ಫ್ಯಾಮಿಲಿ ಕಾರಾಗಿ ಜನರ ಮನಗೆದ್ದ ಹ್ಯುಂಡೈ ಅಲ್ಕಾಜರ್ ಎಸ್‍ಯುವಿಯ ಮೇಲೆ ಭರ್ಜರಿ ಡಿಸ್ಕೌಂಟ್
ಜನಪ್ರಿಯ ಕಾರು ತಯಾರಕ ಕಂಪನಿಯಾದ ಹ್ಯುಂಡೈ ತನ್ನ ನವೀಕರಿಸಿದ ಹ್ಯುಂಡೈ ಅಲ್ಕಾಜರ್ ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿತು. ಈ ಹೊಸ ನವೀಕರಣಗಳೊಂದಿಗೆ ಹ್ಯುಂಡೈ ಅಲ್ಕಾಜರ್ (Hyundai Alcazar) ಎಸ್‍ಯುವಿಯು ಪವರ್‌ಫುಲ್ ಟರ್ಬೊ ಪೆಟ್ರೋಲ್ ಎಂಜಿನ್‌ನೊಂದಿಗೆ ಮಾರುಕಟ್ಟೆಗೆ ಲಗ್ಗೆಯಿಟ್ಟಿತು. ಇದೀಗ ಈ ಅಲ್ಕಾಜರ್ ಎಸ್‍ಯುವಿಯು ಭರ್ಜರಿಯಾಗಿ ಮಾರಾಟವಾಗುತ್ತಿದೆ.
ಹ್ಯುಂಡೈ ಅಲ್ಕಾಜರ್ ಎಸ್‍ಯುವಿಯು ಪ್ರೆಸ್ಟೀಜ್, ಪ್ರೆಸ್ಟೀಜ್(O), ಪ್ಲಾಟಿನಂ, ಪ್ಲಾಟಿನಂ(O), ಸಿಗ್ನೇಚರ್, ಮತ್ತು ಸಿಗ್ನೇಚರ್(O) ಎಂಬ ರೂಪಾಂತರಗಳಲ್ಲಿ ಲಭ್ಯವಿದೆ. ಈ ಹ್ಯುಂಡೈ ಅಲ್ಕಾಜರ್ ಎಸ್‍ಯುವಿ ಮಧ್ಯಮ ವರ್ಗದ ಜನರಿಗೆ ಉತ್ತಮ ಆಯ್ಕೆಯಾಗಿದೆ. ಇದೀಗ ಹ್ಯುಂಡೈ ಅಲ್ಕಾಜರ್ ಎಸ್‍ಯುವಿಯ ಮೇಲೆ ಭರ್ಜರಿ ಡಿಸ್ಕೌಂಟ್ ಅನ್ನು ಹ್ಯುಂಡೈ ಕಂಪನಿಯು ಘೋಷಿಸಿದೆ.

ಹ್ಯುಂಡೈ ಕಂಪನಿಯು ತನ್ನ ಈ ಅಲ್ಕಾಜರ್ ಎಸ್‍ಯುವಿಯ ಪೆಟ್ರೋಲ್ ಮತ್ತು ಡೀಸೆಲ್ ಮಾದರಿಗಳ ಮೇಲೆ ಈ ತಿಂಗಳು 55,000 ರೂ.ಗಳವರೆಗೆ ರಿಯಾಯಿತಿಯನ್ನು ಘೋಷಿಸಿದೆ. ಇದು ವಿನಿಮಯ ಬೋನಸ್ ಮತ್ತು ನಗದು ರಿಯಾಯಿತಿಯನ್ನು ಒಳಗೊಂಡಿದೆ. ಹ್ಯುಂಡೈ ಅಲ್ಕಾಜರ್ ಎಸ್‍ಯುವಿಯ ಬಗ್ಗೆ ಹೇಳುವುದಾದರೆ, ಈ ಮೂರು-ಸಾಲು ಎಸ್‍ಯುವಿ ಎಲ್ಲಾ ರೂಪಾಂತರಗಳಲ್ಲಿ ಆರು ಏರ್‌ಬ್ಯಾಗ್‌ಗಳನ್ನು ಹೊಂದಿದೆ. ಹ್ಯುಂಡೈ ಅಲ್ಕಾಜರ್ ಎಸ್‍ಯುವಿ ಹೊಸ 1.5-ಲೀಟರ್ 4-ಸಿಲಿಂಡರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ.
ಈ ಎಸ್‍ಯುವಿಯಿಂದ ಹಳೆಯ 2.0-ಲೀಟರ್ ನ್ಯಾಚುರಲ್-ಆಸ್ಪೈರರ್ಡ್ ಪೆಟ್ರೋಲ್ ಎಂಜಿನ್ ಅನ್ನು ತೆಗೆದು ಹಾಕಿದೆ. ಈ ಹ್ಯುಂಡೈ ಅಲ್ಕಾಜರ್ ಎಸ್‍ಯುವಿಯು ವಿಪ್ರೆಸ್ಟೀಜ್ ಮತ್ತು ಪ್ಲಾಂಟಿನಮ್ 7-ಸೀಟರ್ ರೂಪಾಂತರಗಳನ್ನು 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನೊಂದಿಗೆ ಮಾತ್ರ ನೀಡಲಾಗಿದೆ. ಈ ಎಸ್‍ಯುವಿಯ ಟಾಪ್-ಸ್ಪೆಕ್ ಪ್ಲಾಟಿನಂ (O) ಮತ್ತು ಸಿಗ್ನೇಚರ್ (O) ಆರು-ಆಸನಗಳ ಲೇಔಟ್‌ಗಳು ಮತ್ತು 7-ಸ್ಪೀಡ್ ಡ್ಯುಯಲ್-ಕ್ಲಚ್ ಗೇರ್‌ಬಾಕ್ಸ್‌ನೊಂದಿಗೆ ಬರುತ್ತಿದೆ.

