Hyundai: ಹ್ಯುಂಡೈ ಕ್ರೆಟಾಗೆ ಮನಸೋತ ಗ್ರಾಹಕರು.. 1,00,000 ಯುನಿಟ್ ಮಾರಾಟ, ರೂ.11 ಲಕ್ಷ ಬೆಲೆ
ಹ್ಯುಂಡೈ ಇಂಡಿಯಾ (Hyundai India) ಜನಪ್ರಿಯ ವಾಹನ ತಯಾರಕ ಸಂಸ್ಥೆಯಾಗಿ ಗುರುತಿಸಿಕೊಂಡಿದೆ. ದೇಶೀಯ ಮಾರುಕಟ್ಟೆಯಲ್ಲಿ ನವೀನ ವಿನ್ಯಾಸ ಮತ್ತು ಆಕರ್ಷಕ ವೈಶಿಷ್ಟ್ಯ ಹೊಂದಿರುವ ವಿವಿಧ ಕಾರುಗಳನ್ನು ಮಾರಾಟ ಮಾಡುತ್ತಿದೆ. ಕಂಪನಿಯ ಜನಪ್ರಿಯ ಎಸ್‌ಯುವಿಗಳಲ್ಲಿ 'ಕ್ರೆಟಾ' ಅಗ್ರಸ್ಥಾನದಲ್ಲಿದ್ದು, ಭಾರೀ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಕೂಡ ಇಷ್ಟಪಟ್ಟು ಖರೀದಿಸುತ್ತಿದ್ದಾರೆ. ಸದ್ಯ, ಈ ಕಾರಿನ ಮಾರಾಟದಲ್ಲಿ ಹೊಸ ಇತಿಹಾಸ ಸೃಷ್ಟಿಯಾಗಿದೆ. ಬನ್ನಿ.. ಆ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯೋಣ.
ಭಾರತದ ಮಾರುಕಟ್ಟೆಗೆ ಹ್ಯುಂಡೈ ಕ್ರೆಟಾ ಫೇಸ್‌ಲಿಫ್ಟ್ (Hyundai Creta Facelift) ಮಿಡ್-ಸೈಜ್ ಎಸ್‌ಯುವಿಯನ್ನು ಜನವರಿ 2024ರಲ್ಲಿ ಬಿಡುಗಡೆ ಮಾಡಲಾಗಿತ್ತು. ಆಗಿನಿಂದಲೇ ಈ ಕಾರು ದೊಡ್ಡ ಮಟ್ಟದಲ್ಲಿ ಬೇಡಿಕೆ ಪಡೆದುಕೊಂಡಿದ್ದು, ಕೇವಲ 6 ತಿಂಗಳೊಳಗೆ 1 ಲಕ್ಷ ಯುನಿಟ್‌ಗೂ ಹೆಚ್ಚು ಮಾದರಿಗಳನ್ನು ಮಾರಾಟಗೊಳಿಸಲಾಗಿದೆ. ಈ ಮೂಲಕ ಕಂಪನಿಯು ಐತಿಹಾಸಿಕ ಮೈಲಿಗಲ್ಲನ್ನು ಸಾಧಿಸಿದೆ. ವಿಶೇಷವಾಗಿ ಪ್ರತಿನಿತ್ಯ ಸರಾಸರಿ 550ಕ್ಕೂ ಹೆಚ್ಚು ಕ್ರೆಟಾ ಕಾರುಗಳು ಗ್ರಾಹಕರ ಮನೆ ಸೇರುತ್ತಿವೆ.

ದೇಶೀಯವಾಗಿ ಹೊಸ ಹ್ಯುಂಡೈ ಕ್ರೆಟಾ ಕಾರು ಸ್ಪರ್ಧಾತ್ಮಕ ಬೆಲೆಯಲ್ಲಿ ಲಭ್ಯವಿದೆ. ರೂ.11 ಲಕ್ಷದಿಂದ ರೂ. 20.15 ಲಕ್ಷ ಎಕ್ಸ್ ಶೋರೂಂ ದರವನ್ನು ಹೊಂದಿದೆ. ಇ, ಇಎಕ್ಸ್, ಎಸ್, ಎಸ್(ಒ), ಎಸ್ಎಕ್ಸ್ ಟೆಕ್ ಸೇರಿಂದಂತೆ ವಿವಿಧ ರೂಪಾಂತರ (ವೇರಿಯೆಂಟ್)ಗಳನ್ನು ಪಡೆದಿದೆ. ಅಟ್ಲಾಸ್ ವೈಟ್, ಅಬಿಸ್ ಬ್ಲಾಕ್, ಟೈಟಾನ್ ಗ್ರೇ ಒಳಗೊಂಡಂತೆ ಹಲವು ಬಣ್ಣಗಳೊಂದಿಗೂ ಸಿಗುತ್ತದೆ.
ಈ ಕಾರು ಪೆಟ್ರೋಲ್ ಮತ್ತು ಡೀಸೆಲ್ ಪವರ್‌ಟ್ರೇನ್‌ನ್ನು ಪಡೆದಿದೆ. 1.5-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್ 115 ಪಿಎಸ್ ಗರಿಷ್ಠ ಶಕ್ತಿ (ಪವರ್) ಹಾಗೂ 144 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. 1.5-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ 160 ಪಿಎಸ್ ಶಕ್ತಿ ಮತ್ತು 253 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ.
ಮತ್ತೊಂದು 1.5-ಲೀಟರ್ ಡೀಸೆಲ್ ಎಂಜಿನ್ 116 ಪಿಎಸ್ ಗರಿಷ್ಠ ಶಕ್ತಿ ಹಾಗೂ 250 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ರೂಪಾಂತರಗಳ ಅನ್ವಯ 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮೆಟಿಕ್, ಸಿವಿಟಿ ಮತ್ತು 7-ಸ್ಪೀಡ್ ಡಿಸಿಟಿ ಗೇರ್‌ಬಾಕ್ಸ್‌ನ್ನು ಹೊಂದಿದೆ. 17.4 ಕೆಎಂಪಿಎಲ್ ರಿಂದ 21.8 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.
ಹ್ಯುಂಡೈ ಕ್ರೆಟಾ ಎಸ್‌ಯುವಿಯಲ್ಲಿ 5 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ದೂರದ ಊರುಗಳಿಗೆ ಪ್ರಯಾಣಿಸಬಹುದು. 10.25-ಇಂಚಿನ ಡುಯಲ್ ಡಿಸ್ಪ್ಲೇ (ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಇನ್ಸ್ಟ್ರುಮೆಂಟ್ ಕ್ಲಸ್ಟರ್) ಡುಯಲ್ ಝೋನ್ ಎಸಿ, 8-ಸ್ಪೀಕರ್ ಬೋಸ್ ಸೌಂಡ್ ಸಿಸ್ಟಮ್, ಸನ್‌ರೂಫ್, ವೈರ್‌ಲೆಸ್ ಫೋನ್ ಚಾರ್ಜಿಂಗ್ ಹಾಗೂ ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.
ಈ ಕಾರು ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸುತ್ತದೆ. 6 ಏರ್‌ಬ್ಯಾಗ್, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ವಿಎಸ್‌ಸಿ (ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು ಹಿಲ್ ಸ್ಟಾರ್ಟ್ ಅಸಿಸ್ಟ್‌ನ್ನು ಒಳಗೊಂಡಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications