Hyundai Creta: ಮೊದಲ ಬಾರಿಗೆ ಹ್ಯುಂಡೈ ಕ್ರೆಟಾ ಫೇಸ್‌ಲಿಫ್ಟ್ ಬೆಲೆ ಏರಿಕೆ, ಎಷ್ಟು?
ಹ್ಯುಂಡೈ ಕ್ರೆಟಾ ಫೇಸ್‌ಲಿಫ್ಟ್ (Hyundai Creta Facelift) ಪ್ರಖ್ಯಾತ ಎಸ್‌ಯುವಿಯಾಗಿ ಗುರುತಿಸಿಕೊಂಡಿದೆ. ತಿಂಗಳಿಂದ ತಿಂಗಳಿಗೆ ಭಾರೀ ಬೇಡಿಕೆ ಸೃಷ್ಟಿಯಾಗುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಖರೀದಿದಾರರು ಬುಕ್ಕಿಂಗ್ ಮಾಡುತ್ತಿದ್ದಾರೆ. ಇದೇ ಮೊದಲ ಬಾರಿಗೆ ದೇಶೀಯ ಮಾರುಕಟ್ಟೆಯಲ್ಲಿ ಈ ಕಾರಿನ ಬೆಲೆ ಸ್ವಲ್ಪ ಪ್ರಮಾಣದಲ್ಲಿ ಹೆಚ್ಚಳವಾಗಿದೆ ಎಂದು ವರದಿಯಾಗಿದೆ.
ಪೆಟ್ರೋಲ್ ರೂಪಾಂತರಗಳಾದ 'ಇ' 1.5-ಲೀಟರ್ ಎಂಜಿನ್-ಮ್ಯಾನುವಲ್ ಗೇರ್ ಬಾಕ್ಸ್, 'ಎಸ್ಎಕ್ಸ್(ಒ)' 1.5-ಲೀಟರ್ ಟರ್ಬೊ ಎಂಜಿನ್-ಡಿಸಿಟಿ ಹೊರತುಪಡಿಸಿ ಉಳಿದ ಮಾದರಿಗಳ ಬೆಲೆ ರೂ.3,500 ಹೆಚ್ಚಳವಾಗಿದೆ. ಡೀಸೆಲ್ ಆವೃತ್ತಿಗಳಾದ 'ಎಸ್ಎಕ್ಸ್(ಒ)' 1.5-ಲೀಟರ್ ಆಟೋಮೆಟಿಕ್ ಗೇರ್ ಬಾಕ್ಸ್, 'ಎಸ್ಎಕ್ಸ್(ಒ)' 1.5-ಲೀಟರ್ ಆಟೋಮೆಟಿಕ್ ಗೇರ್ ಬಾಕ್ಸ್ ಡುಯಲ್ ಟೋನ್ ಸೇರಿದಂತೆ ಆಯ್ದ ರೂಪಾಂತರಗಳ ದರವನ್ನು ಏರಿಸಿಲ್ಲ. ಇನ್ನಿತರೇ ಮಾದರಿಗಳ ಬೆಲೆಯನ್ನು ರೂ.10,800 ಅಧಿಕಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

ಸದ್ಯ ಭಾರತದ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ ಹ್ಯುಂಡೈ ಕ್ರೆಟಾ ಫೇಸ್‌ಲಿಫ್ಟ್, ರೂ.11 ಲಕ್ಷದಿಂದ ರೂ.20.15 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಅತ್ಯಾಧುನಿಕ ವಿನ್ಯಾಸವನ್ನು ಹೊಂದಿರುವ ಈ ಕಾರು, ಫಿಯರಿ ರೆಡ್, ರೇಂಜರ್ ಖಾಕಿ, ಅಬಿಸ್ ಬ್ಲ್ಯಾಕ್, ಅಟ್ಲಾಸ್ ವೈಟ್, ಟೈಟಾನ್ ಗ್ರೇ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿ ಸಿಗುತ್ತದೆ. ಜೊತೆಗೆ 5 ಆಸನ ಆಯ್ಕೆ ವ್ಯವಸ್ಥೆಯನ್ನು ಕೂಡ ಪಡೆದಿದೆ.
ಈ ಕಾರು 2 ಪೆಟ್ರೋಲ್ ಹಾಗೂ 1 ಡೀಸೆಲ್ ಪವರ್ ಟ್ರೇನ್ ಆಯ್ಕೆಯಲ್ಲಿ ದೊರೆಯುತ್ತದೆ. ಇದರ 1.5-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್ 115 ಪಿಎಸ್ ಗರಿಷ್ಠ ಪವರ್ (ಶಕ್ತಿ) ಹಾಗೂ 144 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 1.5-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ 160 ಪಿಎಸ್ ಪವರ್, 253 ಎನ್ಎಂ ಪೀಕ್ ಟಾರ್ಕ್ ಹೊರಹಾಕುತ್ತದೆ.

