Hyundai Creta: ಜನಪ್ರಿಯ ಹ್ಯುಂಡೈ ಕ್ರೆಟಾ ಕಾರನ್ನು ಮನೆಗೆ ತರಬೇಕೇ.. ಆನ್-ರೋಡ್ ಬೆಲೆ ಎಷ್ಟು? EMI ಏನು?
ದೇಶದಲ್ಲಿ ಹ್ಯುಂಡೈ ಕ್ರೆಟಾ ಫೇಸ್‌ಲಿಫ್ಟ್ (Hyundai Creta Facelift) ಎಸ್‌ಯುವಿಗೆ ದಿನ ಕಳೆದಂತೆ ಭಾರೀ ಬೇಡಿಕೆ ಸೃಷ್ಟಿಯಾಗುತ್ತಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಬುಕ್ಕಿಂಗ್ ಮಾಡುತ್ತಿದ್ದಾರೆ. ನೀವು ಈ ಕಾರನ್ನು ಖರೀದಿಸಲು ಯೋಚಿಸುತ್ತಿದ್ದರೆ ಆನ್-ರೋಡ್ ಬೆಲೆ ಹಾಗೂ ಇಎಂಐ ಆಯ್ಕೆ ಬಗ್ಗೆ ಇಲ್ಲಿದೆ ವಿವರ.
ಬೆಂಗಳೂರಿನಲ್ಲಿ ಹ್ಯುಂಡೈ ಕ್ರೆಟಾ ಎಸ್‌ಯುವಿಯ ಪೆಟ್ರೋಲ್ ಚಾಲಿತ ಬೇಸ್ ವೇರಿಯೆಂಟ್ (ಆರಂಭಿಕ ಆವೃತ್ತಿ) 'ಇ' ರೂ.13.75 ಲಕ್ಷ, ಮತ್ತೊಂದು ಡೀಸೆಲ್ ಚಾಲಿತ ಬೇಸ್ ಮಾಡೆಲ್ 'ಇ' ರೂ.15.51 ಲಕ್ಷ, ಟಾಪ್ ಮಾಡೆಲ್ (ಗರಿಷ್ಠ ಶ್ರೇಣಿ), 'ಎಸ್ಎಕ್ಸ್ (ಒ) ಟರ್ಬೊ ಡಿಸಿಟಿ ಡಿಟಿ' (ಪೆಟ್ರೋಲ್) ರೂ.25.25 ಲಕ್ಷ, ಡೀಸೆಲ್ ಮೂಲಕ ಓಡಬಲ್ಲ ಟಾಪ್ ವೇರಿಯೆಂಟ್ 'ಎಸ್ಎಕ್ಸ್ (ಒ) ಎಟಿ ಡಿಟಿ' ರೂ.25.25 ಲಕ್ಷ ಆನ್-ರೋಡ್ ಬೆಲೆಯನ್ನು ಹೊಂದಿದೆ.

ನೀವು ಹ್ಯುಂಡೈ ಕ್ರೆಟಾ ಫೇಸ್‌ಲಿಫ್ಟ್ (Hyundai Creta Facelift) ಎಸ್‌ಯುವಿಯನ್ನು ರೂ.1.38 ಲಕ್ಷ ಡೌನ್ ಪೇಮೆಂಟ್ ಪಾವತಿಸಿ ಖರೀದಿಸಿದರೆ ಶೇಕಡ 9.8% ಬಡ್ಡಿ ದರದಲ್ಲಿ 5 ವರ್ಷದ ಅವಧಿಗೆ ರೂ.26,172 ಇಎಂಐ ಕಟ್ಟಬೇಕು. ಈ ಕಾರು ವಿನ್ಯಾಸದ ದೃಷ್ಟಿಯಿಂದಲೂ ಅತ್ಯುತ್ತಮವಾಗಿದ್ದು, ರೇಂಜರ್ ಖಾಕಿ, ಅಬಿಸ್ ಬ್ಲ್ಯಾಕ್, ಅಟ್ಲಾಸ್ ವೈಟ್ ಸೇರಿದಂತೆ ಆಕರ್ಷಕ ಬಣ್ಣಗಳೊಂದಿಗೆ ದೊರೆಯುತ್ತದೆ.
ಈ ಹ್ಯುಂಡೈ ಕ್ರೆಟಾ ಫೇಸ್‌ಲಿಫ್ಟ್ ಪೆಟ್ರೋಲ್ ಮತ್ತು ಡಿಸೇಲ್ ಪವರ್ ಟ್ರೇನ್ ಆಯ್ಕೆಯಲ್ಲಿ ಲಭ್ಯವಿದೆ. ಇದರ 1.5-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್ 115 ಪಿಎಸ್ ಗರಿಷ್ಠ ಪವರ್ (ಶಕ್ತಿ) ಹಾಗೂ 144 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 6-ಸ್ವೀಡ್ ಮ್ಯಾನುವಲ್ ಅಥವಾ ಸಿವಿಟಿ ಗೇರ್ ಬಾಕ್ಸ್ ಆಯ್ಕೆಯಲ್ಲಿ ಸಿಗುತ್ತದೆ.

ಮತ್ತೊಂದು 1.5-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ 160 ಪಿಎಸ್ ಪವರ್ ಮತ್ತು 253 ಎನ್ಎಂ ಪೀಕ್ ಟಾರ್ಕ್ ಹೊರಹಾಕುವ ಸಾಮರ್ಥ್ಯವನ್ನು ಒಳಗೊಂಡಿದೆ. ಜೊತೆಗೆ 7-ಸ್ವೀಡ್ ಡಿಸಿಟಿ (ಡುಯಲ್ ಕ್ಲಚ್ ಟ್ರಾಸ್ಮಿಷನ್) ಗೇರ್ ಬಾಕ್ಸ್ ಆಯ್ಕೆಯಲ್ಲಿಯೂ ದೊರೆಯುತ್ತದೆ. ಪೆಟ್ರೋಲ್ ರೂಪಾಂತರಗಳು 17.4 ರಿಂದ 18.4 ಕೆಎಂಪಿಎಲ್ ಮೈಲೇಜ್ ಕೊಡುತ್ತವೆ.
ಹ್ಯುಂಡೈ ಕ್ರೆಟಾ ಫೇಸ್‌ಲಿಫ್ಟ್ ಕಾರಿನ 1.5-ಲೀಟರ್ ಡಿಸೇಲ್ ಎಂಜಿನ್ 116 ಪಿಎಸ್ ಗರಿಷ್ಠ ಪವರ್ (ಶಕ್ತಿ) ಮತ್ತು 250 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 6-ಸ್ವೀಡ್ ಮ್ಯಾನುವಲ್ ಅಥವಾ 6-ಸ್ವೀಡ್ ಆಟೋಮೆಟಿಕ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಗ್ರಾಹಕರಿಗೆ ಲಭ್ಯವಿದೆ. ಡೀಸೆಲ್ ಚಾಲಿತ ಮಾದರಿಗಳು 19.1 ರಿಂದ 21.8 ಕೆಎಂಪಿಎಲ್ ಮೈಲೇಜ್ ನೀಡುತ್ತವೆ.

ಈ ಕಾರಿನಲ್ಲಿ 5 ಮಂದಿ ಆರಾಮದಾಯಕವಾಗಿ ಪ್ರಯಾಣಿಸಬಹುದು. 10.25-ಇಂಚಿನ ಡುಯಲ್ ಡಿಸ್ಪ್ಲೇ (ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಇನ್ಸ್ಟ್ರುಮೆಂಟ್ ಕ್ಲಸ್ಟರ್) ಡುಯಲ್ ಝೋನ್ ಎಸಿ, 8-ಸ್ಪೀಕರ್ ಬೋಸ್ ಸೌಂಡ್ ಸಿಸ್ಟಮ್, ಸನ್‌ರೂಫ್, ವೈರ್‌ಲೆಸ್ ಫೋನ್ ಚಾರ್ಜಿಂಗ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್, ADAS (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್) ಅನ್ನು ಹೊಂದಿದೆ.
ಹ್ಯುಂಡೈ ಕ್ರೆಟಾ ಫೇಸ್‌ಲಿಫ್ಟ್ ಎಸ್‌ಯುವಿಗೆ ಕಿಯಾ ಸೆಲ್ಟೋಸ್, ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ, ಪೋಕ್ಸ್‌ವ್ಯಾಗನ್ ಟೈಗನ್ ಹಾಗೂ ಹೋಂಡಾ ಎಲಿವೇಟ್ ಪ್ರಬಲ ಪ್ರತಿಸ್ಪರ್ಧಿಯಾಗಿದೆ. ನಿಮ್ಮ ಗಮನಕ್ಕೆ.. ಇಲ್ಲಿ ಕೆಲವು ಮಾದರಿಗಳ ಬಗ್ಗೆ ಮಾತ್ರ ತಿಳಿಸಲಾಗಿದ್ದು, ಇತರೆ ರೂಪಾಂತರಗಳ ಆನ್-ರೋಡ್ ದರಗಳು ಹಾಗೂ ಸಾಲದ ಆಯ್ಕೆಗಳು ರಾಜ್ಯದಿಂದ ರಾಜ್ಯಕ್ಕೆ ರೂಪಾಂತರ ಮತ್ತು ಬಣ್ಣಗಳನ್ನು ಆಧರಿಸಿ ಬೇರೆಯಿರಲಿದ್ದು ಹೆಚ್ಚಿನ ಮಾಹಿತಿಗೆ ಸಮೀಪದ ಶೋರೂಂಗೆ ಭೇಟಿ ನೀಡಿರಿ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications