2 ಕುಟುಂಬ ಪ್ರಯಾಣಿಸಬಹುದು: ಭಾರೀ ಮೈಲೇಜ್‌ನ ಹ್ಯುಂಡೈ ಫ್ಯಾಮಿಲಿ ಕಾರಿಗೆ ಭಾರೀ ಬೇಡಿಕೆ
ಜನಪ್ರಿಯ ಕಾರು ತಯಾರಕ ಕಂಪನಿಯಾದ ಹ್ಯುಂಡೈ ಮೋಟಾರ್ ಇಂಡಿಯಾ (Hyundai Motor India) ತನ್ನ ಬಹುನಿರೀಕ್ಷಿತ 2024ರ ಹ್ಯುಂಡೈ ಅಲ್ಕಾಜರ್ ಫೇಸ್‌ಲಿಫ್ಟ್ (Hyundai Alcazar Facelift ) ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿತು. ಇದು 6 ಮತ್ತು 7-ಸೀಟರ್ ಕಾನ್ಫಿಗರೇಶನ್‌ಗಳಲ್ಲಿ ಲಭ್ಯವಿರುವ ಪ್ರೀಮಿಯಂ ಎಸ್‍ಯುವಿಯಾಗಿದೆ. ಹ್ಯುಂಡೈ ಅಲ್ಕಾಜರ್ಎಸ್‍ಯುವಿಯು ರಿಫ್ರೆಶ್ ವಿನ್ಯಾಸ ಮತ್ತು ಹೊಸ ಫೀಚರ್ಸ್ ಗಳನ್ನು ಪಡೆದುಕೊಂಡಿವೆ. ಕಳೆದ ತಿಂಗಳ ಹ್ಯುಂಡೈ ಅಲ್ಕಾಜರ್ ಫೇಸ್‌ಲಿಫ್ಟ್ ಎಸ್‍ಯುವಿಯ ಮಾರಾಟದ ವರದಿಯನ್ನು ಬಹಿರಂಗಪಡಿಸಿದೆ.
ಕಳೆದ ತಿಂಗಳು ಹ್ಯುಂಡೈ ಅಲ್ಕಾಜರ್ (Hyundai Alcazar) ಎಸ್‍ಯುವಿಯ 2,134 ಯುನಿಟ್ ಗಳು ಮಾರಾಟವಾಗಿವೆ. ಇನ್ನು ಕಳೆದ ವರ್ಷದ ಅಲ್ಕಾಜರ್ ಎಸ್‍ಯುವಿಯ 1,913 ಯುನಿಟ್ ಗಳು ಮಾರಾಟವಾಗಿತ್ತು. ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.53 ರಷ್ಟು ಮಾರಾಟದಲ್ಲಿ ಬೆಳವಣಿಗೆಯನ್ನು ಸಾಧಿಸಿದೆ. ಈ ಬಹುಬೇಡಿಕೆಯ ಹ್ಯುಂಡೈ ಅಲ್ಕಾಜರ್ ಎಸ್‍ಯುವಿ ಆಕರ್ಷಕವಾದ ವಿನ್ಯಾಸವನ್ನು ಹೊಂದಿದೆ.

ಹ್ಯುಂಡೈ ಅಲ್ಕಾಜರ್ ಎಸ್‍ಯುವಿ ಹೊರಭಾಗದಲ್ಲಿ ವಿನೂತನವಾಗಿರುವ ಗ್ರಿಲ್, ಹೆಡ್‌ಲ್ಯಾಂಪ್‌ಗಳು, ಎಚ್-ಆಕಾರಕ್ಕೆ ಹೋಲಿಕೆಯಾಗುವ ಎಲ್‌ಇಡಿ ಡಿಆರ್‌ಎಲ್‌ಗಳು, 18-ಇಂಚಿನ ಡೈಮಂಡ್-ಕಟ್ ಅಲಾಯ್ ವೀಲ್‌ಗಳು ಮತ್ತು ಎಲ್ಇಡಿ ಟೈಲ್‌ಲ್ಯಾಂಪ್‌ಗಳನ್ನು ಒಳಗೊಂಡಿದೆ. ಹೊರಭಾಗದಲ್ಲಿ ವಿನೂತನವಾಗಿರುವ ಗ್ರಿಲ್, ಹೆಡ್‌ಲ್ಯಾಂಪ್‌ಗಳು, ಎಚ್-ಆಕಾರಕ್ಕೆ ಹೋಲಿಕೆಯಾಗುವ ಎಲ್‌ಇಡಿ ಡಿಆರ್‌ಎಲ್‌ಗಳು, 18-ಇಂಚಿನ ಡೈಮಂಡ್-ಕಟ್ ಅಲಾಯ್ ವೀಲ್‌ಗಳು ಮತ್ತು ಎಲ್ಇಡಿ ಟೈಲ್‌ಲ್ಯಾಂಪ್‌ಗಳನ್ನು ಒಳಗೊಂಡಿದೆ.