ಮತ್ತೊಂದು 1.5-ಲೀಟರ್ ಡೀಸೆಲ್ ಎಂಜಿನ್ 116 ಪಿಎಸ್ ಪವರ್ ಹಾಗೂ 250 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಈ ಎಸ್‌ಯುವಿಯು ರೂಪಾಂತರಗಳಿಗೆ ಅನುಗುಣವಾಗಿ 6-ಸ್ವೀಡ್ ಮ್ಯಾನುವಲ್, 6-ಸ್ವೀಡ್ ಆಟೋಮೆಟಿಕ್, ಸಿವಿಟಿ, 7-ಸ್ವೀಡ್ ಡಿಸಿಟಿ ಗೇರ್ ಬಾಕ್ಸ್ ಆಯ್ಕೆಯನ್ನು ಹೊಂದಿದೆ. ಪೆಟ್ರೋಲ್ ರೂಪಾಂತರಗಳು 17.4 ರಿಂದ 18.4 ಕೆಎಂಪಿಎಲ್ ಹಾಗೂ ಡೀಸೆಲ್ ಮಾದರಿಗಳು 19.1 ರಿಂದ 21.8 ಮೈಲೇಜ್ ಕೊಡುತ್ತವೆ.
ನೂತನ ಹ್ಯುಂಡೈ ಕ್ರೆಟಾ ಫೇಸ್‌ಲಿಫ್ಟ್ ಎಸ್‌ಯುವಿ ಯುವ ಗ್ರಾಹಕರನ್ನು ಆಕರ್ಷಿಸುವ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. 10.25-ಇಂಚಿನ ಡುಯಲ್ ಡಿಸ್ಪ್ಲೇ (ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಇನ್ಸ್ಟ್ರುಮೆಂಟ್ ಕ್ಲಸ್ಟರ್) ಡುಯಲ್ ಝೋನ್ ಎಸಿ, 8-ಸ್ಪೀಕರ್ ಬೋಸ್ ಸೌಂಡ್ ಸಿಸ್ಟಮ್, ಸನ್‌ರೂಫ್, ವೈರ್‌ಲೆಸ್ ಫೋನ್ ಚಾರ್ಜಿಂಗ್, ವೆಂಟಿಲೇಟೆಡ್ ಫ್ರಂಟ್ ಸೀಟ್ಸ್ ಅನ್ನು ಹೊಂದಿದೆ.

ಈ ಕಾರು ಸುರಕ್ಷತೆಗೂ ಹೆಸರುವಾಸಿಯಾಗಿದ್ದು, 6 ಏರ್‌ಬ್ಯಾಗ್, ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ADAS (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್), 360 ಡಿಗ್ರಿ ಕ್ಯಾಮೆರಾ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಹ್ಯುಂಡೈ ಕ್ರೆಟಾಗೆ ಕಿಯಾ ಸೆಲ್ಟೋಸ್, ಮಾರುತಿ ಗ್ರ್ಯಾಂಡ್ ವಿಟಾರಾ, ಪೋಕ್ಸ್‌ವ್ಯಾಗನ್ ಟೈಗನ್ ಮತ್ತು ಹೋಂಡಾ ಎಲಿವೇಟ್ ಪ್ರಬಲ ಪ್ರತಿಸ್ಪರ್ಧಿಯಾಗಿವೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications