20 ಕಿ.ಮೀ ಮೈಲೇಜ್, 6 ಏರ್‌ಬ್ಯಾಗ್ ಜೊತೆಗೆ ಸನ್‌ರೂಫ್: ಹ್ಯುಂಡೈ ಕಾರಿಗೆ ಭಾರೀ ಬೇಡಿಕೆ
ಈ ಹ್ಯುಂಡೈ ಕ್ರೆಟಾ (Hyundai Creta) ಎಸ್‍ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಭರ್ಜರಿ ಬೇಡಿಕೆ ಹೊಂದಿರುವ ಕಾರುಗಳಲ್ಲಿ ಒಂದಾಗಿದೆ. ಈ ವರ್ಷದ ಆರಂಭದಲ್ಲಿ ಹ್ಯುಂಡೈ ಫೇಸ್‌ಲಿಫ್ಟೆಡ್ ಕ್ರೆಟಾ ಎಸ್‌ಯುವಿಯನ್ನು ಬಿಡುಗಡೆಗೊಳಿಸಿ ಹೊಸ ಅಪ್ಡೇಟ್ ಗಳೊಂದಿಗೆ ಹೆಚ್ಚು ಗ್ರಾಹಕರನ್ನು ಸೆಳೆಯಿತು. ಬಳಿಕ ಮತ್ತಷ್ಟು ಗ್ರಾಹಕರನ್ನು ಸೆಳೆಯಲು ಕೆಲವೇ ಅವಧಿ ಬಳಿಕ ಹ್ಯುಂಡೈ (Hyundai) ಕಂಪನಿಯು ಕ್ರೆಟಾ ಎಸ್‍ಯುವಿಯ ಸ್ಪೋರ್ಟಿಯರ್ ಮಾದರಿಯಾದ ಕ್ರೆಟಾ ಎನ್ ಲೈನ್ ಮಾದರಿಯನ್ನು ಬಿಡುಗಡೆಗೊಳಿಸಿತು. ಹುಂಡೈ ಕ್ರೆಟಾ ಇಂದಿಗೂ ಭಾರತದಲ್ಲಿ ಹೆಚ್ಚು ಮಾರಾಟವಾಗುವ ಎಸ್‍ಯುವಿಗಳಲ್ಲಿ ಇದು ಕೂಡ ಒಂದಾಗಿದೆ.
ಹಲವಾರು ವರ್ಷಗಳಿಂದ ಮಾರಾಟವಾಗಿದ್ದರೂ, ಇದು ಖರೀದಿದಾರರನ್ನು ಆಕರ್ಷಿಸುತ್ತಲೇ ಇದೆ. ಇದಕ್ಕೆ ಮುಖ್ಯ ಕಾರಣ ನಿರಂತರವಾಗಿ ಮಾರುಕಟ್ಟೆ ಅಗತ್ಯಗಳಿಗೆ ಅನುಗುಣವಾಗಿ ತನ್ನ ಸೂಪರ್ ಹಿಟ್ ಕ್ರೆಟಾವನ್ನು ನವೀಕರಿಸುತ್ತಾ ಬಂದಿದೆ. 2024ರ ಸೆಪ್ಟೆಂಬರ್ ತಿಂಗಳಿನ ಹುಂಡೈ ಕ್ರೆಟಾ ಎಸ್‍ಯುವಿಯ ಮಾರಾಟದ ಅಂಕಿಅಂಶಗಳ ಬಹಿರಂಗವಾಗಿದೆ. ಇದರ ಪ್ರಕಾರ, ಕಳೆದ ತಿಂಗಳು 15,902 ಕ್ರೆಟಾ ಎಸ್‍ಯುವಿಗಳು ಮಾರಾಟವಾಗಿವೆ.

ಇನ್ನು ಕಳೆದ ವರ್ಷದ ಸೆಪ್ಟೆಂಬರ್ ತಿಂಗಳಿನಲ್ಲಿ 12,717 ಕ್ರೆಟಾ ಎಸ್‍ಯುವಿಗಳು ಮಾರಾಟವಾಗಿತ್ತು. ಇದನ್ನು ಕಳೆದ ತಿಂಗಳ ಮಾರಾಟಕ್ಕೆ ಹೋಲಿಸಿದರೆ ಶೇ.25 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ. ಈ ಹ್ಯುಂಡೈ ಕ್ರೆಟಾ ಎರಡು ಪೆಟ್ರೋಲ್ ಮತ್ತು ಒಂದು ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ಬರುತ್ತದೆ. ಈ ಹ್ಯುಂಡೈ ಕ್ರೆಟಾ ಎಸ್‍ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಭರ್ಜರಿಯಾಗಿ ಮಾರಾಟವಾಗುತ್ತಿದೆ.
ಹುಂಡೈ ಕ್ರೆಟಾವು E, EX, S, S(O), SX, SX Tech, ಮತ್ತು SX(O) ಎಂಬ ಏಳು ರೂಪಾಂತರಗಳಲ್ಲಿ ಲಭ್ಯವಿದೆ. ಈ ಹ್ಯುಂಡೈ ಕ್ರೆಟಾ ಫೇಸ್‌ಲಿಫ್ಟ್ ಎಸ್‍ಯುವಿಯಲ್ಲಿ 1.5 ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಜೊತೆಗೆ 1.5 ಲೀಟರ್ ನ್ಯಾಚುರಲ್ಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್ ಮತ್ತು 1.5 ಲೀಟರ್ ಟರ್ಬೊ ಡೀಸೆಲ್ ಎಂಜಿನ್ ಅನ್ನು ಸಹ ಹೊಂದಿದೆ.

ಇದರಲ್ಲಿ 6-speed MT, CVT ಹಾಗೂ 7-speed DCT ಮತ್ತು 6-speed MT, 6-speed AT ಆಯ್ಕೆಯನ್ನು ನೀಡಲಾಗಿದೆ. ಇದರಲ್ಲಿ ಮೊದಲಿಗೆ 1.5-ಲೀಟರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್ 115 ಪಿಎಸ್ ಪವರ್ ಮತ್ತು 144 ಎನ್ಎಂ ಪೀಕ್ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಇನ್ನು 1.5-ಲೀಟರ್ ಪವರ್ ಫುಲ್ ಟರ್ಬೊ ಪೆಟ್ರೋಲ್ ಎಂಜಿನ್ 160 ಪಿಎಸ್ ಪವರ್ ಹಾಗೂ 253 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.
ಈ ಹ್ಯುಂಡೈ ಕ್ರೆಟಾ ಎಸ್‍ಯುವಿಯು ಎಂಜಿನ್ ಆಯ್ಕೆಗಳು ಪವರ್ ಮತ್ತು ಮೈಲೇಜ್ ನಡುವೆ ಸಮತೋಲನವನ್ನು ನೀಡುತ್ತವೆ, ಇದು ದೈನಂದಿನ ಪ್ರಯಾಣ ಮತ್ತು ದೀರ್ಘ ಪ್ರಯಾಣ ಎರಡಕ್ಕೂ ಸೂಕ್ತವಾಗಿದೆ. ಈ ಜನಪ್ರಿಯ ಕ್ರೆಟಾ ಎಸ್‍ಯುವಿಯು 17.4 ಕಿ.ಮೀ ನಿಂದ 21.8 ಕಿ.ಮೀ ಮೈಲೇಜ್ ನೀಡುತ್ತದೆ. ಇದು ಅತ್ಯುತ್ತಮ ಮೈಲೇಜ್ ಅನ್ನು ನೀಡುತ್ತದೆ.

ಹುಂಡೈ ಕ್ರೆಟಾ ಎಸ್‍ಯುವಿ ಪ್ರತಿಯೊಂದು ರೂಪಾಂತರವು ವಿಭಿನ್ನ ವೈಶಿಷ್ಟ್ಯಗಳನ್ನು ಹೊಂದಿದೆ. ಹ್ಯುಂಡೈ ಕ್ರೆಟಾ ಫೇಸ್‌ಲಿಫ್ಟ್ ಎಸ್‍ಯುವಿಯಲ್ಲಿ 10.25-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇಯ ಹೊರತಾಗಿ, ಅನ್ನು ಪರಿಷ್ಕೃತ ಕ್ಲೈಮೆಟ್ ಕಂಟ್ರೋಲ್ ಪ್ಯಾನಲ್, 360-ಡಿಗ್ರಿ ಕ್ಯಾಮೆರಾ ಮತ್ತು ಸುಧಾರಿತ ಡ್ರೈವರ್ ಅಸಿಸ್ಟ್ ಸಿಸ್ಟಂಗಳೊಂದಿಗೆ (ADAS) ಡ್ಯುಯಲ್-ಜೋನ್ AC ಯೊಂದಿಗೆ ಒದಗಿಸಲಾಗಿದೆ. ಇದರೊಂದಿಗೆ ಪನಾರಮಿಕ್ ಸನ್‌ರೂಫ್, ವೈರ್‌ಲೆಸ್ ಫೋನ್ ಚಾರ್ಜಿಂಗ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು ಮತ್ತು 8-ಸ್ಪೀಕರ್ ಬಾಸ್ ಸೌಂಡ್ ಸಿಸ್ಟಮ್ ಹೊಂದಿದೆ.
ಎಸ್‍ಯುವಿ ಹಿಂದಿನ ಸೀಟ್ 2 - ಸ್ಟೆಪ್ ರಿಕ್ಲೈನ್ ಫಂಕ್ಷನ್ ಮತ್ತು ದುಬಾರಿ ಪ್ಯಾಕೇಜ್ ಜೊತೆಗೆ, ಹೊಸ ಹುಂಡೈ ಕ್ರೆಟಾ ಒಳಭಾಗವು ಸೌಕರ್ಯ ಮತ್ತು ಅನುಕೂಲಕ್ಕಾಗಿ ಕ್ಯಾಬಿನ್‌ನಲ್ಲಿ ಸಾಕಷ್ಟು ಸ್ಥಳಾವಕಾಶವನ್ನು ನೀಡಲಾಗಿದೆ. ಇನ್ನು ಸುರಕ್ಷತೆಯ ವಿಷಯದಲ್ಲಿ ಹ್ಯುಂಡೈ ಕ್ರೆಟಾ ಎಸ್‍ಯುವಿಯು ಆರು ಏರ್‌ಬ್ಯಾಗ್‌ಗಳು, ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್ (TPMS), ISOFIX ಚೈಲ್ಡ್ ಸೀಟ್ ಆಂಕರೇಜ್‌ಗಳು ಮತ್ತು ಎಲೆಕ್ಟ್ರಾನಿಕ್ ಸ್ಟೆಬಿಲಿಟಿಯನ್ನು ಒಳಗೊಂಡಿದೆ.


Click it and Unblock the Notifications