ಅಲ್ಕಾಜರ್ ಎಸ್‍ಯುವಿ ಹೊರಭಾಗದಲ್ಲಿ ವಿನೂತನವಾಗಿರುವ ಗ್ರಿಲ್, ಹೆಡ್‌ಲ್ಯಾಂಪ್‌ಗಳು, ಎಚ್-ಆಕಾರಕ್ಕೆ ಹೋಲಿಕೆಯಾಗುವ ಎಲ್‌ಇಡಿ ಡಿಆರ್‌ಎಲ್‌ಗಳು, 18-ಇಂಚಿನ ಡೈಮಂಡ್-ಕಟ್ ಅಲಾಯ್ ವೀಲ್‌ಗಳು ಮತ್ತು ಎಲ್ಇಡಿ ಟೈಲ್‌ಲ್ಯಾಂಪ್‌ಗಳನ್ನು ಒಳಗೊಂಡಿದೆ. ಒಳಭಾಗದ ಕ್ಯಾಬಿನ್ ವಿನ್ಯಾಸವು ಹೆಚ್ಚು ಅತ್ಯಾಧುನಿಕವಾಗಿದೆ. ಈ ಹ್ಯುಂಡೈ ಅಲ್ಕಾಜರ್ ಎಸ್‌ಯುವಿ ಅಟ್ಲಾಸ್ ವೈಟ್, ಅಬಿಸ್ ಬ್ಲ್ಯಾಕ್ ಪರ್ಲ್, ರೇಂಜರ್ ಖಾಕಿ, ಫಿಯರಿ ರೆಡ್, ಸ್ಟಾರಿ ನೈಟ್, ಟೈಟಾನ್ ಗ್ರೇ ಮ್ಯಾಟ್ ಸೇರಿದಂತೆ 9 ಬಣ್ಣಗಳ ಆಯ್ಕೆಯಲ್ಲಿಯೂ ಲಭ್ಯವಿದೆ.

ಹ್ಯುಂಡೈ ಅಲ್ಕಾಜರ್ ಪ್ರೀಮಿಯಂ ಎಸ್‍ಯುವಿಯು 4,560 ಎಂಎಂ ಉದ್ದ, 1,800 ಎಂಎಂ ಅಗಲ ಮತ್ತು 1,710 ಎಂಎಂ ಎತ್ತರವಿದ್ದು, 2,760 ಎಂಎಂ ವೀಲ್‌ಬೇಸ್‌ನ್ನು ಹೊಂದಿದೆ. ನೂತನ ಹ್ಯುಂಡೈ ಅಲ್ಕಾಜರ್ ಎಸ್‌ಯುವಿ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಇನ್ಸ್ಟ್ರುಮೆಂಟ್ ಕ್ಲಸ್ಟರ್‌ಗಾಗಿ 10.25-ಇಂಚಿನ ಡಿಸ್ಪ್ಲೇಗಳು, ಪನೊರೊಮಿಕ್ ಸನ್‌ರೂಫ್, ಡುಯಲ್-ಝೋನ್ ಕ್ಲೇಮೇಟ್ ಕಂಟ್ರೋಲ್, 360-ಡಿಗ್ರಿ ಕ್ಯಾಮೆರಾ, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಹಾಗೂ 6 ಏರ್‌ಬ್ಯಾಗ್‌ನ್ನು ಪಡೆದಿದೆ.
ಅಲ್ಕಾಜರ್ ಪ್ರೀಮಿಯಂ ಎಸ್‍ಯುವಿಯು 6/7 ಸೀಟ್ ಆಯ್ಕೆ ವ್ಯವಸ್ಥೆಯಲ್ಲಿಯೂ ಖರೀದಿಗೆ ಸಿಗುತ್ತದೆ. ಈ ಹ್ಯುಂಡೈ ಅಲ್ಕಾಜರ್ ಎಸ್‌ಯುವಿ 2 ಪವರ್‌ಟ್ರೇನ್ ಆಯ್ಕೆಯಲ್ಲಿ ಲಭ್ಯವಿದೆ. ಮೊದಲಿಗೆ 1.5-ಲೀಟರ್ ಜಿಡಿಟಿ ಟರ್ಬೊ ಪೆಟ್ರೋಲ್ ಎಂಜಿನ್ 158 ಬಿಹೆಚ್‍ಪಿ ಗರಿಷ್ಠ ಪವರ್ ಹಾಗೂ 253 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತಾದೆ. ಮತ್ತೊಂದು 1.5-ಲೀಟರ್ ಡೀಸೆಲ್ ಎಂಜಿನ್ 113 ಬಿಹೆಚ್‍ಪಿ ಗರಿಷ್ಠ ಪವರ್ ಮತ್ತು 250 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯ ಪಡೆದಿದೆ.

ಅಲ್ಕಾಜರ್ ರೂಪಾಂತರಗಳಿಗೆ ಅನುಗುಣವಾಗಿ 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮೆಟಿಕ್ ಹಾಗೂ 7-ಸ್ಪೀಡ್ ಡಿಸಿಟಿ (ಡುಯಲ್ ಕ್ಲಚ್ ಟ್ರಾಸ್ಮಿಷನ್) ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. ನಾರ್ಮಲ್, ಇಕೋ ಮತ್ತು ಸ್ಪೋರ್ಟ್ ಎಂಬ 3 ಡ್ರೈವಿಂಗ್ ಮೋಡ್‌ಗಳನ್ನು ಹೊಂದಿದೆ. ಸ್ನೋ, ಮಡ್, ಮತ್ತು ಸ್ಯಾಂಡ್ ಹೆಸರಿನ 3 ಟ್ರಾಕ್ಷನ್ ಮೋಡ್‌ಗಳನ್ನು ಪಡೆದಿದ್ದು, ಸ್ಟಾರ್ಟ್/ ಸ್ಟಾಪ್ ಸಿಸ್ಟಮ್‌ಗಳನ್ನು ಒಳಗೊಂಡಿದೆ.
ಪೆಟ್ರೋಲ್ ಎಂಜಿನ್ 6-ಸ್ಪೀಡ್ ಮ್ಯಾನ್ಯುವಲ್ ಟ್ರಾನ್ಸ್‌ಮಿಷನ್ ಮಾದರಿಯು 17.5 ಕಿ.ಮೀ ಮೈಲೇಜ್ ಮತ್ತು 7-ಸ್ಪೀಡ್ ಡಿಸಿಟಿ ಟ್ರಾನ್ಸ್‌ಮಿಷನ್ ಮಾದರಿಯು 18 ಕಿ.ಮೀ ಮೈಲೇಜ್ ಅನ್ನು ಹೊಂದಿದೆ. ಡೀಸೆಲ್ ಎಂಜಿನ್ 6-ಸ್ಪೀಡ್ ಮ್ಯಾನ್ಯುವಲ್ ಟ್ರಾನ್ಸ್‌ಮಿಷನ್ ಮಾದರಿಯು 20.4 ಕಿ.ಮೀ ಮೈಲೇಜ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಟ್ರಾನ್ಸ್‌ಮಿಷನ್ ಮಾದರಿಯು 18.1ಕಿ.ಮೀ ಮೈಲೇಜ್ ನೀಡುತ್ತದೆ.
ಹ್ಯುಂಡೈ ಅಲ್ಕಾಜರ್ ಎಸ್‌ಯುವಿಯು ಸ್ಮಾರ್ಟ್ ಕ್ರೂಸ್ ಕಂಟ್ರೋಲ್, ಸರೌಂಡ್ ವ್ಯೂ ಮಾನಿಟರ್ (SVM), ಬ್ಲೈಂಡ್ ಸ್ಪಾಟ್ ವ್ಯೂ ಮಾನಿಟರ್ (BVM), ಫಾರ್ವರ್ಡ್ ಕೊಲಿಷನ್ ವಾರ್ನಿಂಗ್ ಮತ್ತು ಹುಂಡೈ ಸ್ಮಾರ್ಟ್‌ಸೆನ್ಸ್ ಲೆವೆಲ್ 2 ADAS ನಂತಹ 70 ಕ್ಕೂ ಹೆಚ್ಚು ಸುರಕ್ಷತಾ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಇದರೊಂದಿಗೆ ಸ್ಟ್ಯಾಂಡರ್ಡ್ ಸುರಕ್ಷತಾ ವೈಶಿಷ್ಟ್ಯಗಳು ಆರು ಏರ್‌ಬ್ಯಾಗ್‌ಗಳು, ಹಿಲ್-ಸ್ಟಾರ್ಟ್ ಅಸಿಸ್ಟ್ ಕಂಟ್ರೋಲ್, ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್ ಮತ್ತು ವೆಹಿಕಲ್ ಸ್ಟೆಬಿಲಿಟಿ ಮ್ಯಾನೇಜ್‌ಮೆಂಟ್ ಅನ್ನು ಹೊಂದಿದೆ.


Click it and Unblock the Notifications








