Creta EV: ಪ್ರತಿಸ್ಪರ್ಧಿಗಳಿಗೆ ನಡುಕ.. ರಸ್ತೆಯಲ್ಲಿ ಕಾಣಿಸಿಕೊಂಡ ಹ್ಯುಂಡೈ ಕ್ರೆಟಾ ಎಲೆಕ್ಟ್ರಿಕ್ ಕಾರು, ಹೇಗಿರಲಿದೆ?
ಭಾರತದ ಮಾರುಕಟ್ಟೆಯಲ್ಲಿ ಹ್ಯುಂಡೈ ಕ್ರೆಟಾ ಫೇಸ್‌ಲಿಫ್ಟ್ (Hyundai Creta Facelift) ಜನಪ್ರಿಯ ಎಸ್‌ಯುವಿಯಾಗಿದೆ. ಇದರ ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಕ್ಕೆ ಗ್ರಾಹಕರು ಮನಸೋತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಖರೀದಿಸುತ್ತಿದ್ದಾರೆ. ದಿನದಿಂದ ದಿನಕ್ಕೆ ಬೇಡಿಕೆಯು ಹೆಚ್ಚಾಗುತ್ತಲೇ ಇದ್ದು, ಮಾರಾಟ ಪ್ರಮಾಣವು ದ್ವಿಗುಣಗೊಳ್ಳುತ್ತಿದೆ. ಸದ್ಯ ಕಂಪನಿಯು ಪ್ರತಿಸ್ಪರ್ಧಿಗಳಿಗೆ ಪ್ರಬಲ ಪೈಪೋಟಿ ನೀಡಲು ಈ ಕಾರನ್ನು ಎಲೆಕ್ಟ್ರಿಕ್ ರೂಪಾಂತರದಲ್ಲಿ ಬಿಡುಗಡೆಗೊಳಿಸಲು ಬಹಳಷ್ಟು ತಯಾರಿಯನ್ನು ನಡೆಸುತ್ತಿದೆ. ಕಳೆದ ತಿಂಗಳು ಸಹ 'ಕ್ರೆಟಾ' ಎಲೆಕ್ಟ್ರಿಕ್ ಎಸ್‌ಯುವಿಯು ಪ್ರಾಯೋಗಿಕ ಸಂಚಾರವನ್ನು ನಡೆಸುವಾಗ ಕಂಡುಬಂದಿತ್ತು.
ಇತ್ತಿಚೆಗೆ ಮಹಾರಾಷ್ಟ್ರದ ಪುಣೆಯಲ್ಲಿರುವ ಚಾರ್ಜಿಂಗ್ ಸ್ಟೇಷನ್‌ನಲ್ಲಿ ಹ್ಯುಂಡೈ ಕ್ರೆಟಾ ಇವಿ ನಿಂತಿರುವ ಸ್ಪೈ ಫೋಟೋಗಳು ಆನ್‌ಲೈನ್‌ನಲ್ಲಿ ಸೋರಿಕೆಯಾಗಿವೆ. ಇವು ಹೊಸ ಕಾರಿನ ವಿನ್ಯಾಸ (ಡಿಸೈನ್)ದ ಬಗ್ಗೆ ಒಂದಷ್ಟು ಬೆಳಕನ್ನು ಚೆಲ್ಲುತ್ತವೆ. ಪರೀಕ್ಷಾರ್ಥ ಸಂಚಾರದ ಸಂದರ್ಭದಲ್ಲಿ ಈ ಕಾರನ್ನು ಸಂಪೂರ್ಣವಾಗಿ ಕಪ್ಪು (ಬ್ಲ್ಯಾಕ್) ಬಣ್ಣದ ಬಟ್ಟೆಯಿಂದ ಮುಚ್ಚಲಾಗಿದೆ. ಆದರೂ ಮಿರರ್ (ಕನ್ನಡಿ) ಮೇಲೆ ಬ್ಲೈಂಡ್-ಸ್ಪಾಟ್ ಮಾನಿಟರ್ ಇರುವುದನ್ನು ಸೂಕ್ಷ್ಮವಾಗಿ ವೀಕ್ಷಿಸಬಹುದು.

