ಮಾರುತಿ ಎಲೆಕ್ಟ್ರಿಕ್‌ಗೂ ಮೊದಲೇ ಬರಲಿದೆ ಹ್ಯುಂಡೈ ಕ್ರೆಟಾ ಇವಿ: ಎದುರಾಳಿಗಳ ಅಖಾಡದಲ್ಲಿ ಭಾರೀ ಚರ್ಚೆ!
ಸದ್ಯಕ್ಕೆ ಭಾರತೀಯ ಕಾರು ಮಾರುಕಟ್ಟೆಯ ಎಸ್‌ಯುವಿ ಸೆಗ್ಮೆಂಟ್‌ನಲ್ಲಿ ಸಾಕಷ್ಟು ಸದ್ದು ಮಾಡುತ್ತಿರುವ ಕಾರುಗಳಲ್ಲಿ ದಕ್ಷಿಣ ಕೊರಿಯನ್ ಕಾರು ನಿರ್ಮಾಣ ಕಂಪನಿಯಾದ ಕ್ರೆಟಾ ಒಂದು ಹೆಜ್ಜೆ ಮುಂದಿದೆ. ಈ ವರ್ಷದ ಆರಂಭದಲ್ಲಿ ಕ್ರೆಟಾ ಕಾರಿನ ಫೇಸ್‌ಲಿಫ್ಟ್ ಮತ್ತು ಕೆಲವೇ ದಿನಗಳಲ್ಲಿ ಇದರ ಎನ್‌ಲೈನ್ ಆವೃತ್ತಿಯನ್ನು ಸಹ ಕಂಪನಿ ಬಿಡುಗಡೆ ಮಾಡಿತ್ತು. ಇದೀಗ ಹ್ಯುಂಡೈ ಕಂಪನಿ ಕ್ರೆಟಾ ಕಾರಿನ ಎಲೆಕ್ಟ್ರಿಕ್ ಮಾದರಿಯನ್ನು ಯಾವಾಗ ಬಿಡುಗಡೆ ಮಾಡಲಿದೆ ಎಂಬ ಮಾಹಿತಿ ಹೊರಬಿದ್ದಿದ್ದು, ಪ್ರತಿಸ್ಪರ್ಧಿಗಳ ಎದೆಯಲ್ಲಿ ಈಗಾಗಲೇ ನಡುಕ ಶುರುವಾಗಿದೆ ಎಂದರೆ ತಪ್ಪಾಗಲಾರದು.
ಹೌದು, ಹ್ಯುಂಡೈ ಕ್ರೆಟಾ (Hyundai Creta Electric) ಏನಾದರೂ ಮಾರುಕಟ್ಟೆಗೆ ಬಂದರೆ ಇದರ ಎದುರಾಳಿ ಕಾರು ಕಂಪನಿಗಳಿಗೆ ಸಾಕಷ್ಟು ಸ್ಪರ್ಧೆ ಎದುರಾಗಲಿದೆ. ಮುಂಬರಲಿರುವ ಎಲೆಕ್ಟ್ರಿಕ್ ಕಾರುಗಳಾದ ಟಾಟಾ ಕರ್ವ್, ಮಾರುತಿ ಸುಜುಕಿ ಇವಿಎಕ್ಸ್ ಮತ್ತು ಸದ್ಯಕ್ಕೆ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಎಂಜಿ ಕಂಪನಿಯ ZS EV ಕಾರು ಮಾದರಿಗಳಿಗೆ ಭಾರೀ ಸ್ಪರ್ಧೆಯನ್ನು ಈ ಕಾರು ನೀಡಲಿದೆ.

ಮಾಹಿತಿಗಳ ಪ್ರಕಾರ ಹ್ಯುಂಡೈ ಕಂಪನಿಯು ತನ್ನ ಕ್ರೆಟಾ ಎಲೆಕ್ಟ್ರಿಕ್ ಕಾರನ್ನು ಮುಂದಿನ ವರ್ಷದ ಆರಂಭದಲ್ಲಿ ಅಂದರೆ 2025ರ ಜನವರಿ ತಿಂಗಳಲ್ಲಿ ಮಾರುಕಟ್ಟೆಗೆ ತರಲಿದ್ದು, ಹ್ಯುಂಡೈ ಕೋನಾ ಎಲೆಕ್ಟ್ರಿಕ್‌ನ ಕೆಲವೊಂದು ಅಂಶಗಳು ಈ ಕಾರಿನಲ್ಲಿ ಇರಲಿದೆ ಎಂದು ತಿಳಿದು ಬಂದಿದೆ. ಮಾರುತಿ ಸುಜುಕಿಯು ತನ್ನ ಮೊದಲ ಎಲೆಕ್ಟ್ರಿಕ್ ಕಾರಾದ ಇವಿಎಕ್ಸ್ ಅನ್ನು ಲಾಂಚ್ ಮಾಡುವ ಮೊದಲೇ ಹ್ಯುಂಡೈ, ಕ್ರೆಟಾ ಎಲೆಕ್ಟ್ರಿಕ್ ಅನ್ನು ಲಾಂಚ್ ಮಾಡಲಿದೆ.
ಈ ಹೊಸ ಹ್ಯುಂಡೈ ಕ್ರೆಟಾ ಇವಿ (Hyundai Creta EV), ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಇನ್ಸ್ಟ್ರುಮೆಂಟ್ ಕ್ಲಸ್ಟರ್‌ಗಾಗಿ ಡುಯಲ್ ಡಿಸ್ಪ್ಲೇ, ಹೊಸದಾದ ಸ್ಟೀರಿಂಗ್ ವೀಲ್, ಸ್ಟೀರಿಂಗ್ ಕಾಲಮ್-ಮೌಂಟೆಡ್ ಡ್ರೈವ್ ಸೆಲೆಕ್ಟರ್, ಎಸಿ ವೆಂಟ್ಸ್, ಪನೋರಮಿಕ್ ಸನ್‌ರೂಫ್, ಡುಯಲ್-ಜೋನ್ ಕ್ಲೈಮೇಟ್ ಕಂಟ್ರೋಲ್ ವೈಶಿಷ್ಟ್ಯಗಳನ್ನು ಪಡೆದಿರಲಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್, ADAS (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ರೇರ್ ಪಾರ್ಕಿಂಗ್ ಸೇನಾರ್ಸ್ ಒಳಗೊಂಡಿರುವ ಸಾಧ್ಯತೆಯಿದೆ.

