Hyundai ಹ್ಯುಂಡೈ ಔರಾ ಕಾರಿಗೆ ದೊಡ್ಡ ರಿಯಾಯಿತಿ.. ರೂ.6.49 ಲಕ್ಷ ಬೆಲೆ, ಜಾಸ್ತಿ ಮೈಲೇಜ್

ದೇಶದಲ್ಲಿ ಹ್ಯುಂಡೈ (Hyundai) ಜನಪ್ರಿಯ ಕಾರು ತಯಾರಕ ಸಂಸ್ಥೆಯಾಗಿದೆ. ವಿವಿಧ ರಾಜ್ಯಗಳಲ್ಲಿ ಕಂಪನಿಯ ಆಯ್ದ ಡೀಲರ್‌ಶಿಪ್‌ಗಳು, ಈ ಮಾರ್ಚ್ ತಿಂಗಳು ಕೂಡ ಹಲವು ಕಾರುಗಳ ಮೇಲೆ ಭರ್ಜರಿ ರಿಯಾಯಿತಿಯನ್ನು ಘೋಷಿಸಿವೆ. ಔರಾ ಸೆಡಾನ್ ಗೂ ಹೆಚ್ಚಿನ ಡಿಸ್ಕೌಂಟ್ ಆಫರ್ ಲಭ್ಯವಿದೆ.

ಹ್ಯುಂಡೈ ಔರಾ ಕಾರಿನ ರೂಪಾಂತರಗಳು ರೂ.33,000 ರವರೆಗೆ ರಿಯಾಯಿತಿಯನ್ನು ಒಳಗೊಂಡಿವೆ. ಅದರಲ್ಲಿ ಪೆಟ್ರೋಲ್ ಚಾಲಿತ ಮಾದರಿಗಳು ರೂ.5,000 ನಗದು ರಿಯಾಯಿತಿ, ರೂ.10,000, ವಿನಿಮಯ ಬೋನಸ್ ಮತ್ತು ರೂ.5,000 ಕಾರ್ಪೊರೇಟ್ ರಿಯಾಯಿತಿಯನ್ನು ಹೊಂದಿವೆ. ಸಿಎನ್‌ಜಿ ಆವೃತ್ತಿಗಳು ರೂ.20,000 ನಗದು ರಿಯಾಯಿತಿ, ರೂ.10,000 ವಿನಿಮಯ ಬೋನಸ್ ಹಾಗೂ ರೂ.3,000 ಕಾರ್ಪೊರೇಟ್ ಡಿಸ್ಕೌಂಟ್ ಅನ್ನು ಪಡೆದಿವೆ.

Hyundai Aura Car Get Upto Rs 33 000 Discount In March 2024 Rs 6 49 Lakh Starting Price

ಸದ್ಯ ದೇಶೀಯ ಮಾರುಕಟ್ಟೆಯಲ್ಲಿ ಹ್ಯುಂಡೈ ಔರಾ (Hyundai Aura) ಕಾರು ರೂ.6.49 ಲಕ್ಷದಿಂದ ರೂ.9.05 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ದೊರೆಯುತ್ತದೆ. ಇ, ಎಸ್, ಎಸ್ಎಕ್ಸ್, ಎಸ್ಎಕ್ಸ್ (ಒ) ಸೇರಿದಂತೆ ವಿವಿಧ ರೂಪಾಂತರ ಮತ್ತು ಫಿಯರಿ ರೆಡ್, ಟೈಫೂನ್ ಸಿಲ್ವರ್, ಸ್ಟಾರಿ ನೈಟ್, ಅಟ್ಲಾಸ್ ವೈಟ್ ಒಳಗೊಂಡಂತೆ ಆಕರ್ಷಕ ಬಣ್ಣಗಳೊಂದಿಗೆ ಸಿಗುತ್ತದೆ. ಈ ಕಾರಿನಲ್ಲಿ 5 ಮಂದಿ ಆದರಾಮದಾಯಕವಾಗಿ ಪ್ರಯಾಣಿಸಬಹುದು.