ಮಾರುತಿ ಸುಜುಕಿಯ ಬಹುನಿರೀಕ್ಷಿತ 'ಇವಿಎಕ್ಸ್' ಎಲೆಕ್ಟ್ರಿಕ್ ಕಾರಿನೊಂದಿಗೆ ನೇರವಾಗಿ ಸ್ಪರ್ಧಿಸಲಿರುವ ಕ್ರೆಟಾ ಇವಿಯು 360-ಡಿಗ್ರಿ ಕ್ಯಾಮೆರಾ ಸೆಟಪ್‌ನೊಂದಿಗೆ ಬರಬಹುದು ಎಂಬ ಅಂಶವು ಬಯಲಾಗಿದೆ. ಹಿಂದಿನ ಸ್ಪೈ ಫೋಟೋಗಳು ADAS (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಹೊಂದಿರುವುದನ್ನು ಖಚಿತಪಡಿಸಿವೆ. ಸಾಮಾನ್ಯ ಕ್ರೆಟಾದಂತೆ ಇಂಧನ (ಫ್ಯುಯೆಲ್) ತುಂಬುವ ಸ್ಥಳದಲ್ಲಿ ಚಾರ್ಜಿಂಗ್ ಪೋರ್ಟ್‌ನ್ನು ಪಡೆದಿರುವ ಸಾಧ್ಯತೆಯಿದೆ.
ನೂತನ ಹ್ಯುಂಡೈ ಕ್ರೆಟಾ ಎಲೆಕ್ಟ್ರಿಕ್ ಎಸ್‌ಯುವಿ ರೂ.20 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ದೊರೆಯಬಹುದು ಎಂದು ಅಂದಾಜಿಸಲಾಗಿದೆ. 50 ಅಥವಾ 60 ಕೆಡಬ್ಲ್ಯೂಹೆಚ್ (kWh) ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಹೊಂದಲಿರುವ ಈ ಕಾರು, ಸಂಪೂರ್ಣ ಚಾರ್ಜ್‌ನಲ್ಲಿ 500 ಕಿಲೋಮೀಟರ್ ರೇಂಜ್ (ಮೈಲೇಜ್) ಕೊಡುವ ನಿರೀಕ್ಷೆಯಿದೆ.
ಪ್ರಸ್ತುತ ದೇಶೀಯವಾಗಿ ಸಿಗುವ ಹ್ಯುಂಡೈ ಕ್ರೆಟಾ ಫೇಸ್‌ಲಿಫ್ಟ್ ಕಾರು, ರೂ.11 ರಿಂದ ರೂ.20.15 ಲಕ್ಷ ಎಕ್ಸ್ ಶೋರೂಂ ದರವನ್ನು ಪಡೆದಿದೆ. ಆಕರ್ಷಕವಾದ ವಿನ್ಯಾಸವನ್ನು ಒಳಗೊಂಡಿದ್ದು, ಅಬಿಸ್ ಬ್ಲ್ಯಾಕ್, ಟೈಟಾನ್ ಗ್ರೇ, ಫಿಯರಿ ರೆಡ್, ರೇಂಜರ್ ಖಾಕಿ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. ಈ ಕಾರಿನಲ್ಲಿ 5 ಮಂದಿ ಆರಾಮದಾಯಕವಾಗಿ ಪ್ರಯಾಣಿಸಬಹುದು.
ಈ ಕ್ರೆಟಾ ಫೇಸ್‌ಲಿಫ್ಟ್ ಎಸ್‌ಯುವಿಯು 1.5-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಪವರ್‌ಟ್ರೇನ್‌ನೊಂದಿಗೆ ಲಭ್ಯವಿದೆ. ರೂಪಾಂತರ (ವೇರಿಯೆಂಟ್)ಗಳಿಗೆ ಅನುಗುಣವಾಗಿ 6-ಸ್ಪೀಡ್ ಮ್ಯಾನುವಲ್, 6-ಸ್ಪೀಡ್ ಆಟೋಮೆಟಿಕ್, ಸಿವಿಟಿ, 7-ಸ್ಪೀಡ್ ಡಿಸಿಟಿ ಗೇರ್‌ಬಾಕ್ಸ್‌ನ್ನು ಪಡೆದಿದ್ದು, 17.4 ರಿಂದ 21.8 ಮೈಲೇಜ್ ಕೊಡುತ್ತದೆ.
ಹೊಸ ಹ್ಯುಂಡೈ ಕ್ರೆಟಾ ಫೇಸ್‌ಲಿಫ್ಟ್ ಎಸ್‌ಯುವಿಯು ಹತ್ತಾರು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಹೊಂದಿದೆ. ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಇನ್ಸ್ಟ್ರುಮೆಂಟ್ ಕ್ಲಸ್ಟರ್‌ಗಾಗಿ 10.25-ಇಂಚಿನ ಡುಯಲ್ ಡಿಸ್ಪ್ಲೇ, ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯ (ಫೀಚರ್ಸ್)ಗಳನ್ನು ಒಳಗೊಂಡಿದೆ. ಸುರಕ್ಷತೆಗೂ ಹೆಸರುವಾಗಿಯಾಗಿದ್ದು, 6 ಏರ್‌ಬ್ಯಾಗ್, (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್) ಹಾಗೂ 360 ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.
Source: Carwale


Click it and Unblock the Notifications