5 ಸೀಟರ್.. 21 ಕಿ.ಮೀ ಮೈಲೇಜ್, ಈ ಹ್ಯುಂಡೈ ಕಾರು ನಂಬರ್ 1.. ಟಾಟಾ, ಮಾರುತಿ, ಮಹೀಂದ್ರಾ ಕಾರುಗಳು ಪಕ್ಕಕ್ಕೆ!

ಭಾರತದ ಜನಪ್ರಿಯ ವಾಹನ ತಯಾರಕ ಸಂಸ್ಥೆಯಾಗಿ ಹ್ಯುಂಡೈ ಮೋಟಾರ್ ಇಂಡಿಯಾ (Hyundai Motor India) ಮನೆ ಮನೆ ಮಾತಾಗಿದೆ. ಅತ್ಯಾಧುನಿಕ ವಿನ್ಯಾಸ ಮತ್ತು ವೈಶಿಷ್ಟ್ಯಗಳನ್ನು ಹೊಂದಿರುವ ಹಲವು ಕಾರುಗಳನ್ನು ಮಾರಾಟ ಮಾಡಲಾಗುತ್ತಿದೆ. ಕಂಪನಿಯ ಜನಪ್ರಿಯ ಎಸ್‌ಯುವಿಗಳಲ್ಲಿ 'ಕ್ರೆಟಾ' ಪ್ರಮುಖವಾಗಿದ್ದು, ದೊಡ್ಡಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ. ಇತ್ತೀಚೆಗೆ ವಿವಿಧ ಕಾರು ಉತ್ಪಾದನಾ ಸಂಸ್ಥೆಗಳು 2024ರ ಜುಲೈನ ಮಾರಾಟದ ಅಂಕಿಸಂಖ್ಯೆಯನ್ನು ಪ್ರಕಟಿಸಿವೆ. ದೇಶೀಯ ಮಾರುಕಟ್ಟೆಯಲ್ಲಿ ಅಧಿಕ ಸಂಖ್ಯೆಯಲ್ಲಿ ಮಾರಾಟಗೊಂಡ ಪ್ರಮುಖ 10 ಕಾರುಗಳ ಪಟ್ಟಿಯಲ್ಲಿ ಹ್ಯುಂಡೈ ಕ್ರೆಟಾ ಮೊದಲ ಸ್ಥಾನದಲ್ಲಿದೆ.

ಕಳೆದ ತಿಂಗಳು (ಜುಲೈ), ಒಟ್ಟು 17,350 ಯುನಿಟ್‌ ಹ್ಯುಂಡೈ ಕ್ರೆಟಾ (Hyundai Creta) ಕಾರುಗಳನ್ನು ಮಾರಾಟ ಮಾಡಲಾಗಿದೆ. 2023ರ ಇದೇ ಅವಧಿಯಲ್ಲಿ ಮಾರಾಟಗೊಳಿಸಿದ 14,062 ಯುನಿಟ್‌ಗೆ ಹೋಲಿಸಿದರೆ, ವರ್ಷದಿಂದ ವರ್ಷಕ್ಕೆ (YoY) ಶೇಕಡ 23.38% ಬೆಳವಣಿಗೆಯಾಗಿದೆ. ಎರಡನೇ ಸ್ಥಾನದಲ್ಲಿ ಮಾರುತಿ ಸುಜುಕಿ ಸ್ವಿಫ್ಟ್ (16,854 ಯುನಿಟ್) ಹಾಗೂ ಮೂರನೇ ಸ್ಥಾನದಲ್ಲಿ ಮಾರುತಿ ಸುಜುಕಿ ವ್ಯಾಗನ್ಆರ್ (16,191 ಯುನಿಟ್) ಕಾರುಗಳಿವೆ.

Hyundai Creta Car July 2024 Sales Report Become Number 1 Details

ಹ್ಯುಂಡೈ ಕ್ರೆಟಾ ಬೆಲೆ: ಇದು ಜನಪ್ರಿಯ ಎಸ್‌ಯುವಿಯಾಗಿದ್ದು, ಕೈಗೆಟುಕುವ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. ರೂ.11 ಲಕ್ಷದಿಂದ ರೂ. 20.15 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಇ, ಇಎಕ್ಸ್, ಎಸ್, ಎಸ್(ಒ) ಮತ್ತು ಎಸ್ಎಕ್ಸ್ ಟೆಕ್ ಸೇರಿದಂತೆ 7 ರೂಪಾಂತರ (ವೇರಿಯೆಂಟ್)ಗಳನ್ನು ಪಡೆದಿದೆ.

ಆಸನ ಮತ್ತು ಬಣ್ಣಗಳು: ಈ ಕಾರು ಅಟ್ಲಾಸ್ ವೈಟ್, ಅಬಿಸ್ ಬ್ಲಾಕ್, ಟೈಟಾನ್ ಗ್ರೇ ಹಾಗೂ ರೇಂಜರ್ ಖಾಕಿ ಒಳಗೊಂಡಂತೆ ವಿವಿಧ ಆಕರ್ಷಕ ಬಣ್ಣಗಳೊಂದಿಗೂ ಲಭ್ಯವಿದೆ. ಇದರಲ್ಲಿ 5 ಮಂದಿ ಸುಲಭವಾಗಿ ಓಡಾಟ ನಡೆಸಬಹುದು. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 433 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.

Hyundai Creta Car July 2024 Sales Report Become Number 1 Details

ಕಾರ್ಯಕ್ಷಮತೆ: ನೂತನ ಹ್ಯುಂಡೈ ಕ್ರೆಟಾ ಎಸ್‌ಯುವಿ ವಿವಿಧ ಪವರ್‌ಟ್ರೇನ್ ಆಯ್ಕೆಯನ್ನು ಪಡೆದಿದೆ. ಇದರ 1.5-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್ 115 ಪಿಎಸ್ ಗರಿಷ್ಠ ಶಕ್ತಿ ಹಾಗೂ 144 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 1.5-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ 160 ಪಿಎಸ್ ಶಕ್ತಿ (ಪವರ್) ಮತ್ತು 253 ಎನ್ಎಂ ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಪಡೆದಿದೆ.

ಮತ್ತೊಂದು 1.5-ಲೀಟರ್ ಡೀಸೆಲ್ ಎಂಜಿನ್ 116 ಪಿಎಸ್ ಗರಿಷ್ಠ ಶಕ್ತಿ ಹಾಗೂ 250 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ರೂಪಾಂತರಗಳ ಅನ್ವಯ 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮೆಟಿಕ್, ಸಿವಿಟಿ ಮತ್ತು 7-ಸ್ಪೀಡ್ ಡಿಸಿಟಿ ಗೇರ್‌ಬಾಕ್ಸ್‌ನ್ನು ಹೊಂದಿದೆ. 17.4 ಕೆಎಂಪಿಎಲ್‌ ರಿಂದ 21.8 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

Hyundai Creta Car July 2024 Sales Report Become Number 1 Details

ವೈಶಿಷ್ಟ್ಯಗಳು: ಈ ಕಾರು 10.25-ಇಂಚಿನ ಡುಯಲ್ ಡಿಸ್ಪ್ಲೇಗಳು, ಡುಯಲ್ ಝೋನ್ ಎಸಿ, 8-ಸ್ಪೀಕರ್ ಬೋಸ್ ಸೌಂಡ್ ಸಿಸ್ಟಮ್, ಸನ್‌ರೂಫ್, ವೈರ್‌ಲೆಸ್ ಫೋನ್ ಚಾರ್ಜಿಂಗ್ ಹಾಗೂ ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳನ್ನು ಹೊಂದಿದೆ. ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆ ಒದಗಿಸಲು 6 ಏರ್‌ಬ್ಯಾಗ್‌, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್) ಮತ್ತು ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್)ಯನ್ನು ಪಡೆದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Saturday, August 10, 2024, 14:16 [IST]
English summary
Hyundai creta car july 2024 sales report become number 1 details
Read more on hyundai india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+