ಟಾಟಾ ಪಂಚ್, ಮಾರುತಿ ಬ್ರೆಝಾ ಅಲ್ಲ.. 21 Km ಮೈಲೇಜ್, 11 ಲಕ್ಷದ ಈ ಪ್ರಖ್ಯಾತ ಕಾರನ್ನು ಮೆಚ್ಚಿದ ಗ್ರಾಹಕರು!

ಭಾರತದ ಜನಪ್ರಿಯ ವಾಹನ ತಯಾರಕ ಕಂಪನಿಯಾಗಿ ಹ್ಯುಂಡೈ ಮೋಟಾರ್ ಇಂಡಿಯಾ (Hyundai Motor India) ಮನೆ ಮಾತಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ವಿವಿಧ ಹ್ಯಾಚ್‌ಬ್ಯಾಕ್, ಸೆಡಾನ್ ಹಾಗೂ ಎಸ್‌ಯುವಿಗಳನ್ನು ಮಾರಾಟ ಮಾಡುತ್ತಿದ್ದು, ಗ್ರಾಹಕರು ಕೂಡ ಮೆಚ್ಚಿಕೊಂಡಿದ್ದಾರೆ. ಸದ್ಯ, ಹ್ಯುಂಡೈನ ಗೇಮ್ ಚೇಂಜರ್ ಕಾರಾಗಿ ಕ್ರೆಟಾ (Creta) ಹೊರಹೊಮ್ಮಿದೆ. ಇದೊಂದು ಜನಪ್ರಿಯ ಎಸ್‌ಯುವಿಯಾಗಿದೆ. ಈ ವಿಭಾಗದಲ್ಲಿ ಟಾಟಾ ಪಂಚ್ ಮತ್ತು ಮಾರುತಿ ಸುಜುಕಿ ಬ್ರೆಝಾದಂತಹ ಕಾರುಗಳು ಪ್ರಬಲವಾದ ಸ್ಪರ್ಧೆಯೊಡ್ಡುತ್ತಿದ್ದರೂ 'ಕ್ರೆಟಾ' ಮಾತ್ರ ತಿಂಗಳಿನಿಂದ ತಿಂಗಳಿಗೆ ಭಾರಿ ಸಂಖ್ಯೆಯಲ್ಲಿ ಮಾರಾಟವಾಗುತ್ತಿದೆ.

ಈ ವರ್ಷದ ಆರಂಭದಲ್ಲಿ ಹಲವು ನವೀಕರಣಗಳನ್ನು ಪಡೆದುಕೊಂಡಿದ್ದ 'ಹ್ಯುಂಡೈ ಕ್ರೆಟಾ ಫೇಸ್‌ಲಿಫ್ಟ್' ಎಸ್‌ಯುವಿಯನ್ನು ಬಿಡುಗಡೆ ಮಾಡಲಾಗಿತ್ತು. ಅಂದಿನಿಂದಲೇ ಈ ಕಾರಿಗೆ ಭಾರಿ ಬೇಡಿಕೆ ಸೃಷ್ಟಿಯಾಗಿತ್ತು ಜುಲೈನಲ್ಲಿ ಬರೋಬ್ಬರಿ 17,350 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿತ್ತು. ದಸರಾ ಹಾಗೂ ದೀಪಾವಳಿ ಹಿನ್ನೆಲೆ, ಈ ಅಕ್ಟೋಬರ್‌ನಲ್ಲಿ ಕ್ರೆಟಾ ಮಾರಾಟದಲ್ಲಿ ಹೊಸದೊಂದು ದಾಖಲೆ ನಿರ್ಮಾಣವಾಗಿದ್ದು, 17,497 ಯುನಿಟ್‌ಗಳ ಮಾರಲಾಗಿದೆ.

Hyundai Creta Car Records Highest Sales In October 2024 Overtake Brezza And Punch Suvs Details

ನೂತನ ಹ್ಯುಂಡೈ ಕ್ರೆಟಾದ ಪ್ರಖ್ಯಾತಿ ಎಷ್ಟಿದೆ ಅಂದರೆ, 2025ರ ಹಣಕಾಸು ವರ್ಷದ ಏಪ್ರಿಲ್‌ನಿಂದ ಅಕ್ಟೋಬರ್ ಅವಧಿಯಲ್ಲಿ 113,913 ಯುನಿಟ್ ಕಾರುಗಳನ್ನು ಮಾರಾಟ ಮಾಡಲಾಗಿದೆ. ತಿಂಗಳಿಗೆ ಸರಾಸರಿ 16,273 ಯುನಿಟ್‌ ಕಾರುಗಳನ್ನು ಗ್ರಾಹಕರು ಮನೆಗೆ ತೆಗೆದುಕೊಂಡು ಹೋಗಿದ್ದಾರೆ. ಈ ಸೆಪ್ಟೆಂಬರ್‌ನಲ್ಲಿ 15,902 ಯುನಿಟ್ ಮತ್ತು ಆಗಸ್ಟ್‌ನಲ್ಲಿ 16,762 ಯುನಿಟ್ ಕ್ರೆಟಾ ಎಸ್‌ಯುವಿಗಳನ್ನು ಮಾರಾಟ ಮಾಡಲಾಗಿದೆ.

ಪ್ರಸ್ತುತ ದೇಶೀಯ ಮಾರುಕಟ್ಟೆಯಲ್ಲಿ ಹ್ಯುಂಡೈ ಕ್ರೆಟಾ ಎಸ್‌ಯುವಿ ಕನಿಷ್ಠ ರೂ.11 ಲಕ್ಷ ಹಾಗೂ ಗರಿಷ್ಠ ರೂ.20.45 ಲಕ್ಷ (ಎಕ್ಸ್ ಶೋರೂಂ) ದರವನ್ನು ಪಡೆದಿದೆ. ಇ, ಇಎಕ್ಸ್, ಎಸ್ ಮತ್ತು ಎಸ್(ಒ) ಒಳಗೊಂಡಂತೆ ಹಲವು ರೂಪಾಂತರಗಳನ್ನು (ವೇರಿಯೆಂಟ್) ಹೊಂದಿದೆ. ಜೊತೆಗೆ ವಿವಿಧ ಆಕರ್ಷಕ ಬಣ್ಣಗಳ ಆಯ್ಕೆಯೊಂದಿಗೂ ಲಭ್ಯವಿದೆ.

Hyundai Creta Car Records Highest Sales In October 2024 Overtake Brezza And Punch Suvs Details

ಈ ಕಾರು 1.5-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. 115 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 144 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 1.5-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ 160 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 253 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ.

ಮತ್ತೊಂದು 1.5-ಲೀಟರ್ ಡೀಸೆಲ್ ಎಂಜಿನ್ 116 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 250 (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ರೂಪಾಂತರಗಳಿಗೆ ತಕ್ಕಂತೆ 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮೆಟಿಕ್, ಸಿವಿಟಿ ಮತ್ತು 7-ಸ್ಪೀಡ್ ಡಿಸಿಟಿ ಗೇರ್‌ಬಾಕ್ಸ್‌ನ್ನು ಹೊಂದಿದೆ. 21.8 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಇದರಲ್ಲಿ 5-ಮಂದಿ ಸುಲಭವಾಗಿ ಓಡಾಟ ನಡೆಸಬಹುದು.

Hyundai Creta Car Records Highest Sales In October 2024 Overtake Brezza And Punch Suvs Details

ನೂತನ ಹ್ಯುಂಡೈ ಕ್ರೆಟಾ ಎಸ್‌ಯುವಿ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಇನ್ಫೋಟೈನ್‌ಮೆಂಟ್ ಸಿಸ್ಟಮ್‌ & ಇನ್ಸ್ಟ್ರುಮೆಂಟ್ ಕ್ಲಸ್ಟರ್‌ಗಾಗಿ ಡುಯಲ್ ಡಿಸ್‌ಪ್ಲೇ (10.25-ಇಂಚು), ಡುಯಲ್ - ಝೋನ್ ಎಸಿ, 8 - ಸ್ಪೀಕರ್ ಬೋಸ್ ಸೌಂಡ್ ಸಿಸ್ಟಮ್, ಸನ್‌ರೂಫ್, ವೈರ್‌ಲೆಸ್ ಫೋನ್ ಚಾರ್ಜಿಂಗ್ ಮತ್ತು ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳನ್ನು ಪಡೆದಿದೆ.

ಈ ಕಾರು ಸುರಕ್ಷತೆಗೂ ಹೆಸರುವಾಸಿಯಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ 6 - ಏರ್‌ಬ್ಯಾಗ್‌, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ವಿಎಸ್‌ಸಿ (ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು ಹಿಲ್ - ಸ್ಟಾರ್ಟ್ ಅಸಿಸ್ಟ್‌ಗಳನ್ನು ಒಳಗೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Saturday, November 2, 2024, 22:54 [IST]
English summary
Hyundai creta car records highest sales october 2024 overtake brezza and punch suvs details
Read more on hyundai india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+