Hyundai Creta: ಹ್ಯುಂಡೈ ಕ್ರೆಟಾ ಕಾರಿಗಾಗಿ ಕ್ಯೂ ನಿಂತ ಗ್ರಾಹಕರು, ಹೊಸ ದಾಖಲೆ

ಭಾರತದಲ್ಲಿ ಹ್ಯುಂಡೈ ಕ್ರೆಟಾ ಫೇಸ್‌ಲಿಫ್ಟ್ (Hyundai Creta Facelift) ಎಸ್‌ಯುವಿಗೆ ದಿನದಿಂದ ದಿನಕ್ಕೆ ಬೇಡಿಕೆ ಹೆಚ್ಚಾಗುತ್ತಿದೆ. ಇದರ ಅತ್ಯುತ್ತಮ ಕಾರ್ಯಕ್ಷಮತೆ ಹಾಗೂ ವೈಶಿಷ್ಟ್ಯಗಳಿಗೆ ಗ್ರಾಹಕರು ಸಹ ಮನಸೋತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಕೊಂಡುಕೊಳ್ಳುತ್ತಿದ್ದಾರೆ. ಇದೀಗ ಈ ಕಾರಿನ ಬುಕ್ಕಿಂಗ್‌ನಲ್ಲಿ ಹೊಸದೊಂದು ದಾಖಲೆ ನಿರ್ಮಾಣಗೊಂಡಿದೆ.

ಈ ವರ್ಷದ ಜನವರಿ 16ರಂದು ದೇಶೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಂಡ ಹ್ಯುಂಡೈ ಕ್ರೆಟಾ ಫೇಸ್‌ಲಿಫ್ಟ್ ಎಸ್‌ಯುವಿಗೆ 3 ತಿಂಗಳು ಕಳೆಯುವ ಮೊದಲೇ 80,000ಕ್ಕೂ ಹೆಚ್ಚಿನ ಗ್ರಾಹಕರು ಆರ್ಡರ್ ಮಾಡಿದ್ದಾರೆ ಎಂಬ ವಿವರಗಳು ಲಭ್ಯವಾಗಿದೆ. ಹ್ಯುಂಡೈ ಕ್ರೆಟಾ 2015ರಿಂದಲೂ ಖರೀದಿದಾರರಿಗೆ ಲಭ್ಯವಿದ್ದು, ಇತ್ತೀಚೆಗೆ 10 ಲಕ್ಷ ಯುನಿಟ್ ಮಾರಾಟ ಮೈಲಿಗಲ್ಲನ್ನು ಮುಟ್ಟಿತ್ತು.

Hyundai Creta Facelift Car Received 80 000 Booking Within 3 Months

ಭಾರತದಲ್ಲಿ ಹ್ಯುಂಡೈ ಕ್ರೆಟಾ ಫೇಸ್‌ಲಿಫ್ಟ್ ಎಸ್‌ಯುವಿ ರೂ.11 ಲಕ್ಷದಿಂದ ರೂ.20.15 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಸಿಗುತ್ತದೆ. ಇ, ಇಎಕ್ಸ್, ಎಸ್, ಎಸ್(ಒ) ಸೇರಿದಂತೆ 7 ರೂಪಾಂತರ ಮತ್ತು ವಿವಿಧ ಆಕರ್ಷಕ ಬಣ್ಣಗಳೊಂದಿಗೂ ಲಭ್ಯವಿದೆ. ವಿನ್ಯಾಸದ ದೃಷ್ಟಿಯಿಂದಲೂ ಈ ಕಾರು ಅತ್ಯುತ್ತಮವಾಗಿದ್ದು, 5 ಜನರು ಆರಾಮದಾಯಕ ಕುಳಿತುಕೊಂಡು ದೂರದ ಊರುಗಳಿಗೆ ಪ್ರಯಾಣಿಸಬಹುದು.

ಹ್ಯುಂಡೈ ಕ್ರೆಟಾ ಫೇಸ್‌ಲಿಫ್ಟ್ 1.5-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀಟರ್ ಟರ್ಬೊ ಪೆಟ್ರೋಲ್ ಹಾಗೂ 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಪಡೆದಿದೆ. ರೂಪಾಂತರಗಳಿಗೆ ತಕ್ಕಂತೆ 6-ಸ್ವೀಡ್ ಮ್ಯಾನುವಲ್, 6-ಸ್ವೀಡ್ ಆಟೋಮೆಟಿಕ್, ಸಿವಿಟಿ, 7-ಸ್ವೀಡ್ ಡಿಸಿಟಿ ಗೇರ್ ಬಾಕ್ಸ್ ನೊಂದಿಗೆ ಲಭ್ಯವಿದೆ. ಪೆಟ್ರೋಲ್ ರೂಪಾಂತರಗಳು 17.4 ರಿಂದ 18.4 ಕೆಎಂಪಿಎಲ್, ಡೀಸೆಲ್ ರೂಪಾಂತರಗಳು 19.1 ರಿಂದ 21.8 ಕೆಎಂಪಿಎಲ್ ಮೈಲೇಜ್ ಕೊಡುತ್ತವೆ.

Hyundai Creta Facelift Car Received 80 000 Booking Within 3 Months

ಈ ಕಾರು 10.25-ಇಂಚಿನ ಡುಯಲ್ ಡಿಸ್ಪ್ಲೇ (ಇನ್ಫೋಟೈನ್‌ಮೆಂಟ್ ಸಿಸ್ಟಮ್‌ & ಇನ್ಸ್ಟ್ರುಮೆಂಟ್ ಕ್ಲಸ್ಟರ್) ಡುಯಲ್ ಝೋನ್ ಎಸಿ, 8-ಸ್ಪೀಕರ್ ಬೋಸ್ ಸೌಂಡ್ ಸಿಸ್ಟಮ್, ಸನ್‌ರೂಫ್, ವೈರ್‌ಲೆಸ್ ಫೋನ್ ಚಾರ್ಜಿಂಗ್ ವೆಂಟಿಲೇಟೆಡ್ ಫ್ರಂಟ್ ಸೀಟ್ಸ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌, ADAS (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್),TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಅನ್ನು ಹೊಂದಿದೆ.

ಕೆಲವೇ ದಿನಗಳ ಹಿಂದೆ, ಹ್ಯುಂಡೈ ಕಂಪನಿಯು ಕ್ರೆಟಾ ಎನ್ ಲೈನ್ (Creta N Line) ಆವೃತ್ತಿಯನ್ನು ಬಿಡುಗಡೆ ಮಾಡಿತ್ತು. ಇದು ರೂ.16.82 ಲಕ್ಷ (ಎಕ್ಸ್ ಶೋರೂಂ) ಆರಂಭಿಕ ಬೆಲೆಯನ್ನು ಹೊಂದಿದೆ. ಆಸಕ್ತ ಗ್ರಾಹಕರು ಈ ಕಾರನ್ನು ರೂ.25,000 ಮುಂಡಗ ಹಣವನ್ನು ಪಾವತಿಸುವ ಮೂಲಕ ಬುಕ್ಕಿಂಗ್ ಮಾಡಬಹುದು.

Hyundai Creta Facelift Car Received 80 000 Booking Within 3 Months

ನೂತನ ಹ್ಯುಂಡೈ ಕ್ರೆಟಾ ಎನ್ ಲೈನ್ ಮಾದರಿಯು ಎನ್8 ಹಾಗೂ ಎನ್10 ಎಂಬ ಎರಡು ರೂಪಾಂತರ ಆಯ್ಕೆಯಲ್ಲಿ ದೊರೆಯುತ್ತದೆ. ಈ ಕಾರು 1.5-ಲೀಟರ್ ಪೆಟ್ರೋಲ್ ಎಂಜಿನ್ ಪಡೆದಿದ್ದು,158 ಬಿಹೆಚ್‌ಪಿ ಗರಿಷ್ಠ ಪವರ್ (ಶಕ್ತಿ) ಹಾಗೂ 253 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಜೊತೆಗೆ ಗ್ರಾಹಕರನ್ನು ಸೆಳೆಯುವ ವೈಶಿಷ್ಟ್ಯಗಳನ್ನು ಕೂಡ ಒಳಗೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Wednesday, March 13, 2024, 18:14 [IST]
English summary
Hyundai creta facelift car received 80000 booking within 3 months
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+