ಗಳಿಗಾಗಿ ವೈರ್‌ಲೆಸ್ ಕನೆಕ್ಟಿವಿಟಿಯನ್ನು ಒದಗಿಸಿದೆ.
XUV700 12-ಸ್ಪೀಕರ್ ಸೋನಿ ಆಡಿಯೊ ಸಿಸ್ಟಮ್ ಅನ್ನು ಹೊಂದಿದೆ, ಆದರೆ ಅಲ್ಕಾಜರ್ ಫೇಸ್‌ಲಿಫ್ಟ್ 8-ಸ್ಪೀಕರ್ ಬೋಸ್ ಆಡಿಯೊ ಸಿಸ್ಟಮ್ ಅನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ, ಅಲ್ಕಾಜರ್ ಆರು ಏರ್‌ಬ್ಯಾಗ್‌ಗಳೊಂದಿಗೆ ಬರುತ್ತದೆ, ಆದರೆ XUV700 ಏಳು ಏರ್‌ಬ್ಯಾಗ್‌ಗಳನ್ನು ನೀಡುತ್ತದೆ. ಅಲ್ಲದೆ, ಎರಡೂ ಮಾದರಿಗಳು ADAS ತಂತ್ರಜ್ಞಾನವನ್ನು ಪ್ರದರ್ಶಿಸುತ್ತವೆ.
ಆಡಿಯೋ ಮತ್ತು ಸುರಕ್ಷತೆ: ಮಹೀಂದ್ರಾ XUV700 ಎಸ್‍ಯುವಿ 12-ಸ್ಪೀಕರ್ ಸೋನಿ ಆಡಿಯೊ ಸಿಸ್ಟಮ್ ಅನ್ನು ಹೊಂದಿದ್ದರೆ, ಅಲ್ಕಾಜರ್ ಫೇಸ್‌ಲಿಫ್ಟ್ ಎಸ್‍ಯುವಿಯಲ್ಲಿ 8-ಸ್ಪೀಕರ್ ಬೋಸ್ ಆಡಿಯೊ ಸಿಸ್ಟಮ್ ಅನ್ನು ಹೊಂದಿದೆ. ಇನ್ನು ಸುರಕ್ಷತೆಯ ದೃಷ್ಟಿಯಿಂದ, ಅಲ್ಕಾಜರ್ ಆರು ಏರ್‌ಬ್ಯಾಗ್‌ಗಳೊಂದಿಗೆ ಬಂದರೆ, ಮಹೀಂದ್ರಾ XUV700 ಎಸ್‍ಯುವಿ ಏಳು ಏರ್‌ಬ್ಯಾಗ್‌ಗಳನ್ನು ಹೊಂದಿದೆ.
ಎಂಜಿನ್: ಎರಡೂ ಎಸ್‍ಯುವಿಗಳು ಪೆಟ್ರೋಲ್ ಮತ್ತು ಡೀಸೆಲ್ ಎಂಜಿನ್ ಆಯ್ಕೆಗಳೊಂದಿಗೆ ಲಭ್ಯವಿದೆ. ಅಲ್ಕಾಜರ್ ಎಸ್‍ಯುವಿಯು 1.5-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಗಳಲ್ಲಿ ಲಭ್ಯವಿದೆ. ಇನ್ನು ಮಹೀಂದ್ರಾ XUV700 ಎಸ್‍ಯುವಿಯು ಪವರ್ ಫುಲ್ 2.0-ಲೀಟರ್ ಪೆಟ್ರೋಲ್ ಮತ್ತು 2.2-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಗಳನ್ನು ಒಳಗೊಂಡಿವೆ.


Click it and Unblock the Notifications