Hyundai: ಸದ್ದಿಲ್ಲದೇ ಹ್ಯುಂಡೈ ಕಂಪನಿಯಿಂದ ಬೆಲೆ ಏರಿಕೆ ಶಾಕ್.. ಎಷ್ಟು?

ಹ್ಯುಂಡೈ ಮೋಟಾರ್ ಇಂಡಿಯಾ (Hyundai Motor India - HMIL), ಪ್ರಮುಖ ವಾಹನ ತಯಾರಕ ಕಂಪನಿಯಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ವಿವಿಧ ಕಾರುಗಳನ್ನು ಮಾರಾಟ ಮಾಡುತ್ತಿದ್ದು, ಮಾರುತಿ ಸುಜುಕಿ (Maruti Suzuki) ಬಳಿಕ ಎರಡನೇ ಸ್ಥಾನದಲ್ಲಿದೆ. ಕಳೆದ ತಿಂಗಳು (ನವೆಂಬರ್ - 2024) 48,246 ಯುನಿಟ್ ಕಾರುಗಳನ್ನು ಮಾರಾಟ ಮಾಡಿದ್ದು, 2023ರ ಇದೇ ಅವಧಿಯಲ್ಲಿ ಮಾರಲ್ಪಟ್ಟ 49,451 ಯುನಿಟ್‌ಗಳಿಗೆ ಹೋಲಿಕೆ ಮಾಡಿದರೆ, ಶೇಕಡ -2.4% ಕುಸಿತವಾಗಿದೆ. ಅದು ಈ ಡಿಸೆಂಬರ್‌ನಲ್ಲಿ ಸುಧಾರಿಸುವ ನಿರೀಕ್ಷೆಯಿದೆ.

ಸದ್ಯ ತಯಾರಿಕಾ ವೆಚ್ಚಗಳು ಹೆಚ್ಚಾದ ಹಿನ್ನೆಲೆ, ಎಲ್ಲ ಕಾರುಗಳ ಬೆಲೆಯನ್ನು ಏರಿಕೆ ಮಾಡುವುದಾಗಿ ಹ್ಯುಂಡೈ ಕಂಪನಿ ಘೋಷಣೆ ಮಾಡಿದೆ. ನೂತನ ದರಗಳು ರೂ. 25,000 ವರೆಗೆ ಹೆಚ್ಚಳಗೊಳ್ಳಲಿದ್ದು, ಜನರಿಗೆ 1, 2025 ರಿಂದ ಅಧಿಕೃತವಾಗಿ ಜಾರಿಯಾಗಲಿದೆ. ಈ ತಿಂಗಳು ಬೆಲೆಗಳು ಯಥಾಸ್ಥಿತಿಯಲ್ಲಿ ಇರಲಿವೆ.

Hyundai cars price hike Exter Creta I20 to Alcazar

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಹ್ಯುಂಡೈ ಮೋಟಾರ್ ಇಂಡಿಯಾ ಸಿಇಒ ತರುಣ್ ಗಾರ್ಗ್ ಅವರು, 'ಉತ್ಪಾದನಾ ವೆಚ್ಚಗಳು ಹೆಚ್ಚುತ್ತಿದ್ದು, ಸಾಧ್ಯವಾದಷ್ಟು ಮಟ್ಟಿಗೆ ಕಂಪನಿಯೇ ಹೆಚ್ಚಿನ ಹೊರೆಯನ್ನು ಭರಿಸುತ್ತಿದೆ. ಆದರೂ ಕನಿಷ್ಠ ಭಾರವನ್ನು ಗ್ರಾಹಕರ ಮೇಲೆ ವರ್ಗಾಯಿಸುವುದು ಅನಿವಾರ್ಯವಾಗಿದೆ. ಇದರಿಂದ ಬೆಲೆ ಏರಿಕೆ ಮಾಡಲಾಗುತ್ತಿದೆ' ಎಂದು ಹೇಳಿದ್ದಾರೆ.