ನೂತನ ಹ್ಯುಂಡೈ ಕ್ರೆಟಾ ಇವಿ ದೊಡ್ಡದಾದ ಬ್ಯಾಟರಿ ಪ್ಯಾಕ್ ಹೊಂದಿರಲಿದ್ದು, ಬಹುತೇಕ 50 ಕೆಡಬ್ಲ್ಯೂಹೆಚ್ ಅಥವಾ 60 ಕೆಡಬ್ಲ್ಯೂಹೆಚ್ ಆಯ್ಕೆಯಲ್ಲಿ ಖರೀದಿಗೆ ದೊರೆಯಬಹುದು ಎನ್ನಲಾಗಿದೆ. ಭರ್ತಿ ಚಾರ್ಜ್ ನಲ್ಲಿ ಸುಮಾರು 500 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡಬಹುದು ಎಂದು ಅಂದಾಜಿಸಲಾಗಿದೆ. ಈ ಕಾರಿಗೆ ಟಾಟಾ ನೆಕ್ಸಾನ್ ಇವಿ, ಮಹೀಂದ್ರಾ ಎಕ್ಸ್‌ಯುವಿ400 ಪ್ರಬಲ ಪ್ರತಿಸ್ಪರ್ಧಿಯಾಗಬಹುದು ಎಂದು ಹೇಳಲಾಗಿದೆ.
ಸದ್ಯಕ್ಕೆ ಭಾರತೀಯ ಮಾರುಕಟ್ಟೆಯಲ್ಲಿ ಲಭ್ಯವಿರುವ ಹ್ಯುಂಡೈ ಕ್ರೆಟಾ ಕಾರಿನ ಬಗ್ಗೆ ನೋಡುವುದಾದರೆ, ರೂ.11 ಲಕ್ಷದಿಂದ ರೂ.20.15 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಇ, ಎಕ್ಸ್, ಎಸ್, ಎಸ್ (ಒ) ಸೇರಿದಂತೆ ವಿವಿಧ ರೂಪಾಂತರ ಹಾಗೂ ಫಿಯರಿ ರೆಡ್, ರೇಂಜರ್ ಖಾಕಿ, ಅಬಿಸ್ ಬ್ಲ್ಯಾಕ್, ಅಟ್ಲಾಸ್ ವೈಟ್ ಒಳಗೊಂಡಂತೆ ಆಕರ್ಷಕ ಬಣ್ಣಗಳೊಂದಿಗೆ ಸಿಗುತ್ತದೆ. ಈ ಕಾರಿನಲ್ಲಿ 5 ಮಂದಿ ಪ್ರಯಾಣಿಸಬಹುದು.

ಈ ಹ್ಯುಂಡೈ ಕ್ರೆಟಾ ಫೇಸ್‌ಲಿಫ್ಟ್ ಕಾರು 1.5-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಹೊಂದಿದೆ. ರೂಪಾಂತರಗಳ ಅನ್ವಯ 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮೆಟಿಕ್, ಸಿವಿಟಿ, 7-ಸ್ಪೀಡ್ ಡಿಸಿಟಿ ಗೇರ್ ಬಾಕ್ಸ್ ಅನ್ನು ಪಡೆದಿದೆ. ಪೆಟ್ರೋಲ್ ರೂಪಾಂತರಗಳು 17.4 ರಿಂದ 18.4 ಕೆಎಂಪಿಎಲ್ ಹಾಗೂ ಡೀಸೆಲ್ ಮಾದರಿಗಳು 19.1 ರಿಂದ 21.8 ಮೈಲೇಜ್ ನೀಡುತ್ತವೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications