Hyundai Creta: ಬಹುನಿರೀಕ್ಷಿತ ಹ್ಯುಂಡೈ ಕ್ರೆಟಾ ಎನ್ ಲೈನ್ ಟೀಸರ್ ಬಿಡುಗಡೆ, ವಿಶೇಷತೆಗಳೇನು?

ಹ್ಯುಂಡೈ ಮೋಟರ್ (Hyundai Motor), ಕ್ರೆಟಾ ಎನ್ ಲೈನ್ (Creta N Line) ಎಸ್‌ಯುವಿಯನ್ನು ಮಾರ್ಚ್ 11ರಂದು ದೇಶೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಿದೆ. ಅದಕ್ಕಾಗಿ ಸಾಕಷ್ಟು ತಯಾರಿಯನ್ನು ನಡೆಸುತ್ತಿದೆ. ಮಂಗಳವಾರ ಈ ಕಾರಿನ ಟೀಸರ್ ವೀಡಿಯೊವನ್ನು ಕಂಪನಿಯು ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಹಂಚಿಕೊಂಡಿದೆ.

ಟೀಸರ್​ನಲ್ಲಿ ನೂತನ ಹ್ಯುಂಡೈ ಕ್ರೆಟಾ ಎನ್ ಲೈನ್ ಎಸ್‌ಯುವಿಯ ಕೆಲವೊಂದು ವಿವರವನ್ನು ಭಾಗಶಃ ಬಹಿರಂಗಪಡಿಸಲಾಗಿದೆ. ಇದು ಐ20 ಎನ್ ಲೈನ್, ವೆನ್ಯೂ ಎನ್ ಲೈನ್ ಬಳಿಕ, ಭಾರತದಲ್ಲಿ ಪರಿಚಯಿಸಲಾಗುತ್ತಿರುವ ಎನ್ ಲೈನ್ ಸರಣಿಯ 3ನೇ ಕಾರಾಗಿದೆ. ಕ್ರೆಟಾ ಎನ್ ಲೈನ್ ಹೊರಭಾಗದ ವಿನ್ಯಾಸ (ಡಿಸೈನ್) ಈ ವರ್ಷಾರಂಭದಲ್ಲಿ ಬಿಡುಗಡೆಗೊಂಡ ಕ್ರೆಟಾ ಫೇಸ್‌ಲಿಫ್ಟ್ ಮಾದರಿಗೆ ಬಹುತೇಕ ಹೋಲಿಕೆಯಾಗುತ್ತದೆ.

Hyundai Creta N Line Suv Teased 1st Time: Launch On March 11

ಈ ಹ್ಯುಂಡೈ ಕ್ರೆಟಾ ಎನ್ ಲೈನ್ ಹೊಸದಾದ ಅಲಾಯ್ ವೀಲ್ಸ್, ಮರುವಿನ್ಯಾಸಗೊಳಿಸಲಾದ ಬಂಪರ್ ಮತ್ತು ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿ ಗ್ರಾಹಕರಿಗೆ ದೊರೆಯುವ ಸಾಧ್ಯತೆಯಿದೆ. ಒಳಭಾಗವು ಮತ್ತಷ್ಟು ಅತ್ಯಾಧುನಿಕವಾಗಿರಲಿದ್ದು, ಸಂಪೂರ್ಣ ಬ್ಲ್ಯಾಕ್ (ಕಪ್ಪು) ಥೀಮ್ ಹೊಂದಿರಲಿದ್ದು, ಸ್ಟೀರಿಂಗ್ ವೀಲ್ & ಗೇರ್ ಲಿವರ್‌ನಲ್ಲಿ 'ಎನ್ ಲೈನ್' ಬ್ಯಾಡ್ಜಿಂಗ್ ಪಡೆಯಬಹುದು. ಡ್ಯಾಶ್‌ಬೋರ್ಡ್ ಕೂಡ ಅತ್ಯುತ್ತಮವಾಗಿರುವ ನಿರೀಕ್ಷೆಯಿದೆ.

ನೂತನ ಹ್ಯುಂಡೈ ಕ್ರೆಟಾ ಎನ್ ಲೈನ್ (Hyundai Creta N Line) ಎಸ್‌ಯುವಿ 1.5-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಹೊಂದಿರಲಿದ್ದು, 158 ಬಿಹೆಚ್‍ಪಿ ಗರಿಷ್ಠ ಪವರ್ (ಶಕ್ತಿ) ಮತ್ತು 253 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸಬಹುದು. ಜೊತೆಗೆ 7-ಸ್ವೀಡ್ ಡುಯಲ್ ಕ್ಲಚ್ ಯುನಿಟ್ ಗೇರ್ ಬಾಕ್ಸ್ ಆಯ್ಕೆಯಲ್ಲಿ ಖರೀದಿಗೆ ದೊರೆಯಬಹುದು.

Hyundai Creta N Line Suv Teased 1st Time: Launch On March 11

ಹೊಸ ಕ್ರೆಟಾ ಎನ್ ಲೈನ್ ಎಸ್‌ಯುವಿ ಎನ್8 (N8) ಹಾಗೂ ಎನ್10 (N10) ರೂಪಾಂತರಗಳೊಂದಿಗೆ ಬಿಡುಗಡೆಯಾಗುವ ಸಾಧ್ಯತೆಯಿದ್ದು, ರೂ.21 ಲಕ್ಷ ಎಕ್ಸ್ ಶೋರೂಂ (Ex - Showroom) ಬೆಲೆಯಲ್ಲಿ ಸಿಗಬಹುದು. ಶೀಘ್ರದಲ್ಲೆಯೇ ಬುಕ್ಕಿಂಗ್ ಸಹ ಪ್ರಾರಂಭವಾಗಬಹುದು. ಲಾಂಚ್ ಆದ ಕೆಲವೇ ದಿನಗಳಲ್ಲಿ ವಿತರಣೆ (Delivery) ಶುರುವಾಗುವ ನಿರೀಕ್ಷೆಯಿದೆ.

ಸದ್ಯ, ದೇಶೀಯ ಮಾರುಕಟ್ಟೆಯಲ್ಲಿ ಖರೀದಿಗೆ ದೊರೆಯುವ ಹ್ಯುಂಡೈ ಕ್ರೆಟಾ ಫೇಸ್‌ಲಿಫ್ಟ್ ಎಸ್‌ಯುವಿ, ರೂ.11 ಲಕ್ಷದಿಂದ ರೂ.20.15 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಪಡೆದಿದೆ. ಇ, ಇಎಕ್ಸ್, ಎಸ್, ಎಸ್(ಒ) ಒಳಗೊಂಡಂತೆ 7 ರೂಪಾಂತರಗಳು ಮತ್ತು ಅಟ್ಲಾಸ್ ವೈಟ್, ಅಬಿಸ್ ಬ್ಲಾಕ್, ಟೈಟಾನ್ ಗ್ರೇ ಸೇರಿದಂತೆ ಹಲವು ಅತ್ಯಾಕರ್ಷಕ ಬಣ್ಣಗಳೊಂದಿಗೆ ಲಭ್ಯವಿದೆ. ಈ ಕಾರು ವಿನ್ಯಾಸದ ದೃಷ್ಟಿಯಿಂದಲೂ ಅತ್ಯುತ್ತಮವಾಗಿದ್ದು, 5 ಮಂದಿ ಪ್ರಯಾಣಿಸಬಹುದು.

ಈ ಕಾರಿನ ಪವರ್‌ಟ್ರೇನ್ ಕುರಿತು ಮಾತನಾಡುವುದಾದರೆ, ಇದು 1.5-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಹೊಂದಿದೆ. 6-ಸ್ವೀಡ್ ಮ್ಯಾನುವಲ್, 6-ಸ್ವೀಡ್ ಆಟೋಮೆಟಿಕ್, ಸಿವಿಟಿ, 7-ಸ್ವೀಡ್ ಡಿಸಿಟಿ ಗೇರ್ ಬಾಕ್ಸ್ ಆಯ್ಕೆಗಳನ್ನು ಸಹ ಪಡೆದಿದೆ. ರೂಪಾಂತರಗಳಿಗೆ ಅನುಗುಣವಾಗಿ 17.4 ಕೆಎಂಪಿಎಲ್ ರಿಂದ 21.8 ಕೆಎಂಪಿಎಲ್ ಮೈಲೇಜ್ ನೀಡುತ್ತದೆ.

ಹ್ಯುಂಡೈ ಕ್ರೆಟಾ ಫೇಸ್‌ಲಿಫ್ಟ್ ಎಸ್‌ಯುವಿ, 2WD (ಟೂ ವೀಲ್ ಡ್ರೈವ್) ತಂತ್ರಜ್ಞಾನವನ್ನು ಹೊಂದಿದ್ದು, 10.25-ಇಂಚಿನ ಡುಯಲ್ ಡಿಸ್ಪ್ಲೇ, ಡುಯಲ್ ಝೋನ್ ಎಸಿ, 8 ಸ್ಪೀಕರ್ ಬೋಸ್ ಸೌಂಡ್ ಸಿಸ್ಟಮ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌, ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ADAS (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್),TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಅನ್ನು ಪಡೆದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Wednesday, February 28, 2024, 11:12 [IST]
English summary
Hyundai creta n line car teased 1st time launch march 11
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+