Hyundai Creta N Line: ಹೊಸ ಹ್ಯುಂಡೈ ಕ್ರೆಟಾ ಎನ್ ಲೈನ್‌ ಕಾರಿನ ಬುಕ್ಕಿಂಗ್ ಶುರು.. ರೂ.25,000 ಸಾಕು!

ಹ್ಯುಂಡೈ ಮೋಟಾರ್ ಇಂಡಿಯಾ ಲಿಮಿಟೆಡ್ (Hyundai Motor India Limited) ಮುಂಬರಲಿರುವ ನೂತನ ಕ್ರೆಟಾ ಎನ್ ಲೈನ್‌ (Creta N Line) ಎಸ್‌ಯುವಿಗಾಗಿ ಬುಕ್ಕಿಂಗ್ ಪಡೆಯುವುದನ್ನು ಶುರು ಮಾಡಿದೆ. ಆಸಕ್ತ ಗ್ರಾಹಕರು, ರೂ.25,000 ಟೋಕನ್ ಮೊತ್ತವನ್ನು ಪಾವತಿಸುವ ಮೂಲಕ ಈ ಕಾರನ್ನು ಕಾಯ್ದಿರಬಹುದು.

ಹೊಸ ಕ್ರೆಟಾ ಎನ್ ಲೈನ್‌ ಎಸ್‌ಯುವಿ, ಹೊರ ಹಾಗೂ ಒಳಭಾಗದಲ್ಲಿ ಕೆಲವೊಂದು ಬದಲಾವಣೆಗಳನ್ನು ಪಡೆದುಕೊಂಡಿದೆ. ಆದರೂ ಈ ವರ್ಷಾರಂಭದಲ್ಲಿ ಬಿಡುಗಡೆಗೊಂಡ ಕ್ರೆಟಾ ಫೇಸ್‌ಲಿಫ್ಟ್ ಮಾದರಿಗೆ ಬಹುತೇಕ ಹೋಲುತ್ತದೆ. ಕ್ರೆಟಾ ಎನ್ ಲೈನ್‌ ಕಾರು ನವೀನವಾದ ಸ್ಪೋರ್ಟಿ ಫ್ರಂಟ್ ಗ್ರಿಲ್, ಕೆಂಪು (ರೆಡ್) ಬ್ರೇಕ್ ಕ್ಯಾಲಿಪರ್‌ಗಳೊಂದಿಗೆ 18-ಇಂಚಿನ ಡೈಮಂಡ್ ಕಟ್ ಅಲಾಯ್ ವೀಲ್ಸ್ ಹೊಂದಿದೆ.

Hyundai Creta N Line Car Booking Starts Powertrain, Design, Expected price

ನೂತನ ಹ್ಯುಂಡೈ ಕ್ರೆಟಾ ಎನ್ ಲೈನ್‌ ಕಾರು, 1.5-ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಪಡೆದಿದೆ. 158 ಬಿಹೆಚ್‍ಪಿ ಗರಿಷ್ಠ ಪವರ್ (ಶಕ್ತಿ) ಮತ್ತು 253 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಒಳಗೊಂಡಿದ್ದು, 6-ಸ್ವೀಡ್ ಹಾಗೂ 7-ಸ್ವೀಡ್ ಡುಯಲ್ ಕ್ಲಚ್ ಯುನಿಟ್ ಗೇರ್ ಬಾಕ್ಸ್ ಆಯ್ಕೆಯೊಂದಿಗೂ ಬರುತ್ತಿದೆ.

ಈ ಕ್ರೆಟಾ ಎನ್ ಲೈನ್ ಮಾದರಿಯು ಗರಿಷ್ಠ ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಮುಖವಾಗಿ 42 ಗುಣಮಟ್ಟದ ಸುರಕ್ಷತಾ ವೈಶಿಷ್ಟ್ಯಗಳು (Standard Safety Features), 70ಕ್ಕೂ ಅಧಿಕ ಸುಧಾರಿತ ಸುರಕ್ಷತಾ ವೈಶಿಷ್ಟ್ಯ (Advanced Safety Features)ಗಳನ್ನು ಪಡೆದಿದೆ. ಹಿಲ್ ಅಸಿಸ್ಟ್ ಕಂಟ್ರೋಲ್, ಎಲೆಕ್ಟ್ರಾನಿಕ್ ಪಾರ್ಕಿಂಗ್ ಬ್ರೇಕ್, ಆಟೋ ಹೋಲ್ಡ್, ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್, 6 ಏರ್‌ಬ್ಯಾಗ್‌, 360-ಡಿಗ್ರಿ ಪಾರ್ಕಿಂಗ್ ಕ್ಯಾಮೆರಾವನ್ನು ಹೊಂದಿದೆ.

Hyundai Creta N Line Car Booking Starts Powertrain, Design, Expected price

ಹೊಸ ಹ್ಯುಂಡೈ ಕ್ರೆಟಾ ಎನ್ ಲೈನ್‌ ಎಸ್‌ಯುವಿ ಒಳಭಾಗವು ಹೆಚ್ಚು ಅತ್ಯಾಧುನಿಕವಾಗಿರಲಿದೆ. ಇದು ಐ20 ಎನ್ ಲೈನ್, ವೆನ್ಯೂ ಎನ್ ಲೈನ್ ನಂತರ, ಭಾರತದಲ್ಲಿ ಹುಂಡೈ ಬಿಡುಗಡೆಗೊಳಿಸುತ್ತಿರುವ ಎನ್ ಲೈನ್ ಸರಣಿಯ 3ನೇ ಕಾರಾಗಿದೆ. ಕ್ರೆಟಾ ಎನ್ ಲೈನ್‌ ರೂ.21 ಲಕ್ಷ ಎಕ್ಸ್ ಶೋರೂಂ ಬೆಲೆಗೆ ಖರೀದಿಗೆ ಸಿಗಬಹುದು ಎಂದು ಅಂದಾಜಿಸಲಾಗಿದೆ. ಮಾರ್ಚ್ 11ರಂದು ಬಿಡುಗಡೆಗೊಂಡ ಮೇಲೆ ಅದಕ್ಕೆ ಅಧಿಕೃತ ತೆರೆ ಬೀಳಲಿದೆ.

ಸದ್ಯ, ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ ಹ್ಯುಂಡೈ ಕ್ರೆಟಾ ಫೇಸ್‌ಲಿಫ್ಟ್ (Hyundai Creta Facelift) ಎಸ್‌ಯುವಿ, ರೂ.11 ಲಕ್ಷದಿಂದ ರೂ.20.15 ಲಕ್ಷ ಎಕ್ಸ್ ಶೋರೂಂ ದರವನ್ನು ಹೊಂದಿದೆ. ಇ, ಇಎಕ್ಸ್, ಎಸ್, ಎಸ್(ಒ), ಎಸ್ಎಕ್ಸ್ ಟೆಕ್ ಸೇರಿದಂತೆ ವಿವಿಧ ರೂಪಾಂತರ ಮತ್ತು ಆಕರ್ಷಕ ಬಣ್ಣಗಳೊಂದಿಗೆ ದೊರೆಯುತ್ತದೆ. ಈ ಕಾರಿನಲ್ಲಿ 5 ಮಂದಿ ಸುಲಭವಾಗಿ ಪ್ರಯಾಣಿಸಬಹುದು.

Hyundai Creta N Line Car Booking Starts Powertrain, Design, Expected price

ಈ ಕಾರು 1.5-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀಟರ್ ಟರ್ಬೊ ಪೆಟ್ರೋಲ್ ಹಾಗೂ 1.5-ಲೀಟರ್ ಡೀಸೆಲ್ ಎಂಜಿನ್ ಪಡೆದಿದೆ. 10.25-ಇಂಚಿನ ಡುಯಲ್ ಡಿಸ್ಪ್ಲೇ, ಡುಯಲ್ ಝೋನ್ ಎಸಿ, 8 ಸ್ಪೀಕರ್ ಬೋಸ್ ಸೌಂಡ್ ಸಿಸ್ಟಮ್, ಸನ್‌ರೂಫ್, ವೈರ್‌ಲೆಸ್ ಫೋನ್ ಚಾರ್ಜಿಂಗ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಮೈಲೇಜ್ ವಿಚಾರಕ್ಕೆ ಬರುವುದಾದರೆ 19.1 ಕೆಎಂಪಿಎಲ್ - 21.8 ಕೆಎಂಪಿಎಲ್ ಇಂಧನ ದಕ್ಷತೆಯನ್ನು ಹೊಂದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Thursday, February 29, 2024, 17:02 [IST]
English summary
Hyundai creta n line car booking starts powertrain design expected price
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+