ಹ್ಯುಂಡೈ ಔರಾ ಸೆಡಾನ್ ಪೆಟ್ರೋಲ್ ಹಾಗೂ ಸಿಎನ್‌ಜಿ ಪವರ್ ಟ್ರೇನ್ ಆಯ್ಕೆಯಲ್ಲಿ ದೊರೆಯುತ್ತದೆ. ಇದರ 1.2-ಲೀಟರ್ ಪೆಟ್ರೋಲ್ ಎಂಜಿನ್ 83 ಪಿಎಸ್ ಗರಿಷ್ಠ ಪವರ್ (ಶಕ್ತಿ) ಹಾಗೂ 114 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. 5-ಸ್ವೀಡ್ ಮ್ಯಾನುವಲ್ ಅಥವಾ 5-ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ನೊಂದಿಗೆ ಲಭ್ಯವಿದೆ.

Hyundai Aura Car Get Upto Rs 33 000 Discount In March 2024 Rs 6 49 Lakh Starting Price

ಸಿಎನ್‌ಜಿ ಚಾಲಿತ ಕಾರು ಸಹ ಇದೇ ಎಂಜಿನ್‌ನ್ನು ಹೊಂದಿದೆ. ಆದರೆ, 69 ಪಿಎಸ್ ಪವರ್ ಮತ್ತು 95.2 ಎನ್ಎಂ ಪೀಕ್ ಟಾರ್ಕ್ ಹೊರಹಾಕಲಿದ್ದು, 5-ಸ್ವೀಡ್ ಮ್ಯಾನುವಲ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಮಾತ್ರ ಸಿಗುತ್ತದೆ. ಪೆಟ್ರೋಲ್ ರೂಪಾಂತರಗಳು 17 ಕೆಎಂಪಿಎಲ್ ಹಾಗೂ ಸಿಎನ್‌ಜಿ ರೂಪಾಂತರಗಳು 28 ಕೆಎಂ/ಕೆಜಿ ವರೆಗೆ ಮೈಲೇಜ್ ನೀಡುತ್ತವೆ.

ವಿನ್ಯಾಸದ ದೃಷ್ಟಿಯಿಂದಲೂ ಹ್ಯುಂಡೈ ಔರಾ (Hyundai Aura) ಕಾರು ಅತ್ಯಾಧುನಿಕವಾಗಿದೆ. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ವೈರ್‌ಲೆಸ್ ಫೋನ್ ಚಾರ್ಜರ್, ಆಟೋ ಕ್ಲೇಮೇಟ್ ಕಂಟ್ರೋಲ್, ಹೈಟ್ ಅಡ್ಜಸ್ಟ್ಏಬಲ್ ಡ್ರೈವರ್ ಸೀಟ್ ಮತ್ತು ಕ್ರೂಸ್ ಕಂಟ್ರೋಲ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

Hyundai Aura Car Get Upto Rs 33 000 Discount In March 2024 Rs 6 49 Lakh Starting Price

ಸುರಕ್ಷತೆಗಾಗಿ ಈ ಸೆಡಾನ್, 6 ಏರ್‌ಬ್ಯಾಗ್‌, ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಹಿಲ್-ಸ್ಟಾರ್ಟ್ ಅಸಿಸ್ಟ್, TMPS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಅನ್ನು ಹೊಂದಿದೆ. ಈ ಕಾರಿಗೆ ಮಾರುತಿ ಸುಜುಕಿ ಡಿಜೈರ್, ಹೋಂಡಾ ಅಮೇಜ್ ಮತ್ತು ಟಾಟಾ ಟಿಗೂರ್ ಪ್ರಬಲ ಎದುರಾಳಿಯಾಗಿವೆ. ಗಮನಿಸಿ.. ಈ ರಿಯಾಯಿತಿ ಪ್ರಯೋಜನಗಳು ರಾಜ್ಯದಿಂದ ರಾಜ್ಯಕ್ಕೆ ಬೇರೆಯಾಗಿರಲಿದ್ದು, ಹೆಚ್ಚಿನ ಮಾಹಿತಿಗೆ ನಿಮ್ಮ ಸಮೀಪದ ಶೋರೂಂಗೆ ಭೇಟಿ ನೀಡುವುದು ಉತ್ತಮ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Monday, March 18, 2024, 9:37 [IST]
English summary
Hyundai aura car get upto rs 33000 discount march 2024 rs 6 lakh starting price
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+