ಇನ್ನು 1.5-ಲೀಟರ್ ಟರ್ಬೊ-ಪೆಟ್ರೋಲ್ ಎಂಜಿನ್ 158 bhp ಮತ್ತು 253 Nm ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಇನ್ನು 1.5 ಲೀಟರ್ ಪೆಟ್ರೋಲ್ ಎಂಜಿನ್ RDE (ರಿಯಲ್ ಡ್ರೈವಿಂಗ್ ಎಮಿಷನ್) ಕಂಪ್ಲೈಂಟ್ ಮತ್ತು E20 (ಎಥೆನಾಲ್) ಇಂಧನವನ್ನು ಸಹ ಬೆಂಬಲಿಸುತ್ತದೆ. ಈ ಎಂಜಿನ್ ಆಯ್ಕೆಗಳಲ್ಲಿ 6-ಮ್ಯಾನುವಲ್ ಗೇರ್ ಬಾಕ್ಸ್ ಮತ್ತು ಹೊಸ 7-ಸ್ಪೀಡ್ ಡ್ಯುಯಲ್-ಕ್ಲಚ್ ಟ್ರಾನ್ಸ್‌ಮಿಷನ್ ಅಥವಾ DCT ಸೇರಿವೆ.
ಈ ಎಂಜಿನ್ ಇಂಟಿಗ್ರೇಟೆಡ್ ಸ್ಟಾರ್ಟ್-ಸ್ಟಾಪ್ ಟೆಕ್ ಅನ್ನು ಸಹ ಪಡೆಯುತ್ತದೆ. DCT ಆವೃತ್ತಿಯು 18 ಕಿ.ಮೀ ಮೈಲೇಜ್ ಅನ್ನು ನೀಡುತ್ತದೆ. ಇನ್ನು ಮ್ಯಾನುವಲ್ ಆವೃತ್ತಿಯು 17.5 ಕಿ,ಮೀ ಮೈಲೇಜ್ ಅನ್ನು ನೀಡುತ್ತದೆ. ಇನ್ನು 1.5-ಲೀಟರ್ ಡೀಸೆಲ್ ಎಂಜಿನ್ ಅನ್ನು ಕೂಡ ನೀಡಿದೆ. ಈ ಎಂಜಿನ್ 115 bhp ಮತ್ತು 250 Nm ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.

ಈ ಎಂಜಿನ್ ಅನ್ನು 6-ಸ್ಪೀಡ್ ಮ್ಯಾನ್ಯುವಲ್ ಮತ್ತು 6-ಸ್ಪೀಡ್ ಟಾರ್ಕ್ ಕರ್ನ್ವಾಟರ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗಿದೆ. ಈ ಎಸ್‍ಯುವಿಯು ಸ್ಟ್ಯಾಂಡರ್ಡ್ ಆಗಿ ಸೈಡ್ ಮತ್ತು ಕರ್ಟನ್ ಏರ್‌ಬ್ಯಾಗ್‌ಗಳನ್ನು ಒಳಗೊಂಡಂತೆ ಆರು ಏರ್‌ಬ್ಯಾಗ್‌ಗಳನ್ನು ಪಡೆಯುತ್ತದೆ. ಅಲ್ಕಾಜರ್ ಮಾದರಿಯು 6 ಏರ್‌ಬ್ಯಾಗ್‌ಗಳು, ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್ (ESC), ವೆಹಿಕಲ್ ಸ್ಟೆಬಿಲಿಟಿ ಮ್ಯಾನೇಜ್‌ಮೆಂಟ್ (VSM), ಹಿಲ್ ಸ್ಟಾರ್ಟ್ ಅಸಿಸ್ಟ್ ಕಂಟ್ರೋಲ್ (HAC) ಮತ್ತು ಎಲ್ಲಾ ವ್ಹೀಲ್ ಗಳಿಗೆ ಡಿಸ್ಕ್ ಬ್ರೇಕ್‌ಗಳನ್ನು ನೀಡಲಾಗಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications








