Hyundai Creta: ಹ್ಯುಂಡೈ ಕ್ರೆಟಾ ಫೇಸ್‌ಲಿಫ್ಟ್ ಕಾರಿಗಾಗಿ ಕ್ಯೂ ನಿಂತ ಗ್ರಾಹಕರು.. 3 ತಿಂಗಳಲ್ಲಿ 1 ಲಕ್ಷ ಬುಕ್ಕಿಂಗ್
ಹ್ಯುಂಡೈ ಕ್ರೆಟಾ ಫೇಸ್‌ಲಿಫ್ಟ್ (Hyundai Creta Facelift) ಜನಪ್ರಿಯ ಎಸ್‌ಯುವಿಯಾಗಿದೆ. ಇದರ ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಕ್ಕೆ ಗ್ರಾಹಕರು ಮನಸೋತಿದ್ದು, ತಾಮುಂದು - ನಾಮುಂದು ಎಂಬಂತೆ ಖರೀದಿಸುತ್ತಿದ್ದಾರೆ. ತಿಂಗಳಿನಿಂದ ತಿಂಗಳಿಗೆ ಬೇಡಿಕೆ ಹೆಚ್ಚಾಗುತ್ತಲೇ ಇದ್ದು, ಈ ಕಾರಿನ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ನಿರ್ಮಾಣಗೊಂಡಿದೆ.
ಹ್ಯುಂಡೈ ಮೋಟಾರ್ ಇಂಡಿಯಾ ಲಿಮಿಟೆಡ್ (HMIL) 'ಕ್ರೆಟಾ' ಎಸ್‌ಯುವಿ ಬಿಡುಗಡೆಯಾಗಿ ಕೇವಲ 3 ತಿಂಗಳಲ್ಲಿ 1 ಲಕ್ಷಕ್ಕೂ ಅಧಿಕ ಬುಕ್ಕಿಂಗ್ ಪಡೆದುಕೊಂಡಿದೆ ಎಂದು ಬುಧವಾರ ಘೋಷಿಸಿದೆ. ಸನ್‌ರೂಫ್ ಮಾದರಿಗಳಿಗೆ ಹೆಚ್ಚಿನ ಬೇಡಿಕೆಯಿದ್ದು, ಶೇಕಡ 71% ಆರ್ಡರ್ ಅನ್ನು ತನ್ನದಾಗಿಸಿಕೊಂಡಿದೆ. ಕಾರ್ ಕನೆಕ್ಟ್ದ್ ಆವೃತ್ತಿಗಳನ್ನು ಶೇಕಡ 52% ಮಂದಿ ಗ್ರಾಹಕರು ಕಾಯ್ದಿರಿಸಿದ್ದಾರೆ.

ಭಾರತದ ಮಾರುಕಟ್ಟೆಯಲ್ಲಿ ಹ್ಯುಂಡೈ ಕ್ರೆಟಾ ಫೇಸ್‌ಲಿಫ್ಟ್ ಎಸ್‌ಯುವಿ, ರೂ.11 ಲಕ್ಷದಿಂದ ರೂ.20.15 ಎಕ್ಸ್ ಶೋರೂಂ ಬೆಲೆಯಲ್ಲಿ ದೊರೆಯುತ್ತದೆ. ಇ, ಇಎಕ್ಸ್, ಎಸ್, ಎಸ್(ಒ), ಎಸ್ಎಕ್ಸ್ ಟೆಕ್ ಒಳಗೊಂಡಂತೆ 7 ರೂಪಾಂತರ ಮತ್ತು ಅಟ್ಲಾಸ್ ವೈಟ್, ಅಬಿಸ್ ಬ್ಲಾಕ್, ಟೈಟಾನ್ ಗ್ರೇ, ರೇಂಜರ್ ಖಾಕಿ ಸೇರಿದಂತೆ ಹಲವು ಆಕರ್ಷಕ ಬಣ್ಣಗಳೊಂದಿಗೆ ಸಿಗುತ್ತದೆ. ಈ ಕಾರಿನಲ್ಲಿ 5 ಮಂದಿ ಆರಾಮದಾಯಕವಾಗಿ ಕುಳಿತುಕೊಂಡು ಪ್ರಯಾಣಿಸಬಹುದು.
ಹ್ಯುಂಡೈ ಕ್ರೆಟಾ ಫೇಸ್‌ಲಿಫ್ಟ್ 3 ಪವರ್ ಟ್ರೇನ್ ಆಯ್ಕೆಯಲ್ಲಿ ದೊರೆಯುತ್ತದೆ. ಇದರ 1.5-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್, 115 ಪಿಎಸ್ ಗರಿಷ್ಠ ಪವರ್ (ಶಕ್ತಿ) ಹಾಗೂ 144 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 1.5-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ 160 ಪಿಎಸ್ ಪವರ್ ಮತ್ತು 253 ಎನ್ಎಂ ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಹೊಂದಿದೆ.

ಮತ್ತೊಂದು 1.5-ಡೀಸೆಲ್ ಎಂಜಿನ್ 116 ಪಿಎಸ್ ಗರಿಷ್ಠ ಪವರ್ (ಶಕ್ತಿ) ಹಾಗೂ ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. ಜೊತೆಗೆ ರೂಪಾಂತರಗಳಿಗೆ ಅನುಗುಣವಾಗಿ 6-ಸ್ವೀಡ್ ಮ್ಯಾನುವಲ್, 6-ಸ್ವೀಡ್ ಆಟೋಮೆಟಿಕ್, ಸಿವಿಟಿ, 7-ಸ್ವೀಡ್ ಡಿಸಿಟಿ ಗೇರ್ ಬಾಕ್ಸ್ ಆಯ್ಕೆಯಲ್ಲಿಯೂ ಸಿಗುತ್ತದೆ. FWD (ಫ್ರಂಟ್ ವೀಲ್ ಡ್ರೈವ್) ತಂತ್ರಜ್ಞಾನವನ್ನು ಹೊಂದಿರುವ ಕಾರು, 17.4 ರಿಂದ 21.8 ಕೆಎಂಪಿಎಲ್ ಮೈಲೇಜ್ ನೀಡುತ್ತದೆ.
ಹ್ಯುಂಡೈ ಕ್ರೆಟಾ ಫೇಸ್‌ಲಿಫ್ಟ್, 10.25-ಇಂಚಿನ ಡುಯಲ್ ಡಿಸ್ಪ್ಲೇ (ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಇನ್ಸ್ಟ್ರುಮೆಂಟ್ ಕ್ಲಸ್ಟರ್) ಡುಯಲ್ ಝೋನ್ ಎಸಿ, 8-ಸ್ಪೀಕರ್ ಬೋಸ್ ಸೌಂಡ್ ಸಿಸ್ಟಮ್, ಸನ್‌ರೂಫ್, ವೈರ್‌ಲೆಸ್ ಫೋನ್ ಚಾರ್ಜಿಂಗ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್, ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಅನ್ನು ಹೊಂದಿದೆ.

ಹ್ಯುಂಡೈ ಕಂಪನಿಯು ಕ್ರೆಟಾ ಫೇಸ್‌ಲಿಫ್ಟ್ ಎಸ್‌ಯುವಿಯೊಂದಿಗೆ ಕ್ರೆಟಾ ಎನ್ ಲೈನ್ ಆವೃತ್ತಿಯನ್ನು ಮಾರಾಟ ಮಾಡುತ್ತಿದೆ. ಇದು ರೂ.16.82 ಲಕ್ಷದಿಂದ ರೂ.20.45 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. 1.5-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಹೊಂದಿದ್ದು, 18 ರಿಂದ 18.2 ಕೆಎಂಪಿಎಲ್ ಮೈಲೇಜ್ ಕೊಡುತ್ತದೆ. 10.25-ಇಂಚಿನ ಡುಯಲ್ ಡಿಸ್ಪ್ಲೇ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications