Hyundai Creta: ಹ್ಯುಂಡೈ ಕ್ರೆಟಾ ಎನ್ ಲೈನ್ ಮಾರ್ಚ್ 11ಕ್ಕೆ ಬಿಡುಗಡೆ.. ನಿರೀಕ್ಷೆಗಳೇನು?

ಹ್ಯುಂಡೈ ಇಂಡಿಯಾ (Hyundai India) ಮಾರ್ಚ್ 11ರಂದು ಶಕ್ತಿಯುತ ಕ್ರೆಟಾ ಎನ್ ಲೈನ್ (Creta N Line) ಕಾರನ್ನು ಬಿಡುಗಡೆಗೊಳಿಸಲಾಗುವುದು ಎಂದು ಘೋಷಣೆ ಮಾಡಿದೆ. ಶೀಘ್ರದಲ್ಲೆಯೇ ಬುಕ್ಕಿಂಗ್ ಸಹ ಆರಂಭವಾಗಲಿದ್ದು, ಲಾಂಚ್ ಆದ ಕೆಲವೇ ದಿನಗಳಲ್ಲಿ ವಿತರಣೆ ಶುರುವಾಗುವ ನಿರೀಕ್ಷೆಯಿದೆ.

ಮುಂಬರುವ ನೂತನ ಹ್ಯುಂಡೈ ಕ್ರೆಟಾ ಎನ್ ಲೈನ್ (Hyundai Creta N Line) ಮಾದರಿಯು 158 ಬಿಹೆಚ್‌ಪಿ ಪವರ್ (ಶಕ್ತಿ) ಉತ್ಪಾದಿಸುವ 1.5 - ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್‌ ಹೊಂದಿರಬಹುದು. ಜೊತೆಗೆ 6 - ಸ್ವೀಡ್ ಮ್ಯಾನುವಲ್ ಅಥವಾ ಡುಯಲ್ ಕ್ಲಚ್ ಟ್ರಾನ್ಸ್ಮಿಷನ್ (ಡಿಸಿಟಿ) ಗೇರ್ ಬಾಕ್ಸ್ ಆಯ್ಕೆಯಲ್ಲಿ ಲಭ್ಯವಾಗುವ ಸಾಧ್ಯತೆಯಿದೆ.

Hyundai Creta N Line Suv India launch on 11 March: What Expectations?

ಈ ಕಾರು, ಹೊರಭಾಗ ಮತ್ತು ಒಳಭಾಗದ ವಿನ್ಯಾಸದಲ್ಲಿ ಸಾಕಷ್ಟು ಬದಲಾವಣೆಗಳನ್ನು ಹೊಂದಿರುವ ನಿರೀಕ್ಷೆಯಿದೆ. ಹೊಸದಾದ ಗ್ರಿಲ್, ಮುಂಭಾಗ (ಫ್ರಂಟ್) & ಹಿಂಭಾಗ (ರೇರ್) ಆಕರ್ಷಕ ಬಂಪರ್, 18 - ಇಂಚಿನ ವೀಲ್ಸ್ ಪಡೆದಿರಬಹುದು. ಒಳಭಾಗವು ಹೆಚ್ಚು ಅತ್ಯಾಧುನಿಕವಾಗಿರಲಿದ್ದು, ನೂತನವಾಗಿರುವ ಸ್ಟೀರಿಂಗ್ ವೀಲ್, ಅತ್ಯುತ್ತಮ ಡ್ಯಾಶ್ ಬೋರ್ಡ್ ಒಳಗೊಂಡಿರಬಹುದು.

ಹೊಸ ಹ್ಯುಂಡೈ ಕ್ರೆಟಾ ಎನ್ ಲೈನ್ ಎಸ್‌ಯುವಿ ಬಿಡುಗಡೆಯಾದ ಮೇಲೆ ಅದರ ವಿನ್ಯಾಸ ಹೇಗಿರಲಿದೆ, ಯಾವೆಲ್ಲ ವೈಶಿಷ್ಟ್ಯಗಳನ್ನು ಹೊಂದಿರಲಿದೆ ಎನ್ನುವುದರ ಬಗ್ಗೆ ಸ್ಪಷ್ಟ ಮಾಹಿತಿ ಸಿಗಲಿದೆ. ಈ ಕಾರು ಎನ್8 (N8) ಮತ್ತು ಎನ್10 (N10) ರೂಪಾಂತರ ಆಯ್ಕೆಯಲ್ಲಿ ಬರುವ ಸಾಧ್ಯತೆಯಿದ್ದು, ರೂ.21 ಲಕ್ಷ ಎಕ್ಸ್ ಶೋರೂಂ ಬೆಲೆಯಲ್ಲಿ ಖರೀದಿಗೆ ದೊರೆಯಬಹುದು.

Hyundai Creta N Line Suv India launch on 11 March: What Expectations?

ಭಾರತದ ಮಾರುಕಟ್ಟೆಯಲ್ಲಿ ಮೊದಲ ಬಾರಿಗೆ 2015ರಲ್ಲಿ ಹ್ಯುಂಡೈ ಕಂಪನಿಯು ಕ್ರೆಟಾ ಎಸ್‌ಯುವಿಯನ್ನು ಬಿಡುಗಡೆಗೊಳಿಸಿತ್ತು. ಕೇವಲ 8 ವರ್ಷ ಕಳೆಯುವುದರಲ್ಲಿ 10 ಲಕ್ಷಕ್ಕೂ ಹೆಚ್ಚಿನ ಕಾರುಗಳನ್ನು ಮಾರಾಟಗೊಳಿಸಿ, ದಾಖಲೆ ನಿರ್ಮಿಸಿದೆ. ಕಳೆದ ತಿಂಗಳು ಕ್ರೆಟಾವನ್ನು ನವೀಕರಿಸಿಯು ಪರಿಚಯಿಸಿತ್ತು. ಕೆಲವೇ ದಿನಗಳಲ್ಲಿ 50,000ಕ್ಕೂ ಅಧಿಕ ಬುಕ್ಕಿಂಗ್ ಪಡೆದುಕೊಂಡಿತ್ತು.

ಹ್ಯುಂಡೈ ಕ್ರೆಟಾ ಫೇಸ್‌ಲಿಫ್ಟ್ (Hyundai Creta Facelift) ಎಸ್‌ಯುವಿ, ರೂ.11 ಲಕ್ಷದಿಂದ ರೂ.20.15 ಲಕ್ಷ ಎಕ್ಸ್ ಶೋರೂಂ ಬೆಲೆಯನ್ನು ಹೊಂದಿದೆ. ಇ, ಇಎಕ್ಸ್, ಎಸ್, ಎಸ್(ಒ), ಎಸ್ಎಕ್ಸ್ ಟೆಕ್ ಸೇರಿದಂತೆ 7 ರೂಪಾಂತ ಮತ್ತು ಹಲವು ಆಕರ್ಷಕ ಬಣ್ಣಗಳೊಂದಿಗೆ ಸಿಗುತ್ತದೆ. ವಿನ್ಯಾಸದ ದೃಷ್ಟಿಯಿಂದಲೂ ಅತ್ಯುತ್ತಮವಾಗಿದ್ದು, 5 ಮಂದಿ ಪ್ರಯಾಣಿಸಬಹುದು.

Hyundai Creta N Line Suv India launch on 11 March: What Expectations?

ಈ ಕಾರು 1.5 - ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್, 1.5 - ಲೀಟರ್ ಟರ್ಬೊ ಪೆಟ್ರೋಲ್ ಮತ್ತು 1.5 - ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಹೊಂದಿದೆ. 6 - ಸ್ವೀಡ್ ಮ್ಯಾನುವಲ್, 6 - ಸ್ವೀಡ್ ಆಟೋಮೆಟಿಕ್, ಸಿವಿಟಿ, 7 - ಸ್ವೀಡ್ ಡಿಸಿಟಿ ಗೇರ್ ಬಾಕ್ಸ್‌ನೊಂದಿಗೂ ಲಭ್ಯವಿದೆ. ರೂಪಾಂತರಗಳಿಗೆ ಅನುಗುಣವಾಗಿ 17.4 - 21.8 ಕೆಎಂಪಿಎಲ್ ಮೈಲೇಜ್ ಕೊಡುತ್ತದೆ.

ಕ್ರೆಟಾ ಫೇಸ್‌ಲಿಫ್ಟ್ 10.25 - ಇಂಚಿನ ಡುಯಲ್ ಡಿಸ್ಪ್ಲೇ, ಕನೆಕ್ಟ್ದ್ ಕಾರ್ ಟೆಕ್, ಡುಯಲ್ ಝೋನ್ ಎಸಿ, 8 - ಸ್ಪೀಕರ್ ಬೋಸ್ ಸೌಂಡ್ ಸಿಸ್ಟಮ್, ಸನ್‌ರೂಫ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ 6 - ಏರ್‌ಬ್ಯಾಗ್‌, ESC (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ADAS (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್),TPMS (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಅನ್ನು ಒಳಗೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್‌ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Friday, February 23, 2024, 16:08 [IST]
English summary
Hyundai creta n line suv india launch 11 march what expectations
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+