Hyundai: ನಂಬರ್ 1 ಪಟ್ಟಕ್ಕೆ ಹ್ಯುಂಡೈ ಕ್ರೆಟಾ ಬರುತ್ತಾ?, ರೂ.11 ಲಕ್ಷ ಬೆಲೆ.. 21 Km ಮೈಲೇಜ್!

ಹ್ಯುಂಡೈ ಇಂಡಿಯಾ (Hyundai India) ಪ್ರಮುಖ ವಾಹನ ತಯಾರಕ ಸಂಸ್ಥೆಯಾಗಿ ಗುರುತಿಸಿಕೊಂಡಿದೆ. ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯವನ್ನು ಹೊಂದಿರುವ ಹಲವು ಕಾರುಗಳನ್ನು ಮಾರಾಟ ಮಾಡುತ್ತಿದೆ. ಕಂಪನಿಯ ಜನಪ್ರಿಯ ಎಸ್‌ಯುವಿಗಳಲ್ಲಿ 'ಕ್ರೆಟಾ' ಅಗ್ರಸ್ಥಾನದಲ್ಲಿದ್ದು, ಭಾರೀ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ. ಈಚೆಗೆ ಎಲ್ಲ ಕಾರು ಉತ್ಪಾದನಾ ಸಂಸ್ಥೆಗಳು ಜೂನ್ (2024) ತಿಂಗಳ ಮಾರಾಟದ ಅಂಕಿಅಂಶಗಳನ್ನು ಪ್ರಕಟಿಸಿವೆ. ದೇಶೀಯ ಮಾರುಕಟ್ಟೆಯಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟಗೊಂಡ ಪ್ರಮುಖ 10 ಕಾರುಗಳ ಪಟ್ಟಿಯಲ್ಲಿ ಹ್ಯುಂಡೈ ಕ್ರೆಟಾ ಕೂಡ ಸ್ಥಾನವನ್ನು ಪಡೆದಿದೆ.

ಕಳೆದ ತಿಂಗಳು (ಜೂನ್ 2024) ಹ್ಯುಂಡೈ ಕಂಪನಿಯು 16,293 ಯುನಿಟ್ ಕ್ರೆಟಾ ಎಸ್‌ಯುವಿಗಳನ್ನು ಮಾರಾಟ ಮಾಡಿದೆ. 2023ರ ಇದೇ ಅವಧಿಯಲ್ಲಿ ಮಾರಿದ 14,447 ಯುನಿಟ್‌ಗೆ ಹೋಲಿಸಿದರೆ, ವರ್ಷದಿಂದ ವರ್ಷಕ್ಕೆ ಶೇಕಡ 13% ಬೆಳವಣಿಗೆ ಸಾಧಿಸಿದೆ. ಈ ಮೂಲಕ ದೊಡ್ಡ ಸಂಖ್ಯೆಯಲ್ಲಿ ಮಾರಾಟವಾದ ಮೂರನೇ ಕಾರೆಂಬ ಹೆಗ್ಗಳಿಗೂ ಪಾತ್ರವಾಗಿದೆ. ಮೊದಲ ಸ್ಥಾನದಲ್ಲಿ ಟಾಟಾ ಪಂಚ್ (18,238 ಯುನಿಟ್) ಹಾಗೂ ಎರಡನೇ ಸ್ಥಾನದಲ್ಲಿ ಮಾರುತಿ ಸ್ವಿಫ್ಟ್ (16,422 ಯುನಿಟ್) ಕಾರುಗಳಿವೆ.

Hyundai Creta Car June 2024 Sales Report Rs 11 Lakh Price 21 Km Mileage

ಹೊಚ್ಚ ಹೊಸ ಹ್ಯುಂಡೈ ಕ್ರೆಟಾ (Hyundai Creta) ಕಾರು ಕೈಗೆಟುಕುವ ಬೆಲೆಯಲ್ಲಿ ಗ್ರಾಹಕರಿಗೆ ಖರೀದಿಗೆ ಲಭ್ಯವಿದೆ. ರೂ.11 ಲಕ್ಷದಿಂದ ರೂ.20.15 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಇ, ಇಎಕ್ಸ್, ಎಸ್, ಎಸ್(ಒ), ಎಸ್ಎಕ್ಸ್ ಟೆಕ್ ಸೇರಿದಂತೆ ಅತ್ಯಾಧುನಿಕ 7 ರೂಪಾಂತರ (ವೇರಿಯೆಂಟ್)ಗಳ ಆಯ್ಕೆಯಲ್ಲಿ ಸಹ ದೊರೆಯುತ್ತದೆ.

ಹ್ಯುಂಡೈ ಕ್ರೆಟಾ ಎಸ್‌ಯುವಿ 1.5-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್‌ನ್ನು ಒಳಗೊಂಡಿದೆ. ರೂಪಾಂತರಗಳಿಗೆ ಅನುಗುಣವಾಗಿ 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮೆಟಿಕ್, ಸಿವಿಟಿ ಮತ್ತು 7-ಸ್ಪೀಡ್ ಡಿಸಿಟಿ ಗೇರ್‌ಬಾಕ್ಸ್‌ನ್ನು ಹೊಂದಿದೆ. 17.4 ರಿಂದ 21.8 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

Hyundai Creta Car June 2024 Sales Report Rs 11 Lakh Price 21 Km Mileage

ಈ ಕಾರು ಅಟ್ಲಾಸ್ ವೈಟ್, ಅಬಿಸ್ ಬ್ಲಾಕ್, ಟೈಟಾನ್ ಗ್ರೇ, ರೇಂಜರ್ ಖಾಕಿ ಒಳಗೊಂಡಂತೆ ಹಲವು ಆಕರ್ಷಕ ಬಣ್ಣಗಳನ್ನು ಹೊಂದಿದೆ. ಈ ಕಾರಿನಲ್ಲಿ 5 ಮಂದಿ ಸುಲಭವಾಗಿ ಓಡಾಟವನ್ನು ನಡೆಸಬಹುದು. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ಸಾಗಿಸಲು 433 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಪಡೆದಿದೆ.

ಹ್ಯುಂಡೈ ಕ್ರೆಟಾ ಎಸ್‌ಯುವಿ ವಿವಿಧ ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದಿದೆ. 10.25-ಇಂಚಿನ ಡುಯಲ್ ಡಿಸ್ಪ್ಲೇ (ಇನ್ಫೋಟೈನ್‌ಮೆಂಟ್ ಸಿಸ್ಟಮ್‌ & ಇನ್ಸ್ಟ್ರುಮೆಂಟ್ ಕ್ಲಸ್ಟರ್) 8-ಸ್ಪೀಕರ್ ಬೋಸ್ ಸೌಂಡ್ ಸಿಸ್ಟಮ್, ಸನ್‌ರೂಫ್, ವೈರ್‌ಲೆಸ್ ಫೋನ್ ಚಾರ್ಜಿಂಗ್, ಡುಯಲ್ ಝೋನ್ ಎಸಿ, ಹಾಗೂ ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳನ್ನು ಒಳಗೊಂಡಿದೆ.

Hyundai Creta Car June 2024 Sales Report Rs 11 Lakh Price 21 Km Mileage

ಈ ಕಾರು ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆಯನ್ನು ಒದಗಿಸುತ್ತದೆ. 6-ಏರ್‌ಬ್ಯಾಗ್‌, ABS (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), EBD (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ADAS (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಅನ್ನು ಹೊಂದಿದೆ. ಹ್ಯುಂಡೈ ಕ್ರೆಟಾ ಎಸ್‌ಯುವಿಗೆ ಕಿಯಾ ಸೆಲ್ಟೋಸ್, ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ, ಪೋಕ್ಸ್‌ವ್ಯಾಗನ್ ಟೈಗುನ್, ಸ್ಕೋಡಾ ಕುಶಾಕ್ ಮತ್ತು ಹೋಂಡಾ ಎಲಿವೇಟ್ ಕಾರುಗಳು ಪ್ರಬಲ ಪ್ರತಿಸ್ಪರ್ಧಿಯಾಗಿವೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Wednesday, July 10, 2024, 20:00 [IST]
English summary
Hyundai creta car june 2024 sales report rs 11 lakh price 21 km mileage
Read more on hyundai india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+