Hyundai: ಹ್ಯುಂಡೈ ಕ್ರೆಟಾಗಾಗಿ ಶೋರೂಂ ಎಡತಾಕಿದ ಗ್ರಾಹಕರು, 21 ಕಿ.ಮೀ ಮೈಲೇಜ್.. ರೂ.11 ಲಕ್ಷ ದರ

ಭಾರತದಲ್ಲಿ ಹ್ಯುಂಡೈ (Hyundai) ಪ್ರಮುಖ ಕಾರು ತಯಾರಕ ಕಂಪನಿಯಾಗಿ ಗುರುತಿಸಿಕೊಂಡಿದೆ. ಕಳೆದ ತಿಂಗಳು ಜನಪ್ರಿಯ ಕ್ರೆಟಾ ಫೇಸ್‌ಲಿಫ್ಟ್ (Creta Facelift) ಎಸ್‌ಯುವಿಯನ್ನು ಬಿಡುಗಡೆಗೊಳಿಸಿತ್ತು. ಈ ಕಾರು ಹೇರಳವಾದ ಖ್ಯಾತಿಯನ್ನು ಹೊಂದಿದ್ದು, ಇತ್ತೀಚೆಗೆ 50,000 ಯುನಿಟ್ ಬುಕ್ಕಿಂಗ್ ಮೈಲಿಗಲ್ಲನ್ನು ಸಾಧಿಸಿ ದಾಖಲೆಯನ್ನು ನಿರ್ಮಿಸಿತ್ತು.

ಸದ್ಯ ಹ್ಯುಂಡೈ ಕ್ರೆಟಾ ಎಸ್‌ಯುವಿಗೆ ಮತ್ತಷ್ಟು ಬೇಡಿಕೆ ಬಂದಿದ್ದು, ಹೆಚ್ಚಿನ ಕಾಯುವಿಕೆ ಅವಧಿಯನ್ನು ಪಡೆದಿದೆ. ಪೆಟ್ರೋಲ್ ಮಾದರಿಗಳು ವಿತರಣೆಯಾಗಲು 5 ರಿಂದ 7 ತಿಂಗಳು ಹಿಡಿಯುತ್ತದೆ. ಡೀಸೆಲ್ ಎಂಜಿನ್ ಆಯ್ಕೆಯಲ್ಲಿ ದೊರೆಯುವ ಮಾದರಿಗಳನ್ನು ನೀವು ಇವತ್ತು ಆರ್ಡರ್ ಮಾಡಿದರೂ ಡೆಲಿವರಿ ಮಾಡಲು ಕನಿಷ್ಠವೆಂದರೂ 4 ರಿಂದ 5 ತಿಂಗಳು ಸಮಯಾವಕಾಶ ಬೇಕೆಂದು ವರದಿಯಾಗಿದೆ.

Hyundai Creta Facelift Car Waiting Period Revealed: 21 Km Mileage, Rs 11 Lakh Price

ದೇಶೀಯ ಮಾರುಕಟ್ಟೆಯಲ್ಲಿ ಹ್ಯುಂಡೈ ಕ್ರೆಟಾ ಫೇಸ್‌ಲಿಫ್ಟ್ (Hyundai Creta Facelift) ಎಸ್‌ಯುವಿ, ರೂ.11 ಲಕ್ಷದಿಂದ ರೂ.20.15 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಇ, ಇಎಕ್ಸ್, ಎಸ್, ಎಸ್(ಒ), ಎಸ್ಎಕ್ಸ್ ಟೆಕ್ ಸೇರಿದಂತೆ 7 ರೂಪಾಂತರಗಳ ಆಯ್ಕೆಯಲ್ಲಿ ಸಿಗುತ್ತದೆ. ಅಟ್ಲಾಸ್ ವೈಟ್, ಅಬಿಸ್ ಬ್ಲಾಕ್, ಟೈಟಾನ್ ಗ್ರೇ, ರೇಂಜರ್ ಖಾಕಿ ಒಳಗೊಂಡಂತೆ ವಿವಿಧ ಆಕರ್ಷಕ ಬಣ್ಣಗಳೊಂದಿಗೆ ಲಭ್ಯವಿದೆ.

ನೂತನ ಹ್ಯುಂಡೈ ಕ್ರೆಟಾ ಕಾರಿನ ಪವರ್‌ಟ್ರೇನ್ ಬಗ್ಗೆ ಹೇಳುವುದಾದರೆ, ಇದು 1.5-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀಟರ್ ಟರ್ಬೊ ಪೆಟ್ರೋಲ್ ಹಾಗೂ 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಹೊಂದಿದೆ. ಜೊತೆಗೆ ರೂಪಾಂತರಗಳ ಅನ್ವಯ 6-ಸ್ವೀಡ್ ಮ್ಯಾನುವಲ್, 6-ಸ್ವೀಡ್ ಆಟೋಮೆಟಿಕ್, ಸಿವಿಟಿ, 7-ಸ್ವೀಡ್ ಡಿಸಿಟಿ ಗೇರ್ ಬಾಕ್ಸ್ ಆಯ್ಕೆಯಲ್ಲಿ ದೊರೆಯುತ್ತದೆ.

Hyundai Creta Facelift Car Waiting Period Revealed: 21 Km Mileage, Rs 11 Lakh Price

ಕ್ರೆಟಾದ ಪೆಟ್ರೋಲ್ ಮಾದರಿಗಳು 17.4 ಕೆಎಂಪಿಎಲ್ - 18.4 ಕೆಎಂಪಿಎಲ್, ಡೀಸೆಲ್ ಮಾದರಿಗಳು 19.1 ಕೆಎಂಪಿಎಲ್ - 21.8 ಕೆಎಂಪಿಎಲ್ ಮೈಲೇಜ್ ನೀಡುತ್ತವೆ. ಈ ಕಾರು 2WD (ಟೂ ವೀಲ್ ಡ್ರೈವ್) ತಂತ್ರಜ್ಞಾನವನ್ನು ಹೊಂದಿದ್ದು, ವಿನ್ಯಾಸದ ದೃಷ್ಟಿಯಿಂದಲೂ ಹೆಚ್ಚು ಅತ್ಯಾಧುನಿಕವಾಗಿದ್ದು, 5 ಮಂದಿ ಆರಾಮದಾಯಕವಾಗಿ ಪ್ರಯಾಣಿಸಬಹುದು.

ಹ್ಯುಂಡೈ ಕ್ರೆಟಾ ಫೇಸ್‌ಲಿಫ್ಟ್ ಎಸ್‌ಯುವಿ 10.25-ಇಂಚಿನ ಡುಯಲ್ ಡಿಸ್ಪ್ಲೇ, ಕನೆಕ್ಟ್ದ್ ಕಾರ್ ಟೆಕ್, ಡುಯಲ್ ಝೋನ್ ಎಸಿ, 8 ಸ್ಪೀಕರ್ ಬೋಸ್ ಸೌಂಡ್ ಸಿಸ್ಟಮ್, ಸನ್‌ರೂಫ್, ವೈರ್‌ಲೆಸ್ ಫೋನ್ ಚಾರ್ಜಿಂಗ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌, ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ADAS (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್),TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು 360 ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.

Hyundai Creta Facelift Car Waiting Period Revealed: 21 Km Mileage, Rs 11 Lakh Price

ಈ ಕಾರಿಗೆ ಕಿಯಾ ಸೆಲ್ಟೋಸ್, ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ, ಟೊಯೊಟಾ ಹೈರಿಡರ್, ಸ್ಕೋಡಾ ಕುಶಾಕ್, ಪೋಕ್ಸ್‌ವ್ಯಾಗನ್ ಟೈಗನ್, ಸಿಟ್ರಸ್ ಸಿ3 ಏರ್‌ಕ್ರಾಸ್ ಮತ್ತು ಹೋಂಡಾ ಎಲಿವೇಟ್ ಪ್ರಬಲ ಪ್ರತಿಸ್ಪರ್ಧಿಯಾಗಿವೆ. ಇನ್ನು, ಬಿಡುಗಡೆಯಾಗಿ ಕೆಲವೇ ದಿನಗಳಲ್ಲಿ ಹ್ಯುಂಡೈ ಕ್ರೆಟಾ ಫೇಸ್‌ಲಿಫ್ಟ್ ಎಸ್‌ಯುವಿ ಭಾರೀ ಬೇಡಿಕೆ ಪಡೆದುಕೊಂಡಿರುವುದು ಉತ್ತಮ ಬೆಳವಣಿಗೆಯಾಗಿದೆ. ಮುಂಬರುವ ತಿಂಗಳಲ್ಲಿ ಮತ್ತಷ್ಟು ಡಿಮ್ಯಾಂಡ್ ಬರಬಹುದು.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Thursday, February 15, 2024, 14:40 [IST]
English summary
Hyundai creta facelift car waiting period revealed 21 km mileage rs 11 lakh price
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+