ಹ್ಯುಂಡೈ ದೇಶೀಯ ಮಾರುಕಟ್ಟೆಯಲ್ಲಿ ವಿವಿಧ ಕಾರುಗಳನ್ನು ಮಾರಾಟ ಮಾಡುತ್ತಿದೆ. ಅವುಗಳಲ್ಲಿ ಎಕ್ಸ್‌ಟರ್ (Exter) ಜನಪ್ರಿಯ ಮೈಕ್ರೋ ಎಸ್‌ಯುವಿಯಾಗಿದ್ದು, ರೂ.6.13 ಲಕ್ಷದಿಂದ ರೂ.10.43 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 1.2-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್ ಪಡೆದಿದ್ದು, 19.4 ರಿಂದ 27.1 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

Hyundai cars price hike Exter Creta I20 to Alcazar

ಹ್ಯುಂಡೈ ಕ್ರೆಟಾ (Hyundai Creta) ಪ್ರಖ್ಯಾತ ಎಸ್‌ಯುವಿಯಾಗಿದ್ದು, ರೂ.11 ಲಕ್ಷದಿಂದ ರೂ.20.30 ಲಕ್ಷ ಎಕ್ಸ್ ಶೋರೂಂ ದರದಲ್ಲಿ ಖರೀದಿಗೆ ದೊರೆಯುತ್ತದೆ. 1.5-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಪಡೆದಿದ್ದು, 17.4 ರಿಂದ 21.8 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಇದರಲ್ಲಿ 5 ಮಂದಿ ಓಡಾಟ ನಡೆಸಬಹುದು.

ಹ್ಯುಂಡೈ ಅಲ್ಕಾಜರ್ ಎಸ್‌ಯುವಿ ಕುರಿತಂತೆ ಮಾತನಾಡುವುದಾದರೆ, ಇದು ರೂ.14.99 ಲಕ್ಷದಿಂದ ರೂ.21.40 ಲಕ್ಷ (ಎಕ್ಸ್ ಶೋರೂಂ) ಬೆಲೆಯನ್ನು ಹೊಂದಿದೆ. 1.5-ಲೀಟರ್ ಜಿಡಿಟಿ ಟರ್ಬೊ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಪಡೆದಿದೆ. 17.5 ರಿಂದ 20.4 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಈ ಕಾರಿನಲ್ಲಿ 7 ಜನರು ಪ್ರಯಾಣಿಯಬಹುದು.

Hyundai cars price hike Exter Creta I20 to Alcazar

ಹ್ಯುಂಡೈ ಐ20 (Hyundai i20) ಬಗ್ಗೆ ಹೇಳುವುದಾದರೆ, ಇದೊಂದು ಹ್ಯಾಚ್‌ಬ್ಯಾಕ್ ಆಗಿದ್ದು, ಈ ಕಾರು ರೂ.7.04 ಲಕ್ಷದಿಂದ ರೂ.11.21 ಲಕ್ಷ ಎಕ್ಸ್ ಶೋರೂಂ ದರವನ್ನು ಒಳಗೊಂಡಿದೆ. 1.2-ಲೀಟರ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 16 ರಿಂದ 20 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಹ್ಯುಂಡೈ ಗ್ರಾಂಡ್ ಐ10 ನಿಯೋಸ್ (Hyundai Grand i10 Nios) ಕೂಡ ಬಹುಮುಖ್ಯವಾದ ಹ್ಯಾಚ್‌ಬ್ಯಾಕ್ ಆಗಿದೆ. ಇದು ರೂ.5.92 ಲಕ್ಷದಿಂದ ರೂ.8.56 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. 1.2-ಲೀಟರ್ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಪಡೆದಿದೆ. ಇದರಲ್ಲಿ 5 ಮಂದಿ ಸುಲಭವಾಗಿ ಓಡಾಟ ನಡೆಸಬಹುದು.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Friday, December 6, 2024, 9:56 [IST]
English summary
Hyundai cars price hike exter creta i20 to alcazar
Read more on hyundai india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+